A nova jerusalém
A Nova Jerusalém é a cidade de Deus que desce do céu, morada eterna dos redimidos. Nela não haverá mar, morte, choro nem dor — Deus habitará com seu povo para sempre.
A cidade celestial
João viu a santa cidade, a Nova Jerusalém, descendo do céu como noiva adornada para o esposo. Ali Deus morará com seu povo.
ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮ್ ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾಗಿರುವ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು. ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, "ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು. ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು" ಎಂದು ಹೇಳಿತು.
ದೇವರಾತ್ಮನಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ, ಯೆರೂಸಲೇಮೆಂಬ ಪರಿಶುದ್ಧ ಪಟ್ಟಣವು ಪರಲೋಕದೊಳಗಿಂದ, ದೇವರ ಬಳಿಯಿಂದ ಇಳಿದುಬರುವುದನ್ನು ನನಗೆ ತೋರಿಸಿದನು. ಅದು ದೇವರ ತೇಜಸ್ಸಿನಿಂದ ಕೂಡಿತ್ತು. ಪಟ್ಟಣವು ಅಮೂಲ್ಯ ರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು, ಸ್ವಚ್ಛವಾದ ಸ್ಫಟಿಕದಂತೆ ಶುಭ್ರವಾಗಿತ್ತು. ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಗೋಡೆ ಇತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು. ಅವುಗಳ ಮೇಲೆ ಇಸ್ರಾಯೇಲ್ಯರ ಹನ್ನೆರಡು ಕುಲಗಳ ಹೆಸರುಗಳು ಬರೆಯಲ್ಪಟ್ಟಿದ್ದವು. ಪೂರ್ವ ದಿಕ್ಕಿನಲ್ಲಿ ಮೂರು ಬಾಗಿಲುಗಳು, ಉತ್ತರ ದಿಕ್ಕಿನಲ್ಲಿ ಮೂರು ಬಾಗಿಲುಗಳು ದಕ್ಷಿಣ ದಿಕ್ಕಿನಲ್ಲಿ ಮೂರು ಬಾಗಿಲುಗಳು ಪಶ್ಚಿಮ ದಿಕ್ಕಿನಲ್ಲಿ ಮೂರು ಬಾಗಿಲುಗಳು ಇದ್ದವು. ಪಟ್ಟಣದ ಪ್ರಾಕಾರಕ್ಕೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಯಜ್ಞದ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.
ಪಟ್ಟಣದಲ್ಲಿ ನಾನು ದೇವಾಲಯವನ್ನು ಕಾಣಲಿಲ್ಲ. ಏಕೆಂದರೆ ಸರ್ವಶಕ್ತನಾಗಿರುವ ದೇವರಾದ ಕರ್ತನೂ ಯಜ್ಞದ ಕುರಿಮರಿಯಾದಾತನೂ ಅದರ ದೇವಾಲಯವಾಗಿದ್ದಾರೆ. ಪಟ್ಟಣಕ್ಕೆ ಬೆಳಕು ಕೊಡಲು ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿರಲಿಲ್ಲ, ಏಕೆಂದರೆ ಅದಕ್ಕೆ ದೇವರ ಮಹಿಮೆಯೇ ಪ್ರಕಾಶವನ್ನು ಕೊಡುತ್ತಿತ್ತು. ಯಜ್ಞದ ಕುರಿಮರಿಯಾದಾತನೇ ಅದರ ದೀಪವು.
ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು, ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿ ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳು ಒಂದೊಂದ್ದು ತರಹದ ಫಲವನ್ನು ಬಿಡುತ್ತಾ ಹನ್ನೆರಡು ತರಹದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗಗಳವರನ್ನು ವಾಸಿಮಾಡುವಂಥದಾಗಿದ್ದವು. ಇನ್ನೂ ಯಾವ ಶಾಪವು ಇರುವುದಿಲ್ಲ. ಆ ಪಟ್ಟಣದಲ್ಲಿ ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನವಿರುವುದು. ಆತನ ಸೇವಕರು ಆತನಿಗೆ ಸೇವೆ ಮಾಡುವರು. ಅವರು ಆತನ ಮುಖವನ್ನು ನೋಡುವರು. ಅವರ ಹಣೆಯ ಮೇಲೆ ಆತನ ಹೆಸರು ಇರುವುದು. ಇನ್ನು ರಾತ್ರಿಯೇ ಇರುವುದಿಲ್ಲ. ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗಿರುವುದಿಲ್ಲ. ದೇವರಾದ ಕರ್ತನೇ ಅವರಿಗೆ ಬೆಳಕಾಗಿರುವನು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.
A pátria celestial
Os patriarcas aguardavam uma cidade que tem fundamentos, cujo arquiteto e construtor é Deus. Nosso lar eterno está além desta vida.
ಆದರೆ ಅವರು ಪರಲೋಕವೆಂಬ ಉತ್ತಮ ದೇಶವನ್ನು ಹಾರೈಸುವವರು. ಆದ್ದರಿಂದ ದೇವರು ಅವರ ದೇವರೇ ಎನ್ನಿಸಿಕೊಳ್ಳುವುದಕ್ಕೆ ನಾಚಿಕೆಗೊಳ್ಳದೇ, ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.
ಆದರೆ ನೀವು ಚೀಯೋನ್ ಪರ್ವತಕ್ಕೂ, ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ, ಉತ್ಸವ ಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ, ಪರಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಚೊಚ್ಚಲ ಮಕ್ಕಳ ಸಭೆಗೂ, ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ, ಪರಿಪೂರ್ಣರಾಗಿರುವ ನೀತಿವಂತರ ಆತ್ಮಗಳ ಬಳಿಗೂ, ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮಗೆ ತಾಯಿ.
"ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ. ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ, ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ! ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಪಡಿಸಿದ ಮೇಲೆ, ಪುನಃ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಏಕೆಂದರೆ, ನಾನಿರುವಲ್ಲಿ ನೀವು ಸಹ ಇರಬೇಕು.
A glória da Nova Jerusalém
Deus habitará no meio do seu povo. Sua presença será a luz da cidade, e o rio da vida fluirá do trono de Deus e do Cordeiro.
ಒಂದು ನದಿ ಇದೆ; ಅದರ ಕಾಲುವೆಗಳು,
ಪರಾತ್ಪರನಾದ ದೇವರ ಪರಿಶುದ್ಧ ನಿವಾಸಸ್ಥಾನವಾಗಿರುವ,
ದೇವರ ನಗರವನ್ನು ಸಂತೋಷಪಡಿಸುತ್ತವೆ.
ಪಟ್ಟಣದ ಸುತ್ತಳತೆಯು ಹದಿನೆಂಟು ಸಾವಿರ ಮೊಳವು; ಅದನ್ನು ನಿರ್ಮಿಸಿದ ದಿನದಿಂದ ಆ ಪಟ್ಟಣಕ್ಕೆ "ಯೆಹೋವನ ನೆಲೆ" ಎಂದು ಹೆಸರಾಗುವುದು.
ಯೆಹೋವನು ಇಂತೆನ್ನುತ್ತಾನೆ, "ಚೀಯೋನ್ ನಗರಿಯೇ, ಉಲ್ಲಾಸಗೊಳ್ಳು, ಹರ್ಷಧ್ವನಿಗೈ!
ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸಿಸುವೆನು.
ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು;
ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು" ಆಗ, ಸೇನಾಧೀಶ್ವರನಾದ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಾಗುವುದು.
ಯೆಹೋವನು ಮೀಸಲಾದ ದೇಶದಲ್ಲಿ ಯೆಹೂದವನ್ನು ತನ್ನ ಸ್ವತ್ತಾಗಿ ಅನುಭವಿಸುವನು,
ಯೆರೂಸಲೇಮನ್ನು ಮತ್ತೆ ತನಗಾಗಿ ಆರಿಸಿಕೊಳ್ಳುವನು.
ನಾನು ಬೇಗನೇ ಬರುತ್ತೇನೆ, ನಿನ್ನ ಕಿರೀಟವನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು. ಯಾವನು ಜಯಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ನಿಲ್ಲಿಸುವೆನು. ಅವನು ಎಂದಿಗೂ ಅಲ್ಲಿಂದ ಕದಲುವುದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನು, ನನ್ನ ದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ, ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು.
ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ ಪರಿಶುದ್ಧ ಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು.