Não desista!
'Não desista!' é o grito do céu para a terra. Deus nos encoraja a perseverar na fé, na oração e na esperança, porque a vitória pertence aos que não se rendem.
Força na fraqueza
Os que esperam no Senhor renovam as forças. Deus não se cansa nem se fatiga — Ele dá poder aos fracos e vigor aos cansados.
ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ?
ಯೆಹೋವನು ನಿರಂತರ ದೇವರೂ, ಭೂಮಿಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ.
ಆತನು ದಣಿದು ಬಳಲುವುದಿಲ್ಲ, ಆತನ ವಿವೇಕವು ಪರಿಶೋಧನೆಗೆ ಅಗಮ್ಯ.
ಸೋತವನಿಗೆ ತ್ರಾಣವನ್ನು ಅನುಗ್ರಹಿಸಿ, ಬಲಹೀನನಿಗೆ ಬಹು ಬಲವನ್ನು ದಯಪಾಲಿಸುತ್ತಾನೆ.
ಯುವಕರೂ ದಣಿದು ಬಳಲುವರು, ತರುಣರೂ ಸೊರಗಿ ಮುಗ್ಗರಿಸುವರು.
ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು;
ಅವರು ಓಡಿ ದಣಿಯರು, ನಡೆದು ಬಳಲರು.
ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವುದೇ ಇಲ್ಲ; ನೀವು ಕೂಗಿ ದುಃಖಿಸಿದ ಶಬ್ದವನ್ನು ಆತನು ಕೇಳಿ,
ನಿಮಗೆ ಕೃಪೆ ತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು.
ಇಸ್ರಾಯೇಲರ ರಕ್ಷಕನು
ಈಗಲಾದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆನ್ನುತ್ತಾನೆ,
"ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.
ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು,
ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.
ಏಕೆಂದರೆ ಯೆಹೋವನೆಂಬ ನಾನು ನಿನ್ನ ದೇವರು, ಇಸ್ರಾಯೇಲರ ಸದಮಲಸ್ವಾಮಿಯಾದ ನಾನು ನಿನ್ನ ರಕ್ಷಕನು.
ಐಗುಪ್ತವನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ. ನಿನ್ನ ಬದಲಾಗಿ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟಿದ್ದೇನೆ.
ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು. ನಾನು ತೃಪ್ತನಾಗಿದ್ದರೂ, ಹಸಿದವನಾಗಿದ್ದರೂ, ಸಮೃದ್ಧಿಯುಳ್ಳವನಾದರೂ, ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲ್ಲಿರುವವನಾದರೂ ಅದರ ಗುಟ್ಟು ನನಗೆ ತಿಳಿದಿದೆ. ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.
ಪರಲೋಕ ಭಾಗ್ಯವನ್ನು ಆಲೋಚಿಸುವಾಗ ಕ್ರಿಸ್ತನಲ್ಲಿರುವವರಿಗೆ ಧೈರ್ಯವಾಗುತ್ತದೆ ಎಂಬುದು
ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ ನಮ್ಮ ಅಂತರಂಗವು ದಿನೇ ದಿನೇ ಹೊಸದಾಗುತ್ತಾ ಬರುತ್ತದೆ. ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ. ನಾವು ಕಾಣುವಂಥದ್ದನ್ನು ಲಕ್ಷಿಸದೇ ಕಾಣದಿರುವಂಥದ್ದನ್ನು ಲಕ್ಷಿಸುವವರಾಗಿದ್ದೇವೆ. ಕಾಣುವಂಥದ್ದು ಸ್ವಲ್ಪ ಕಾಲ ಮಾತ್ರ ಇರುವುದು ಕಾಣದಿರುವಂಥದ್ದು ಸದಾಕಾಲವೂ ಇರುವುದು.
Perseverança na fé
Não perca a confiança, pois ela tem grande recompensa. O justo viverá pela fé, e quem perseverar até o fim será salvo.
ಆದ್ದರಿಂದ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ. ಅದಕ್ಕೆ ಮಹಾ ಪ್ರತಿಫಲ ಉಂಟು.
ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು. ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ ಒಬ್ಬರನ್ನೊಬ್ಬರು ಹುರಿದುಂಬಿಸೋಣ. ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ.
ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬಬೇಕು.
ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳದೇ ಇರೋಣ. ಏಕೆಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.
ನಾನು ಬೇಗನೇ ಬರುತ್ತೇನೆ, ನಿನ್ನ ಕಿರೀಟವನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು.
ಇದರಲ್ಲಿ ದೇವರ ಆಜ್ಞೆಗಳನ್ನೂ, ಯೇಸುವಿನ ಬಗ್ಗೆ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ಇಲ್ಲಿ ತೋರಿಬರಬೇಕಾಗಿದೆ.
ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.
Deus é refúgio
O Senhor é nosso refúgio e fortaleza. Ele ouve nossas orações, nos consola nas tribulações e transforma choro em dança.
ಯೆಹೋವನು ಭಕ್ತಪಾಲಕನೂ, ಸರ್ವಾಧಿಪತಿಯೂ ಎಂಬುದು
ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ;
ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು;
ಆತನು ನಿನ್ನನ್ನು ಉದ್ಧಾರಮಾಡುವನು.
ನೀತಿವಂತನನ್ನು ಎಂದಿಗೂ ಕದಲಗೊಡಿಸನು.
ಯೆಹೋವನು ಕುಗ್ಗಿದವರಿಗೆ ಆಶ್ರಯವೂ,
ಆಪತ್ಕಾಲದಲ್ಲಿ ದುರ್ಗವೂ ಆಗಿರುವನು.
ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು
ನಿನ್ನಲ್ಲಿ ಭರವಸವಿಡುವರು;
ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ.
ಅಳುತ್ತಾ ಬಿತ್ತುವವರು, ಹಾಡುತ್ತಾ ಕೊಯ್ಯುವರು,
ದುಃಖಿಸುತ್ತಾ ಬೀಜವನ್ನು ತೆಗೆದುಕೊಂಡು ಹೋಗುವವನು,
ಹರ್ಷಿಸುತ್ತಾ ಸಿವುಡುಗಳನ್ನು ಹೊತ್ತುಕೊಂಡು ಬರುವನು.
ಯೆಹೋವನನ್ನು ನಿರೀಕ್ಷಿಸುವವರೇ, ದೃಢವಾಗಿರ್ರಿ;
ನಿಮ್ಮ ಹೃದಯವು ಧೈರ್ಯದಿಂದಿರಲಿ.
ದೇವರ ವಾಕ್ಯ ಕಾಲಿಗೆ ದೀಪ, ದಾರಿಗೆ ಬೆಳಕು
ನಿನ್ನ ವಾಕ್ಯವು ನನ್ನ ಕಾಲಿಗೆ ದೀಪವೂ,
ನನ್ನ ದಾರಿಗೆ ಬೆಳಕೂ ಆಗಿದೆ.
ಯೆಹೋವನಿಗೆ ಮೊರೆಯಿಡುವವರು,
ಯಥಾರ್ಥವಾಗಿ ಮೊರೆಯಿಡುವುದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.
ತನ್ನಲ್ಲಿ ಭಯಭಕ್ತಿಯುಳ್ಳವರ ಇಷ್ಟವನ್ನು ನೆರವೇರಿಸುತ್ತಾನೆ,
ಅವರ ಕೂಗನ್ನು ಕೇಳಿ ರಕ್ಷಿಸುತ್ತಾನೆ.
Vitória em Cristo
Jesus venceu o mundo e nos dá vitória. Para Deus nada é impossível, e Ele faz infinitamente mais do que pedimos ou pensamos.
ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ" ಎಂದು ಹೇಳಿದನು.
ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಆತನನ್ನು ಬಿಟ್ಟು ಹೊರಟುಹೋದರು ಮತ್ತು ಆತನ ಜೊತೆಯಲ್ಲಿ ಸಂಚಾರ ಮಾಡುವುದನ್ನು ಬಿಟ್ಟರು. ಆದಕಾರಣ ಯೇಸು ಇದನ್ನು ನೋಡಿ, ತನ್ನ ಹನ್ನೆರಡು ಮಂದಿ ಶಿಷ್ಯಂದಿರಿಗೆ "ನೀವು ಸಹ ಹೋಗಬೇಕೆಂದು ಇದ್ದೀರಾ?" ಎಂದು ಕೇಳಿದ್ದಕ್ಕೆ, ಸೀಮೋನ್ ಪೇತ್ರನು ಆತನಿಗೆ "ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳಿವೆಯಲ್ಲಾ. ನೀನು ದೇವರಿಂದ ಬಂದ ಅತಿಪರಿಶುದ್ಧನೆಂದು ನಾವು ನಂಬಿದ್ದೇವೆ ಮತ್ತು ತಿಳಿದಿದ್ದೇವೆ" ಎಂದನು.
"ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ, ನಿಮ್ಮ ಬಳಿಗೆ ಬರುತ್ತೇನೆ.
ಫಲದಾಯಕ ಪ್ರಾರ್ಥನೆ
"ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು; ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನೂ ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯಲ್ಪಡುವುದು.
ಯೇಸುವಿನಿಂದ ವಿಶ್ರಾಂತಿಯ ಆಹ್ವಾನ
"ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು. ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು. ಏಕೆಂದರೆ ನನ್ನ ನೊಗವು ಮೃದುವಾದದ್ದು, ನನ್ನ ಹೊರೆಯು ಹಗುರವಾದದ್ದು ಆಗಿದೆ" ಅಂದನು.
ಯೇಸು ಅವರನ್ನು ದೃಷ್ಟಿಸಿ ನೋಡಿ "ಇದು ಮನುಷ್ಯರಿಂದ ಅಸಾಧ್ಯ. ಆದರೆ ದೇವರಿಗೆ ಎಲ್ಲವು ಸಾಧ್ಯವೇ" ಅಂದನು.
ದೇವರಿಗೆ ಅಸಾಧ್ಯವಾದದ್ದು ಯಾವುದೂ ಇಲ್ಲ" ಅಂದನು.
Esperança e transformação
O Senhor completa a boa obra que começou em nós. Ele faz novas todas as coisas e dá esperança para o futuro.
ಈ ಒಳ್ಳೆಯ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ನಡಿಸಿಕೊಂಡು ಯೇಸು ಕ್ರಿಸ್ತನು ಬರುವ ದಿನದೊಳಗಾಗಿ ಪೂರ್ಣತೆಗೆ ತರುವನೆಂದು ನನಗೆ ಭರವಸವುಂಟು.
ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.
ನೂತನ ಭೂಮ್ಯಾಕಾಶಗಳು
ತರುವಾಯ ನೂತನ ಆಕಾಶವನ್ನೂ ನೂತನ ಭೂಮಿಯನ್ನೂ ಕಂಡೆನು. ಮೊದಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು. ಇನ್ನು ಸಮುದ್ರವು ಇಲ್ಲ. ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮ್ ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾಗಿರುವ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು. ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, "ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು. ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು" ಎಂದು ಹೇಳಿತು.
ಯೆಹೋವನು ತನ್ನ ಪ್ರಜೆಯನ್ನು ಬಾಧಿಸುವವರಿಗೆ ಮಾಡುವ ದಂಡನೆ
ಯೆಹೋವನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಆಶ್ರಯದುರ್ಗವಾಗಿದ್ದಾನೆ; ತನ್ನ ಮೊರೆಹೊಕ್ಕವರನ್ನು ಬಲ್ಲನು.
ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.
ನೀವಾದರೋ ಸ್ಥಿರಚಿತ್ತರಾಗಿರಿ; ನಿಮ್ಮ ಕೈಗಳು ಜೋಲು ಬೀಳದಿರಲಿ. ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಕ್ಕುವುದು" ಎಂದು ಹೇಳಿದನು.
Permanecendo firme
Persevere na oração, firme-se na Palavra e fortaleça-se na graça de Cristo. A fé vem pelo ouvir, e o ouvir pela Palavra de Deus.
ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರಿ. ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ.
ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ.
ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ "‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ" ಬರೆದಿದೆ.
ಆದಕಾರಣ ಸಾರಿದ ಸುವಾರ್ತೆಯನ್ನು ಕೇಳುವುದರಿಂದ ನಂಬಿಕೆಯು ಹುಟ್ಟುತ್ತದೆ, ಕೇಳಿಸಿಕೊಳ್ಳುವುದು ಕ್ರಿಸ್ತನ ವಾಕ್ಯವಾಗಿದೆ.
ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.
ದೈವ ಪ್ರೇರಿತವಾದ ಪ್ರತಿಯೊಂದು ಶಾಸ್ತ್ರವು ಉಪದೇಶಕ್ಕೂ, ಖಂಡನೆಗೂ, ತಿದ್ದುಪಡಿಗೂ, ನೀತಿಶಿಕ್ಷೆಗೂ ಉಪಯುಕ್ತವಾಗಿದೆ. ಆದ್ದರಿಂದ ದೇವರ ಮನುಷ್ಯನು ಎಲ್ಲವನ್ನೂ ಬಲ್ಲವನಾಗಿದ್ದು ಸಕಲಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ, ನನ್ನಿಂದ ಕೇಳಿದ ಸ್ವಸ್ಥಬೋಧನಾ ವಾಕ್ಯಗಳನ್ನು ಮಾದರಿಯಾಗಿಟ್ಟುಕೊಂಡು ಅನುಸರಿಸು. ನಿನ್ನ ವಶಕ್ಕೆ ಒಪ್ಪಿಸಿಕೊಟ್ಟಿರುವ ಒಳ್ಳೆಯ ವಿಷಯವನ್ನು ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕವಾಗಿ ಕಾಪಾಡಿಕೋ.
ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ, ಸಕಲ ಸತ್ಕಾರ್ಯದಲ್ಲಿಯೂ, ಸದ್ವಾಕ್ಯದಲ್ಲಿಯೂ ದೃಢಪಡಿಸಲಿ.
ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.
ಮತ್ತು ದೇವರ ಚಿತ್ತಾನುಸಾರವಾಗಿ ಏನಾದರೂ ಬೇಡಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬ ಭರವಸೆಯು ಆತನಲ್ಲಿ ನಮಗುಂಟು. ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬುದು ನಮಗೆ ತಿಳಿದಿದ್ದರೆ, ನಾವು ಬೇಡಿದವುಗಳು ಆತನಿಂದ ನಮಗೆ ದೊರೆಯುತ್ತವೆಂಬುದು ನಮಗೆ ತಿಳಿಯುತ್ತದೆ.
ಎಲ್ಲವನ್ನು ತಾಳಿಕೊಳ್ಳುತ್ತದೆ. ಎಲ್ಲವನ್ನು ನಂಬುತ್ತದೆ. ಎಲ್ಲವನ್ನು ನಿರೀಕ್ಷಿಸುತ್ತದೆ. ಎಲ್ಲವನ್ನು ಸಹಿಸಿಕೊಳ್ಳುತ್ತದೆ.