Obediência aos pais
A obediência aos pais é mandamento divino com promessa de vida longa. A Bíblia valoriza a honra filial e ensina os filhos a respeitar e obedecer aos pais com amor.
Honrar pai e mãe
O quinto mandamento ordena honrar pai e mãe. É o primeiro mandamento com promessa: para que vá bem e vivas muito na terra.
ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನೀನು ಬಹುಕಾಲ ಬಾಳುವಂತೆ ನಿನ್ನ ತಂದೆತಾಯಿಗಳನ್ನು ಗೌರವಿಸು.
ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ, ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನಿನಗೆ ಒಳ್ಳೆಯದಾಗುವ ಹಾಗೆಯೂ, ನಿನ್ನ ದೇವರಾದ ಯೆಹೋವ ದೇವರು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ, ನಿನ್ನ ತಾಯಿಯನ್ನೂ ಗೌರವಿಸು.
‘ನಿಮ್ಮ ತಂದೆತಾಯಿಗಳನ್ನು ಸನ್ಮಾನಿಸಬೇಕು,’ ಎಂದೂ ‘ತಂದೆತಾಯಿಗಳನ್ನು ದೂಷಿಸುವವನಿಗೆ ಮರಣದಂಡನೆ ಆಗಬೇಕು,’ ಎಂದು ದೇವರು ಹೇಳಿದ್ದಾರೆ.
ಮಕ್ಕಳೇ, ನೀವು ಕರ್ತನಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಇದು ಸೂಕ್ತವಾದದ್ದು. "ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು," ಎಂಬುದು ವಾಗ್ದಾನ ಸಹಿತವಾದ ಮೊದಲನೆಯ ಆಜ್ಞೆಯಾಗಿದೆ. "ಸನ್ಮಾನಿಸಿದರೆ ನಿನಗೆ ಶುಭವಾಗುವುದು. ನೀನು ಭೂಮಿಯ ಮೇಲೆ ಬಹುಕಾಲ ಬದುಕುವೆ."
ತಂದೆಗಳೇ, ನಿಮ್ಮ ಮಕ್ಕಳನ್ನು ಸಿಟ್ಟಿಗೆಬ್ಬಿಸಬೇಡಿರಿ; ಕರ್ತನ ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಮಕ್ಕಳನ್ನು ಬೆಳೆಸಿರಿ.
Obedecer e respeitar
Filhos, obedecei a vossos pais no Senhor. A obediência filial é expressão de amor e temor a Deus.
ಮಕ್ಕಳೇ, ಎಲ್ಲಾ ವಿಧಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ. ಏಕೆಂದರೆ ಇದು ಕರ್ತ ಯೇಸುವಿಗೆ ಬಹು ಮೆಚ್ಚಿಕೆಯಾಗಿದೆ.
ಪಾಪ ಸಂಬಧಿತ ಎಚ್ಚರಿಕೆ
ಮಗನೇ, ನಿನ್ನ ತಂದೆಯ ಶಿಕ್ಷಣಗಳನ್ನು ಕೇಳು,
ನಿನ್ನ ತಾಯಿಯ ಉಪದೇಶವನ್ನು ತೊರೆಯಬೇಡ.
ಅವು ನಿನ್ನ ತಲೆಗೆ ಸುಂದರ ಕಿರೀಟ
ನಿನ್ನ ಕೊರಳನ್ನು ಅಲಂಕರಿಸುವ ಹಾರ.
ವ್ಯಭಿಚಾರಕ್ಕೆ ವಿರುದ್ಧವಾಗಿ ಎಚ್ಚರಿಕೆ
ಮಗನೇ, ನಿನ್ನ ತಂದೆಯ ಆಜ್ಞೆಯನ್ನು ಕೈಗೊಳ್ಳು,
ನಿನ್ನ ತಾಯಿಯ ಬೋಧನೆಯನ್ನು ತ್ಯಜಿಸಬೇಡ.
ಅವುಗಳನ್ನು ಯಾವಾಗಲೂ ನಿನ್ನ ಹೃದಯದಲ್ಲಿ ಬಂಧಿಸಿಕೋ.
ಅವುಗಳನ್ನು ನಿನ್ನ ಕೊರಳಿಗೆ ಧರಿಸಿಕೋ.
ನೀನು ನಡೆಯುವಾಗ ಅವು ನಿನಗೆ ಮಾರ್ಗದರ್ಶಿಯಾಗಿರುತ್ತವೆ.
ನೀನು ಮಲಗುವಾಗ ಅವು ನಿನ್ನನ್ನು ಕಾಯುತ್ತವೆ.
ನೀನು ಎಚ್ಚರಗೊಂಡಾಗ ಅವು ನಿನ್ನೊಂದಿಗೆ ಮಾತಾಡುತ್ತವೆ.
ಆಜ್ಞೆಯೇ ದೀಪವಾಗಿದೆ,
ಬೋಧನೆಯೇ ಬೆಳಕಾಗಿದೆ;
ಶಿಕ್ಷಣದ ತಿದ್ದುವಿಕೆಗಳು
ಜೀವ ಮಾರ್ಗವಾಗಿವೆ.
ಹೇಗಾದರೂ ಜ್ಞಾನವನ್ನು ಪಡೆಯಿರಿ
ಮಕ್ಕಳೇ, ತಂದೆಯ ಶಿಕ್ಷಣವನ್ನು ಕೇಳಿರಿ;
ತಿಳುವಳಿಕೆಯನ್ನು ಗ್ರಹಿಸಲಿಕ್ಕೆ ಗಮನಕೊಡಿರಿ.
ಏಕೆಂದರೆ ನಾನು ನಿಮಗೆ ಸದುಪದೇಶವನ್ನು ಮಾಡುವೆನು,
ನನ್ನ ಉಪದೇಶವನ್ನು ಬಿಟ್ಟುಬಿಡಬೇಡಿರಿ.
ನಾನೂ ಕೂಡ ನನ್ನ ತಂದೆಗೆ ನೆಚ್ಚಿನ ಮಗನೂ
ನನ್ನ ತಾಯಿಗೆ ಮುದ್ದು ಮಗನೂ ಆಗಿದ್ದೆನು.
ನನ್ನ ತಂದೆ ನನಗೆ ಬೋಧಿಸಿ ಹೇಳಿದ್ದೇನೆಂದರೆ,
"ನನ್ನ ಮಾತುಗಳನ್ನು ಮನಃಪೂರ್ವಕವಾಗಿ ಪಾಲಿಸು;
ನನ್ನ ಆಜ್ಞೆಗಳನ್ನು ಕೈಗೊಳ್ಳು, ಆಗ ನೀನು ಬಾಳುವೆ.
ಜ್ಞಾನವನ್ನು ಪಡೆ, ತಿಳುವಳಿಕೆಯನ್ನು ಸಂಪಾದಿಸು;
ನನ್ನ ಮಾತುಗಳನ್ನು ಮರೆಯದಿರು, ಅವುಗಳಿಂದ ದೂರವಾಗಬೇಡ.
ಜ್ಞಾನವನ್ನು ಬಿಟ್ಟುಬಿಡಬೇಡ, ಆಕೆ ನಿನ್ನನ್ನು ಕಾಪಾಡುವಳು;
ಆಕೆಯನ್ನು ಪ್ರೀತಿಸು, ಆಕೆ ನಿನ್ನನ್ನು ಕಾಯುವಳು.
ಜ್ಞಾನಿಯಾದ ಮಗನು ತನ್ನ ತಂದೆಯ ಉಪದೇಶವನ್ನು ಸ್ವೀಕರಿಸುತ್ತಾನೆ;
ಆದರೆ ಅಪಹಾಸ್ಯ ಮಾಡುವವನು ಗದರಿಕೆಯನ್ನು ಕೇಳುವುದಿಲ್ಲ.
ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳಿಗೆ ಶಿಕ್ಷಣವನ್ನು ಕೊಡು;
ಆಗ ಮುಪ್ಪಿನಲ್ಲಿಯೂ ಅವನು ಅದರಿಂದ ದೂರ ಹೋಗುವುದಿಲ್ಲ.
Disciplina e consequências
A vara e a repreensão dão sabedoria. A Bíblia adverte sobre as consequências sérias da rebeldia e desonra aos pais.
ಬೆತ್ತ ಮತ್ತು ಬೆದರಿಕೆಗಳು ಜ್ಞಾನವನ್ನುಂಟುಮಾಡುತ್ತವೆ;
ಆದರೆ ಶಿಕ್ಷಿಸದೆ ಬಿಟ್ಟ ಹುಡುಗನು ತನ್ನ ತಾಯಿಗೆ ಅವಮಾನವನ್ನು ತರುತ್ತಾನೆ.
ಯಾರು ತಂದೆಯನ್ನು ದೋಚಿಕೊಂಡು ತಾಯಿಯನ್ನು ಓಡಿಸುವರೋ
ನಾಚಿಕೆಯನ್ನುಂಟುಮಾಡಿ, ನಿಂದೆಯನ್ನು ತರುತ್ತಾರೆ.
"ತನ್ನ ತಂದೆಯನ್ನು ಹಾಸ್ಯಮಾಡಿ,
ತನ್ನ ತಾಯಿಯನ್ನು ಧಿಕ್ಕರಿಸುವ ಕಣ್ಣನ್ನು,
ಕಣಿವೆಯ ಕಾಗೆಗಳು ಕಿತ್ತು ಕಕ್ಕುವವು.
ರಣಹದ್ದುಗಳು ಅದನ್ನು ತಿಂದುಬಿಡುವವು.
"ತಂದೆತಾಯಿಗಳನ್ನು ಹೊಡೆಯುವವನು ಖಂಡಿತವಾಗಿ ಮರಣದಂಡನೆ ಹೊಂದಬೇಕು.
ದುಷ್ಟ ಪುತ್ರನ ಶಿಕ್ಷಾಕ್ರಮ
ಒಬ್ಬ ಮನುಷ್ಯನಿಗೆ ಮೊಂಡನೂ, ತಿರುಗಿ ಬೀಳುವವನೂ ಆದ ಮಗನಿದ್ದರೆ, ಅವನು ತಂದೆತಾಯಿಯ ಮಾತನ್ನೂ ಕೇಳದೆ, ಅವರು ಅವನನ್ನು ಶಿಸ್ತುಪಡಿಸಲು ಹೇಳುವ ಮಾತನ್ನೂ ಕೇಳದೆ ಹೋದರೆ, ಅವನ ತಂದೆತಾಯಿಗಳು ಅವನನ್ನು ಹಿಡಿದು, ಪಟ್ಟಣದ ಹಿರಿಯರ ಬಳಿಗೂ ಅವನ ಊರಿನ ಬಾಗಿಲಿನ ಬಳಿಗೂ ತಂದು, ಪಟ್ಟಣದ ಹಿರಿಯರಿಗೆ, "ಈ ನಮ್ಮ ಮಗನು ಮೊಂಡನೂ, ತಿರುಗಿ ಬೀಳುವವನೂ, ನಮ್ಮ ಮಾತು ಕೇಳದವನೂ, ಹೊಟ್ಟೆ ಬಾಕನೂ, ಕುಡುಕನೂ ಆಗಿದ್ದಾನೆ," ಎಂದು ಹೇಳಬೇಕು. ಆಗ ಅವನ ಪಟ್ಟಣದ ಜನರೆಲ್ಲರೂ ಅವನು ಸಾಯುವಂತೆ ಅವನ ಮೇಲೆ ಕಲ್ಲೆಸೆಯಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು. ಇಸ್ರಾಯೇಲರಲ್ಲಿ ಇದನ್ನು ಕೇಳಿ ಭಯಪಡುವರು.
ತನ್ನ ತಂದೆಯನ್ನಾಗಲಿ, ತನ್ನ ತಾಯಿಯನ್ನಾಗಲಿ ಶಪಿಸುವವನ
ದೀಪವು ಮಧ್ಯರಾತ್ರಿಯ ಕತ್ತಲೆಯಲ್ಲಿ ಆರಿಹೋಗುವುದು.
ಶಿಸ್ತಿಗಾಗಿ ಕಷ್ಟವನ್ನು ನೀವು ಸಹಿಸಿಕೊಳ್ಳಬೇಕು. ದೇವರು ನಿಮ್ಮನ್ನು ಮಕ್ಕಳೆಂದು ನಡೆಸಿಕೊಳ್ಳುತ್ತಾರೆ. ಏಕೆಂದರೆ ತಂದೆಯಿಂದ ಶಿಸ್ತುಹೊಂದದ ಮಕ್ಕಳೆಲ್ಲಿ?
ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾಗಲಿ ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿಯಿಂದಿರುವುದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪಕಾರ ಮಾಡುವುದಕ್ಕೂ ಕಲಿತುಕೊಳ್ಳಲಿ. ಇದು ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದು.