Obediência aos pais
A obediência aos pais é mandamento divino com promessa de vida longa. A Bíblia valoriza a honra filial e ensina os filhos a respeitar e obedecer aos pais com amor.
Honrar pai e mãe
O quinto mandamento ordena honrar pai e mãe. É o primeiro mandamento com promessa: para que vá bem e vivas muito na terra.
"ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ.
"ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಕ್ಷೇಮವಾಗಿ ಇರುವಿ, ಮತ್ತು ನಿನಗೆ ಒಳ್ಳೆಯದಾಗುವುದು.
ಹೇಗೆಂದರೆ ‘ತಂದೆತಾಯಿಗಳನ್ನು ಸನ್ಮಾನಿಸಬೇಕೆಂತಲೂ ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನು ಸಾಯಲೇಬೇಕೆಂತಲೂ’ ದೇವರು ಹೇಳಿದ್ದಾನೆ.
ತಂದೆತಾಯಿಗಳೂ ಮಕ್ಕಳೂ
ಮಕ್ಕಳೇ, ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ವಿಧೇಯರಾಗಿರಿ. ಇದು ನ್ಯಾಯವಾದದ್ದು. ವಾಗ್ದಾನಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ, "ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು, ಗೌರವಿಸಿದರೆ ನಿನಗೆ ಶುಭವಾಗುವುದು, ನೀನು ಭೂಮಿಯ ಮೇಲೆ ಬಹುಕಾಲ ಬದುಕುವಿ."
ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.
Obedecer e respeitar
Filhos, obedecei a vossos pais no Senhor. A obediência filial é expressão de amor e temor a Deus.
ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಯಾಕೆಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.
ಪಾಪಿಗಳ ಕುರಿತು ಎಚ್ಚರಿಕೆಗಳು
ಮಗನೇ, ನಿನ್ನ ತಂದೆಯ ಉಪದೇಶವನ್ನು ಕೇಳು,
ನಿನ್ನ ತಾಯಿಯ ಬೋಧನೆಯನ್ನು ತೊರೆಯಬೇಡ.
ಅವು ನಿನ್ನ ತಲೆಗೆ ಸುಂದರವಾದ ಪುಷ್ಪಕಿರೀಟ,
ಕೊರಳಿಗೆ ಹಾರದಂತಿರುವುದು.
ಪರಸ್ತ್ರೀಯರ ಸಹವಾಸದ ಬಗ್ಗೆ ಎಚ್ಚರಿಕೆ
ಕಂದಾ, ತಂದೆಯ ಆಜ್ಞೆಯನ್ನು ಕೈಕೊಳ್ಳು,
ತಾಯಿಯ ಉಪದೇಶವನ್ನು ಬಿಡಬೇಡ.
ಅವುಗಳನ್ನು ಸದಾ ನಿನ್ನ ಹೃದಯದಲ್ಲಿ ಇಟ್ಟುಕೋ,
ನಿನ್ನ ಕೊರಳಿಗೆ ಅವುಗಳನ್ನು ಧರಿಸಿಕೋ.
ನೀನು ನಡೆಯುವಾಗ ಆ ಉಪದೇಶವು ನಿನ್ನನ್ನು ಮುನ್ನಡೆಸುವುದು,
ಮಲಗಿಕೊಂಡಾಗ ಅದು ನಿನ್ನನ್ನು ಕಾಯುವುದು,
ಎಚ್ಚರಗೊಂಡಾಗ ನಿನ್ನೊಂದಿಗೆ ಮಾತನಾಡುವುದು.
ಆಜ್ಞೆಯೇ ದೀಪ, ಉಪದೇಶವೇ ಬೆಳಕು,
ಶಿಕ್ಷಣಪೂರ್ವಕವಾದ ಬೋಧನೆಯೇ ಜೀವದ ಮಾರ್ಗ.
ಜ್ಞಾನವು ಪರಮೋನ್ನತವಾದದ್ದು
ಮಕ್ಕಳೇ, ತಂದೆಯ ಉಪದೇಶವನ್ನು ಕೇಳಿರಿ,
ವಿವೇಕವನ್ನು ಗ್ರಹಿಸುವಂತೆ ಕಿವಿಗೊಡಿರಿ.
ನಾನು ನಿಮಗೆ ಸುಬೋಧೆಯನ್ನು ಮಾಡುವೆನು,
ನನ್ನ ಉಪದೇಶವನ್ನು ಬಿಡಬೇಡಿರಿ.
ನಾನೂ ನನ್ನ ತಂದೆಗೆ ಅಧೀನನಾದ ಮಗನೂ,
ತಾಯಿಯ ದೃಷ್ಟಿಗೆ ಕೋಮಲನಾದ ಏಕಪುತ್ರನೂ ಆಗಿದ್ದೆನು.
ಆಗ ತಂದೆಯು ನನಗೆ ಬೋಧಕನಾಗಿ ಹೀಗೆಂದನು,
"ನಿನ್ನ ಮನಸ್ಸು ನನ್ನ ಮಾತುಗಳನ್ನು ಹಿಡಿದುಕೊಳ್ಳಲಿ,
ನನ್ನ ಆಜ್ಞೆಯನ್ನು ಕೈಕೊಂಡು ಸುಖವಾಗಿ ಬಾಳು.
ಜ್ಞಾನವನ್ನು ಪಡೆ, ವಿವೇಕವನ್ನು ಸಂಪಾದಿಸು, ಮರೆಯಬೇಡ,
ನನ್ನ ಮಾತುಗಳಿಗೆ ಅಸಡ್ಡೆ ತೋರಿಸಬೇಡ.
ಜ್ಞಾನವನ್ನು ಬಿಡದಿದ್ದರೆ ಅದು ನಿನ್ನನ್ನು ಕಾಪಾಡುವುದು,
ಪ್ರೀತಿಸಿದರೆ, ಅದು ನಿನ್ನನ್ನು ಕಾಯುವುದು.
ಜ್ಞಾನಿಯಾದ ಮಗನು ತಂದೆಯ ನೀತಿ ಶಿಕ್ಷಣವನ್ನು ಕೇಳುವನು,
ಧರ್ಮನಿಂದಕನೋ ಗದರಿಕೆಯನ್ನು ಕೇಳನು.
ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು,
ಮುಪ್ಪಿನಲ್ಲಿಯೂ ಓರೆಯಾಗರು.
Disciplina e consequências
A vara e a repreensão dão sabedoria. A Bíblia adverte sobre as consequências sérias da rebeldia e desonra aos pais.
ಬೆತ್ತ ಮತ್ತು ಬೆದರಿಕೆಗಳಿಂದ ಜ್ಞಾನವುಂಟಾಗುವುದು,
ಶಿಕ್ಷಿಸದೆ ಬಿಟ್ಟ ಹುಡುಗನು ತಾಯಿಯ ಮಾನವನ್ನು ಕಳೆಯುವನು.
ತಂದೆಯನ್ನು ಹೊಡೆದು, ತಾಯಿಯನ್ನು ಓಡಿಸುವ ಮಗನು,
ನಾಚಿಕೆಯನ್ನು ಮತ್ತು ಅವಮಾನವನ್ನು ಉಂಟುಮಾಡುವನು.
ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು,
ಧಿಕ್ಕರಿಸುವವನ ಕಣ್ಣನ್ನು,
ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು.
ಯಾರಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಹೊಡೆದರೆ ಖಂಡಿತವಾಗಿ ಅವನು ಸಾಯಲೇಬೇಕು.
ದುಷ್ಟಪುತ್ರನ ಶಿಕ್ಷಾಕ್ರಮ
ಒಬ್ಬ ಮಗನು ತಂದೆತಾಯಿಗಳ ಆಜ್ಞೆಗೆ ಒಳಗಾಗದೆ ಶಿಕ್ಷಿಸಲ್ಪಟ್ಟರೂ, ಮೊಂಡನೂ ಮತ್ತು ಅವಿಧೇಯನೂ ಆಗಿ, ಅವರ ಮಾತನ್ನು ಕೇಳದೆಹೋದರೆ ತಂದೆತಾಯಿಗಳು ಅವನನ್ನು ಹಿಡಿದು, ಊರು ಬಾಗಿಲಿಗೆ ಹಿರಿಯರ ಮುಂದೆ ತಂದು ಅವರಿಗೆ, "ಈ ನಮ್ಮ ಮಗನು ನಮ್ಮ ಮಾತನ್ನು ಕೇಳುವುದೇ ಇಲ್ಲ, ಆಜ್ಞೆಗೆ ಒಳಗಾಗುವುದಿಲ್ಲ; ಇವನು ಮೊಂಡ, ಕುಡುಕ ಮತ್ತು ಹೊಟ್ಟೆಬಾಕ" ಎಂದು ಸಾಕ್ಷಿಹೇಳಬೇಕು. ಆಗ ಊರಿನವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಿಬಿಡಬೇಕು. ಇಸ್ರಾಯೇಲರೆಲ್ಲರೂ ಇದನ್ನು ಕೇಳಿ ಭಯಪಡುವರು.
ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ಶಪಿಸುವವನ ದೀಪವು,
ಮಧ್ಯರಾತ್ರಿಯ ಅಂಧಕಾರದಲ್ಲಿ ಆರಿಹೋಗುವುದು.
ನಿಮ್ಮ ಶಿಸ್ತಿಗಾಗಿಯೇ, ನಿಮಗೆ ಶಿಕ್ಷೆಯಾಗುತ್ತದೆಂದು ಅದನ್ನು ಸಹಿಸಿಕೊಳ್ಳಿರಿ. ದೇವರು ನಿಮ್ಮನ್ನು ಮಕ್ಕಳೆಂದು ನಡೆಸುತ್ತಾನೆ. ಯಾಕೆಂದರೆ ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿದ್ದಾನೆ?
ದಿಕ್ಕಿಲ್ಲದ ವಿಧವೆಯರನ್ನು ಸಂರಕ್ಷಿಸು. ಆದರೆ ಒಬ್ಬ ವಿಧವೆಗೆ ಮಕ್ಕಳಾಗಲಿ ಮೊಮ್ಮಕ್ಕಳಾಗಲಿ ಇದ್ದರೆ ಅವರೇ ಮೊದಲು ತಮ್ಮ ಮನೆಯವರಿಗೆ ಭಕ್ತಿತೋರಿಸುವುದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪಕಾರ ಮಾಡುವುದಕ್ಕೂ ಕಲಿತುಕೊಳ್ಳಲಿ. ಇದು ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.