Orgulho
O orgulho é um dos pecados mais condenados na Bíblia. Deus resiste aos soberbos, mas dá graça aos humildes. A humildade é o caminho da honra verdadeira.
Deus resiste ao soberbo
A soberba precede a ruína e o orgulho antecede a queda. Deus abomina o coração altivo e promete humilhar quem se exalta.
ನಾಶನಕ್ಕೆ ಮುಂದಾಗಿ ಗರ್ವ ಹೋಗುತ್ತದೆ.
ಬೀಳುವಿಕೆಯ ಮುಂಚೆ ಜಂಬದ ಆತ್ಮ.
ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಯೆಹೋವ ದೇವರಿಗೆ ಅಸಹ್ಯ.
ದುಷ್ಟನಿಗೆ ಶಿಕ್ಷೆಯು ತಪ್ಪುವುದಿಲ್ಲ.
ಮನುಷ್ಯರಿಗೆ ಸರಿಯಾಗಿ ತೋರುವ ಒಂದು ಮಾರ್ಗ ಉಂಟು,
ಆದರೆ ಅದರ ಅಂತ್ಯವು ಮರಣದ ಮಾರ್ಗವೇ.
ಕೆಟ್ಟದ್ದನ್ನು ಹಗೆ ಮಾಡುವುದೇ ಯೆಹೋವ ದೇವರ ಭಯವಾಗಿದೆ;
ಗರ್ವ, ಅಹಂಕಾರ, ಕೆಟ್ಟನಡವಳಿಕೆ,
ವಕ್ರ ಭಾಷಣಗಳನ್ನು ನಾನು ಹಗೆಮಾಡುತ್ತೇನೆ.
ಗರ್ವ ಬಂದಾಗ ನಾಚಿಕೆಯೂ ಬರುತ್ತದೆ;
ಆದರೆ ದೀನತೆಯೊಂದಿಗೆ ಜ್ಞಾನ ಬರುವುದು.
ಗರ್ವ ಬಂದಾಗ ನಾಚಿಕೆಯೂ ಬರುತ್ತದೆ;
ಆದರೆ ದೀನತೆಯೊಂದಿಗೆ ಜ್ಞಾನ ಬರುವುದು.
ಗರ್ವವು ಮನುಷ್ಯನನ್ನು ಹೀನಸ್ಥಿತಿಗೆ ತರುವುದು;
ಆದರೆ ಆತ್ಮದಲ್ಲಿ ದೀನರು ಮೆಚ್ಚಿಕೆಯನ್ನು ಪಡೆಯುವರು.
ಗರ್ವವು ಮನುಷ್ಯನನ್ನು ಹೀನಸ್ಥಿತಿಗೆ ತರುವುದು;
ಆದರೆ ಆತ್ಮದಲ್ಲಿ ದೀನರು ಮೆಚ್ಚಿಕೆಯನ್ನು ಪಡೆಯುವರು.
ನಾಶನಕ್ಕೆ ಮುಂಚೆ ಮನುಷ್ಯನ ಹೃದಯವು ಗರ್ವಿಷ್ಠವಾಗಿರುವುದು;
ಸನ್ಮಾನಕ್ಕೆ ಮುಂಚೆ ದೀನತ್ವವು ಬರುತ್ತದೆ.
ನಾಶನಕ್ಕೆ ಮುಂಚೆ ಮನುಷ್ಯನ ಹೃದಯವು ಗರ್ವಿಷ್ಠವಾಗಿರುವುದು;
ಸನ್ಮಾನಕ್ಕೆ ಮುಂಚೆ ದೀನತ್ವವು ಬರುತ್ತದೆ.
ಯೆಹೋವ ದೇವರು ಗರ್ವಿಷ್ಠರ ಮನೆಯನ್ನು ಕೆಡವಿಬಿಡುವರು,
ಆದರೆ ವಿಧವೆಯರ ಮೇರೆಯನ್ನು ಅವರು ನೆಲೆಗೊಳಿಸುವರು.
Humildade como caminho
Humilhai-vos diante do Senhor e Ele vos exaltará. A grandeza no Reino vem pelo serviço humilde, não pela autopromoção.
ಆದರೆ ದೇವರು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾರೆ. ಆದ್ದರಿಂದ ಈ ಕಾರಣಕ್ಕಾಗಿ, ಪವಿತ್ರ ವೇದವು:
"ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ.
ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ,"
ಎಂದು ಹೇಳುತ್ತದೆ.
ಕರ್ತದೇವರ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆಗ ಅವರು ನಿಮ್ಮನ್ನು ಮೇಲಕ್ಕೆತ್ತುವರು.
ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತಸ್ಥಿತಿಗೆ ಬಂದೆನೆಂದು ಅಭಿಮಾನಪಡಲಿ. ಐಶ್ವರ್ಯವಂತನಾದ ಸಹೋದರನು, ತಾನು ದೀನಸ್ಥಿತಿಗೆ ಬಂದೆನೆಂದು ಅಭಿಮಾನಪಡಲಿ. ಆದರೆ ಐಶ್ವರ್ಯವಂತನು ಕಾಡು ಹೂವಿನಂತೆ ಮರೆಯಾಗುವನು.
ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರಿ. ಏಕೆಂದರೆ,
"ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ,
ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ!"
ಹೀಗಿರುವುದರಿಂದ ದೇವರ ಪರಾಕ್ರಮವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ, ಆಗ ದೇವರು ಸಕಾಲದಲ್ಲಿ ನಿಮ್ಮನ್ನು ಮೇಲಕ್ಕೆತ್ತುವರು. ನಿಮ್ಮ ಚಿಂತೆಯನ್ನೆಲ್ಲಾ ದೇವರ ಮೇಲೆ ಹಾಕಿರಿ. ಅವರು ನಿಮಗೋಸ್ಕರ ಚಿಂತಿಸುತ್ತಾರೆ.
ಏಕೆಂದರೆ, ಯಾರಾದರೂ ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವರೋ ಅವರು ತಗ್ಗಿಸಲಾಗುವರು ಮತ್ತು ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಹೆಚ್ಚಿಸಲಾಗುವರು," ಎಂದರು.
ಸ್ವಾರ್ಥ ಉದ್ದೇಶದಿಂದಾಗಲಿ, ವ್ಯರ್ಥ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ ಪ್ರತಿಯೊಬ್ಬನೂ ದೀನತ್ವದಿಂದ ಮತ್ತೊಬ್ಬನನ್ನು ತನಗಿಂತಲೂ ಶ್ರೇಷ್ಠನೆಂದು ಎಣಿಸಲಿ. ಪ್ರತಿಯೊಬ್ಬನೂ ಸ್ವಹಿತವನ್ನು ನೋಡದೆ ಪರಹಿತವನ್ನು ಸಹ ನೋಡಲಿ.
ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿಯೂ ಇರಲಿ:
Os perigos do orgulho
O orgulho cega, gera contendas e afasta de Deus. A Escritura adverte contra a soberba da vida e a vã glória mundana.
ಏಕೆಂದರೆ ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಯಿಂದ ಬಂದವುಗಳಲ್ಲ, ಲೋಕದಿಂದ ಬಂದವುಗಳಾಗಿವೆ.
ಆದಕಾರಣ ದೃಢವಾಗಿ ನಿಂತಿದ್ದೇವೆಂದು ಭಾವಿಸುವ ನೀವು ಬೀಳದಿರುವಂತೆ ನೋಡಿಕೊಳ್ಳಿರಿ.
ನಾನು ನನ್ನ ಎಲ್ಲಾ ಆಸ್ತಿಯನ್ನು ದಾನಮಾಡಿದರೂ, ನಾನು ಹೊಗಳಿಕೊಳ್ಳುವಂತೆ ನನ್ನ ದೇಹವನ್ನು ಸುಡುವುದಕ್ಕಾಗಿ ಒಪ್ಪಿಸಿಕೊಟ್ಟರೂ ಪ್ರೀತಿಯು ನನಗಿಲ್ಲದಿದ್ದರೆ, ನನಗೇನೂ ಪ್ರಯೋಜನವಾಗುವುದಿಲ್ಲ.
ದೇವರು ಈ ಲೋಕದ ಗಣ್ಯರನ್ನು ಏನೂ ಇಲ್ಲದವರನ್ನಾಗಿ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನೂ, ಹೀನೈಸಲಾದವರನ್ನೂ ಕೀಳಾದವರನ್ನೂ, ಆರಿಸಿಕೊಂಡಿದ್ದಾರೆ. ಹೀಗಿರಲು ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿರುವುದಿಲ್ಲ.
ಆದರೆ, "ಹೆಚ್ಚಳ ಪಡುವವನು ಕರ್ತ ದೇವರಲ್ಲಿಯೇ ಹೆಚ್ಚಳ ಪಡಲಿ." ತನ್ನನ್ನು ತಾನೇ ಹೊಗಳಿಕೊಳ್ಳುವವನಲ್ಲ, ಕರ್ತ ಯೇಸು ಯಾರನ್ನು ಹೊಗಳುತ್ತಾರೋ ಅವನೇ ಯೋಗ್ಯನು.
ಯೇಸು ಮುಂದುವರಿದು, "ಆದರೆ ಮನುಷ್ಯನೊಳಗಿಂದ ಹೊರಡುವಂಥದ್ದು ಅವನನ್ನು ಅಶುದ್ಧ ಮಾಡುತ್ತವೆ. ಮನುಷ್ಯನ ಹೃದಯದೊಳಗಿಂದ ಜಾರತ್ವ, ಕಳ್ಳತನ, ಕೊಲೆ, ವ್ಯಭಿಚಾರ, ಲೋಭ, ದುಷ್ಟತ್ವ, ವಂಚನೆ, ಅಶ್ಲೀಲತೆ, ಅಸೂಯೆ, ನಿಂದೆ, ಗರ್ವ ಮತ್ತು ಮೂರ್ಖತನ ಮುಂತಾದ ದುರಾಲೋಚನೆಗಳು ಹೊರಡುತ್ತವೆ. ಈ ಎಲ್ಲಾ ಕೇಡುಗಳು ಮನುಷ್ಯನ ಒಳಗಿಂದ ಹೊರಟು ಅವನನ್ನು ಅಶುದ್ಧ ಮಾಡುತ್ತವೆ," ಎಂದರು.
ಎಲ್ಲಿ ಗರ್ವವೋ ಅಲ್ಲಿ ಕಲಹ;
ಆದರೆ ಒಳ್ಳೆಯ ಸಲಹೆಯನ್ನು ತೆಗೆದುಕೊಳ್ಳುವವರಲ್ಲಿ ಜ್ಞಾನವು ಕಂಡುಬರುತ್ತದೆ.
ಯೆಹೋವ ದೇವರ ಭಯವೂ ದೀನತೆಯೂ ಕೊಡುವ ಪ್ರತಿಫಲ,
ಐಶ್ವರ್ಯವೂ ಮಾನವೂ ಜೀವವೂ ಆಗಿದೆ.
ಈ ಲೋಕದಲ್ಲಿ ಅಹಂಕಾರಿಗಳಾಗಿರದೆ, ಅಸ್ತಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಸುಖಕ್ಕೋಸ್ಕರ ಎಲ್ಲವನ್ನೂ ಸಮೃದ್ಧಿಯಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕೆಂದು ಐಶ್ವರ್ಯವಂತರಿಗೆ ಆಜ್ಞಾಪಿಸು.
O olhar de Deus
O Senhor não olha como o homem. Ele vê o coração e se agrada dos quebrantados de espírito e dos que tremem diante da sua Palavra.
ಆದರೆ ಯೆಹೋವ ದೇವರು ಸಮುಯೇಲನಿಗೆ, "ನೀನು ಅವನ ರೂಪವನ್ನೂ, ಅವನ ದೇಹದ ಎತ್ತರವನ್ನೂ ದೃಷ್ಟಿಸಬೇಡ. ಏಕೆಂದರೆ ಅವನನ್ನು ನಾನು ತಿರಸ್ಕರಿಸಿದೆನು; ಏಕೆಂದರೆ ಯೆಹೋವ ದೇವರು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ, ಹೃದಯವನ್ನೇ ನೋಡುವರು," ಎಂದನು.
"ಇನ್ನು ಮೇಲೆ ಗರ್ವದಿಂದ ಮಾತನಾಡಬೇಡಿರಿ.
ನಿಮ್ಮ ಬಾಯಿಂದ ಕಠಿಣ ಮಾತು ಹೊರಡದಿರಲಿ.
ಏಕೆಂದರೆ ಯೆಹೋವ ದೇವರು ತಿಳುವಳಿಕೆಯುಳ್ಳ ದೇವರು.
ಅವರು ಮನುಷ್ಯರ ಕಾರ್ಯಗಳನ್ನು ತೂಗಿನೋಡುವರು.
ಇವುಗಳನ್ನೆಲ್ಲಾ ನಿರ್ಮಿಸಿದ್ದು ನನ್ನ ಕೈಯೇ.
ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು,"
ಎಂದು ಯೆಹೋವ ದೇವರು ಹೇಳುತ್ತಾರೆ.
"ನಾನು ಕಟಾಕ್ಷಿಸುವವನು ಎಂಥವನೆಂದರೆ:
ದೀನನೂ, ಮನಮುರಿದವನೂ,
ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.
ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸರನ್ನು ಸ್ತುತಿಸಿ, ಹೆಚ್ಚಿಸಿ ಘನಪಡಿಸುತ್ತೇನೆ. ಅವರ ಕ್ರಿಯೆಗಳೆಲ್ಲಾ ಸತ್ಯವೇ. ಅವರ ಮಾರ್ಗಗಳು ನ್ಯಾಯವೇ. ಗರ್ವದಲ್ಲಿ ನಡೆಯುವವರನ್ನು ಅವರೇ ತಗ್ಗಿಸಬಲ್ಲರು.
ಅದಕ್ಕೆ ಇಸ್ರಾಯೇಲಿನ ಅರಸನು ಉತ್ತರವಾಗಿ, "ಅವನಿಗೆ ಹೇಳು, ‘ತನ್ನ ಆಯುಧಗಳನ್ನು ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಹೊಗಳಿಕೊಳ್ಳದೆ ಇರಲಿ’ " ಎಂದನು.
ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳವರಾಗಿರಿ. ನೀವು ಮನಸ್ಸಿನಲ್ಲಿ ಅಹಂಕಾರಿಗಳಾಗಿರದೆ, ದೀನರೊಂದಿಗೆ ಸಂತೋಷದಿಂದ ಸಹಭಾಗಿಗಳಾಗಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.
ಪವಿತ್ರಾತ್ಮರ ಫಲವೇನೆಂದರೆ: ಪ್ರೀತಿ, ಆನಂದ, ಸಮಾಧಾನ, ಸಹನೆ, ದಯೆ, ಸದ್ಗುಣ, ನಂಬಿಗಸ್ತಿಕೆ, ಸಾತ್ವಿಕತೆ, ಸಂಯಮ ಇಂಥವುಗಳೇ. ಇವುಗಳಿಗೆ ವಿರೋಧವಾಗಿ ಯಾವ ನಿಯಮವೂ ಇಲ್ಲ.