Não temas
'Não temas' é uma das frases mais repetidas na Bíblia. Deus a pronuncia nos momentos de maior temor, lembrando que sua presença e poder são maiores que qualquer ameaça.
Deus está contigo
Não temas, porque eu sou contigo. Deus repete essa promessa em cada crise, guerra e desafio que seus filhos enfrentam.
ನೀನಂತೂ ಹೆದರಬೇಡ, ಏಕೆಂದರೆ ನಾನೇ ನಿನ್ನ ದೇವರು,
ನಾನು ನಿನ್ನನ್ನು ಬಲಪಡಿಸುತ್ತೇನೆ.
ನಾನು ನಿನಗೆ ಸಹಾಯ ಮಾಡುತ್ತೇನೆ.
ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿಹಿಡಿಯುತ್ತೇನೆ.
ನೀನಂತೂ ಹೆದರಬೇಡ;
ಏಕೆಂದರೆ ಯೆಹೋವ ದೇವರಾದ ನಾನೇ ನಿನಗೆ ಸಹಾಯ ಮಾಡುತ್ತೇನೆ,
ನಿನ್ನ ದೇವರಾಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ!
ಹುಳುವಿನಂತಿರುವ ಯಾಕೋಬೇ,
ಪುಟ್ಟ ಇಸ್ರಾಯೇಲೇ, ಭಯಪಡಬೇಡ.
ನಾನೇ ನಿನಗೆ ಸಹಾಯ ಮಾಡುತ್ತೇನೆ," ಎಂದು ಯೆಹೋವ ದೇವರು ಹೇಳುತ್ತಾರೆ.
ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾರಲ್ಲಾ!
ಶುಭಸಮಾಚಾರವನ್ನು ತಿಳಿಸುವ ಚೀಯೋನೇ,
ನೀನು ಉನ್ನತ ಪರ್ವತವನ್ನು ಏರು.
ಶುಭಸಮಾಚಾರವನ್ನು ತಿಳಿಸುವ ಯೆರೂಸಲೇಮೇ,
ಬಲವಾಗಿ ನಿನ್ನ ಧ್ವನಿ ಎತ್ತು, ಭಯಪಡಬೇಡ.
ಯೆಹೂದದ ಪಟ್ಟಣಗಳಿಗೆ,
"ಇಗೋ, ನಿನ್ನ ದೇವರು!" ಎಂದು ಹೇಳು.
ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ, ಬಲಿಷ್ಠನಾಗಿರು. ಧೈರ್ಯದಿಂದಿರು, ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ಏಕೆಂದರೆ ನೀನು ಹೋಗುವ ಕಡೆಯೆಲ್ಲಾ ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ," ಎಂದು ಹೇಳಿದರು.
ಶಕ್ತಿಶಾಲಿಗಳಾಗಿರಿ, ಧೈರ್ಯವಾಗಿರಿ, ಭಯಪಡಬೇಡಿರಿ, ಅವರಿಗೆ ಹೆದರಬೇಡಿರಿ. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ತಾವೇ ನಿಮ್ಮ ಮುಂದೆ ಹೋಗುತ್ತಾರೆ. ಅವರು ನಿಮ್ಮನ್ನು ಕೈಬಿಡುವುದಿಲ್ಲ, ತೊರೆಯುವುದೂ ಇಲ್ಲ."
ಇವುಗಳಾದ ಮೇಲೆ ಯೆಹೋವ ದೇವರ ವಾಕ್ಯವು ಅಬ್ರಾಮನಿಗೆ ದರ್ಶನದಲ್ಲಿ ಉಂಟಾಗಿ ಹೇಳಿದ್ದೇನೆಂದರೆ:
"ಅಬ್ರಾಮನೇ, ಭಯಪಡಬೇಡ.
ನಾನು ನಿನಗೆ ಗುರಾಣಿಯಾಗಿದ್ದೇನೆ.
ನಾನೇ ನಿನಗೆ ಅತ್ಯಧಿಕ ಬಹುಮಾನವಾಗಿದ್ದೇನೆ."
Coragem diante do perigo
Não tenhas medo — o Senhor teu Deus está no meio de ti, poderoso para salvar. Ele luta por nós e dá forças aos medrosos.
ಆ ದಿವಸದಲ್ಲಿ ಯೆರೂಸಲೇಮಿಗೆ ಹೀಗೆಂದು ಹೇಳುವರು,
"ಚೀಯೋನೇ, ನೀನು ಭಯಪಡಬೇಡ;
ನಿನ್ನ ಕೈಗಳು ಬಲಹೀನವಾಗದಿರಲಿ.
ನಿನ್ನ ದೇವರಾದ ಯೆಹೋವ ದೇವರು ನಿನ್ನೊಂದಿಗಿದ್ದಾರೆ.
ನಿನ್ನನ್ನು ರಕ್ಷಿಸಲು ಶಕ್ತರಾಗಿದ್ದಾರೆ.
ನಿನ್ನಲ್ಲಿ ಬಹಳವಾಗಿ ಹರ್ಷಾನಂದಗೊಳ್ಳುವರು.
ತಮ್ಮ ಪ್ರೀತಿಯ ನಿಮಿತ್ತ ಅವರು ಇನ್ನು ಮುಂದೆ ನಿನ್ನನ್ನು ಖಂಡಿಸುವುದಿಲ್ಲ,
ಆದರೆ ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವರು."
ಆದರೆ ಪ್ರವಾದಿಯು, "ಭಯಪಡಬೇಡ. ಅವರ ಸಂಗಡ ಇರುವವರಿಗಿಂತ ನಮ್ಮ ಕಡೆ ಇರುವವರು ಹೆಚ್ಚಾಗಿದ್ದಾರೆ," ಎಂದನು.
ಆಗ ಎಲೀಷನು, "ಯೆಹೋವ ದೇವರೇ, ನೀವು ದಯಮಾಡಿ ಇವನು ಕಾಣುವ ಹಾಗೆ ಇವನ ಕಣ್ಣುಗಳನ್ನು ತೆರೆಯಿರಿ," ಎಂದು ಪ್ರಾರ್ಥಿಸಿದನು. ಯೆಹೋವ ದೇವರು ಆ ಯುವ ಸೇವಕನ ಕಣ್ಣುಗಳನ್ನು ತೆರೆದಾಗ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ರಥಗಳೂ, ಕುದುರೆಗಳೂ ತುಂಬಿರುವುದನ್ನು ಅವನು ಕಂಡನು.
ಯಹೂದ ದೇಶವೇ, ಭಯಪಡಬೇಡ;
ಉಲ್ಲಾಸಿಸಿ, ಸಂತೋಷವಾಗಿರು.
ಏಕೆಂದರೆ, ಯೆಹೋವ ದೇವರು ಮಹತ್ತಾದವುಗಳನ್ನು ಮಾಡಿದ್ದಾರೆ.
ಆಗ ಯೆಹೋವ ದೇವರು ನನಗೆ, " ‘ನಾನು ಚಿಕ್ಕವನೆಂದು ಹೇಳಬೇಡ.’ ಏಕೆಂದರೆ ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ನೀನು ಹೋಗಬೇಕು. ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಮಾತನಾಡಬೇಕು. ಅವರಿಗೆ ಭಯಪಡಬೇಡ. ಏಕೆಂದರೆ ನಿನ್ನನ್ನು ತಪ್ಪಿಸುವುದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ," ಎಂದು ಯೆಹೋವ ದೇವರಾದ ನಾನು ಹೇಳುತ್ತೇನೆ.
ಒಂದು ರಾತ್ರಿ ಕರ್ತ ಯೇಸು ದರ್ಶನದಲ್ಲಿ ಪೌಲನೊಂದಿಗೆ ಮಾತನಾಡಿ: "ಭಯಪಡಬೇಡ, ಮಾತನಾಡುತ್ತಲೇ ಇರು, ಸುಮ್ಮನಿರಬೇಡ. ನಾನೇ ನಿನ್ನೊಂದಿಗಿದ್ದೇನೆ. ಯಾರೂ ನಿನ್ನ ಮೇಲೆ ಬಿದ್ದು ನಿನಗೆ ಕೇಡನ್ನುಂಟುಮಾಡುವುದಿಲ್ಲ. ಏಕೆಂದರೆ ನನಗಾಗಿ ಈ ಪಟ್ಟಣದಲ್ಲಿ ಅನೇಕ ಜನರಿದ್ದಾರೆ," ಎಂದರು.
ಮನುಷ್ಯಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯೆ ಇದ್ದರೂ, ಅವರಿಗೆ ಭಯಪಡಬೇಡ. ಅವರ ಗದರಿಕೆಗೆ ಹೆದರದಿರು. ಅವರು ದ್ರೋಹಿ ವಂಶದವರು. ಅವರ ಬಿರುನುಡಿಗೆ ದಿಗಿಲು ಪಡಬೇಡ. ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು. ಅವರು ಕೇಳಿದರೂ ಸರಿ, ಕೇಳದಿದ್ದರೂ ಸರಿ, ಏಕೆಂದರೆ ಅವರು ತಿರುಗಿಬೀಳುವ ಜನರು.
Fé que vence o medo
O medo não vem de Deus. Jesus disse: não temas, crê somente! A fé dissipa o medo e nos conecta ao poder de Deus.
ಆದರೆ ಯೇಸು ಅವರು ಹೇಳಿದ ಮಾತನ್ನು ಲಕ್ಷ್ಯಮಾಡದೆ, ಆ ಸಭಾಮಂದಿರದ ಅಧಿಕಾರಿಗೆ, "ಭಯಪಡಬೇಡ ನಂಬಿಕೆ ಮಾತ್ರ ಇರಲಿ," ಎಂದರು.
ನಿನಗೆ ಸಂಭವಿಸುವುದಕ್ಕಿರುವ ಬಾಧೆಗಳಿಗೆ ಭಯಪಡಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು, ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕೆ ಇದ್ದಾನೆ. ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವವರೆಗೆ ನಂಬಿಗಸ್ತನಾಗಿರು. ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.
ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾಗದವರಿಗೆ ಹೆದರಬೇಡಿರಿ. ಆದರೆ ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿರಿ.
ಅವನು ಹೀಗೆ ಯೋಚಿಸುತ್ತಿದ್ದಾಗ, ಕರ್ತನ ದೂತನು ಕನಸಿನಲ್ಲಿ ಅವನಿಗೆ ಪ್ರತ್ಯಕ್ಷನಾಗಿ, "ದಾವೀದನ ವಂಶದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭವತಿಯಾಗಿರುವುದು ಪವಿತ್ರಾತ್ಮರಿಂದಲೇ.
ಆ ದೇವದೂತನು ಆಕೆಗೆ, "ಮರಿಯಳೇ, ಹೆದರಬೇಡ. ನೀನು ದೇವರ ದಯೆಯನ್ನು ಹೊಂದಿರುವಿ.
ಸೀಮೋನ್ ಪೇತ್ರನು ಇದನ್ನು ಕಂಡಾಗ, ಯೇಸುವಿನ ಮುಂದೆ ಮೊಣಕಾಲೂರಿ, "ಸ್ವಾಮಿ, ನನ್ನನ್ನು ಬಿಟ್ಟು ಹೋಗಿರಿ, ನಾನು ಪಾಪಿ," ಎಂದನು.