Nascimento
O nascimento é obra das mãos de Deus. Cada criança é formada por Ele no ventre materno com propósito e amor. A Bíblia celebra a vida desde a concepção até a eternidade.
O nascimento de Jesus
O maior nascimento da história mudou o curso da humanidade. Jesus nasceu de uma virgem pelo poder do Espírito Santo, conforme as profecias.
ಕ್ರಿಸ್ತ ಯೇಸುವಿನ ಜನನದ ವಿವರ: ಯೇಸುವಿನ ತಾಯಿ ಮರಿಯಳನ್ನು ಯೋಸೇಫನಿಗೆ ನಿಶ್ಚಯ ಮಾಡಿದ್ದರು, ಆದರೆ ಅವರಿಬ್ಬರು ಕೂಡಿಬಾಳುವುದಕ್ಕಿಂತ ಮುಂಚೆಯೇ, ಮರಿಯಳು ಪವಿತ್ರಾತ್ಮರಿಂದ ಗರ್ಭಧರಿಸಿರುವುದು ತಿಳಿದುಬಂತು. ಯೋಸೇಫನು ನೀತಿವಂತನಾಗಿದ್ದರಿಂದ, ಆಕೆಯನ್ನು ಬಹಿರಂಗವಾಗಿ ಅವಮಾನ ಮಾಡುವುದಕ್ಕೆ ಮನಸ್ಸಿಲ್ಲದೆ, ಆಕೆಯನ್ನು ರಹಸ್ಯವಾಗಿ ಬಿಟ್ಟು ಬಿಡಬೇಕೆಂದಿದ್ದನು.
ಅವನು ಹೀಗೆ ಯೋಚಿಸುತ್ತಿದ್ದಾಗ, ಕರ್ತನ ದೂತನು ಕನಸಿನಲ್ಲಿ ಅವನಿಗೆ ಪ್ರತ್ಯಕ್ಷನಾಗಿ, "ದಾವೀದನ ವಂಶದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭವತಿಯಾಗಿರುವುದು ಪವಿತ್ರಾತ್ಮರಿಂದಲೇ. ಅವಳು ಒಬ್ಬ ಮಗನನ್ನು ಹೆರುವಳು, ನೀನು ಆತನಿಗೆ, ‘ಯೇಸು’ ಎಂದು ಹೆಸರಿಡಬೇಕು. ಏಕೆಂದರೆ ಅವರೇ ತಮ್ಮ ಜನರನ್ನು ಅವರ ಪಾಪಗಳಿಂದ ರಕ್ಷಿಸುವರು," ಎಂದು ಹೇಳಿದನು.
ದೇವರು ತಮ್ಮ ಪ್ರವಾದಿಯ ಮುಖಾಂತರ ಹೇಳಿದ ಈ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು: "ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು, ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು." ಈ ಹೆಸರಿನ ಅರ್ಥ, "ದೇವರು ನಮ್ಮ ಸಂಗಡ ಇದ್ದಾರೆ," ಎಂಬುದು.
ಯೋಸೇಫನು ನಿದ್ದೆಯಿಂದ ಎದ್ದ ಮೇಲೆ, ಕರ್ತನ ದೂತನು ಆಜ್ಞಾಪಿಸಿದಂತೆ ಮರಿಯಳನ್ನು ತನ್ನ ಹೆಂಡತಿಯನ್ನಾಗಿ ಸ್ವೀಕರಿಸಿಕೊಂಡನು. ಆದರೆ ಅವಳು ಮಗನನ್ನು ಹೆರುವತನಕ ಯೋಸೇಫನು ಆಕೆಯೊಂದಿಗೆ ದಾಂಪತ್ಯ ಜೀವನ ಮಾಡಲಿಲ್ಲ. ಯೋಸೇಫನು ಆ ಮಗುವಿಗೆ "ಯೇಸು" ಎಂದು ಹೆಸರಿಟ್ಟನು.
ಆದಕಾರಣ ಯೆಹೋವ ದೇವರು ತಾವೇ ಒಂದು ಗುರುತನ್ನು ನಿನಗೆ ಕೊಡುವರು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು. ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.
ಎಲಿಸಬೇತಳು ಗರ್ಭಿಣಿಯಾದ ಆರನೆಯ ತಿಂಗಳಲ್ಲಿ, ಗಲಿಲಾಯ ಪ್ರಾಂತದ ನಜರೇತೆಂಬ ಊರಿಗೆ, ದೇವರು ಗಬ್ರಿಯೇಲನೆಂಬ ದೇವದೂತನನ್ನು, ದಾವೀದನ ವಂಶದ ಯೋಸೇಫನಿಗೆ, ನಿಶ್ಚಯವಾಗಿದ್ದ ಮರಿಯಳೆಂಬ ಒಬ್ಬ ಕನ್ನಿಕೆಯ ಬಳಿಗೆ ಕಳುಹಿಸಿದರು.
ಆ ದೇವದೂತನು ಆಕೆಗೆ, "ಮರಿಯಳೇ, ಹೆದರಬೇಡ. ನೀನು ದೇವರ ದಯೆಯನ್ನು ಹೊಂದಿರುವಿ. ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವೆ, ಅವರಿಗೆ ‘ಯೇಸು’ ಎಂದು ಹೆಸರಿಡಬೇಕು. ಅವರು ದೊಡ್ಡವರಾಗಿ ಮಹೋನ್ನತರ ಪುತ್ರ ಎಂದು ಎನಿಸಿಕೊಳ್ಳುವರು. ಕರ್ತದೇವರು ಅವರ ತಂದೆ ದಾವೀದನ ಸಿಂಹಾಸನವನ್ನು ಅವರಿಗೆ ಕೊಡುವರು. ಅವರು ಯಾಕೋಬನ ವಂಶವನ್ನು ಸದಾಕಾಲ ಆಳುವರು; ಅವರ ರಾಜ್ಯಕ್ಕೆ ಅಂತ್ಯವೇ ಇರುವುದಿಲ್ಲ," ಎಂದು ಹೇಳಿದನು.
ಮರಿಯಳು ಆ ದೇವದೂತನಿಗೆ, "ಇದು ಹೇಗಾಗುವುದು, ನಾನು ಕನ್ಯೆ?" ಎಂದಳು.
ಆ ದೇವದೂತನು ಉತ್ತರವಾಗಿ ಮರಿಯಳಿಗೆ, "ಪವಿತ್ರಾತ್ಮ ನಿನ್ನ ಮೇಲೆ ಬರಲು, ಮಹೋನ್ನತ ದೇವರ ಶಕ್ತಿಯು ನಿನ್ನನ್ನು ಆವರಿಸುವುದು. ಆದ್ದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರ ಶಿಶುವು ದೇವರ ಪುತ್ರ ಎನಿಸಿಕೊಳ್ಳುವುದು.
Formados desde o ventre
Deus nos teceu no ventre de nossa mãe. Antes de nascermos, Ele já nos conhecia e nos separou para um propósito sagrado.
ನನ್ನ ಅಂತರಾತ್ಮವನ್ನು ಉಂಟು ಮಾಡಿದವರು ನೀವೇ;
ನನ್ನ ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವರು ನೀವೇ.
ನೀವು ನನ್ನನ್ನು ವಿಚಿತ್ರವಾಗಿಯೂ ವಿಸ್ಮಯವಾಗಿಯೂ ಸೃಷ್ಟಿಸಿದ್ದರಿಂದ
ನಾನು ನಿಮ್ಮನ್ನು ಸ್ತುತಿಸುತ್ತೇನೆ;
ನಿಮ್ಮ ಕೃತ್ಯಗಳು ಆಶ್ಚರ್ಯಕರವಾಗಿವೆ ಎಂದು,
ನಾನು ಪೂರ್ಣವಾಗಿ ತಿಳಿದಿದ್ದೇನೆ.
ನೀವು ನನ್ನನ್ನು ಮರೆಯಲ್ಲಿ ರೂಪಿಸಿದಾಗಲೂ,
ಭೂಗರ್ಭದಲ್ಲಿ ನನ್ನನ್ನು ರಚಿಸಿದಾಗಲೂ
ನನ್ನ ಅಸ್ಥಿಪಂಜರವು ನಿಮಗೆ ಮರೆಯಾಗಿರಲಿಲ್ಲ.
ನಾನು ಇನ್ನೂ ಭ್ರೂಣವಾಗಿರುವಾಗಲೇ ನಿಮ್ಮ ಕಣ್ಣುಗಳು ನನ್ನನ್ನು ನೋಡಿದವು;
ನೀವು ನನಗೆ ಅನುಮತಿಸಿರುವ ಪ್ರಥಮ ದಿನದಿಂದ ಕೊನೆಯದಿನದವರೆಗೆ
ನನ್ನ ಎಲ್ಲಾ ದಿನಗಳೂ ನಿಮ್ಮ ಪುಸ್ತಕದಲ್ಲಿ ಬರೆಯಲಾಗಿವೆ.
"ನಾನು ನಿನ್ನನ್ನು ತಾಯಿಯ ಗರ್ಭದಲ್ಲಿ ನಿರ್ಮಿಸುವುದಕ್ಕಿಂತ
ಮುಂಚೆಯೇ ನಿನ್ನನ್ನು ತಿಳಿದಿದ್ದೆನು.
ನೀನು ಹುಟ್ಟುವುದಕ್ಕಿಂತ ಮುಂಚೆ ನಿನ್ನನ್ನು ಪ್ರತಿಷ್ಠಿಸಿದ್ದೆನು;
ನಿನ್ನನ್ನು ಜನಾಂಗಗಳಿಗೆ ಪ್ರವಾದಿಯಾಗಿ ನೇಮಿಸಿದ್ದೇನೆ."
ತಾಯಿಯ ಗರ್ಭದೊಳಗಿಂದ ನನ್ನನ್ನು ಹೊರತಂದವರು ನೀವು;
ನನ್ನ ತಾಯಿಯ ಎದೆಯಲ್ಲಿ ಇದ್ದಾಗಲೇ ನಾನು ನಿಮ್ಮಲ್ಲಿ ಭರವಸೆಯಿಡುವಂತೆ ಮಾಡಿದಿರಿ.
ಹುಟ್ಟಿದಂದಿನಿಂದಲೇ ನೀವೇ ನನಗೆ ಆಧಾರ
ನನ್ನ ತಾಯಿಯ ಗರ್ಭದಿಂದಲೇ ನೀವು ನನ್ನ ದೇವರು.
ಹುಟ್ಟಿನಿಂದ ನೀವೇ ನನ್ನ ಭರವಸೆ.
ತಾಯಿಯ ಗರ್ಭದಿಂದ ನೀವೇ ನನ್ನನ್ನು ಹೊರಗೆ ತಂದಿದ್ದೀರಿ.
ನಾನು ಯಾವಾಗಲೂ ನಿಮ್ಮನ್ನು ಸ್ತುತಿಸುತ್ತಿರುವೆನು.
"ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಸ್ತ್ರೀ
ತನ್ನ ಎದೆಹಾಲನ್ನು ಕುಡಿಯುವ ಕೂಸನ್ನು ಮರೆತಾಳೇ?
ಹೌದು, ಅವಳು ಮರೆಯಬಹುದು,
ಆದರೂ ನಾನು ನಿನ್ನನ್ನು ಮರೆಯುವುದಿಲ್ಲ.
ನಾನು ಪ್ರಸವಕ್ಕೆ ತಂದಮೇಲೆ
ಹೆರಿಗೆಯಾಗದಂತೆ ತಡೆಯುವೆನೋ?"
ಎಂದು ಯೆಹೋವ ದೇವರು ಹೇಳುತ್ತಾನೆ.
"ನಾನು ಪ್ರಸವಕ್ಕೆ ತಂದಮೇಲೆ, ಪ್ರಸವವಾಗದೆ ಇರಲು ಗರ್ಭ ಮುಚ್ಚಿಬಿಡುವೆನೇ?"
ಎಂದು ನಿನ್ನ ದೇವರು ಕೇಳುತ್ತಾನೆ.
Crianças — bênção e promessa
Jesus acolheu as crianças e disse: delas é o Reino dos céus. Os filhos são herança do Senhor e motivo de alegria para os pais.
ಆದರೆ ಯೇಸು, "ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿರಿ, ಅವುಗಳಿಗೆ ಅಡ್ಡಿಮಾಡಬೇಡಿರಿ, ಪರಲೋಕ ರಾಜ್ಯವು ಇಂಥವರದೇ," ಎಂದರು.
ಯಾರು ಈ ಚಿಕ್ಕಮಗುವಿನಂತೆ ತಮ್ಮನ್ನು ತಾವು ತಗ್ಗಿಸಿಕೊಳ್ಳುವರೋ ಅವರೇ ಪರಲೋಕ ರಾಜ್ಯದಲ್ಲಿ ಅತಿ ದೊಡ್ಡವರಾಗಿರುವರು. ಯಾರಾದರೂ ಇಂಥ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಸ್ವೀಕರಿಸಿಕೊಂಡರೆ ನನ್ನನ್ನೇ ಸ್ವೀಕರಿಸಿಕೊಳ್ಳುತ್ತಾರೆ.
ಇದಲ್ಲದೆ ಯೇಸು ಆ ಮಕ್ಕಳನ್ನು ಎತ್ತಿಕೊಂಡು ತಮ್ಮ ಕೈಗಳನ್ನು ಅವುಗಳ ಮೇಲೆ ಇಟ್ಟು ಆಶೀರ್ವದಿಸಿದರು.
ಮಕ್ಕಳು ಯೆಹೋವ ದೇವರು ಕೊಟ್ಟ ಸೊತ್ತು.
ಗರ್ಭಫಲವು ದೇವರ ಬಹುಮಾನ.
ನಾನು ಯೆಹೋವ ದೇವರಿಗೆ ವಿಜ್ಞಾಪನೆ ಮಾಡಿದ್ದನ್ನು ಅವರು ನನಗೆ ಕೊಟ್ಟರು.
ಯೆಹೋವ ದೇವರೇ, ನಿಮ್ಮ ಕ್ರಿಯೆಯಿಂದ ನನ್ನನ್ನು ಸಂತೋಷಪಡಿಸಿದ್ದೀರಿ.
ನಿಮ್ಮ ಕೈಕೆಲಸಗಳಲ್ಲಿ ಜಯಧ್ವನಿಗೈಯುತ್ತೇನೆ.
Nascer de novo
Jesus ensinou que é preciso nascer de novo para ver o Reino de Deus. O novo nascimento é espiritual — pelo Espírito e pela Palavra.
ಯೇಸು ಅವನಿಗೆ, "ಒಬ್ಬನು ಮತ್ತೊಮ್ಮೆ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು, ಎಂದು ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ."
ಒಬ್ಬ ಸ್ತ್ರೀಗೆ ಪ್ರಸವ ಗಳಿಗೆ ಬಂದಾಗ ದುಃಖವಿರುವುದು. ಆದರೆ ಆಕೆಯು ಮಗುವನ್ನು ಹೆತ್ತಾಗ ಈ ಲೋಕದೊಳಗೆ ಒಂದು ಮಗು ಹುಟ್ಟಿತೆಂದು ಆನಂದದಿಂದ ಆ ವೇದನೆಯನ್ನು ಆಕೆಯು ಇನ್ನು ನೆನಪಿಗೆ ತಂದುಕೊಳ್ಳುವುದಿಲ್ಲ.
ದೇವರಿಂದ ಹುಟ್ಟಿದವನು ಪಾಪವನ್ನು ಅಭ್ಯಾಸ ಮಾಡಲಾರನು, ಏಕೆಂದರೆ ದೇವರ ಬೀಜವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪ ಅಭ್ಯಾಸ ಮಾಡುವುದು ಅವನಿಗೆ ಅಸಾಧ್ಯ.
ದೇವರಿಗೆ ಹಾಡಿರಿ, ದೇವರಿಗೆ ಕೀರ್ತನೆ ಹಾಡಿರಿ,
ದೇವರ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ.