Pai da mentira
A Bíblia revela que o diabo é o pai da mentira. Ele engana, acusa e tenta destruir. Mas Cristo veio para desfazer as obras do maligno e nos dar vitória.
O caráter do diabo
Jesus disse que o diabo é mentiroso e homicida desde o princípio. Não há verdade nele — a mentira é sua natureza.
ನೀವು ನಿಮ್ಮ ತಂದೆಯಾದ ಪಿಶಾಚನಿಗೆ ಸೇರಿದವರಾಗಿದ್ದೀರಿ. ನಿಮ್ಮ ತಂದೆಯ ಆಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ಸುಳ್ಳಾಡುವಾಗ ತನ್ನ ಸ್ವಭಾವಾನುಸಾರವಾಗಿ ಆಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿನ ತಂದೆಯೂ ಆಗಿದ್ದಾನೆ.
ಸಾಯಂಕಾಲ ಊಟದ ಸಮಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಯೋಚನೆಯನ್ನು, ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಹಾಕಿದ್ದನು.
ಭೂಲೋಕದವರನ್ನೆಲ್ಲಾ ವಂಚಿಸುತ್ತಿದ್ದ ಆ ಮಹಾ ಘಟಸರ್ಪನು ಎಂದರೆ ಪಿಶಾಚನೆಂತಲೂ ಸೈತಾನನೆಂತಲೂ ಕರೆಯಲಾದ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರನ್ನೂ ಅವನೊಂದಿಗೆ ತಳ್ಳಲಾಯಿತು.
ಆಗ ಪರಲೋಕದಲ್ಲಿ ಮಹಾಧ್ವನಿಯನ್ನು ಕೇಳಿದೆನು. ಅದು,
"ರಕ್ಷಣೆಯೂ ಶಕ್ತಿಯೂ ರಾಜ್ಯವೂ ಈಗ ನಮ್ಮ ದೇವರದಾದವು.
ದೇವರ ಕ್ರಿಸ್ತ ಆಗಿರುವವರ ಅಧಿಕಾರವು ಈಗ ಸ್ಥಾಪಿತವಾಯಿತು.
ಹಗಲಿರುಳು ನಮ್ಮ ಸಹೋದರರ ಮೇಲೆ,
ನಮ್ಮ ದೇವರ ಮುಂದೆ ದೂರು ಹೇಳುವ ದೂರುಗಾರನನ್ನು ತಳ್ಳಲಾಗಿದೆ.
ಇದರಲ್ಲಿ ಆಶ್ಚರ್ಯವೇನೂ ಇಲ್ಲ, ಸೈತಾನನೂ ಬೆಳಕಿನ ದೇವದೂತನಂತೆ ಕಾಣಿಸಿಕೊಳ್ಳಬಲ್ಲನು.
ಈ ಲೋಕದ ದೇವರು ನಂಬದವರ ಮನಸ್ಸನ್ನು ಕುರುಡುಮಾಡಿರುತ್ತಾನೆ. ಆದ್ದರಿಂದ ದೇವರ ಸ್ವರೂಪವಾಗಿರುವ ಕ್ರಿಸ್ತ ಯೇಸುವಿನ ಸುವಾರ್ತೆಯ ಮಹಿಮೆಯ ಬೆಳಕನ್ನು ಅವರು ಕಾಣಲಾರರು.
As obras do inimigo
O diabo rouba a Palavra semeada, cega o entendimento dos incrédulos e anda em derredor como leão rugidor buscando a quem devorar.
ಯಾರಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ, ಕೆಡುಕನು ಬಂದು ಅವರ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದುಹಾಕುತ್ತಾನೆ, ಇದೇ ದಾರಿಯ ಪಕ್ಕದಲ್ಲಿ ಬಿತ್ತಲಾಗಿರುವ ಬೀಜವಾಗಿರುವದು.
ಹೊಲವು ಈ ಲೋಕ; ಒಳ್ಳೆಯ ಬೀಜವು ದೇವರ ರಾಜ್ಯದ ಮಕ್ಕಳು; ಕಳೆಯು ಕೆಡುಕನ ಮಕ್ಕಳಾಗಿದ್ದಾರೆ. ಅದನ್ನು ಬಿತ್ತಿದ ವೈರಿಯು ಸೈತಾನನೇ. ಸುಗ್ಗಿಯ ಕಾಲವು ಲೋಕಾಂತ್ಯವಾಗಿದೆ. ಕೊಯ್ಯುವವರು ದೇವದೂತರೇ.
ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
ಆ ನಿಯಮ ಮೀರುವವನ ಬರುವಿಕೆಯು ಸೈತಾನನ ಕಾರ್ಯಗಳಿಗೆ ಅನುಸಾರವಾಗಿರುವುದು. ಅವು ಎಲ್ಲಾ ಶಕ್ತಿಯ ಪ್ರದರ್ಶನದಿಂದಲೂ ಸುಳ್ಳಾದ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಇರುವವು.
ಇನ್ನು ಮೇಲೆ ನಾನು ನಿಮ್ಮೊಂದಿಗೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ ಇಹಲೋಕದ ಅಧಿಪತಿಯು ಬರಲಿದ್ದಾನೆ. ನನ್ನಲ್ಲಿ ಅವನಿಗೆ ಸೇರಿದ್ದು ಒಂದೂ ಇರುವುದಿಲ್ಲ.
Vitória em Cristo
Cristo apareceu para destruir as obras do diabo. Quem está em Deus é protegido, e o maligno não o toca.
ಪಾಪದಲ್ಲಿ ಮುಂದುವರೆಯುವವರು ಸೈತಾನನಿಗೆ ಸೇರಿದವರು. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ದೇವಪುತ್ರ ಯೇಸು ಸೈತಾನನ ಕೆಲಸಗಳನ್ನು ಲಯ ಮಾಡುವುದಕ್ಕೋಸ್ಕರವೇ ಪ್ರತ್ಯಕ್ಷರಾದರು.
ದೇವರಿಂದ ಹುಟ್ಟಿರುವವರು ಪಾಪದಲ್ಲಿ ಮುಂದುವರೆಯುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವರನ್ನು ದೇವಪುತ್ರ ಆಗಿರುವ ಕ್ರಿಸ್ತ ಯೇಸುವು ಅಂಥವರನ್ನು ಕಾಪಾಡುವರು, ಕೆಡುಕನು ಅಂಥವರನ್ನು ಮುಟ್ಟುವುದಿಲ್ಲ. ನಾವು ದೇವರ ಮಕ್ಕಳೆಂದೂ ಲೋಕವೆಲ್ಲವು ಕೆಡುಕನ ನಿಯಂತ್ರಣದಲ್ಲಿ ಇದೆ ಎಂದೂ ನಮಗೆ ಗೊತ್ತಿದೆ.
ನೀನು ಅವರ ಕಣ್ಣುಗಳನ್ನು ತೆರೆದು, ಅವರನ್ನು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಸಿ ಪಾಪಕ್ಷಮಾಪಣೆಯನ್ನು ಪಡೆಯುವಂತೆ ಮಾಡಿ, ನನ್ನಲ್ಲಿ ವಿಶ್ವಾಸವಿದ್ದು ಶುದ್ಧೀಕರಣ ಹೊಂದಿದವರ ಮಧ್ಯದಲ್ಲಿ ಹಕ್ಕುಬಾಧ್ಯತೆಯನ್ನು ಪಡೆಯುವಂತೆ ಮಾಡಬೇಕೆಂದು ನಿನ್ನನ್ನು ಕಳುಹಿಸುತ್ತಿದ್ದೇನೆ,’ ಎಂದರು.
ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲಾಯಿತು. ಅಲ್ಲಿ ಮೃಗವೂ ಸುಳ್ಳು ಪ್ರವಾದಿ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.
ಹೀಗಿರಲಾಗಿ ದೇವರಿಗೆ ಅಧೀನವಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು.
ಯೇಸು ಅವನಿಗೆ, "ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರಲಾರರು.