Nascer de novo
Nascer de novo é a porta de entrada para a vida em Deus. Jesus ensinou que sem o novo nascimento espiritual, ninguém pode ver nem entrar no Reino de Deus.
A necessidade do novo nascimento
Jesus declarou a Nicodemos: 'Aquele que não nascer de novo não pode ver o Reino de Deus.' O novo nascimento é pelo Espírito.
ಯೇಸು ಅವನಿಗೆ, "ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು," ಎಂದು ಉತ್ತರ ಕೊಟ್ಟನು.
ಯೇಸು ಅವನಿಗೆ, "ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು," ಎಂದು ಉತ್ತರ ಕೊಟ್ಟನು. ನಿಕೊದೇಮನು ಆತನನ್ನು, "ಮನುಷ್ಯನು ಮುದುಕನಾದ ಮೇಲೆ ತಿರುಗಿ ಹುಟ್ಟುವುದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವುದಕ್ಕಾದೀತೇ?" ಎಂದು ಕೇಳಿದನು. ಅದಕ್ಕೆ ಯೇಸು "ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು. ದೇಹದಿಂದ ಹುಟ್ಟಿದ್ದು ದೇಹವೇ, ಆತ್ಮನಿಂದ ಹುಟ್ಟಿದ್ದು ಆತ್ಮವೇ. ‘ನೀವು ಹೊಸದಾಗಿ ಹುಟ್ಟಬೇಕು’ ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ ಗಾಳಿಯು ಇಷ್ಟ ಬಂದ ಕಡೆ ಬೀಸುತ್ತದೆ. ನೀನು ಅದರ ಶಬ್ದವನ್ನು ಕೇಳುತ್ತೀ, ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಆತ್ಮನಿಂದ ಹುಟ್ಟಿದವರೆಲ್ಲರೂ ಅದರಂತೆಯೇ" ಎಂದನು.
ಅದಕ್ಕೆ ಯೇಸು "ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು. ದೇಹದಿಂದ ಹುಟ್ಟಿದ್ದು ದೇಹವೇ, ಆತ್ಮನಿಂದ ಹುಟ್ಟಿದ್ದು ಆತ್ಮವೇ. ‘ನೀವು ಹೊಸದಾಗಿ ಹುಟ್ಟಬೇಕು’ ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ
ನಿಮಗೆ ಸತ್ಯವಾಗಿ ಹೇಳುತ್ತೇನೆ ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ" ಎಂದು ಹೇಳಿದನು.
ದೇವರ ರಾಜ್ಯದಲ್ಲಿ ದೊಡ್ಡವನು
ಆದೇ ವೇಳೆಯಲ್ಲಿ ಶಿಷ್ಯರು ಯೇಸುವಿನ ಬಳಿ ಬಂದು, "ಪರಲೋಕ ರಾಜ್ಯದಲ್ಲಿ ಯಾವನು ದೊಡ್ಡವನು?" ಎಂದು ಕೇಳಿದರು. ಆತನು ಚಿಕ್ಕ ಮಗುವನ್ನು ಹತ್ತಿರಕ್ಕೆ ಕರೆದು ಅವರ ನಡುವೆ ನಿಲ್ಲಿಸಿ, ಅವರಿಗೆ, "ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಹೀಗಿರುವುದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನೇ ತಗ್ಗಿಸಿಕೊಳ್ಳುತ್ತಾನೋ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನು.
Nova criação em Cristo
Quem está em Cristo é nova criação. Morremos e ressuscitamos com Ele para viver em novidade de vida, livres do velho homem.
ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.
ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು. ಹೇಗೆಂದರೆ ನಾವು ಆತನ ಮರಣಕ್ಕೆ ಸದೃಶ್ಯವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು. ನಮಗೆ ತಿಳಿದಿರುವಂತೆ, ನಮ್ಮ ಪಾಪಾಧೀನಸ್ವಭಾವವು ನಾಶವಾಗಿ, ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿದೆ. ಸತ್ತವನು ಪಾಪದ ವಶದಿಂದ ಬಿಡುಗಡೆ ಹೊಂದಿದ್ದಾನೆ.
ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು.
ಅದೇ ಪ್ರಕಾರ ನೀವು ಸಹ ನಿಮ್ಮನ್ನು ಕ್ರಿಸ್ತ ಯೇಸುವಿನ ಐಕ್ಯದಿಂದ ಪಾಪದ ಪಾಲಿಗೆ ಸತ್ತವರೂ, ದೇವರಿಗಾಗಿ ಜೀವಿಸುವವರೂ ಎಂದು ಎಣಿಸಿಕೊಳ್ಳಿರಿ.
ನಾನು ಸಹ ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು.
ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು. ನೀವು ನಿಮ್ಮ ಹೃನ್ಮನಗಳನ್ನು ನವೀಕರಿಸಿ, ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.
ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ಯಾಕೆಂದರೆ ನೀವು ಹಿಂದಿನಸ್ವಭಾವವನ್ನು ಅದರ ಕೃತ್ಯಗಳೊಂದಿಗೆ ತೆಗೆದುಹಾಕಿ ನೂತನಸ್ವಭಾವವನ್ನು ಧರಿಸಿಕೊಂಡಿದ್ದೀರಲ್ಲವೇ. ಈ ನೂತನ ಸ್ವಭಾವವು ಸೃಷ್ಟಿಸಿದಾತನ ಹೋಲಿಕೆಯ ಜ್ಞಾನದ ಮೇರೆಗೆ ಅದು ನೂತನವಾಗುತ್ತಾ ಬರುತ್ತದೆ. ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ.
Filhos de Deus
Nascemos de novo pela Palavra viva de Deus. Quem crê em Jesus recebe o direito de se tornar filho de Deus, nascido do Espírito.
ಆದರೂ ಯಾರಾರು ಆತನನ್ನು ಸ್ವೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ ಅವರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಆತನು ಕೊಟ್ಟನು. ಇವರು ರಕ್ತಸಂಬಂಧದಿಂದಾಗಲಿ, ಶರೀರದ ಇಚ್ಛೆಯಿಂದಾಗಲಿ, ಪುರುಷ ಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ; ದೇವರಿಂದಲೇ ಹುಟ್ಟಿದವರು.
ಕ್ರೈಸ್ತರಿಗೆ ಇರುವ ಉತ್ಕೃಷ್ಟವಾದ ನಿರೀಕ್ಷೆ
ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ, ನಮ್ಮನ್ನು ಲಯ, ಕಳಂಕ, ನಾಶಗಳಿಲ್ಲದ ಬಾಧ್ಯತೆಯನ್ನು ಎದುರು ನೋಡುವವರನ್ನಾಗಿ ಮಾಡಿದನು. ಆ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಡಲ್ಪಟ್ಟಿದೆ.
ಏಕೆಂದರೆ ನೀವು ಹೊಸದಾಗಿ ಹುಟ್ಟಿರುವಂಥದ್ದು ನಾಶವಾಗುವ ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ ವಾಕ್ಯದಿಂದಲೇ. ಅದು ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು.
ಹೊಸದಾಗಿ ಹುಟ್ಟಿದ ಶಿಶುಗಳಂತೆ ನೀವು ದೇವರ ವಾಕ್ಯವೆಂಬ ಶುದ್ಧವಾದ ಆತ್ಮೀಕ ಹಾಲನ್ನು ಬಯಸಿರಿ. ಆದರಿಂದ ರಕ್ಷಣೆಯಲ್ಲಿ ಬೆಳೆಯುವಿರಿ. ಏಕೆಂದರೆ ಕರ್ತನು ದಯಾಪರನೆಂದು ನೀವು ಅನುಭವಿಸಿ ತಿಳಿದಿದ್ದೀರಿ.
ದೇವರ ಮಕ್ಕಳೂ ಮತ್ತು ಸೈತಾನನ ಮಕ್ಕಳನ್ನು ಕುರಿತದ್ದು
ಇಗೋ, ನಾವು ದೇವರ ಮಕ್ಕಳೆಂದು ಕರೆಯಲ್ಪಡುವುದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ! ನಾವು ಆತನ ಮಕ್ಕಳಾಗಿದ್ದೇವೆ. ಲೋಕವು ಆತನನ್ನು ಅರ್ಥಮಾಡಿಕೊಳ್ಳದೆ ಇರುವುದರಿಂದ ನಮ್ಮನ್ನೂ ಅರ್ಥಮಾಡಿಕೊಳ್ಳುವುದಿಲ್ಲ. ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು.
ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು.
"ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸಲಿ ಎಂದು ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು. ಕಲ್ಲಾದ ಹೃದಯವನ್ನು ಅವರೊಳಗಿಂದ ತೆಗೆದು ಮೃದುವಾದ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.
ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮನ್ನು ಪ್ರೀತಿಸಿದ ಮಹಾ ಪ್ರೀತಿಯ ನಿಮಿತ್ತ, ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ.