Nascimento de Jesus
O nascimento de Jesus é o evento que divide a história. O Verbo se fez carne e habitou entre nós. Deus enviou seu Filho ao mundo para nos salvar e nos reconciliar consigo.
O Verbo se fez carne
Jesus não nasceu por acaso — sua encarnação foi planejada antes da fundação do mundo. Ele se esvaziou e assumiu a forma humana por amor.
ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ.
ಆತನು ದೇವಸ್ವರೂಪನಾಗಿದ್ದರೂ,
ದೇವರಿಗೆ ಸರಿಸಮಾನನಾಗಿರುವನೆಂಬ ಅಮೂಲ್ಯ
ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ,
ತನ್ನನ್ನು ಬರಿದು ಮಾಡಿಕೊಂಡು
ದಾಸನ ರೂಪವನ್ನು ಧರಿಸಿಕೊಂಡು
ಮನುಷ್ಯರಿಗೆ ಸಮನಾದನು.
ಮನುಷ್ಯನಾಕಾರದಲ್ಲಿ ಕಾಣಿಸಿಕೊಂಡನು.
ಆತನು ತನ್ನನ್ನು ತಗ್ಗಿಸಿಕೊಂಡು ಮರಣವನ್ನು ಅಂದರೆ
ಶಿಲುಬೆಯ ಮರಣವನ್ನಾದರೂ ಹೊಂದುವಷ್ಟು ವಿಧೇಯನಾದನು.
ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು.
ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ, ಮರಣ ಭಯದಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವುದಕ್ಕೂ ಅವರಂತೆ ರಕ್ತಮಾಂಸಧಾರಿಯಾದನು.
ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು.
"ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.
O anúncio e o nascimento
O nascimento de Jesus foi anunciado por anjos, precedido por sinais e recebido com adoração pelos pastores e pelos magos do oriente.
ಯೇಸು ಕ್ರಿಸ್ತನ ಜನನವು
ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ, ಆತನ ತಾಯಿಯಾದ ಮರಿಯಳಿಗೂ ಯೋಸೇಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಮದುವೆಯಾಗಿ ಕೂಡಿಬಾಳುವುದಕ್ಕಿಂತ ಮೊದಲೇ ಮರಿಯಳು ಪವಿತ್ರಾತ್ಮನ ಶಕ್ತಿಯಿಂದ ಗರ್ಭಧರಿಸಿದ್ದು ತಿಳಿದುಬಂತು.
ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, "ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ. ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು," ಅಂದನು. ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು; ಆ ಮಾತು ಏನೆಂದರೆ,
"ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು;
ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.
‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ."
ಆಗ ಯೋಸೇಫನು ಎಚ್ಚೆತ್ತು ದೇವದೂತನು ಅಪ್ಪಣೆಕೊಟ್ಟ ಪ್ರಕಾರ ಮರಿಯಳನ್ನು ಹೆಂಡತಿಯನ್ನಾಗಿ ಸ್ವೀಕರಿಸಿಕೊಂಡನು. ಆದರೆ ಆಕೆಯು ಗಂಡು ಮಗುವಿಗೆ ಜನ್ಮನೀಡುವವರೆಗೂ ಆಕೆಯೊಡನೆ ಶರೀರ ಸಂಬಂಧವಿಲ್ಲದೆ ಇದ್ದನು. ಮತ್ತು ಯೋಸೇಫನು ಆ ಮಗುವಿಗೆ ‘ಯೇಸು’ ಎಂದು ಹೆಸರಿಟ್ಟನು.
ಆ ದೂತನು ಆಕೆಗೆ, "ಮರಿಯಳೇ, ಹೆದರಬೇಡ; ನಿನಗೆ ದೇವರ ಕೃಪೆ ದೊರಕಿದೆ. ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸುವೆಂದು ಹೆಸರಿಡಬೇಕು. ಆತನು ಮಹಾಪುರುಷನಾಗುವನು, ಪರಾತ್ಪರನಾದ ದೇವರ ಕುಮಾರನೆಂದು ಕರೆಯಲ್ಪಡುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು. ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇರದು" ಎಂದು ಹೇಳಿದನು.
ಯೋಸೇಫನು ಸಹ ತಾನು ದಾವೀದನ ಮನೆತನದವನೂ, ಗೋತ್ರದವನೂ ಆಗಿದ್ದದರಿಂದ ಹೆಸರು ನೊಂದಾಯಿಸಿಕೊಳ್ಳುವುದಕ್ಕಾಗಿ ತನಗೆ ನಿಶ್ಚಿತಾರ್ಥವಾಗಿದ್ದ ಹಾಗೂ ಗರ್ಭವತಿಯಾಗಿದ್ದ ಮರಿಯಳ ಸಂಗಡ ಗಲಿಲಾಯ ಸೀಮೆಯ ನಜರೇತ್ ಎಂಬ ಊರಿನಿಂದ ಹೊರಟು ಯೂದಾಯದಲ್ಲಿರುವ ಬೇತ್ಲೆಹೇಮೆಂಬ ದಾವೀದನೂರಿಗೆ ಹೋದರು. ಅವರು ಅಲ್ಲಿದ್ದಾಗ ಆಕೆಗೆ ಪ್ರಸವಕ್ಕೆ ದಿನತುಂಬಿತು. ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಯಲ್ಲಿ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲದ ಕಾರಣ ಅವನನ್ನು ಗೋದಲಿಯಲ್ಲಿ ಮಲಗಿಸಿದಳು.
ಆ ದೂತನು ಅವರಿಗೆ, "ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭವಾರ್ತೆಯನ್ನು ನಿಮಗೆ ತಿಳಿಸುತ್ತೇನೆ. ಅದೇನೆಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ. ಅದರ ಗುರುತೇನಂದರೆ, ಬಟ್ಟೆಯಿಂದ ಸುತ್ತಿರುವ ಒಂದು ಕೂಸು ಗೋದಲಿಯಲ್ಲಿ ಮಲಗಿರುವುದನ್ನು ನೀವು ಕಾಣುವಿರಿ" ಎಂದು ಹೇಳಿದನು.
ದೇವದೂತರು ಅವರ ಬಳಿಯಿಂದ ಪರಲೋಕಕ್ಕೆ ಹೊರಟುಹೋದ ಮೇಲೆ ಆ ಕುರುಬರು, "ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ಕರ್ತನು ನಮಗೆ ತಿಳಿಯಪಡಿಸಿದ ಈ ಸಂಗತಿಯನ್ನು ನೋಡಲು ಹೋಗೋಣ" ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು, ತ್ವರೆಯಾಗಿ ಹೋಗಿ ಮರಿಯಳನ್ನೂ ಯೋಸೇಫನನ್ನೂ ಗೋದಲಿಯಲ್ಲಿ ಮಲಗಿರುವ ಆ ಕೂಸನ್ನೂ ಕಂಡುಕೊಂಡರು. ಅದನ್ನು ನೋಡಿದಾಗ ಅವರು ಆ ಮಗುವಿನ ವಿಷಯದಲ್ಲಿ ದೇವದೂತನು ತಮಗೆ ಹೇಳಿದ್ದ ಮಾತನ್ನು ಅವರಿಗೆ ತಿಳಿಸಿದರು. ಅದನ್ನು ಕೇಳಿದವರೆಲ್ಲರೂ, ತಮಗೆ ಕುರುಬರು ಹೇಳಿದ ಮಾತುಗಳಿಗೆ ಆಶ್ಚರ್ಯಪಟ್ಟರು.
O Rei que veio servir
Jesus nasceu para ser Rei, e todo aquele que é da verdade ouve a sua voz. Os magos o adoraram e ofereceram seus tesouros.
ಅದಕ್ಕೆ ಪಿಲಾತನು, "ಹಾಗಾದರೆ ನೀನು ಅರಸನೋ?" ಎಂದನು. ಯೇಸು, "ನನ್ನನ್ನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿದವನು, ಇದಕ್ಕಾಗಿಯೇ ಲೋಕಕ್ಕೆ ಬಂದಿದ್ದೇನೆ. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನು ನನ್ನ ಸ್ವರವನ್ನು ಕೇಳುತ್ತಾನೆ" ಎಂದು ಉತ್ತರಕೊಟ್ಟನು.
ಅವರು ಅರಸನ ಮಾತನ್ನು ಕೇಳಿ ಹೊರಟಾಗ ಪೂರ್ವದಿಕ್ಕಿನಲ್ಲಿ ಕಂಡ ನಕ್ಷತ್ರವು ಪುನಃ ಕಾಣಿಸಿಕೊಂಡು ಆ ಕೂಸು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದಾಗಿ ಹೋಗುತಿತ್ತು. ಅವರು ನಕ್ಷತ್ರವನ್ನು ಕಂಡು ಪರಮಾನಂದದಿಂದ ಸಂತೋಷಿಸಿದರು. ಅವರು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ನಿಕ್ಷೇಪದ ಗಂಟುಗಳನ್ನು ಬಿಚ್ಚಿ ಅದಕ್ಕೆ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳಗಳನ್ನು ಮಗುವಿಗೆ ಕಾಣಿಕೆಯಾಗಿ ಅರ್ಪಿಸಿದರು. ದೇವರು ಕನಸಿನಲ್ಲಿ ಅವರಿಗೆ, ನೀವು ಹೆರೋದನ ಬಳಿಗೆ ಹಿಂದಿರುಗಿ ಹೋಗಬಾರದೆಂದು ಆಜ್ಞೆ ನೀಡಿದ್ದರಿಂದ ಅವರು ಮತ್ತೊಂದು ದಾರಿಯಿಂದ ತಮ್ಮ ದೇಶಕ್ಕೆ ಹೊರಟುಹೋದರು.