Não temas
'Não temas' é uma das frases mais repetidas na Bíblia. Deus a pronuncia nos momentos de maior temor, lembrando que sua presença e poder são maiores que qualquer ameaça.
Deus está contigo
Não temas, porque eu sou contigo. Deus repete essa promessa em cada crise, guerra e desafio que seus filhos enfrentam.
ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು.
ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.
ಏಕೆಂದರೆ ಯೆಹೋವನೆಂಬ ನಾನೇ ನಿನ್ನ ಕೈಹಿಡಿಯುತ್ತೇನೆ.
"ಭಯಪಡಬೇಡ, ನಿನಗೆ ಸಹಾಯಮಾಡುತ್ತೇನೆ.
ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ,
ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು" ಎಂದು ಯೆಹೋವನು ಹೇಳುತ್ತಾನೆ.
ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ, ನೀನು ಉನ್ನತಪರ್ವತವನ್ನು ಏರು;
ಸುವರ್ತಮಾನವನ್ನು ಪ್ರಕಟಿಸಬಲ್ಲ ಯೆರೂಸಲೇಮೇ, ನಿನ್ನ ಧ್ವನಿಯನ್ನು ಗಟ್ಟಿಯಾಗಿ ಎತ್ತು, ನಿರ್ಭಯವಾಗಿ ಎತ್ತಿ,
ಯೆಹೂದದ ಪಟ್ಟಣಗಳಿಗೆ, "ಇಗೋ, ನಿಮ್ಮ ದೇವರು!
ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು" ಎಂದು ಹೇಳಿದನು.
ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ" ಎಂದು ಹೇಳಿದನು.
ದೇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು
ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, "ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು."
Coragem diante do perigo
Não tenhas medo — o Senhor teu Deus está no meio de ti, poderoso para salvar. Ele luta por nós e dá forças aos medrosos.
ಆ ದಿನದಲ್ಲಿ ಯೆರೂಸಲೇಮಿಗೆ, "ಚೀಯೋನೇ,
ಭಯಪಡಬೇಡ, ನಿನ್ನ ಕೈಗಳು ಜೋಲುಬೀಳದಿರಲಿ;
ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು;
ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು;
ತನ್ನ ಪ್ರೀತಿಯಲ್ಲಿ ನಿನ್ನ ಜೀವನವನ್ನು ನೂತನಗೊಳಿಸುವನು;
ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು.
ಆಗ ಎಲೀಷನು ಅವನಿಗೆ, "ಹೆದರಬೇಡ, ಅವರ ಕಡೆಯಲ್ಲಿರುವವರಿಗಿಂತಲೂ, ನಮ್ಮ ಕಡೆಯಲ್ಲಿರುವವರು ಹೆಚ್ಚಾಗಿದ್ದಾರೆ" ಎಂದು ಹೇಳಿ,
"ಯೆಹೋವನೇ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆ" ಎಂದು ಪ್ರಾರ್ಥಿಸಲು ಯೆಹೋವನು ಅವನ ಕಣ್ಣುಗಳನ್ನು ತೆರೆದನು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥಾರಥಾಶ್ವಗಳು ಆ ಸೇವಕನಿಗೆ ಕಂಡವು.
ಭೂಮಿಯೇ, ಹೆದರಬೇಡ, ಹರ್ಷಿಸು, ಉಲ್ಲಾಸಿಸು,
ಯೆಹೋವನು ಮಹತ್ಕಾರ್ಯಗಳನ್ನು ಮಾಡಿದ್ದಾನೆ.
ಆಗ ಯೆಹೋವನು ನನಗೆ, "ಬಾಲಕನು ಎನ್ನಬೇಡ; ನಾನು ಯಾರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಅವರೆಲ್ಲರ ಬಳಿಗೆ ನೀನು ಖಂಡಿತವಾಗಿ ಹೋಗುವಿ; ನಾನು ಆಜ್ಞಾಪಿಸುವುದನ್ನೆಲ್ಲಾ ಖಂಡಿತವಾಗಿ ನುಡಿಯುವಿ.
ಅವರಿಗೆ ಅಂಜಬೇಡ; ನಿನ್ನನ್ನು ಉದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು" ಎಂದು ಹೇಳಿದನು.
ಇದಲ್ಲದೆ ಕರ್ತನು ರಾತ್ರಿ ಪೌಲನಿಗೆ ದರ್ಶನ ಕೊಟ್ಟು; "ನೀನು ಹೆದರಬೇಡ; ಆದರೆ ಸುಮ್ಮನಿರದೆ ಸುವಾರ್ತೆಯನ್ನು ಸಾರುತ್ತಲೇ ಇರು, ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನಗೆ ಕೇಡು ಮಾಡುವುದಿಲ್ಲ; ಈ ಪಟ್ಟಣದಲ್ಲಿ ನನಗೆ ಬಹಳ ಮಂದಿ ಇದ್ದಾರೆ" ಎಂದು ಹೇಳಿದನು.
"ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ತಿರುಗಿ ಬೀಳುವ ವಂಶದವರು; ಅವರ ಬಿರುನುಡಿಗೆ ಭಯಪಡಬೇಡ, ಅವರ ಬಿರುನೋಟಕ್ಕೆ ಹೆದರದಿರು. ಅವರು ಕೇಳಿದರೂ, ಕೇಳದೆ ಹೋದರೂ ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿ ದ್ರೋಹಿಗಳೇ."
Fé que vence o medo
O medo não vem de Deus. Jesus disse: não temas, crê somente! A fé dissipa o medo e nos conecta ao poder de Deus.
ಅವರು ಆಡಿದ ಮಾತನ್ನು ಯೇಸು ಗಣನೆಗೆ ತಂದುಕೊಳ್ಳದೆ ಸಭಾಮಂದಿರದ ಅಧಿಕಾರಿಗೆ, "ಅಂಜಬೇಡ, ನಂಬಿಕೆ ಮಾತ್ರ ಇರಲಿ" ಎಂದು ಹೇಳಿದನು.
ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.
ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.
ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, "ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ.
ಆ ದೂತನು ಆಕೆಗೆ, "ಮರಿಯಳೇ, ಹೆದರಬೇಡ; ನಿನಗೆ ದೇವರ ಕೃಪೆ ದೊರಕಿದೆ.
ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು, "ಕರ್ತನೇ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗು" ಅಂದನು.