Órfãos
Deus tem um cuidado especial pelos órfãos. Ele se apresenta como pai dos que não têm pai e defensor dos desamparados, e ordena a seu povo que faça o mesmo.
Deus, pai dos órfãos
O Senhor é pai dos órfãos e protetor das viúvas. Ele sustenta os que perderam amparo humano e cuida deles com ternura.
ದೇವರಿಗೆ ಹಾಡಿರಿ, ದೇವರ ಹೆಸರಿಗೆ ಸ್ತುತಿಗಳನ್ನು ಹಾಡಿರಿ.
ಮೇಘಾರೂಢರಾಗಿರುವ ದೇವರನ್ನು ಕೊಂಡಾಡಿರಿ.
ಅವರ ಹೆಸರು ಯೆಹೋವ ದೇವರು, ಅವರ ಮುಂದೆ ಉಲ್ಲಾಸಪಡಿರಿ.
ದೇವರು ತಮ್ಮ ಪರಿಶುದ್ಧ ಸ್ಥಳದಲ್ಲಿ ದಿಕ್ಕಿಲ್ಲದವರಿಗೆ ತಂದೆ,
ವಿಧವೆಯರಿಗೆ ರಕ್ಷಕರಾಗಿದ್ದಾರೆ.
ಯೆಹೋವ ದೇವರು ಪರದೇಶಸ್ಥರನ್ನು ಕಾಪಾಡುತ್ತಾರೆ.
ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಉದ್ಧರಿಸುತ್ತಾರೆ.
ಆದರೆ ದುಷ್ಟರ ಮಾರ್ಗವನ್ನು ಬೇಸರಪಡಿಸುತ್ತಾರೆ.
ದರಿದ್ರನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿರಿ.
ದೀನನಿಗೂ, ಬಡವನಿಗೂ ನ್ಯಾಯವನ್ನು ಕೊಡಿರಿ.
ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ. ನಿಮ್ಮ ಬಳಿಗೆ ನಾನು ಬರುತ್ತೇನೆ.
O chamado da justiça
A religião pura é visitar órfãos e viúvas em suas aflições. Deus ordena a defesa do necessitado e o cuidado com os mais frágeis.
ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಅವರ ಸಂಕಟದಲ್ಲಿ ಪರಾಮರಿಸಿ, ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವುದೇ ತಂದೆ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ದೋಷವೂ ಆಗಿರುವ ಭಕ್ತಿ.
ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ. ನ್ಯಾಯವನ್ನು ಹುಡುಕಿರಿ.
ಹಿಂಸೆಪಡುವವರನ್ನು ಉಪಚರಿಸಿರಿ.
ಅನಾಥರಿಗೆ ನ್ಯಾಯತೀರಿಸಿರಿ.
ವಿಧವೆಯರ ಪರವಾಗಿ ವಾದಿಸಿರಿ.
"ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಪ್ರೀತಿಯನ್ನೂ, ಕನಿಕರವನ್ನೂ ತೋರಿಸಿರಿ; ವಿಧವೆಗೂ, ದಿಕ್ಕಿಲ್ಲದವನಿಗೂ, ಅನ್ಯನಿಗೂ, ಬಡವನಿಗೂ ಹಿಂಸಾಚಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ,’ " ಎಂಬುದು.
"ಯಾವ ವಿಧವೆಯನ್ನು, ದಿಕ್ಕಿಲ್ಲದ ಮಗುವನ್ನು ಬಾಧಿಸಬೇಡಿರಿ. ನೀವು ಯಾವ ರೀತಿಯಲ್ಲಿ ಅವರನ್ನು ಬಾಧಿಸಿದರೂ ಅವರು ಕೂಗಿದರೆ ನಾನು ನಿಶ್ಚಯವಾಗಿ ಅವರ ಕೂಗನ್ನು ಕೇಳುವೆನು. ಆಗ ನನ್ನ ಕೋಪವು ಉರಿಯುವುದು. ಖಡ್ಗದಿಂದ ನಿಮ್ಮನ್ನು ಕೊಲ್ಲುವೆನು. ನಿಮ್ಮ ಹೆಂಡತಿಯರು ವಿಧವೆಯರಾಗುವರು. ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.
ಏಕೆಂದರೆ ಅಂಗಲಾಚುವ ಬಡವನನ್ನೂ,
ಸಹಾಯಕನಿಲ್ಲದ ಅನಾಥನನ್ನೂ ನಾನು ರಕ್ಷಿಸುವವನಾಗಿದ್ದೆನು.
ಸಾಯುತ್ತಿದ್ದವರ ಆಶೀರ್ವಾದವು ನನ್ನ ಮೇಲೆ ಬರುತ್ತಿತ್ತು;
ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ಮಾಡುತ್ತಿದ್ದೆನು.