Ouvir
Ouvir é uma disciplina espiritual essencial. A Bíblia exorta: 'Quem tem ouvidos, ouça.' A fé vem pelo ouvir, e ouvir é mais que escutar — é obedecer e agir.
A fé vem pelo ouvir
Sem ouvir a Palavra, não há fé. A pregação do evangelho gera fé nos corações de quem ouve com disposição e humildade.
ಆದಕಾರಣ ಸಾರಿದ ಸುವಾರ್ತೆಯನ್ನು ಕೇಳುವುದರಿಂದ ನಂಬಿಕೆಯು ಹುಟ್ಟುತ್ತದೆ, ಕೇಳಿಸಿಕೊಳ್ಳುವುದು ಕ್ರಿಸ್ತನ ವಾಕ್ಯವಾಗಿದೆ.
ಆದಕಾರಣ ಸಾರಿದ ಸುವಾರ್ತೆಯನ್ನು ಕೇಳುವುದರಿಂದ ನಂಬಿಕೆಯು ಹುಟ್ಟುತ್ತದೆ, ಕೇಳಿಸಿಕೊಳ್ಳುವುದು ಕ್ರಿಸ್ತನ ವಾಕ್ಯವಾಗಿದೆ.
ಇಸ್ರಾಯೇಲ್ಯರ ಅಪನಂಬಿಕೆಗೆ ಅವರಿಗೆ ಜ್ಞಾನವಿಲ್ಲವೆಂಬುದು ಕಾರಣವಲ್ಲ
ಆದರೆ ಅವರು ನಂಬದೆ ಇರುವುದರಿಂದ ಆತನ ನಾಮವನ್ನು ಹೇಳಿಕೊಳ್ಳುವುದಾದರೂ ಹೇಗೆ? ಮತ್ತು ಆತನ ಸುದ್ದಿಯನ್ನು ಕೇಳದಿರುವಲ್ಲಿ ಆತನನ್ನು ನಂಬುವುದಾದರೂ ಹೇಗೆ? ಪ್ರಚಾರಪಡಿಸುವವನಿಲ್ಲದೆ ಕೇಳುವುದಾದರೂ ಹೇಗೆ? ಸುವಾರ್ತೆಸಾರುವವರನ್ನು ಕಳುಹಿಸದೆ ಸಾರುವುದು ಹೇಗೆ?
ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ" ಅಂದನು.
"ಯೆಶಾಯನು ಹೇಳಿದ ಪ್ರವಾದನೆಯು ಅವರಲ್ಲಿ ನೆರವೇರುತ್ತದೆ. ಅದೇನೆಂದರೆ,
‘ನೀವು ಕೇಳುತ್ತೀರಿ, ಕೇಳಿದರೂ ತಿಳಿದುಕೊಳ್ಳುವುದೇ ಇಲ್ಲ.
ನೀವು ನೋಡುತ್ತೀರಿ, ನೋಡಿದರೂ ಗ್ರಹಿಸುವುದೇ ಇಲ್ಲ.
ಈ ಜನರ ಹೃದಯವು ಮಂಕಾಯಿತು. ಇವರ ಕಿವಿಗಳು ಮಂದವಾದವು.
ಇವರು ಕಣ್ಣು ಮುಚ್ಚಿಕೊಂಡಿದ್ದಾರೆ. ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ,
ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು
ನನ್ನಿಂದ ಸ್ವಸ್ಥತೆ ಹೊಂದಬಾರದೆಂದು ನಿರ್ಧಾರ ಮಾಡಿಕೊಂಡಿದ್ದಾರೆ’" ಎಂಬುದೇ.
Ouvir e obedecer
Não basta ouvir — é preciso praticar. Quem ouve a Palavra e a pratica é como o homem sábio que edificou sobre a rocha.
ದೇವರ ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇವಲ ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.
ದೇವರ ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇವಲ ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.
ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವ ವಿಧಾನ
ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.
ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವ ವಿಧಾನ
ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ. ಏಕೆಂದರೆ ಮನುಷ್ಯನು ಕೋಪಗೊಂಡಾಗ ದೇವರು ಬಯಸುವ ನೀತಿ ಕಾರ್ಯಗಳನ್ನು ಮಾಡಲು ಸಾಧ್ಯವಾಗುವುದಿಲ್ಲ.
ಸ್ಥಿರವಾದ ಮನೆ
"ಆದುದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಹೋಲುವನು.
ಸ್ಥಿರವಾದ ಮನೆ
"ಆದುದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಹೋಲುವನು. ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದುದರಿಂದ ಅದು ಬೀಳಲಿಲ್ಲ. ಆದರೆ ಈ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದ ಪ್ರತಿಯೊಬ್ಬನು ಮರಳಿನ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಹೀನನಿಗೆ ಸಮನಾಗಿರುವನು. ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆಗ ಆ ಮನೆ ಸಂಪೂರ್ಣವಾಗಿ ಕುಸಿದುಬಿತ್ತು. ಆ ಕುಸಿತ ಅಗಾಧವಾದುದು.
ಯೇಸು, "‘ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ, ಆದರೆ ದೇವರ ಬಾಯಿಂದ ಬರುವ ಪ್ರತಿಯೊಂದು ನುಡಿಯಿಂದಲೂ ಬದುಕುವನು’ ಎಂದು ಬರೆದಿದೆ" ಅಂದನು.
ಅದಕ್ಕೆ ಯೇಸು, "ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು" ಅಂದನು.
ಅದಕ್ಕೆ ಯೇಸು, "ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು" ಅಂದನು.
ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ, ಮತ್ತು ಯಾವುದನ್ನು ನನ್ನಲ್ಲಿ ಕೇಳಿ ಕಂಡಿರುವಿರೋ ಅದನ್ನೇ ಮಾಡುತ್ತಾ ಬನ್ನಿರಿ. ಹೀಗೆ ಮಾಡಿದರೆ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.
Deus ouve nossas orações
O Senhor ouve os que clamam a Ele de coração sincero. Ele inclina os ouvidos para as nossas súplicas e responde com fidelidade.
ಕೃತಜ್ಞತಾಯಜ್ಞ ಕೀರ್ತನೆ
ಯೆಹೋವನನ್ನು ಪ್ರೀತಿಸುತ್ತೇನೆ;
ಆತನು ನನ್ನ ಮೊರೆಯನ್ನು ಕೇಳುವನು.
ಆತನು ನನ್ನ ವಿಜ್ಞಾಪನೆಗೆ ಕಿವಿಗೊಟ್ಟಿದ್ದಾನೆ;
ಜೀವದಿಂದ ಇರುವವರೆಗೂ ಆತನನ್ನೇ ಪ್ರಾರ್ಥಿಸುವೆನು.
ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು;
ನನ್ನ ದೇವರನ್ನು ಪ್ರಾರ್ಥಿಸಿದೆನು.
ಆತನು ತನ್ನ ಮಂದಿರದಲ್ಲಿ ನನ್ನ ಶಬ್ದವನ್ನು ಕೇಳಿದನು;
ನನ್ನ ಕೂಗು ಆತನಿಗೆ ಕೇಳಿಸಿತು.
ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ;
ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ.
ಯೆಹೋವನೇ, ಉದಯಕಾಲದಲ್ಲಿ ನನ್ನ ಸ್ವರವು ನಿನಗೆ ಕೇಳಿಸುವುದು;
ಉದಯಕಾಲದಲ್ಲಿಯೇ ನನ್ನ ಪ್ರಾರ್ಥನೆಯನ್ನು ನಿನಗೆ ಸಮರ್ಪಿಸಿ,
ನಿನ್ನಿಂದ ಸದುತ್ತರವನ್ನು ಎದುರುನೋಡುತ್ತಿರುವೆನು.
ನನ್ನಲ್ಲಿ ಸಂಭ್ರಮೋತ್ಸವದ ಧ್ವನಿ ಉಂಟಾಗುವಂತೆ ಮಾಡು;
ಆಗ ನೀನು ಜಜ್ಜಿದ ಎಲುಬುಗಳು ಆನಂದಪಡುವವು.
ಹೊತ್ತಾರೆ ನಿನ್ನ ಕೃಪೆಯು ನನಗೆ ಪ್ರಕಟವಾಗಲಿ;
ನಿನ್ನಲ್ಲಿ ಭರವಸವಿಟ್ಟಿದ್ದೇನಲ್ಲಾ.
ನಾನು ನಡೆಯತಕ್ಕ ಮಾರ್ಗವನ್ನು ತಿಳಿಸು;
ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ.
ಮತ್ತು ದೇವರ ಚಿತ್ತಾನುಸಾರವಾಗಿ ಏನಾದರೂ ಬೇಡಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬ ಭರವಸೆಯು ಆತನಲ್ಲಿ ನಮಗುಂಟು.
ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬುದು ನಮಗೆ ತಿಳಿದಿದ್ದರೆ, ನಾವು ಬೇಡಿದವುಗಳು ಆತನಿಂದ ನಮಗೆ ದೊರೆಯುತ್ತವೆಂಬುದು ನಮಗೆ ತಿಳಿಯುತ್ತದೆ.
ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಹೋಗುವಿರಿ; ನಾನು ಕಿವಿಗೊಡುವೆನು.
‘ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ, ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.
ರಕ್ಷಣೆಗೆ ಪಾಪವೇ ಅಡ್ಡಿ
ಇಗೋ, ಯೆಹೋವನ ಹಸ್ತವು ರಕ್ಷಿಸಲಾರದಂತಹ ಮೋಟುಗೈಯಲ್ಲ; ಆತನ ಕಿವಿಯು ಕೇಳಲಾರದ ಹಾಗೆ ಕಿವುಡಲ್ಲ.
Ouvir a voz de Deus
Jesus disse: 'As minhas ovelhas ouvem a minha voz.' Deus fala através da Palavra, do Espírito e das circunstâncias — cabe a nós ouvir.
ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.
ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ. ನಿಮಗೆ ನಿಜನಿಜವಾಗಿ ಹೇಳುತ್ತೇನೆ ಸತ್ತವರು ದೇವಕುಮಾರನ ಸ್ವರವನ್ನು ಕೇಳುವ ಕಾಲ ಬರುತ್ತದೆ, ಅದು ಈಗಾಗಲೇ ಬಂದಿದೆ, ಕೇಳಿದವರು ಬದುಕುವರು.
ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು.
ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು.
ಆತನು ಹೇಳುವ ಮಾರ್ಗದಲ್ಲೇ ನೀವು ನಡೆದು, ಆತನಲ್ಲಿಯೇ ಭಯಭಕ್ತಿಯುಳ್ಳವರಾಗಿ, ಆತನ ಆಜ್ಞೆಗಳನ್ನೇ ಅನುಸರಿಸಿ, ಆತನಿಗೇ ವಿಧೇಯರಾಗಿ, ಆತನನ್ನೇ ಸೇವಿಸುತ್ತಾ ಹೊಂದಿಕೊಂಡಿರಬೇಕು.
ದೇವರು ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು, ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ ಅಥವಾ ಸುವಾರ್ತೆಯನ್ನು ಕೇಳಿ ನಂಬಿದ್ದರಿಂದಲೋ?
Sabedoria no ouvir
Seja pronto para ouvir e tardio para falar. A sabedoria começa com a disposição de ouvir instrução e aceitar correção.
ಗಮನಿಸದೆ ಉತ್ತರಕೊಡುವವನು,
ಮೂರ್ಖನೆಂಬ ಅವಮಾನಕ್ಕೆ ಗುರಿಯಾಗುವನು.
ದೇವರ ವಾಕ್ಯವನ್ನು ಸ್ಮರಿಸುವವನು ಸುಕ್ಷೇಮವನ್ನು ಪಡೆಯುವನು,
ಯೆಹೋವನಲ್ಲಿ ಭರವಸವಿಡುವವನು ಭಾಗ್ಯವಂತನು.
ಪರಸ್ತ್ರೀಯರ ಸಹವಾಸದ ಬಗ್ಗೆ ಎಚ್ಚರಿಕೆ
ಕಂದಾ, ತಂದೆಯ ಆಜ್ಞೆಯನ್ನು ಕೈಕೊಳ್ಳು,
ತಾಯಿಯ ಉಪದೇಶವನ್ನು ಬಿಡಬೇಡ.
ಶಿಕ್ಷೆಯನ್ನು ಕೈಕೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು,
ಗದರಿಕೆಯನ್ನು ಕೈಕೊಳ್ಳದವನು ಸನ್ಮಾರ್ಗದಿಂದ ತಪ್ಪಿಸುವನು.
ಧರ್ಮೋಪದೇಶಕ್ಕೆ ಕಿವಿಗೊಡದವನು
ಮಾಡುವ ದೇವಪ್ರಾರ್ಥನೆಯೂ ಅಸಹ್ಯ.
ಮೂಢರ ಗಾನಕ್ಕಿಂತ
ಜ್ಞಾನಿಗಳ ಗದರಿಕೆಯನ್ನು ಕೇಳುವುದು ಲೇಸು.
ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿದೆ.
ಇದನ್ನು ಮನುಷ್ಯನು ವಿವರಿಸಲಾರನು.
ನೋಡುವುದರಿಂದ ಕಣ್ಣು ತೃಪ್ತಿಗೊಳ್ಳದು,
ಕೇಳುವುದರಿಂದ ಕಿವಿಯು ದಣಿಯದು.
"ನೀವು ನನ್ನ ಮಾತನ್ನು ಕೇಳದೆ ನನ್ನ ವಿರುದ್ಧವಾಗಿ ನಡೆದರೆ ನಾನು ನಿಮ್ಮ ಪಾಪಗಳ ನಿಮಿತ್ತ ಇನ್ನೂ ಏಳರಷ್ಟಾಗಿ ನಿಮ್ಮನ್ನು ಬಾಧಿಸುವೆನು.
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, "ನನ್ನ ನಾಮವನ್ನು ಘನಪಡಿಸಬೇಕೆಂಬ ಆಜ್ಞೆಯನ್ನು ನೀವು ಆಲಿಸಿ ಮನನಮಾಡಿ ಅರ್ಥಮಾಡಿಕೊಳ್ಳದಿದ್ದರೆ, ನಾನು ನಿಮಗೆ ಶಾಪವನ್ನು ಬರಮಾಡುವೆನು, ನಿಮಗೆ ಆಶೀರ್ವಾದವಾಗಿ ದಯಪಾಲಿಸಿದವುಗಳೆಲ್ಲವನ್ನೂ ಶಪಿಸುವೆನು; ಹೌದು, ಈ ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಳ್ಳದ ಕಾರಣ ನಾನು ನಿಮ್ಮನ್ನು ಶಪಿಸುತ್ತೇನೆ.
ನಾನು ನಿನ್ನೊಡನೆ ಮತ್ತೆ ಮಾತನಾಡುವಾಗ ನಾನು ನಿನ್ನ ಬಾಯಿಯನ್ನು ಬಿಚ್ಚುವೆನು; ಆಗ ನೀನು ಅವರಿಗೆ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ಹೇಳಬೇಕು; ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ; ಅವರು ತಿರುಗಿ ಬೀಳುವ ವಂಶದವರೇ."
ಇಗೋ, ಆ ದಿನಗಳು ಬರುವವು." ಕರ್ತನಾದ ಯೆಹೋವನು ಇಂತೆನ್ನುತ್ತಾನೆ,
"ನಾನು ದೇಶಕ್ಕೆ ಕ್ಷಾಮವನ್ನು ಉಂಟುಮಾಡುವ ದಿನಗಳು ಬರುತ್ತವೆ,
ಅದು ಅನ್ನದ ಕ್ಷಾಮವಲ್ಲ,
ನೀರಿನ ಕ್ಷಾಮವಲ್ಲ,
ಯೆಹೋವನ ವಾಕ್ಯಗಳ ಕ್ಷಾಮವೇ.
ಭೂಕಂಪ ಉಂಟಾಗಿ ಅವರು ಬಿಡಿಸಲ್ಪಟ್ಟದ್ದು
ಮಧ್ಯರಾತ್ರಿಯಲ್ಲಿ ಪೌಲನೂ ಮತ್ತು ಸೀಲನೂ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು.
ಆಗ ಯೆಹೋಶುವನು ಇಸ್ರಾಯೇಲ್ಯರಿಗೆ "ಇಲ್ಲಿಗೆ ಬಂದು ನಿಮ್ಮ ದೇವರಾದ ಯೆಹೋವನ ಮಾತುಗಳನ್ನು ಕೇಳಿರಿ" ಎಂದು ಹೇಳಿ,
ಹೀಗಿರುವುದರಿಂದ ನೀವು ಕತ್ತಲಲ್ಲಿ ಹೇಳಿದಂಥದು ಬೆಳಕಿನಲ್ಲಿ ಕೇಳಲಾಗುವುದು. ಮತ್ತು ನೀವು ಕೋಣೆಗಳೊಳಗೆ ಪಿಸುಗುಟ್ಟಿದ್ದು ಮಾಳಿಗೆಗಳ ಮೇಲೆ ಸಾರಲಾಗುವುದು.
ತಪ್ಪು ಮಾಡಿದ ಸಹೋದರನನ್ನು ಸರಿಪಡಿಸಿದ್ದು
"ನಿನ್ನ ಸಹೋದರನು ನಿನ್ನ ವಿರುದ್ಧ ತಪ್ಪು ಮಾಡಿದರೆ, ನೀನು ಹೋಗಿ ಅವನು ಒಬ್ಬನೇ ಇರುವಾಗ ಅವನ ತಪ್ಪನ್ನು ಅವನಿಗೆ ಅರಿವಾಗುವಂತೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ನೀನು ಸಂಪಾದಿಸಿಕೊಂಡಿರುವಿ.
ತಪ್ಪು ಮಾಡಿದ ಸಹೋದರನನ್ನು ಸರಿಪಡಿಸಿದ್ದು
"ನಿನ್ನ ಸಹೋದರನು ನಿನ್ನ ವಿರುದ್ಧ ತಪ್ಪು ಮಾಡಿದರೆ, ನೀನು ಹೋಗಿ ಅವನು ಒಬ್ಬನೇ ಇರುವಾಗ ಅವನ ತಪ್ಪನ್ನು ಅವನಿಗೆ ಅರಿವಾಗುವಂತೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ನೀನು ಸಂಪಾದಿಸಿಕೊಂಡಿರುವಿ. ಆದರೆ ಅವನು ನಿನ್ನ ಮಾತು ಕೇಳದೇ ಹೋದರೆ ಎರಡು ಮೂರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಿರಪಡುವ ಹಾಗೆ ಒಬ್ಬನನ್ನು ಅಥವಾ ಇಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು. ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.
ಯೆಹೋವನು ಐಗುಪ್ತ್ಯರ ಕೈಯಿಂದ ಇಸ್ರಾಯೇಲರನ್ನು ಬಿಡಿಸಿ ಅವರಿಗೆ ಉಪಕಾರವನ್ನು ಮಾಡಿದ್ದಕ್ಕಾಗಿ ಇತ್ರೋವನು ಸಂತೋಷ ಪಟ್ಟನು.
ಮರಣ ಪ್ರವಾಹದ ಅಲ್ಲಕಲ್ಲೋಲಗಳು ನನ್ನನ್ನು ಸುತ್ತಿಕೊಂಡವು. ನಾಶಪ್ರವಾಹವು ನನ್ನನ್ನು ನಡುಗಿಸಿತು.
ಪಾತಾಳಪಾಶಗಳು ನನ್ನನ್ನು ಆವರಿಸಿಕೊಂಡವು, ಮರಣಕರವಾದ ಉರುಲುಗಳು ನನ್ನನ್ನು ಸುತ್ತಿಕೊಂಡವು.
ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು. ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಸ್ವರವನ್ನು ಕೇಳಿದನು. ನನ್ನ ಪ್ರಾರ್ಥನೆ ಆತನ ಸನ್ನಿಧಿಗೆ ಕೇಳಿಸಿತು.