Obediência
A obediência a Deus é a resposta natural do amor. Jesus disse: 'Se me amais, guardareis os meus mandamentos.' A obediência abre portas de bênção e nos aproxima do coração de Deus.
Obedecer é melhor que sacrificar
Deus deseja obediência acima de rituais. O sacrifício sem submissão ao Senhor é vazio de significado espiritual.
ಅದಕ್ಕೆ ಸಮುಯೇಲನು ಹೇಳಿದ್ದೇನೆಂದರೆ,
"ಯೆಹೋವ ದೇವರ ವಾಕ್ಯಕ್ಕೆ ವಿಧೇಯನಾದರೆ,
ಯೆಹೋವ ದೇವರಿಗೆ ಆಗುವ ಸಂತೋಷ ದಹನಬಲಿಗಳಲ್ಲಿಯೂ
ಯಜ್ಞಗಳಲ್ಲಿಯೂ ಆಗುವುದೋ?
ಇಗೋ, ಯಜ್ಞಕ್ಕಿಂತ ವಿಧೇಯತೆಯು,
ಟಗರುಗಳ ಕೊಬ್ಬಿಗಿಂತ ಮಾತುಕೇಳುವುದೇ ಉತ್ತಮವಾಗಿರುವುದು.
ಪೇತ್ರ ಮತ್ತು ಇತರ ಅಪೊಸ್ತಲರು ಉತ್ತರವಾಗಿ, "ನಾವು ಮನುಷ್ಯರಿಗೆ ವಿಧೇಯರಾಗಿರುವುದಕ್ಕಿಂತ ದೇವರಿಗೆ ವಿಧೇಯರಾಗಿರಬೇಕಲ್ಲ!
ಈ ಸಂಗತಿಗಳಿಗೆ ನಾವೇ ಸಾಕ್ಷಿಗಳು; ತನಗೆ ವಿಧೇಯರಾಗಿರುವವರಿಗೆ ದೇವರು ದಯಪಾಲಿಸಿದ ಪವಿತ್ರಾತ್ಮ ದೇವರು ಸಾಕ್ಷಿ," ಎಂದರು.
ಕ್ರಿಸ್ತ ಯೇಸು ದೇವರ ಪುತ್ರರಾಗಿದ್ದರೂ ತಾವು ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡರು. ಹೀಗೆ ಯೇಸು ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ನಿರಂತರವಾಗಿ ರಕ್ಷಣೆಗೆ ಕಾರಣರಾದರು.
Obedecer aos mandamentos de Cristo
Jesus vinculou amor a obediência. Quem ama a Deus guarda seus mandamentos, e seus mandamentos não são pesados.
"ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಅನುಸರಿಸುವಿರಿ.
ಯೇಸು ಅವನಿಗೆ, "ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ಅವನು ನನ್ನ ವಾಕ್ಯವನ್ನು ಕೈಗೊಳ್ಳುವನು. ನನ್ನ ತಂದೆಯು ಅವನನ್ನು ಪ್ರೀತಿಸುವರು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಿವಾಸಮಾಡಿಕೊಳ್ಳುವೆವು.
ದೇವರ ಪ್ರೀತಿ ಏನೆಂದರೆ: ದೇವರ ಆಜ್ಞೆಗಳನ್ನು ಕೈಗೊಂಡು ನಡೆಯುವುದೇ. ಅವರ ಆಜ್ಞೆಗಳು ಕಠಿಣವಾದವುಗಳಲ್ಲ.
ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಅಪರಾಧಿ ಎಂದು ಖಂಡಿಸದಿದ್ದರೆ ದೇವರ ಮುಂದೆ ಆತ್ಮವಿಶ್ವಾಸ ನಮಗಿರುವುದು. ಮತ್ತು ನಾವು ಏನೇನು ಬೇಡಿಕೊಳ್ಳುತ್ತೇವೋ ಅದನ್ನು ದೇವರಿಂದ ನಾವು ಹೊಂದಿಕೊಳ್ಳುತ್ತೇವೆ. ಏಕೆಂದರೆ ನಾವು ಅವರ ಆಜ್ಞೆಗಳನ್ನು ಕೈಗೊಂಡು ಅವರ ದೃಷ್ಟಿಯಲ್ಲಿ ಮೆಚ್ಚಿಗೆಯಾದವುಗಳನ್ನು ಮಾಡುವವರಾಗಿದ್ದೇವೆ.
"ನನ್ನನ್ನು ನೀವು, ‘ಕರ್ತದೇವರೇ, ಕರ್ತದೇವರೇ,’ ಎಂದು ಕರೆದು ನಾನು ಹೇಳುವವುಗಳನ್ನು ನೀವು ಮಾಡದೆ ಇರುವುದು ಏಕೆ?
ಯೇಸು ಅವರೆಲ್ಲರಿಗೆ: "ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ನಿರಾಕರಿಸಿ ತಮ್ಮ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
Obedecer e praticar a Palavra
Sejam praticantes da Palavra. Quem ouve e pratica é como o homem sábio que construiu sobre a rocha firme — inabalável.
ನೀವು ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.
ನೀವು ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.
ಹೀಗಿರಲಾಗಿ ದೇವರಿಗೆ ಅಧೀನವಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು.
ಈ ದೇವರ ನಿಯಮವು ನಿನ್ನ ಬಾಯಿಂದ ತೊಲಗಬಾರದು, ಅದರಲ್ಲಿ ಬರೆದಿರುವ ಪ್ರಕಾರವೇ ಕೈಗೊಂಡು ನಡೆಯುವ ಹಾಗೆ ಹಗಲುರಾತ್ರಿ ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವು ಸಮೃದ್ಧಿಯಾಗಿ ನೀನು ಜಯಶಾಲಿಯಾಗುವೆ.
ಈ ದೇವರ ನಿಯಮವು ನಿನ್ನ ಬಾಯಿಂದ ತೊಲಗಬಾರದು, ಅದರಲ್ಲಿ ಬರೆದಿರುವ ಪ್ರಕಾರವೇ ಕೈಗೊಂಡು ನಡೆಯುವ ಹಾಗೆ ಹಗಲುರಾತ್ರಿ ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವು ಸಮೃದ್ಧಿಯಾಗಿ ನೀನು ಜಯಶಾಲಿಯಾಗುವೆ.
ಮಗನೇ, ನಿನ್ನ ತಂದೆಯ ಆಜ್ಞೆಯನ್ನು ಕೈಗೊಳ್ಳು,
ನಿನ್ನ ತಾಯಿಯ ಬೋಧನೆಯನ್ನು ತ್ಯಜಿಸಬೇಡ.
ಶಿಸ್ತನ್ನು ಕೈಗೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು;
ಆದರೆ ತಿದ್ದುಪಾಟನ್ನು ತಿರಸ್ಕರಿಸುವವನು ಇತರರ ದಾರಿತಪ್ಪಿಸುವನು.
Bênçãos da obediência
A obediência abre caminho de bênçãos e prosperidade. Deus promete vida, saúde e vitória aos que andam em seus caminhos.
ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳನ್ನು ಅನುಸರಿಸಿ ನಡೆದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಭೂಲೋಕದ ಎಲ್ಲಾ ಜನಾಂಗಗಳಿಗಿಂತ ಉನ್ನತ ಸ್ಥಿತಿಯಲ್ಲಿರಿಸುವರು.
ಅವರು ನನಗೆ ಭಯಪಟ್ಟು, ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಗೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೆಯದು. ಆಗ ಅವರಿಗೂ, ಅವರ ಮಕ್ಕಳಿಗೂ ಎಂದೆಂದಿಗೂ ಒಳ್ಳೆಯದಾಗುವುದು."
ನೀವು ಬದುಕುವ ಹಾಗೆಯೂ, ನಿಮಗೆ ಒಳ್ಳೆಯದಾಗುವ ಹಾಗೆಯೂ, ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಮಾರ್ಗಗಳಲ್ಲೇ ನಡೆದುಕೊಳ್ಳಬೇಕು.
ಆದ್ದರಿಂದ ಈ ಆಜ್ಞೆಗಳಲ್ಲಿ ಅತ್ಯಂತ ಚಿಕ್ಕದಾದ ಒಂದನ್ನು ಮೀರಿ, ಹಾಗೆಯೇ ಮೀರಲು ಇತರರಿಗೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಅತಿ ಚಿಕ್ಕವನೆಂದು ಎನಿಸಿಕೊಳ್ಳುವನು. ಆದರೆ ಈ ಆಜ್ಞೆಗಳನ್ನು ಪಾಲಿಸಿ ಇತರರಿಗೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಎನಿಸಿಕೊಳ್ಳುವನು.
ಆದ್ದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರವಾಗಿ ನಿಲ್ಲಿರಿ. ಯಾವುದೂ ನಿಮ್ಮನ್ನು ಕದಲಿಸದಿರಲಿ. ಕರ್ತನಲ್ಲಿ ನಿಮ್ಮ ಪ್ರಯಾಸವು ನಿಷ್ಫಲವಾಗುವುದಿಲ್ಲವೆಂದು ತಿಳಿದು, ಕರ್ತನ ಕೆಲಸಕ್ಕೆ ಯಾವಾಗಲೂ ನಿಮ್ಮನ್ನು ಸಂಪೂರ್ಣವಾಗಿ ಒಪ್ಪಿಸಿಕೊಡಿರಿ.
ಒಬ್ಬ ಮನುಷ್ಯನ ಅವಿಧೇಯತೆಯಿಂದಾಗಿ ಅನೇಕರು, ಪಾಪಿಗಳು ಆದಂತೆಯೇ ಒಬ್ಬ ಮನುಷ್ಯನ ವಿಧೇಯತೆಯಿಂದಾಗಿ ಅನೇಕರು ನೀತಿವಂತರಾಗುವರು.
ಅಪರಾಧವು ಹೆಚ್ಚುವಂತೆ ನಿಯಮವು ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗ, ಕೃಪೆಯು ಇನ್ನೂ ಹೆಚ್ಚಾಯಿತು.
Submissão e consagração
Apresentar o corpo como sacrifício vivo é o culto racional. A obediência se expressa em submissão, serviço e consagração total a Deus.
ಆದ್ದರಿಂದ, ಪ್ರಿಯರೇ ದೇವರ ಕರುಣೆಯಿಂದ ಬೇಡಿಕೊಳ್ಳುವುದೇನೆಂದರೆ, ನೀವು ನಿಮ್ಮ ದೇಹಗಳನ್ನು ದೇವರಿಗೆ ಪರಿಶುದ್ಧವೂ ಮೆಚ್ಚುಗೆಯೂ ಆಗಿರುವ ಸಜೀವ ಯಜ್ಞವಾಗಿ ಸಮರ್ಪಿಸಿರಿ. ಇದೇ ನಿಮ್ಮ ವಿವೇಕ ಪೂರ್ವಕವಾದ ಆರಾಧನೆಯು.
ಈ ಲೋಕದ ನಡುವಳಿಕೆಯನ್ನು ಹೊಂದಿಕೊಳ್ಳದೇ, ನಿಮ್ಮ ಮನಸ್ಸನ್ನು ರೂಪಾಂತರಿಸಿಕೊಂಡು ನವೀಕರಿಸಿಕೊಳ್ಳಿರಿ. ಆಗ ನೀವು ಉತ್ತಮವಾದ, ಮೆಚ್ಚುಗೆಯಾಗಿರುವಂಥ ಮತ್ತು ಪರಿಪೂರ್ಣವಾದ ದೇವರ ಚಿತ್ತ ಯಾವುದು ಎಂಬುದನ್ನು ತಿಳಿದುಕೊಳ್ಳುವಿರಿ.
ಉತ್ಸಾಹದಲ್ಲಿ ಆಲಸ್ಯರಾಗದೆ, ಆತ್ಮದಲ್ಲಿ ಬೆಂಕಿಯುಳ್ಳವರಾಗಿ ಕರ್ತನ ಸೇವೆಯನ್ನು ಮಾಡಿರಿ.
ಯಾರು ದೇವರ ಆತ್ಮರಿಂದ ನಡಿಸಿಕೊಳ್ಳುತ್ತಾರೋ ಅವರು ದೇವರ ಪುತ್ರರಾಗಿರುತ್ತಾರೆ.
ಪ್ರತಿಯೊಬ್ಬನೂ ಮೇಲಧಿಕಾರಿಗಳಿಗೆ ಅಧೀನನಾಗಿರಬೇಕು, ಏಕೆಂದರೆ ದೇವರು ನೇಮಿಸಿದ ಅಧಿಕಾರದ ಹೊರತು ಬೇರೆ ಯಾವದೂ ಇರುವುದಿಲ್ಲ. ಇರುವ ಅಧಿಕಾರಗಳು ದೇವರಿಂದಲೇ ನೇಮಕಗೊಂಡಿವೆ.
ಪ್ರತಿಯೊಬ್ಬನೂ ಮೇಲಧಿಕಾರಿಗಳಿಗೆ ಅಧೀನನಾಗಿರಬೇಕು, ಏಕೆಂದರೆ ದೇವರು ನೇಮಿಸಿದ ಅಧಿಕಾರದ ಹೊರತು ಬೇರೆ ಯಾವದೂ ಇರುವುದಿಲ್ಲ. ಇರುವ ಅಧಿಕಾರಗಳು ದೇವರಿಂದಲೇ ನೇಮಕಗೊಂಡಿವೆ. ಆದ್ದರಿಂದ ಅಧಿಕಾರಕ್ಕೆ ಎದುರು ಬೀಳುವವನು ದೇವರ ನೇಮಕವನ್ನು ಎದುರಿಸುವವನಾಗಿರುತ್ತಾನೆ. ಹಾಗೆ ಎದುರಿಸುವವರು ತೀರ್ಪಿಗೆ ಗುರಿಯಾಗುವರು.
ಆಗ ನಾನು ದೇವರ ಚಿತ್ತಾನುಸಾರ ನಿಮ್ಮ ಬಳಿಗೆ ಸಂತೋಷದಿಂದ ಬಂದು, ನಿಮ್ಮ ಸಂಗಡ ವಿಶ್ರಾಂತಿ ಹೊಂದುವೆನು.
ತಂದೆಯಾದ ದೇವರ ಮಹಿಮೆಗಾಗಿ
ಯೇಸು ಕ್ರಿಸ್ತನು ಕರ್ತದೇವರು ಎಂಬುದಾಗಿ ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವುದು.
ವಿಧೇಯರಾದ ಮಕ್ಕಳಿಗೆ ತಕ್ಕಂತೆ, ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮ್ಮ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರಬೇಡಿರಿ.
ಅದಕ್ಕೆ ಅವನು ಉತ್ತರವಾಗಿ, " ‘ನೀನು ನಿನ್ನ ದೇವರಾದ ಕರ್ತದೇವರನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು,’ ಮತ್ತು ‘ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನು ಪ್ರೀತಿಸಬೇಕು,’" ಎಂದನು.
"ನನ್ನನ್ನು ಆಲಿಸುತ್ತಿರುವವರೆ ನನ್ನ ಮಾತನ್ನು ಕೇಳಿರಿ: ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ದ್ವೇಷಮಾಡುವವರಿಗೆ ಒಳ್ಳೆಯದನ್ನು ಮಾಡಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ, ನಿಮ್ಮನ್ನು ಅವಮಾನ ಪಡಿಸುವವರಿಗೋಸ್ಕರ ಪ್ರಾರ್ಥಿಸಿರಿ.
ನಿನ್ನ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಅನುಸರಿಸಿ ಅವರ ಮಾರ್ಗದಲ್ಲೇ ನಡೆದುಕೋ; ಮೋಶೆಯ ನಿಯಮದಲ್ಲಿ ಬರೆದಿರುವ ಅವರ ಆಜ್ಞಾನಿಯಮಗಳಿಗೂ, ವಿಧಿನಿರ್ಣಯಗಳಿಗೂ ವಿಧೇಯನಾಗಿರು. ಹೀಗೆ ಮಾಡುವುದಾದರೆ ನೀನು ಏನು ಮಾಡಿದರೂ, ಎಲ್ಲಿ ಸಂಚರಿಸಿದರೂ ಎಲ್ಲಾದರಲ್ಲಿಯೂ ಯಶಸ್ವಿಯಾಗುವೆ.
ವಿದೇಶಿಯರು ನನಗೆ ಅಧೀನರಾದರು;
ನನ್ನ ಸುದ್ದಿ ಕೇಳಿದ ಕೂಡಲೇ ನನಗೆ ವಿಧೇಯರಾಗುವರು.
ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ಸ್ಥಿರವಾಗಿರುವಂತೆಯೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗೆ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅವರು ನಿಮಗೆ ಕೊಡುವರು.
ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ," ನೀವು ಕಿವಿಗೊಡದೆ ನನ್ನ ಹೆಸರಿಗೆ ಮಹಿಮೆಯನ್ನು ಸಲ್ಲಿಸಲು ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳದೆ ಹೋದರೆ, "ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು. ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು. ಹೌದು, ಅವುಗಳನ್ನು ಆಗಲೇ ಶಪಿಸಿದ್ದಾಯಿತು, ಏಕೆಂದರೆ ನೀವು ನನ್ನನ್ನು ಘನಪಡಿಸಲು ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಲಿಲ್ಲ.