Ouvir a voz de Deus
Ouvir a voz de Deus é o privilégio supremo do cristão. Ele fala por sua Palavra, pelo Espírito e em circunstâncias — e as ovelhas reconhecem a voz do bom Pastor.
As ovelhas ouvem a voz do Pastor
Jesus disse: minhas ovelhas ouvem minha voz, eu as conheço e elas me seguem. A relação com Deus é íntima e pessoal.
ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.
‘ಅವರೆಲ್ಲರೂ ದೇವರಿಂದಲೇ ಬೋಧನೆ ಪಡೆಯುವರು,’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬರೂ ನನ್ನ ಬಳಿಗೆ ಬರುತ್ತಾರೆ.
ದೇವರಿಗೆ ಸೇರಿದವನು ದೇವರ ವಾಕ್ಯಕ್ಕೆ ಕಿವಿಗೊಡುತ್ತಾನೆ. ನೀವು ದೇವರಿಗೆ ಸೇರಿದವರಲ್ಲ. ಆದ್ದರಿಂದ ನೀವು ಕಿವಿಗೊಡುವುದಿಲ್ಲ," ಎಂದು ಹೇಳಿದರು.
"ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದ ತಂದೆಯನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ. ಅವರು ನ್ಯಾಯತೀರ್ಪಿಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವವನ್ನು ಹೊಂದಿದ್ದಾರೆ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಪುತ್ರನ ಸ್ವರವನ್ನು ಕೇಳುವ ಕಾಲ ಬರುತ್ತದೆ. ಈಗಾಗಲೇ ಬಂದಿದೆ. ಈ ಸ್ವರವನ್ನು ಕೇಳುವವರು ಬದುಕುವರು.
ವಾಕ್ಯವು ದೇಹಧಾರಿಯಾದದ್ದು
ಆದಿಯಲ್ಲಿ ವಾಕ್ಯವಿತ್ತು, ಆ ವಾಕ್ಯವು ದೇವರ ಬಳಿಯಲ್ಲಿತ್ತು, ಆ ವಾಕ್ಯವು ದೇವರಾಗಿತ್ತು.
ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.
Deus fala pela Palavra
Toda Escritura é inspirada por Deus. A Bíblia é a voz confiável de Deus registrada para nos guiar em toda verdade.
ಪವಿತ್ರ ವೇದಗಳೆಲ್ಲವೂ ದೇವರ ಶ್ವಾಸದಿಂದಲೇ ಉಂಟಾದದ್ದು. ಅದು ಉಪದೇಶಕ್ಕೂ ಖಂಡನೆಗೂ ತಿದ್ದುಪಾಟಿಗೂ ನೀತಿಯ ಶಿಕ್ಷಣಕ್ಕೂ ಉಪಯುಕ್ತವಾಗಿದೆ. ಆದ್ದರಿಂದ ದೇವರ ಮನುಷ್ಯನು ಪರಿಪೂರ್ಣನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
ಪವಿತ್ರ ವೇದದ ಯಾವ ಪ್ರವಾದನೆಯೂ ಕೇವಲ ಪ್ರವಾದಿಗಳಿಂದ ಸ್ವಂತವಾಗಿ ವಿವರಿಸತಕ್ಕದ್ದಲ್ಲ ಎಂಬುದನ್ನು ಮೊದಲು ತಿಳಿದುಕೊಳ್ಳಿರಿ. ಯಾವ ಪ್ರವಾದನೆಯೂ ಎಂದೂ ಮನುಷ್ಯನ ಚಿತ್ತದಿಂದ ಬರಲಿಲ್ಲ, ಆದರೆ ಪ್ರವಾದಿಗಳು ಪವಿತ್ರಾತ್ಮ ಪ್ರೇರಿತರಾಗಿ ದೇವರಿಂದ ಪಡೆದುಕೊಂಡಿದ್ದನ್ನೇ ಮಾತನಾಡಿದರು.
ಆದಕಾರಣ, ತಕ್ಕ ವಾಕ್ಯವನ್ನು ಕೇಳುವುದರಿಂದಲೇ ವಿಶ್ವಾಸವು ಬರುತ್ತದೆ, ಅದು ಕ್ರಿಸ್ತನ ವಾಕ್ಯವನ್ನು ಕೇಳುವುದರಿಂದಲೇ ಬರುತ್ತದೆ.
ಬುದ್ಧಿವಂತ ಹಾಗೂ ಬುದ್ಧಿಹೀನ
"ಆದ್ದರಿಂದ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವ ಪ್ರತಿಯೊಬ್ಬನೂ ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಸಮಾನ. ಮಳೆಯು ಸುರಿದು ಹಳ್ಳಗಳು ಬಂದವು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆದರೂ ಆ ಮನೆ ಬೀಳಲಿಲ್ಲ. ಏಕೆಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಕಟ್ಟಲಾಗಿತ್ತು.
ಅದಕ್ಕೆ ಯೇಸು, "ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವರು ಹೆಚ್ಚು ಭಾಗ್ಯವಂತರು," ಎಂದರು.
Buscar e ouvir
Deus promete: 'Clama a mim, e te responderei.' Quando buscamos sinceramente sua voz, encontramos direção e revelação.
‘ನನ್ನನ್ನು ಕರೆ, ಆಗ ನಿನಗೆ ಉತ್ತರಕೊಡುವೆನು. ನಿನಗೆ ತಿಳಿಯದ ಮತ್ತು ಪರಿಶೋಧನೆಗೆ ಮೀರಿದ ಮಹಾಕಾರ್ಯಗಳನ್ನೂ ನಿನಗೆ ಹೇಳಿಕೊಡುವೆನು.’
ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, "ಇದೇ ಮಾರ್ಗ ಇದರಲ್ಲೇ ನಡೆಯಿರಿ," ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು.
"ಇಗೋ, ನಮ್ಮ ದೇವರಾದ ಯೆಹೋವ ದೇವರು ತಮ್ಮ ಮಹಿಮೆಯನ್ನೂ, ತಮ್ಮ ಘನವನ್ನೂ ನಮಗೆ ತೋರಿಸಿದ್ದಾರೆ. ಅವರ ಸ್ವರವನ್ನು ಬೆಂಕಿಯೊಳಗಿಂದ ಕೇಳಿದ್ದೇವೆ. ದೇವರು ಮನುಷ್ಯರ ಸಂಗಡ ಮಾತನಾಡಿದ ಮೇಲೂ, ಅವರು ಬದುಕುತ್ತಾರೆಂದು ಈ ಹೊತ್ತು ನೋಡಿದ್ದೇವೆ.
ಯೆಹೋವ ದೇವರ ಧ್ವನಿಯು ಜಲರಾಶಿಗಳ ಮೇಲೆ ಇದೆ;
ಮಹಿಮೆಯ ದೇವರು ಇದ್ದಾರೆ;
ಯೆಹೋವ ದೇವರು ಮಹಾಸಾಗರಗಳ ಮೇಲೆ ಇದ್ದಾರೆ.
ಯೆಹೋವ ದೇವರ ಧ್ವನಿಯು ಶಕ್ತಿಯುಳ್ಳದ್ದು;
ಯೆಹೋವ ದೇವರ ಧ್ವನಿಯು ವೈಭವವುಳ್ಳದ್ದು.
ಯೆಹೋವ ದೇವರ ಧ್ವನಿಯು ದೇವದಾರು ವೃಕ್ಷಗಳನ್ನು ಮುರಿಯುತ್ತದೆ;
ಯೆಹೋವ ದೇವರು ಲೆಬನೋನಿನ ದೇವದಾರು ವೃಕ್ಷಗಳನ್ನು ಮುರಿಯುತ್ತಾರೆ.
ನಾನು ನನ್ನ ಧ್ವನಿಯೆತ್ತಿ ಯೆಹೋವ ದೇವರಿಗೆ ಮೊರೆಯಿಡುವೆನು,
ಅವರು ತಮ್ಮ ಪರಿಶುದ್ಧ ಪರ್ವತದಿಂದ ನನಗೆ ಉತ್ತರಕೊಡುವರು.