Nascimento de Jesus
O nascimento de Jesus é o evento que divide a história. O Verbo se fez carne e habitou entre nós. Deus enviou seu Filho ao mundo para nos salvar e nos reconciliar consigo.
O Verbo se fez carne
Jesus não nasceu por acaso — sua encarnação foi planejada antes da fundação do mundo. Ele se esvaziou e assumiu a forma humana por amor.
ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿಯೂ ಇರಲಿ:
ಅವರು ದೇವರ ಸ್ವರೂಪವಾಗಿದ್ದರೂ,
ದೇವರಿಗೆ ಸಮಾನರಾಗಿರುವುದನ್ನು ಬಿಡಲೊಲ್ಲೆನೆಂದು ಎಣಿಸದೆ,
ತಮ್ಮನ್ನು ತಾವೇ ಬರಿದುಮಾಡಿಕೊಂಡು
ಗುಲಾಮನ ರೂಪವನ್ನು ಧರಿಸಿಕೊಂಡು
ಮನುಷ್ಯರಿಗೆ ಸಮನಾದರು.
ಹೀಗೆ ಅವರು ಆಕಾರದಲ್ಲಿ ಮನುಷ್ಯರಾಗಿ ಕಾಣಿಸಿಕೊಂಡಾಗ
ತಮ್ಮನ್ನು ತಾವೇ ತಗ್ಗಿಸಿಕೊಂಡು
ಮರಣವನ್ನು ಎಂದರೆ ಶಿಲುಬೆಯ
ಮರಣವನ್ನೂ ಹೊಂದುವಷ್ಟು ವಿಧೇಯರಾದರು.
ಆದರೆ ನಿಯಮಿತ ಕಾಲವು ಪರಿಪೂರ್ಣವಾದಾಗ, ದೇವರು ತಮ್ಮ ಮಗನನ್ನು ಸ್ತ್ರೀಯಿಂದ ಹುಟ್ಟಿದವನಾಗಿಯೂ ನಿಯಮಕ್ಕೆ ಒಳಗಾದವನನ್ನಾಗಿಯೂ ಕಳುಹಿಸಿಕೊಟ್ಟರು. ಹೀಗೆ ದೇವರು ನಿಯಮಕ್ಕೆ ಒಳಗಾದ ನಮ್ಮನ್ನು ವಿಮೋಚಿಸಿ, ನಾವು ಪುತ್ರರ ಸ್ಥಾನವನ್ನು ಹೊಂದುವಂತೆ ಮಾಡಿದರು.
ಮಕ್ಕಳು ರಕ್ತಮಾಂಸಧಾರಿಗಳು ಆಗಿರುವುದರಿಂದ ಯೇಸು ತಮ್ಮ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ, ಸೈತಾನನನ್ನು ನಾಶಮಾಡುವುದಕ್ಕೂ ಮರಣ ಭಯದಿಂದ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವುದಕ್ಕೂ ಅವರ ಮಾನವತ್ವದಲ್ಲಿ ಪಾಲುಗಾರರಾದರು.
ಆದ್ದರಿಂದ ಯೇಸು ಎಲ್ಲಾ ವಿಷಯಗಳಲ್ಲಿಯೂ ತಮ್ಮ ಸಹೋದರರಿಗೆ ಸಮಾನವಾಗಬೇಕಾಯಿತು. ಹೀಗೆ ಅವರು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ದೇವರ ಸೇವೆಯಲ್ಲಿ ಕರುಣೆಯುಳ್ಳ ನಂಬಿಗಸ್ತರಾದ ಮಹಾಯಾಜಕರಾದರು.
ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕೊಟ್ಟರು. ಅದಕ್ಕಾಗಿಯೇ ಅವರನ್ನು ನಂಬುವ ಪ್ರತಿಯೊಬ್ಬರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕು.
O anúncio e o nascimento
O nascimento de Jesus foi anunciado por anjos, precedido por sinais e recebido com adoração pelos pastores e pelos magos do oriente.
ಕ್ರಿಸ್ತ ಯೇಸುವಿನ ಜನನ
ಕ್ರಿಸ್ತ ಯೇಸುವಿನ ಜನನದ ವಿವರ: ಯೇಸುವಿನ ತಾಯಿ ಮರಿಯಳನ್ನು ಯೋಸೇಫನಿಗೆ ನಿಶ್ಚಯ ಮಾಡಿದ್ದರು, ಆದರೆ ಅವರಿಬ್ಬರು ಕೂಡಿಬಾಳುವುದಕ್ಕಿಂತ ಮುಂಚೆಯೇ, ಮರಿಯಳು ಪವಿತ್ರಾತ್ಮರಿಂದ ಗರ್ಭಧರಿಸಿರುವುದು ತಿಳಿದುಬಂತು.
ಅವನು ಹೀಗೆ ಯೋಚಿಸುತ್ತಿದ್ದಾಗ, ಕರ್ತನ ದೂತನು ಕನಸಿನಲ್ಲಿ ಅವನಿಗೆ ಪ್ರತ್ಯಕ್ಷನಾಗಿ, "ದಾವೀದನ ವಂಶದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭವತಿಯಾಗಿರುವುದು ಪವಿತ್ರಾತ್ಮರಿಂದಲೇ. ಅವಳು ಒಬ್ಬ ಮಗನನ್ನು ಹೆರುವಳು, ನೀನು ಆತನಿಗೆ, ‘ಯೇಸು’ ಎಂದು ಹೆಸರಿಡಬೇಕು. ಏಕೆಂದರೆ ಅವರೇ ತಮ್ಮ ಜನರನ್ನು ಅವರ ಪಾಪಗಳಿಂದ ರಕ್ಷಿಸುವರು," ಎಂದು ಹೇಳಿದನು.
ದೇವರು ತಮ್ಮ ಪ್ರವಾದಿಯ ಮುಖಾಂತರ ಹೇಳಿದ ಈ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು: "ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು, ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು." ಈ ಹೆಸರಿನ ಅರ್ಥ, "ದೇವರು ನಮ್ಮ ಸಂಗಡ ಇದ್ದಾರೆ," ಎಂಬುದು.
ಯೋಸೇಫನು ನಿದ್ದೆಯಿಂದ ಎದ್ದ ಮೇಲೆ, ಕರ್ತನ ದೂತನು ಆಜ್ಞಾಪಿಸಿದಂತೆ ಮರಿಯಳನ್ನು ತನ್ನ ಹೆಂಡತಿಯನ್ನಾಗಿ ಸ್ವೀಕರಿಸಿಕೊಂಡನು. ಆದರೆ ಅವಳು ಮಗನನ್ನು ಹೆರುವತನಕ ಯೋಸೇಫನು ಆಕೆಯೊಂದಿಗೆ ದಾಂಪತ್ಯ ಜೀವನ ಮಾಡಲಿಲ್ಲ. ಯೋಸೇಫನು ಆ ಮಗುವಿಗೆ "ಯೇಸು" ಎಂದು ಹೆಸರಿಟ್ಟನು.
ಆ ದೇವದೂತನು ಆಕೆಗೆ, "ಮರಿಯಳೇ, ಹೆದರಬೇಡ. ನೀನು ದೇವರ ದಯೆಯನ್ನು ಹೊಂದಿರುವಿ. ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವೆ, ಅವರಿಗೆ ‘ಯೇಸು’ ಎಂದು ಹೆಸರಿಡಬೇಕು. ಅವರು ದೊಡ್ಡವರಾಗಿ ಮಹೋನ್ನತರ ಪುತ್ರ ಎಂದು ಎನಿಸಿಕೊಳ್ಳುವರು. ಕರ್ತದೇವರು ಅವರ ತಂದೆ ದಾವೀದನ ಸಿಂಹಾಸನವನ್ನು ಅವರಿಗೆ ಕೊಡುವರು. ಅವರು ಯಾಕೋಬನ ವಂಶವನ್ನು ಸದಾಕಾಲ ಆಳುವರು; ಅವರ ರಾಜ್ಯಕ್ಕೆ ಅಂತ್ಯವೇ ಇರುವುದಿಲ್ಲ," ಎಂದು ಹೇಳಿದನು.
ಯೋಸೇಫನು ದಾವೀದನ ಕುಟುಂಬದವನೂ ವಂಶದವನೂ ಆಗಿದ್ದರಿಂದ, ಅವನು ಸಹ ಗಲಿಲಾಯ ಪ್ರಾಂತದ ನಜರೇತೆಂಬ ಪಟ್ಟಣದಿಂದ ಯೂದಾಯ ಪ್ರಾಂತದ ಬೇತ್ಲೆಹೇಮ್ ಎಂಬ ದಾವೀದನ ಪಟ್ಟಣಕ್ಕೆ ಹೋದನು. ಅವನು ತನಗೆ ನಿಶ್ಚಯಿಸಿದ್ದ ಮತ್ತು ಪೂರ್ಣ ಗರ್ಭಿಣಿಯಾಗಿದ್ದ ಮರಿಯಳೊಂದಿಗೆ ಜನಗಣತಿಯ ದಾಖಲೆ ಮಾಡಿಸಿಕೊಳ್ಳುವುದಕ್ಕಾಗಿ ಹೋದನು. ಅವರು ಬೇತ್ಲೆಹೇಮಿನಲ್ಲಿ ಇದ್ದಾಗ, ಆಕೆಗೆ ಹೆರಿಗೆಯ ಕಾಲ ಸಮೀಪಿಸಿತು. ಮರಿಯಳು ತನ್ನ ಚೊಚ್ಚಲು ಮಗನನ್ನು ಹೆತ್ತು, ಬಟ್ಟೆಗಳಿಂದ ಸುತ್ತಿ, ಛತ್ರದಲ್ಲಿ ಅವರಿಗೆ ಸ್ಥಳವಿಲ್ಲವಾದ್ದರಿಂದ ಶಿಶುವನ್ನು ದನದ ಕೊಟ್ಟಿಗೆಯಲ್ಲಿ ಮಲಗಿಸಿದಳು.
ಆ ದೂತನು ಅವರಿಗೆ, "ಹೆದರಬೇಡಿರಿ. ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಶುಭಸಮಾಚಾರವನ್ನು ನಾನು ನಿಮಗೆ ತಿಳಿಸುತ್ತೇನೆ. ಅದೇನೆಂದರೆ, ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕರು ಹುಟ್ಟಿದ್ದಾರೆ. ಅವರು ಯಾರೆಂದರೆ ಕರ್ತದೇವರು ಆಗಿರುವ ಕ್ರಿಸ್ತ. ಅಲ್ಲಿ ಬಟ್ಟೆಯಿಂದ ಸುತ್ತಿರುವ ಶಿಶುವು ಕೊಟ್ಟಿಗೆಯಲ್ಲಿ ಮಲಗಿರುವುದನ್ನು ನೀವು ಕಾಣುವಿರಿ. ಇದೇ ನಿಮಗೆ ಗುರುತು," ಎಂದು ಹೇಳಿದನು.
ದೇವದೂತರು ಅವರ ಬಳಿಯಿಂದ ಪರಲೋಕಕ್ಕೆ ಹೋದ ಮೇಲೆ ಕುರುಬರು, "ದೇವರು ನಮಗೆ ತಿಳಿಯಪಡಿಸಿದ ಈ ಸಂಗತಿಯನ್ನು ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ನೋಡೋಣ," ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
ಅವರು ಅವಸರದಿಂದ ಹೋಗಿ ಮರಿಯಳನ್ನೂ ಯೋಸೇಫನನ್ನೂ ಕೊಟ್ಟಿಗೆಯಲ್ಲಿ ಮಲಗಿದ್ದ ಶಿಶುವನ್ನು ಕಂಡರು. ಅನಂತರ, ಈ ಶಿಶುವಿನ ವಿಷಯವಾಗಿ ತಮಗೆ ತಿಳಿಯಪಡಿಸಿದ ದೇವದೂತನ ಮಾತನ್ನು ಪ್ರಕಟಮಾಡಿದರು. ಕುರುಬರು ಹೇಳಿದ ವಿಷಯಗಳನ್ನು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು.
O Rei que veio servir
Jesus nasceu para ser Rei, e todo aquele que é da verdade ouve a sua voz. Os magos o adoraram e ofereceram seus tesouros.
ಪಿಲಾತನು ಯೇಸುವಿಗೆ, "ನೀನು ಅರಸನೋ?" ಎಂದು ಕೇಳಲು,
ಯೇಸು, "ನಾನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿ, ಇದಕ್ಕಾಗಿಯೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸೇರಿದ ಎಲ್ಲರೂ ನನ್ನ ಸ್ವರವನ್ನು ಕೇಳುತ್ತಾರೆ," ಎಂದರು.
ರಾಜನ ಮಾತನ್ನು ಕೇಳಿ ಅವರು ಹೊರಟಾಗ, ಪೂರ್ವದೇಶದಲ್ಲಿ ಅವರು ಕಂಡ ನಕ್ಷತ್ರವು ಪುನಃ ಕಾಣಿಸಿಕೊಂಡು, ಅವರ ಮುಂದೆ ಮುಂದೆ ಸಾಗುತ್ತಾ, ಆ ಮಗು ಇದ್ದ ಸ್ಥಳದ ಮೇಲೆ ಬಂದು ನಿಂತಿತು. ಅವರು ನಕ್ಷತ್ರವನ್ನು ಕಂಡು, ಬಹಳವಾಗಿ ಸಂತೋಷಪಟ್ಟರು. ಜ್ಞಾನಿಗಳು ಮನೆಯನ್ನು ಪ್ರವೇಶಿಸಿ, ಮಗುವನ್ನು ತಾಯಿ ಮರಿಯಳ ಬಳಿ ಕಂಡು, ಮಗುವಿಗೆ ಅಡ್ಡಬಿದ್ದು ಆರಾಧಿಸಿದರು. ತಮ್ಮ ಬೊಕ್ಕಸಗಳನ್ನು ತೆರೆದು ಮಗುವಿಗೆ ಚಿನ್ನ, ಧೂಪ ಮತ್ತು ರಕ್ತಬೋಳಗಳನ್ನು ಕಾಣಿಕೆಯಾಗಿ ಸಮರ್ಪಿಸಿದರು. ಅನಂತರ ಅವರು ಕನಸಿನಲ್ಲಿ ಹೆರೋದನ ಬಳಿಗೆ ಹಿಂತಿರುಗಬಾರದೆಂಬ ಎಚ್ಚರಿಕೆಯನ್ನು ಹೊಂದಿದ್ದರಿಂದ, ಬೇರೆ ದಾರಿಯಿಂದ ತಮ್ಮ ದೇಶಕ್ಕೆ ಹೊರಟು ಹೋದರು.
Este artigo te tocou? Faça uma oração!
+581 estão orando agora.
Junte-se à corrente de oração.