Namoro
O namoro cristão deve ser vivido com sabedoria, pureza e propósito. A Bíblia orienta sobre escolher um cônjuge, guardar o coração e honrar a Deus em todo relacionamento.
Guardar o coração
Sobre tudo o que se deve guardar, guarda o teu coração, porque dele procedem as fontes da vida. O namoro exige vigilância e sabedoria.
ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೋ,
ಅದರೊಳಗಿಂದ ಜೀವಬುಗ್ಗೆಗಳು ಹೊರಡುವವು.
ಕ್ರೈಸ್ತರು ಅನ್ಯಜನಗಳ ಅನ್ಯೋನ್ಯತೆಯಲ್ಲಿ ಕೆಡಬಾರದು
ನೀವು ಕ್ರಿಸ್ತ ನಂಬಿಕೆಯಿಲ್ಲದವರೊಂದಿಗೆ ಸೇರಿ ಇಜ್ಜೋಡಿಯಾಗಬೇಡಿರಿ. ಧರ್ಮಕ್ಕೂ, ಅಧರ್ಮಕ್ಕೂ ಸಹವಾಸವೇನು? ಬೆಳಕಿಗೂ, ಕತ್ತಲೆಗೂ ಅನ್ಯೋನ್ಯತೆಯೇನು? ಕ್ರಿಸ್ತನಿಗೂ ಸೈತಾನನಿಗೂ ಒಪ್ಪಂದವೇನು? ವಿಶ್ವಾಸಿಗೂ ಅವಿಶ್ವಾಸಿಗೂ ಪಾಲುಗಾರಿಕೆಯೇನು?
ಪ್ರವಾದಿಯು ನಿಷ್ಕಾರಣವಾಗಿ ಖಂಡಿಸನು
ಗೊತ್ತುಮಾಡಿಕೊಳ್ಳದೆ ಯಾರಾದರಿಬ್ಬರು
ಜೊತೆಯಾಗಿ ನಡೆಯುವುದುಂಟೆ?
ಮೋಸಹೋಗಬೇಡಿರಿ; "ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ."
Pureza e santidade
O corpo é templo do Espírito Santo. A Bíblia nos chama a fugir da imoralidade e esperar no amor com paciência e respeito mútuo.
ಜಾರತ್ವವನ್ನು ಬಿಟ್ಟು ದೂರ ಓಡಿಹೋಗಿರಿ. "ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹದ ಹೊರಗಿವೆ", ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ. ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ? ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು ಆದಕಾರಣ ನಿಮ್ಮ ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ.
"ಭೋಜನ ಪದಾರ್ಥಗಳು ಹೊಟ್ಟೆಗಾಗಿಯೂ ಮತ್ತು ಹೊಟ್ಟೆಯು ಭೋಜನಪದಾರ್ಥಗಳಿಗಾಗಿಯೂ" ಇವೆ. ದೇವರು ಇವೆರಡನ್ನೂ ನಾಶಮಾಡುವನು. ಆದರೆ ದೇಹವು ಜಾರತ್ವಕೋಸ್ಕರ ಇರುವಂಥದಲ್ಲ. ಕರ್ತನಿಗೋಸ್ಕರ ಇರುವುದಾಗಿದೆ. ಕರ್ತನು ದೇಹಕೋಸ್ಕರ ಒದಗಿಸಿಕೊಡುತ್ತಾನೆ.
ಅವರು ಸಂಯಮಯಿಲ್ಲದವರಾದರೆ ಮದುವೆಮಾಡಿಕೊಳ್ಳಲಿ. ಯಾಕೆಂದರೆ ಕಾಮತಾಪಪಡುವುದಕ್ಕಿಂತ ಮದುವೆಮಾಡಿಕೊಳ್ಳುವುದು ಉತ್ತಮ.
ಯೆರೂಸಲೇಮಿನ ಮಹಿಳೆಯರೇ,
ಆತನು ತಾನಾಗಿ ಎಚ್ಚರಗೊಳ್ಳುವವರೆಗೆ ಯಾರೂ ನನ್ನ ಪ್ರಿಯನನ್ನು ಎಚ್ಚರಿಸದಿರಿ,
ಆತನ ವಿಶ್ರಾಂತಿಗೆ ಯಾರೂ ಭಂಗ ಮಾಡದಿರಿ ಎಂದು
ವನದ ಜಿಂಕೆ ಹರಿಣಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.
ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.
A esposa prudente vem do Senhor
Deus criou o homem e a mulher para completarem-se. A casa e os bens são herança dos pais, mas a esposa prudente vem do Senhor.
ಅನಂತರ ಯೆಹೋವನಾದ ದೇವರು, "ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು" ಅಂದನು.
ಮನೆಮಾರು, ಆಸ್ತಿಪಾಸ್ತಿಯು ಪೂರ್ವಿಕರಿಂದ ದೊರಕುವವು,
ವಿವೇಕಿನಿಯಾದ ಹೆಂಡತಿಯು ಯೆಹೋವನ ಅನುಗ್ರಹವೇ.
ಇವೆಲ್ಲಕ್ಕಿಂತ ಮಿಗಿಲಾಗಿ ಸಂಪೂರ್ಣತೆಯ ಬಂಧವಾಗಿರುವ ಪ್ರೀತಿಯನ್ನು ಧರಿಸಿಕೊಳ್ಳಿರಿ.