Ouvir
Ouvir é uma disciplina espiritual essencial. A Bíblia exorta: 'Quem tem ouvidos, ouça.' A fé vem pelo ouvir, e ouvir é mais que escutar — é obedecer e agir.
A fé vem pelo ouvir
Sem ouvir a Palavra, não há fé. A pregação do evangelho gera fé nos corações de quem ouve com disposição e humildade.
ಆದಕಾರಣ, ತಕ್ಕ ವಾಕ್ಯವನ್ನು ಕೇಳುವುದರಿಂದಲೇ ವಿಶ್ವಾಸವು ಬರುತ್ತದೆ, ಅದು ಕ್ರಿಸ್ತನ ವಾಕ್ಯವನ್ನು ಕೇಳುವುದರಿಂದಲೇ ಬರುತ್ತದೆ.
ಆದಕಾರಣ, ತಕ್ಕ ವಾಕ್ಯವನ್ನು ಕೇಳುವುದರಿಂದಲೇ ವಿಶ್ವಾಸವು ಬರುತ್ತದೆ, ಅದು ಕ್ರಿಸ್ತನ ವಾಕ್ಯವನ್ನು ಕೇಳುವುದರಿಂದಲೇ ಬರುತ್ತದೆ.
ಆದರೆ, ತಾವು ವಿಶ್ವಾಸವಿಡದ ಕರ್ತನನ್ನು ಕರೆಯುವುದಾದರೂ ಹೇಗೆ? ತಾವು ಕೇಳದ ಕರ್ತನ ಬಗ್ಗೆ ಅವರು ವಿಶ್ವಾಸವಿಡುವುದು ಹೇಗೆ? ಕರ್ತನ ಬಗ್ಗೆ ಸಾರುವವನಿಲ್ಲದೆ ಅವರು ಕೇಳುವುದಾದರೂ ಹೇಗೆ?
ಕೇಳುವುದಕ್ಕೆ ಕಿವಿಯುಳ್ಳವರು ಕೇಳಲಿ."
ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನೆಂದರೆ,
" ‘ನೀವು ಕೇಳುತ್ತಲೇ ಇರುವಿರಿ, ಎಂದೆಂದೂ ಅರ್ಥಮಾಡಿಕೊಳ್ಳಲಾರಿರಿ;
ನೀವು ಕಾಣುತ್ತಲೇ ಇರುವಿರಿ, ಎಂದೆಂದೂ ಅರಿತುಕೊಳ್ಳಲಾರಿರಿ.
ಈ ಜನರ ಹೃದಯವು ಕಠೋರವಾಗಿದೆ;
ಇವರ ಕಿವಿಗಳು ಕೇಳದ ಹಾಗೆ ಮಂದವಾಗಿವೆ,
ಇವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ.
ಇಲ್ಲವಾದರೆ ತಾವು ಕಣ್ಣಿನಿಂದ ಕಂಡು,
ಕಿವಿಯಿಂದ ಕೇಳಿ.
ತಮ್ಮ ಹೃದಯದಿಂದ ತಿಳಿದು,
ನನ್ನ ಕಡೆಗೆ ತಿರುಗಿಕೊಂಡಿದ್ದರೆ, ನಾನು ಅವರನ್ನು ಸ್ವಸ್ಥಪಡಿಸುತ್ತಿದ್ದೆನು,’
ಎಂಬುದೇ.
Ouvir e obedecer
Não basta ouvir — é preciso praticar. Quem ouve a Palavra e a pratica é como o homem sábio que edificou sobre a rocha.
ನೀವು ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.
ನೀವು ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.
ನನ್ನ ಪ್ರಿಯರೇ ಇದನ್ನು ತಿಳಿಯಿರಿ, ಪ್ರತಿಯೊಬ್ಬನು ಕಿವಿಗೊಡುವುದರಲ್ಲಿ ತೀವ್ರವಾಗಿಯೂ ಮಾತನಾಡುವುದರಲ್ಲಿ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.
ನನ್ನ ಪ್ರಿಯರೇ ಇದನ್ನು ತಿಳಿಯಿರಿ, ಪ್ರತಿಯೊಬ್ಬನು ಕಿವಿಗೊಡುವುದರಲ್ಲಿ ತೀವ್ರವಾಗಿಯೂ ಮಾತನಾಡುವುದರಲ್ಲಿ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ. ಏಕೆಂದರೆ ಮನುಷ್ಯನ ಕೋಪವು ದೇವರು ಬಯಸುವ ನೀತಿಯ ಜೀವನವನ್ನು ತರುವುದಿಲ್ಲ.
"ಆದ್ದರಿಂದ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವ ಪ್ರತಿಯೊಬ್ಬನೂ ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಸಮಾನ.
"ಆದ್ದರಿಂದ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವ ಪ್ರತಿಯೊಬ್ಬನೂ ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಸಮಾನ. ಮಳೆಯು ಸುರಿದು ಹಳ್ಳಗಳು ಬಂದವು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆದರೂ ಆ ಮನೆ ಬೀಳಲಿಲ್ಲ. ಏಕೆಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಕಟ್ಟಲಾಗಿತ್ತು. ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ, ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಸಮಾನ. ಮಳೆಯು ಸುರಿದು, ಹಳ್ಳಗಳು ಬಂದವು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆಗ ಆ ಮನೆ ಕುಸಿದು ಬಿತ್ತು. ಅದರ ಬೀಳುವಿಕೆಯು ಭಯಂಕರವಾಗಿತ್ತು," ಎಂದರು.
ಅದಕ್ಕೆ ಯೇಸು, "ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ, ‘ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ, ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಜೀವಿಸುತ್ತಾನೆ,’" ಎಂದರು.
ಅದಕ್ಕೆ ಯೇಸು, "ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವರು ಹೆಚ್ಚು ಭಾಗ್ಯವಂತರು," ಎಂದರು.
ಅದಕ್ಕೆ ಯೇಸು, "ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವರು ಹೆಚ್ಚು ಭಾಗ್ಯವಂತರು," ಎಂದರು.
ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ ಮತ್ತು ಯಾವುದನ್ನು ನನ್ನಲ್ಲಿ ಕೇಳಿ ಕಂಡಿದ್ದೀರೋ ಅದನ್ನೇ ಮಾಡುವವರಾಗಿರಿ. ಆಗ ಸಮಾಧಾನದ ದೇವರು ನಿಮ್ಮೊಂದಿಗಿರುವರು.
Deus ouve nossas orações
O Senhor ouve os que clamam a Ele de coração sincero. Ele inclina os ouvidos para as nossas súplicas e responde com fidelidade.
ನಾನು ಯೆಹೋವ ದೇವರನ್ನು ಪ್ರೀತಿಸುತ್ತೇನೆ;
ಏಕೆಂದರೆ ಅವರು ನನ್ನನ್ನು ಕರುಣಿಸಬೇಕೆಂಬ ನನ್ನ ವಿನಂತಿಯನ್ನೂ ಕೇಳಿದ್ದಾರೆ.
ಅವರು ನನ್ನ ಸ್ವರಕ್ಕೆ ಕಿವಿಗೊಟ್ಟಿದ್ದರಿಂದ
ನನ್ನ ಜೀವಮಾನಕಾಲವೆಲ್ಲಾ ಅವರನ್ನು ಬೇಡುವೆನು.
ನನ್ನ ಇಕ್ಕಟ್ಟಿನಲ್ಲಿ ಯೆಹೋವ ದೇವರನ್ನು ಬೇಡಿದೆನು;
ನನ್ನ ದೇವರಿಗೆ ಮೊರೆಯಿಟ್ಟೆನು;
ಅವರು ತಮ್ಮ ಮಂದಿರದೊಳಗಿಂದ ನನ್ನ ಧ್ವನಿಯನ್ನು ಕೇಳಿದರು;
ನನ್ನ ಮೊರೆಯು ಅವರ ಸನ್ನಿಧಿ ಸೇರಿ ಅವರ ಕಿವಿಗೆ ಬಿತ್ತು.
ನೀತಿವಂತರ ಮೇಲೆ ಯೆಹೋವ ದೇವರು ದೃಷ್ಟಿ ಇಡುತ್ತಾರೆ,
ಅವರು ಮೊರೆಯಿಡುವಾಗ ದೇವರು ಕಿವಿಗೊಡುತ್ತಾರೆ.
ಯೆಹೋವ ದೇವರೇ, ಉದಯಕಾಲದಲ್ಲಿ ನನ್ನ ಸ್ವರವನ್ನು ಕೇಳಿರಿ;
ಮುಂಜಾನೆಯಲ್ಲಿ ನಾನು ನನ್ನ ಬೇಡಿಕೆಗಳನ್ನು ನಿಮ್ಮ ಮುಂದೆ ಸಮರ್ಪಿಸಿ,
ಎದುರುನೋಡುತ್ತಾ ಕಾದುಕೊಂಡಿರುವೆನು.
ನಾನು ಆನಂದವನ್ನೂ ಹರ್ಷವನ್ನೂ ಕೇಳುವಂತೆ ಮಾಡಿರಿ;
ನೀವು ಜಜ್ಜಿದ ಎಲುಬುಗಳು ಆನಂದಪಡಲಿ.
ಬೆಳಿಗ್ಗೆ ನಿಮ್ಮ ಒಡಂಬಡಿಕೆಯ ಪ್ರೀತಿಯು ನನಗೆ ವಾಕ್ಯವನ್ನು ತರಲಿ;
ಏಕೆಂದರೆ ನಿಮ್ಮಲ್ಲಿ ಭರವಸವಿಟ್ಟಿದ್ದೇನೆ;
ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸಿರಿ,
ಏಕೆಂದರೆ ನನ್ನ ಪ್ರಾಣವನ್ನು ನಿಮಗೇ ಒಪ್ಪಿಸಿದ್ದೇನೆ.
ದೇವರ ಚಿತ್ತಾನುಸಾರವಾಗಿ ನಾವು ಏನಾದರೂ ಬೇಡಿಕೊಂಡರೆ, ದೇವರು ಕೇಳುತ್ತಾರೆ. ಇದೇ ದೇವರಲ್ಲಿ ನಮಗಿರುವ ನಿಶ್ಚಯ.
ನಾವು ಏನು ಬೇಡಿಕೊಂಡರೂ ದೇವರು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾರೆ ಎಂದು ತಿಳಿದಿದ್ದರೆ, ನಾವು ಬೇಡಿದವುಗಳು ನಮಗೆ ದೊರೆಯುತ್ತವೆ ಎಂಬ ದೃಢನಿಶ್ಚಯ ನಮಗಿದೆ.
ಆಗ ನನ್ನನ್ನು ಕರೆಯುವಿರಿ. ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ. ನಾನು ನಿಮಗೆ ಕಿವಿಗೊಡುವೆನು.
‘ನನ್ನನ್ನು ಕರೆ, ಆಗ ನಿನಗೆ ಉತ್ತರಕೊಡುವೆನು. ನಿನಗೆ ತಿಳಿಯದ ಮತ್ತು ಪರಿಶೋಧನೆಗೆ ಮೀರಿದ ಮಹಾಕಾರ್ಯಗಳನ್ನೂ ನಿನಗೆ ಹೇಳಿಕೊಡುವೆನು.’
ಯೆಹೋವ ದೇವರ ಕೈ ರಕ್ಷಿಸಲಾರದ ಹಾಗೆ ಮೋಟುಗೈಯಲ್ಲ.
ಆತನ ಕಿವಿ ಕೇಳಲಾರದ ಹಾಗೆ ಮಂದವಾಗಿಲ್ಲ.
Ouvir a voz de Deus
Jesus disse: 'As minhas ovelhas ouvem a minha voz.' Deus fala através da Palavra, do Espírito e das circunstâncias — cabe a nós ouvir.
ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.
"ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದ ತಂದೆಯನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ. ಅವರು ನ್ಯಾಯತೀರ್ಪಿಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವವನ್ನು ಹೊಂದಿದ್ದಾರೆ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಪುತ್ರನ ಸ್ವರವನ್ನು ಕೇಳುವ ಕಾಲ ಬರುತ್ತದೆ. ಈಗಾಗಲೇ ಬಂದಿದೆ. ಈ ಸ್ವರವನ್ನು ಕೇಳುವವರು ಬದುಕುವರು.
ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾರಾದರೂ ನನ್ನ ಸ್ವರವನ್ನು ಕೇಳಿ, ಬಾಗಿಲನ್ನು ತೆರೆದರೆ, ನಾನು ಪ್ರವೇಶ ಮಾಡಿ, ಆ ವ್ಯಕ್ತಿಯ ಸಂಗಡ ಊಟಮಾಡುವೆನು. ಅವರೂ ನನ್ನ ಸಂಗಡ ಊಟಮಾಡುವರು.
ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾರಾದರೂ ನನ್ನ ಸ್ವರವನ್ನು ಕೇಳಿ, ಬಾಗಿಲನ್ನು ತೆರೆದರೆ, ನಾನು ಪ್ರವೇಶ ಮಾಡಿ, ಆ ವ್ಯಕ್ತಿಯ ಸಂಗಡ ಊಟಮಾಡುವೆನು. ಅವರೂ ನನ್ನ ಸಂಗಡ ಊಟಮಾಡುವರು.
ನಿಮ್ಮ ದೇವರಾದ ಯೆಹೋವ ದೇವರನ್ನೇ ಅನುಸರಿಸಿ, ಅವರಿಗೆ ಭಯಪಟ್ಟು, ಅವರ ಆಜ್ಞೆಗಳನ್ನು ಕಾಪಾಡಿ, ಅವರ ಮಾತನ್ನು ಕೇಳಿ, ಅವರ ಸೇವೆಮಾಡುತ್ತಾ ಅವರನ್ನೇ ಅಂಟಿಕೊಳ್ಳಬೇಕು.
ನಿಜವಾಗಿಯೂ ವ್ಯರ್ಥವಾಯಿತು. ದೇವರು ಪವಿತ್ರ ಆತ್ಮರನ್ನು ನಿಮಗೆ ಕೊಟ್ಟದ್ದು ಮತ್ತು ನಿಮ್ಮಲ್ಲಿ ಅದ್ಭುತಕಾರ್ಯಗಳನ್ನು ನಡೆಸಿದ್ದು ನಿಯಮದ ಕ್ರಿಯೆಗಳಿಂದಲೋ ಅಥವಾ ನೀವು ಕೇಳಿ ನಂಬಿದ್ದರಿಂದಲೋ?
Sabedoria no ouvir
Seja pronto para ouvir e tardio para falar. A sabedoria começa com a disposição de ouvir instrução e aceitar correção.
ಕೇಳಿಸಿಕೊಳ್ಳದೆ ಉತ್ತರ ಕೊಡುವವರಿಗೆ
ಅದು ಮೂರ್ಖತನವೂ, ಅವಮಾನವೂ ಆಗಿದೆ.
ಕಾರ್ಯವನ್ನು ಜ್ಞಾನದಿಂದ ನಡೆಸುವವನು ಒಳ್ಳೆಯದನ್ನು ಪಡೆಯುವನು.
ಯೆಹೋವ ದೇವರಲ್ಲಿ ಭರವಸೆ ಇಡುವವನು ಧನ್ಯನು.
ಮಗನೇ, ನಿನ್ನ ತಂದೆಯ ಆಜ್ಞೆಯನ್ನು ಕೈಗೊಳ್ಳು,
ನಿನ್ನ ತಾಯಿಯ ಬೋಧನೆಯನ್ನು ತ್ಯಜಿಸಬೇಡ.
ಶಿಸ್ತನ್ನು ಕೈಗೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು;
ಆದರೆ ತಿದ್ದುಪಾಟನ್ನು ತಿರಸ್ಕರಿಸುವವನು ಇತರರ ದಾರಿತಪ್ಪಿಸುವನು.
ಶಿಕ್ಷಣವನ್ನು ಕೇಳದಂತೆ ತನ್ನ ಕಿವಿ ಮುಚ್ಚಿಕೊಳ್ಳುವವನ
ಪ್ರಾರ್ಥನೆಯು ದೇವರಿಗೆ ಅಸಹ್ಯ.
ಮೂಢರ ಹಾಡನ್ನು ಕೇಳುವುದಕ್ಕಿಂತ,
ಜ್ಞಾನಿಗಳ ಗದರಿಕೆಯನ್ನು ಕೇಳುವುದು ಲೇಸು.
ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿವೆ.
ಇದನ್ನು ಮನುಷ್ಯನು ವಿವರಿಸಲಾರನು.
ನೋಡುವುದರಿಂದ ಕಣ್ಣು ತೃಪ್ತಿಗೊಳ್ಳದು,
ಕೇಳುವುದರಿಂದ ಕಿವಿಯು ದಣಿಯದು.
" ‘ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧವಾಗಿ ನಡೆದರೆ, ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ಬಾಧಿಸುವೆನು.
ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ," ನೀವು ಕಿವಿಗೊಡದೆ ನನ್ನ ಹೆಸರಿಗೆ ಮಹಿಮೆಯನ್ನು ಸಲ್ಲಿಸಲು ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳದೆ ಹೋದರೆ, "ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು. ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು. ಹೌದು, ಅವುಗಳನ್ನು ಆಗಲೇ ಶಪಿಸಿದ್ದಾಯಿತು, ಏಕೆಂದರೆ ನೀವು ನನ್ನನ್ನು ಘನಪಡಿಸಲು ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಲಿಲ್ಲ.
ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆಯುವೆನು. ಆಗ ನೀನು ಅವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ.’ ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಏಕೆಂದರೆ ಅವರು ತಿರುಗಿಬೀಳುವ ಜನರಾಗಿದ್ದಾರೆಂದು ಹೇಳಬೇಕು.
ದಿನಗಳು ಬರುವುವು,
ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು.
ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ.
ಯೆಹೋವ ದೇವರ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮವನ್ನೇ,
ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾನೆ.
ಸುಮಾರು ಮಧ್ಯರಾತ್ರಿಯಲ್ಲಿ ಪೌಲ, ಸೀಲರು ಪ್ರಾರ್ಥನೆ ಮಾಡುವವರಾಗಿ ಸ್ತುತಿಗೀತೆಯಿಂದ ದೇವರಿಗೆ ಸ್ತೋತ್ರ ಮಾಡುತ್ತಿದ್ದರು. ಸೆರೆಮನೆಯಲ್ಲಿ ಇತರ ಕೈದಿಗಳು ಅದನ್ನು ಆಲಿಸುತ್ತಿದ್ದರು.
ಆಗ ಯೆಹೋಶುವನು ಇಸ್ರಾಯೇಲರಿಗೆ, "ನೀವು ಇಲ್ಲಿಗೆ ಬಂದು ನಿಮ್ಮ ದೇವರಾದ ಯೆಹೋವ ದೇವರ ವಾಕ್ಯಗಳನ್ನು ಕೇಳಿರಿ.
ಆದ್ದರಿಂದ ನೀವು ಕತ್ತಲೆಯಲ್ಲಿ ಯಾವುದನ್ನು ಹೇಳಿದ್ದೀರೋ ಅದು ಬೆಳಕಿನಲ್ಲಿ ಕೇಳಲಾಗುವುದು, ಕೋಣೆಗಳೊಳಗೆ ನೀವು ಪಿಸುಗುಟ್ಟಿದ್ದು ಮಾಳಿಗೆಗಳ ಮೇಲೆ ಸಾರಲಾಗುವುದು.
"ನಿನ್ನ ಸಹೋದರ ಅಥವಾ ಸಹೋದರಿ ಪಾಪಮಾಡಿದರೆ, ನೀವಿಬ್ಬರೇ ಇರುವಾಗ ಹೋಗಿ ಅವರನ್ನು ಖಂಡಿಸು. ಅವರು ನಿನಗೆ ಕಿವಿಗೊಟ್ಟರೆ ನೀನು ನಿನ್ನ ಸಹೋದರ ಅಥವಾ ಸಹೋದರಿಯನ್ನು ಗೆದ್ದುಕೊಂಡಿರುವೆ.
"ನಿನ್ನ ಸಹೋದರ ಅಥವಾ ಸಹೋದರಿ ಪಾಪಮಾಡಿದರೆ, ನೀವಿಬ್ಬರೇ ಇರುವಾಗ ಹೋಗಿ ಅವರನ್ನು ಖಂಡಿಸು. ಅವರು ನಿನಗೆ ಕಿವಿಗೊಟ್ಟರೆ ನೀನು ನಿನ್ನ ಸಹೋದರ ಅಥವಾ ಸಹೋದರಿಯನ್ನು ಗೆದ್ದುಕೊಂಡಿರುವೆ. ಆದರೆ ಅವರು ನಿನಗೆ ಕಿವಿಗೊಡದೆ ಹೋದರೆ, ನಿನ್ನೊಂದಿಗೆ ಇಬ್ಬರನ್ನು ಕರೆದುಕೊಂಡು ಹೋಗು. ಹೀಗೆ, ‘ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಾಪಿತವಾಗಲಿ.’ ಅವರು ಅವರಿಗೂ ಕಿವಿಗೊಡದೆ ಹೋದರೆ ಅದನ್ನು ಸಭೆಗೆ ತಿಳಿಸು. ಅವರು ಸಭೆಗೂ ಕಿವಿಗೊಡದೆ ಹೋದರೆ, ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.
ಇದಲ್ಲದೆ ಯೆಹೋವ ದೇವರು ಇಸ್ರಾಯೇಲರಿಗೆ ಮಾಡಿದ ಎಲ್ಲಾ ಉಪಕಾರಕ್ಕಾಗಿಯೂ, ಯೆಹೋವ ದೇವರು ಅವರನ್ನು ಈಜಿಪ್ಟಿನವರ ಕೈಗಳಿಂದ ತಪ್ಪಿಸಿದ್ದಕ್ಕಾಗಿಯೂ ಇತ್ರೋವನು ಸಂತೋಷಪಟ್ಟನು.
ಮರಣದಲೆಗಳು ನನ್ನನ್ನು ಆವರಿಸಿಕೊಂಡವು.
ವಿನಾಶಪ್ರವಾಹಗಳು ನನ್ನ ಮೇಲೆ ಹರಿದವು;
ಪಾತಾಳದ ಪಾಶಗಳು ನನ್ನನ್ನು ಸುತ್ತಿಕೊಂಡವು;
ಮರಣದ ಬಲೆಗಳು ನನ್ನನ್ನು ಎದುರಿಸಿದವು.
"ನನ್ನ ಇಕ್ಕಟ್ಟಿನಲ್ಲಿ ಯೆಹೋವ ದೇವರನ್ನು ಕರೆದೆನು;
ನನ್ನ ದೇವರಿಗೆ ಮೊರೆಯಿಟ್ಟೆನು.
ಅವರು ತಮ್ಮ ಮಂದಿರದೊಳಗಿಂದ ನನ್ನ ಧ್ವನಿಯನ್ನು ಕೇಳಿದರು;
ನನ್ನ ಮೊರೆಯು ಅವರ ಕಿವಿಗೆ ಮುಟ್ಟಿತು.