Nascimento
O nascimento é obra das mãos de Deus. Cada criança é formada por Ele no ventre materno com propósito e amor. A Bíblia celebra a vida desde a concepção até a eternidade.
O nascimento de Jesus
O maior nascimento da história mudou o curso da humanidade. Jesus nasceu de uma virgem pelo poder do Espírito Santo, conforme as profecias.
ಯೇಸು ಕ್ರಿಸ್ತನ ಜನನವು
ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ, ಆತನ ತಾಯಿಯಾದ ಮರಿಯಳಿಗೂ ಯೋಸೇಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಮದುವೆಯಾಗಿ ಕೂಡಿಬಾಳುವುದಕ್ಕಿಂತ ಮೊದಲೇ ಮರಿಯಳು ಪವಿತ್ರಾತ್ಮನ ಶಕ್ತಿಯಿಂದ ಗರ್ಭಧರಿಸಿದ್ದು ತಿಳಿದುಬಂತು. ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದ ಕಾರಣ ಮರಿಯಳನ್ನು ಬಯಲಿಗೆ ತಂದು ಅವಮಾನಕ್ಕೆ ಗುರಿಮಾಡದೆ ನಿಶ್ಚಿತಾರ್ಥವನ್ನು ರಹಸ್ಯವಾಗಿ ಮುರಿದುಬಿಡಬೇಕೆಂದು ಆಲೋಚಿಸಿದ್ದನು. ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, "ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ. ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು," ಅಂದನು.
ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು; ಆ ಮಾತು ಏನೆಂದರೆ,
"ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು;
ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.
‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ."
ಆಗ ಯೋಸೇಫನು ಎಚ್ಚೆತ್ತು ದೇವದೂತನು ಅಪ್ಪಣೆಕೊಟ್ಟ ಪ್ರಕಾರ ಮರಿಯಳನ್ನು ಹೆಂಡತಿಯನ್ನಾಗಿ ಸ್ವೀಕರಿಸಿಕೊಂಡನು. ಆದರೆ ಆಕೆಯು ಗಂಡು ಮಗುವಿಗೆ ಜನ್ಮನೀಡುವವರೆಗೂ ಆಕೆಯೊಡನೆ ಶರೀರ ಸಂಬಂಧವಿಲ್ಲದೆ ಇದ್ದನು. ಮತ್ತು ಯೋಸೇಫನು ಆ ಮಗುವಿಗೆ ‘ಯೇಸು’ ಎಂದು ಹೆಸರಿಟ್ಟನು.
ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.
ದೇವದೂತನು ಯೇಸುವಿನ ಜನನವನ್ನು ಮುಂತಿಳಿಸಿದ್ದು
ಎಲಿಸಬೇತಳು ಗರ್ಭಿಣಿಯಾದ ಆರನೆಯ ತಿಂಗಳಲ್ಲಿ, ದೇವರು ಗಬ್ರಿಯೇಲನೆಂಬ ತನ್ನ ದೂತನನ್ನು ಗಲಿಲಾಯ ಸೀಮೆಯ, ನಜರೇತೆಂಬ ಊರಿಗೆ, ಒಬ್ಬ ಕನ್ನಿಕೆಯ ಬಳಿಗೆ ಕಳುಹಿಸಿದನು; ಆ ಕನ್ನಿಕೆಯ ಹೆಸರು ಮರಿಯಳು; ಆಕೆಗೆ ದಾವೀದನ ಮನೆತನದ ಯೋಸೇಫನೆಂಬ ಪುರುಷನೊಂದಿಗೆ ನಿಶ್ಚಿತಾರ್ಥವಾಗಿತ್ತು.
ಆ ದೂತನು ಆಕೆಗೆ, "ಮರಿಯಳೇ, ಹೆದರಬೇಡ; ನಿನಗೆ ದೇವರ ಕೃಪೆ ದೊರಕಿದೆ. ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸುವೆಂದು ಹೆಸರಿಡಬೇಕು. ಆತನು ಮಹಾಪುರುಷನಾಗುವನು, ಪರಾತ್ಪರನಾದ ದೇವರ ಕುಮಾರನೆಂದು ಕರೆಯಲ್ಪಡುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು. ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇರದು" ಎಂದು ಹೇಳಿದನು.
ಆಗ ಮರಿಯಳು ಆ ದೂತನಿಗೆ, "ಇದು ಹೇಗಾದೀತು? ನನಗೆ ಯಾವ ಪುರುಷನ ಸಂಸರ್ಗವೂ ಇಲ್ಲವಲ್ಲಾ" ಎಂದು ಕೇಳಿದಳು. ಅದಕ್ಕೆ ದೂತನು, "ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಪರಾತ್ಪರನಾದ ದೇವರ ಶಕ್ತಿಯು ನಿನ್ನನ್ನು ಅವರಿಸುವುದು; ಆದುದರಿಂದ ನಿನಗೆ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವನು.
Formados desde o ventre
Deus nos teceu no ventre de nossa mãe. Antes de nascermos, Ele já nos conhecia e nos separou para um propósito sagrado.
ನನ್ನ ಅಂತರಿಂದ್ರಿಯಗಳನ್ನು ಉಂಟುಮಾಡಿದವನೂ,
ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನಲ್ಲವೋ?
ನೀನು ನನ್ನನ್ನು ಅದ್ಭುತವಾಗಿಯೂ, ವಿಚಿತ್ರವಾಗಿಯೂ ರಚಿಸಿದ್ದರಿಂದ,
ನಿನ್ನನ್ನು ಕೊಂಡಾಡುತ್ತೇನೆ.
ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು,
ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ.
ನಾನು ಗುಪ್ತಸ್ಥಳದಲ್ಲಿ ಏರ್ಪಡುತ್ತಾ,
ಭೂಗರ್ಭದಲ್ಲಿ ರಚಿಸಲ್ಪಡುತ್ತಾ ಇದ್ದಾಗ,
ನನ್ನ ಅಸ್ಥಿಪಂಜರವು ನಿನಗೆ ಮರೆಯಾಗಿದ್ದಿಲ್ಲ.
ನಾನು ಇನ್ನೂ ಕೇವಲ ಪಿಂಡವಾಗಿರುವಾಗ,
ನಿನ್ನ ಕಣ್ಣುಗಳು ನನ್ನನ್ನು ನೋಡಿದವು,
ನನ್ನ ಆಯುಷ್ಕಾಲದ ಪ್ರಥಮದಿನವು ಪ್ರಾರಂಭವಾಗುವ ಮೊದಲೇ,
ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು.
"ನಾನು ನಿನ್ನನ್ನು ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆ ತಿಳಿದಿದ್ದೆನು; ನೀನು ಉದರದಿಂದ ಬರುವುದಕ್ಕೆ ಮೊದಲೇ ನಿನ್ನನ್ನು ಪ್ರತಿಷ್ಠಿಸಿದ್ದೆನು. ಜನಾಂಗಗಳಿಗೆ ಪ್ರವಾದಿಯನ್ನಾಗಿ ನಿನ್ನನ್ನು ನೇಮಿಸಿದ್ದೇನೆ" ಎಂಬ ವಾಕ್ಯವನ್ನು ದಯಪಾಲಿಸಿದನು.
ತಾಯಿಯ ಗರ್ಭದೊಳಗಿಂದ ನನ್ನನ್ನು ಬರಮಾಡಿದವನು ನೀನೇ ಅಲ್ಲವೇ.
ತಾಯಿಯ ಎದೆಯಲ್ಲಿ ನನ್ನನ್ನು ನಿಶ್ಚಿಂತೆಯಿಂದ ಇರಿಸಿದವನು ನೀನೇ ಅಲ್ಲವೇ.
ಹುಟ್ಟಿದಂದಿನಿಂದ ನೀನೇ ನನಗೆ ಆಧಾರ;
ತಾಯಿ ಹೆತ್ತಂದಿನಿಂದ ನನ್ನ ದೇವರು ನೀನೇ.
ನಾನು ಹುಟ್ಟಿದಂದಿನಿಂದ ನಿನ್ನನ್ನೇ ಅವಲಂಬಿಸಿಕೊಂಡಿದ್ದೇನೆ.
ತಾಯಿ ಹೆತ್ತಂದಿನಿಂದ ನನ್ನ ಉದ್ಧಾರಕನು ನೀನೇ.
ನಾನು ಯಾವಾಗಲೂ ಹಿಗ್ಗುತ್ತಿರುವುದು ನಿನ್ನಲ್ಲಿಯೇ.
ಒಬ್ಬ ಹೆಂಗಸು ತಾನು ಹೆತ್ತ ಮಗುವಿನ ಮೇಲೆ ಕರುಣೆಯಿಡದೆ ತನ್ನ ಮೊಲೆಕೂಸನ್ನು ಮರೆತಾಳೇ?
ಒಂದು ವೇಳೆ ಮರೆತರು ಮರೆತಾಳು, ಆದರೆ ನಾನು ನಿನ್ನನ್ನು ಮರೆಯುವುದಿಲ್ಲ.
"ನಾನು ಗರ್ಭದ್ವಾರವನ್ನು ತೆರೆದ ಮೇಲೆ ಪ್ರಸವವಾಗದೆ ಇರಲು ಬಿಡುವೆನೆ?" ಎಂದು ಯೆಹೋವನು ಹೇಳುತ್ತಾನೆ.
"ಪ್ರಸವಮಾಡಿಸುವವನಾದ ನಾನು ಗರ್ಭವನ್ನು ಮುಚ್ಚೇನೋ?" ಎಂದು ನಿನ್ನ ದೇವರು ನುಡಿಯುತ್ತಾನೆ.
Crianças — bênção e promessa
Jesus acolheu as crianças e disse: delas é o Reino dos céus. Os filhos são herança do Senhor e motivo de alegria para os pais.
ಆದರೆ ಯೇಸು, "ಮಕ್ಕಳನ್ನು ಬಿಡಿರಿ. ನನ್ನ ಹತ್ತಿರ ಬರುವುದಕ್ಕೆ ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ಪರಲೋಕ ರಾಜ್ಯವು ಇಂಥವರದೇ" ಎಂದು ಹೇಳಿದನು.
ಹೀಗಿರುವುದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನೇ ತಗ್ಗಿಸಿಕೊಳ್ಳುತ್ತಾನೋ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನು. ಇದಲ್ಲದೆ ಯಾವನಾದರೂ ನನ್ನ ಹೆಸರಿನಲ್ಲಿ ಇಂಥ ಒಂದು ಚಿಕ್ಕ ಮಗುವನ್ನು ಸ್ವೀಕರಿಸುವನೋ ನನ್ನನ್ನೇ ಸ್ವೀಕರಿಸುವವನಾಗಿದ್ದಾನೆ.
ಆಗ ಆತನು ಆ ಮಕ್ಕಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಯಿಟ್ಟು ಆಶೀರ್ವದಿಸಿದನು.
ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು;
ಗರ್ಭಫಲವು ಆತನ ಬಹುಮಾನವೇ.
ಆತನು ನನ್ನ ಪ್ರಾರ್ಥನೆಯ ಫಲವಾಗಿ ಅನುಗ್ರಹಿಸಿದ ಮಗನು ಇವನೇ;
ಯೆಹೋವನೇ, ನಿನ್ನ ಕ್ರಿಯೆಗಳಿಂದ ನನ್ನನ್ನು ಸಂತೋಷಪಡಿಸಿದ್ದಿ;
ನಿನ್ನ ಕೆಲಸಗಳಿಗಾಗಿ ಉತ್ಸಾಹಧ್ವನಿ ಮಾಡುತ್ತೇನೆ.
Nascer de novo
Jesus ensinou que é preciso nascer de novo para ver o Reino de Deus. O novo nascimento é espiritual — pelo Espírito e pela Palavra.
ಯೇಸು ಅವನಿಗೆ, "ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು," ಎಂದು ಉತ್ತರ ಕೊಟ್ಟನು.
ಒಬ್ಬ ಸ್ತ್ರೀ ಹೆರುವಾಗ ತನ್ನ ಬೇನೆಯ ಕಾಲವು ಬಂದಿತೆಂದು ತಿಳಿದು ಆಕೆಗೆ ದುಃಖವಾಗುತ್ತದೆ, ಆದರೆ ಆಕೆಯು ಕೂಸನ್ನು ಹೆತ್ತ ಮೇಲೆ, ಲೋಕದಲ್ಲಿ ಒಂದು ಮಗು ಹುಟ್ಟಿತೆಂದು ಆನಂದದಿಂದ ಆ ವೇದನೆಯನ್ನು ಪುನಃ ನೆನಸಿಕೊಳ್ಳುವುದಿಲ್ಲ.
ದೇವರಿಂದ ಹುಟ್ಟಿದವನು ಪಾಪಮಾಡುವುದಿಲ್ಲ. ಏಕೆಂದರೆ ದೇವರ ಸ್ವಭಾವವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡಲಾರನು.
ಆತನನ್ನು ಕೀರ್ತಿಸಿರಿ, ಭಜಿಸಿರಿ; ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ.