Nova criatura
Em Cristo somos nova criação. O velho se foi, tudo se fez novo. A transformação não é reforma — é renascimento completo pelo poder do Espírito Santo.
Novas criaturas em Cristo
Se alguém está em Cristo, nova criação é. As coisas velhas passaram e eis que tudo se fez novo. A transformação é radical e total.
ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.
ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಏನು ಅಲ್ಲ, ಆದರೆ ಹೊಸ ಸೃಷ್ಟಿಯಾಗುವುದೇ ಪ್ರಮುಖವಾದುದು.
ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.
ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, "ಇಗೋ, ನಾನು ಎಲ್ಲವನ್ನು ನೂತನಗೊಳಿಸುತ್ತೇನೆ" ಎಂದನು. ಮತ್ತು ಒಬ್ಬನು ನನಗೆ, "ನೀನು ಇದನ್ನು ಬರೆ. ಏಕೆಂದರೆ ಈ ಮಾತುಗಳು ನಂಬತಕ್ಕವೂ, ಸತ್ಯವಾದವೂ ಆಗಿವೆ" ಎಂದು ಹೇಳಿದನು.
Despir o velho e vestir o novo
Somos chamados a despir o velho homem e vestir o novo, criado segundo Deus em justiça e santidade provenientes da verdade.
ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು. ನೀವು ನಿಮ್ಮ ಹೃನ್ಮನಗಳನ್ನು ನವೀಕರಿಸಿ, ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.
ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ಯಾಕೆಂದರೆ ನೀವು ಹಿಂದಿನಸ್ವಭಾವವನ್ನು ಅದರ ಕೃತ್ಯಗಳೊಂದಿಗೆ ತೆಗೆದುಹಾಕಿ ನೂತನಸ್ವಭಾವವನ್ನು ಧರಿಸಿಕೊಂಡಿದ್ದೀರಲ್ಲವೇ. ಈ ನೂತನ ಸ್ವಭಾವವು ಸೃಷ್ಟಿಸಿದಾತನ ಹೋಲಿಕೆಯ ಜ್ಞಾನದ ಮೇರೆಗೆ ಅದು ನೂತನವಾಗುತ್ತಾ ಬರುತ್ತದೆ.
ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು. ಹೇಗೆಂದರೆ ನಾವು ಆತನ ಮರಣಕ್ಕೆ ಸದೃಶ್ಯವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು. ನಮಗೆ ತಿಳಿದಿರುವಂತೆ, ನಮ್ಮ ಪಾಪಾಧೀನಸ್ವಭಾವವು ನಾಶವಾಗಿ, ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿದೆ. ಸತ್ತವನು ಪಾಪದ ವಶದಿಂದ ಬಿಡುಗಡೆ ಹೊಂದಿದ್ದಾನೆ.
ನಾನು ಸಹ ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು.
Coração e Espírito novos
Deus promete dar um coração novo e um espírito novo. Pelo novo nascimento somos feitos participantes da natureza divina.
"ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸಲಿ ಎಂದು ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು. ಕಲ್ಲಾದ ಹೃದಯವನ್ನು ಅವರೊಳಗಿಂದ ತೆಗೆದು ಮೃದುವಾದ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.
ಯೇಸು ಅವನಿಗೆ, "ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು," ಎಂದು ಉತ್ತರ ಕೊಟ್ಟನು.
ನೀವು ಲೋಕದಲ್ಲಿ ದುರಾಶೆಯಿಂದುಂಟಾಗುವ ಕೆಟ್ಟತನದಿಂದ ದೂರವಾಗಿ ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಅತ್ಯಂತ ಮಹತ್ವವುಳ್ಳ ಮತ್ತು ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ.
ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ, ಪುರಾತನ ಕಾರ್ಯಗಳನ್ನು ಮರೆತುಬಿಡಿರಿ.
ಇಗೋ, ಹೊಸ ಕಾರ್ಯವನ್ನು ಮಾಡುವೆನು, ಈಗ ತಲೆದೋರುತ್ತಲಿದೆ. ಇದು ನಿಮಗೆ ಕಾಣುವುದಿಲ್ಲವೋ?
ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸಿ, ಅರಣ್ಯದಲ್ಲಿ ನದಿಗಳನ್ನು ಹರಿಸುವೆನು.