Pais
Deus é nosso Pai celestial — amoroso, provedor, disciplinador e fiel. As Escrituras também honram os pais terrenos e os chamam a criar os filhos na instrução do Senhor.
O Pai celestial
Deus é Pai de misericórdias. Ele nos adotou como filhos, nos ama incondicionalmente e cuida de cada detalhe da nossa vida.
ದೇವರ ಮಕ್ಕಳೂ ಮತ್ತು ಸೈತಾನನ ಮಕ್ಕಳನ್ನು ಕುರಿತದ್ದು
ಇಗೋ, ನಾವು ದೇವರ ಮಕ್ಕಳೆಂದು ಕರೆಯಲ್ಪಡುವುದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ! ನಾವು ಆತನ ಮಕ್ಕಳಾಗಿದ್ದೇವೆ. ಲೋಕವು ಆತನನ್ನು ಅರ್ಥಮಾಡಿಕೊಳ್ಳದೆ ಇರುವುದರಿಂದ ನಮ್ಮನ್ನೂ ಅರ್ಥಮಾಡಿಕೊಳ್ಳುವುದಿಲ್ಲ.
ದೇವರ ಮಕ್ಕಳೂ ಮತ್ತು ಸೈತಾನನ ಮಕ್ಕಳನ್ನು ಕುರಿತದ್ದು
ಇಗೋ, ನಾವು ದೇವರ ಮಕ್ಕಳೆಂದು ಕರೆಯಲ್ಪಡುವುದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ! ನಾವು ಆತನ ಮಕ್ಕಳಾಗಿದ್ದೇವೆ. ಲೋಕವು ಆತನನ್ನು ಅರ್ಥಮಾಡಿಕೊಳ್ಳದೆ ಇರುವುದರಿಂದ ನಮ್ಮನ್ನೂ ಅರ್ಥಮಾಡಿಕೊಳ್ಳುವುದಿಲ್ಲ.
ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, "ಅಪ್ಪಾ, ತಂದೆಯೇ," ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ. ನಾವು ದೇವರ ಮಕ್ಕಳಾಗಿದ್ದೇವೆಂಬುದಕ್ಕೆ ಪವಿತ್ರಾತ್ಮನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.
ಆದರೂ ಯಾರಾರು ಆತನನ್ನು ಸ್ವೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ ಅವರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಆತನು ಕೊಟ್ಟನು.
ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
ತಂದೆಯು ಮಕ್ಕಳನ್ನು ಕನಿಕರಿಸುವಂತೆ,
ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕನಿಕರಿಸುತ್ತಾನೆ.
ತಂದೆಯು ಮಕ್ಕಳನ್ನು ಕನಿಕರಿಸುವಂತೆ,
ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕನಿಕರಿಸುತ್ತಾನೆ.
ನಾವು ರೂಪಗೊಂಡಿದ್ದನ್ನು ಆತನು ಬಲ್ಲನು;
ನಾವು ಧೂಳಾಗಿದ್ದೇವೆ ಎಂಬುವುದನ್ನು ನೆನಪುಮಾಡಿಕೊಳ್ಳುತ್ತಾನೆ.
ಪರಿಶುದ್ಧ ವಾಸಸ್ಥಾನದಲ್ಲಿರುವ ದೇವರು ದಿಕ್ಕಿಲ್ಲದವರಿಗೆ ತಂದೆಯೂ,
ವಿಧವೆಯರಿಗೆ ಸಹಾಯಕನೂ ಆಗಿದ್ದಾನೆ.
ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದಿ;
ನೀನು ಕುಂಬಾರನು, ನಾವು ಜೇಡಿಮಣ್ಣು, ನಾವೆಲ್ಲರೂ ನಿನ್ನ ಕೈಕೆಲಸವೇ.
ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ;
ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು;
ಯೆಹೋವನೇ, ನೀನೇ ನಮ್ಮ ಪಿತೃ; ನೀನು ಆದಿಯಿಂದಲೂ ‘ನಮ್ಮ ವಿಮೋಚಕನು’ ಅನ್ನಿಸಿಕೊಂಡಿದ್ದಿ.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ,
ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು;
ಅದ್ಭುತ ಸ್ವರೂಪನು, ಆಲೋಚನಾ ಕರ್ತನು,
ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ,
ಸಮಾಧಾನದ ಪ್ರಭು ಎಂಬುದು ಆತನ ಹೆಸರು.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ,
ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು;
ಅದ್ಭುತ ಸ್ವರೂಪನು, ಆಲೋಚನಾ ಕರ್ತನು,
ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ,
ಸಮಾಧಾನದ ಪ್ರಭು ಎಂಬುದು ಆತನ ಹೆಸರು.
O cuidado paterno de Deus
O Pai celestial sabe do que precisamos antes de pedirmos. Ele dá boas dádivas aos filhos que pedem e cuida até dos passarinhos.
ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ?
ಕಾಸಿಗೆ ಎರಡು ಗುಬ್ಬಿಗಳನ್ನು ಮಾರುವುದುಂಟಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳದು. ನಿಮ್ಮ ತಲೆಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಆದುದರಿಂದ ಹೆದರಬೇಡಿರಿ; ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚು ಬೆಲೆಬಾಳುವವರಾಗಿದ್ದೀರಿ.
ನೀನು ಪ್ರಾರ್ಥನೆಮಾಡುವಾಗ ನಿನ್ನ ಕೋಣೆಯೊಳಗೆ ಹೋಗಿ ಬಾಗಿಲನ್ನು ಮುಚ್ಚಿಕೊಂಡು ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.
ಆದರೆ ನೀನು ಉಪವಾಸಮಾಡುವಾಗ ತಲೆಗೆ ಎಣ್ಣೆ ಹಚ್ಚಿಕೊಂಡು ಮುಖವನ್ನು ತೊಳೆದುಕೋ. ಹೀಗೆ ಮಾಡಿದರೆ ನೀನು ಉಪವಾಸಿಯೆಂದು ಜನರಿಗೆ ಕಾಣದೆ ಹೋದಾಗ್ಯೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಉಪವಾಸಿಯೆಂದು ಕಾಣಿಸಿಕೊಳ್ಳುವಿ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಪ್ರತಿಫಲಕೊಡುವನು.
ನಿಮ್ಮಲ್ಲಿ ತಂದೆಯಾದವನು ಮೀನನ್ನು ಕೇಳುವ ಮಗನಿಗೆ ಮೀನು ಕೊಡದೆ ಹಾವನ್ನು ಕೊಡುವನೇ? ಅಥವಾ ಮೊಟ್ಟೆಯನ್ನು ಕೇಳಿದರೆ ಚೇಳನ್ನು ಕೊಡುವನೇ? ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವನ್ನೇ ಕೊಡುವನಲ್ಲವೇ?" ಅಂದನು.
ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.
ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ, ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೋ?
Conhecer o Pai
Jesus é o caminho para o Pai. Ninguém conhece o Pai senão o Filho e aquele a quem o Filho quiser revelar.
ಯೇಸು ಅವನಿಗೆ, "ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.
ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ, ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ!
ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ನೆರವೇರಿಸುವೆನು. ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವುದು.
ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಪಡಿಸಿ ತೋರಿಸುವೆನು" ಎಂದು ಹೇಳಿದನು.
ಯೇಸು ಅವನಿಗೆ, "ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು.
ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.
ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು. ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತ ಮಹೋನ್ನತನು. ಅವುಗಳನ್ನು ನನ್ನ ತಂದೆಯ ಕೈಯಿಂದ ಯಾರೂ ಕಸಿದುಕೊಳ್ಳಲಾರರು. ನಾನೂ ಮತ್ತು ನನ್ನ ತಂದೆಯೂ ಒಂದಾಗಿದ್ದೇವೆ" ಎಂದನು.
ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು, ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ.
ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ.
ಆದುದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವ ಹಾಗೆಯೇ ನೀವೂ ಪರಿಪೂರ್ಣರಾಗಿರಿ.
ಆದರೆ ನೀವು ‘ಬೋಧಕರೆನ್ನಿಸಿಕೊಳ್ಳಬೇಡಿರಿ;’ ಏಕೆಂದರೆ ಕ್ರಿಸ್ತನೊಬ್ಬನೇ ನಿಮಗಿರುವ ಬೋಧಕನು ಮತ್ತು ನೀವೆಲ್ಲರೂ ಸಹೋದರರು. ಇದಲ್ಲದೆ ಭೂಲೋಕದಲ್ಲಿ ಯಾರನ್ನೂ ನಿಮ್ಮ ತಂದೆ ಎಂದು ಕರೆಯಬೇಡಿರಿ; ಏಕೆಂದರೆ ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ
ನಾನು ನನ್ನ ತಂದೆಯನ್ನು ಬೇಡಿಕೊಳ್ಳಲಾರೆನೆ, ಬೇಡಿಕೊಂಡರೆ ಆತನು ನನಗೆ ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚು ಮಂದಿ ದೇವದೂತರನ್ನು ಕಳುಹಿಸಿಕೊಡುವುದಿಲ್ಲವೆಂದು ಭಾವಿಸುತ್ತೀಯೋ?
ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರವೇ ನೀವೂ ಕರುಣೆಯುಳ್ಳವರಾಗಿರಿ.
ನಮ್ಮ ತಂದೆಯಾದ ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯುಂಟಾಗಲಿ. ಆಮೆನ್.
Disciplina e amor paterno
O Pai disciplina os filhos que ama. A correção divina produz fruto de justiça e paz para aqueles que foram exercitados por ela.
ನಿಮ್ಮ ಶಿಸ್ತಿಗಾಗಿಯೇ, ನಿಮಗೆ ಶಿಕ್ಷೆಯಾಗುತ್ತದೆಂದು ಅದನ್ನು ಸಹಿಸಿಕೊಳ್ಳಿರಿ. ದೇವರು ನಿಮ್ಮನ್ನು ಮಕ್ಕಳೆಂದು ನಡೆಸುತ್ತಾನೆ. ಯಾಕೆಂದರೆ ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿದ್ದಾನೆ? ಎಲ್ಲರೂ ಪಾಲುಗಾರರಬೇಕಾದ ಶಿಕ್ಷೆಯು ನಿಮಗುಂಟಾಗದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಆತನ ಮಕ್ಕಳಲ್ಲ. ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದ ಲೌಕಿಕ ತಂದೆಗಳನ್ನು ನಾವು ಸನ್ಮಾನಿಸಿತ್ತೇವಲ್ಲ. ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ? ನಮ್ಮ ಲೌಕಿಕ ತಂದೆಗಳು ಮನಸ್ಸಿಗೆ ಸರಿದೋರಿದಂತೆ ಕೆಲವು ಕಾಲ ಮಾತ್ರ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ತನ್ನ ಪರಿಶುದ್ಧತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಹಿತಕ್ಕಾಗಿಯೇ ಶಿಕ್ಷಿಸುತ್ತಾನೆ.
ಮಗನೇ, ಯೆಹೋವನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ.
ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.
ತಂದೆಯು ತನ್ನ ಮುದ್ದುಮಗನನ್ನು ಗದರಿಸುವಂತೆ
ಯೆಹೋವನು ತಾನು ಪ್ರೀತಿಸುವವನನ್ನೇ ಗದರಿಸುತ್ತಾನೆ.
ಮಗನೇ, ಯೆಹೋವನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ.
ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.
ತಂದೆಯು ತನ್ನ ಮುದ್ದುಮಗನನ್ನು ಗದರಿಸುವಂತೆ
ಯೆಹೋವನು ತಾನು ಪ್ರೀತಿಸುವವನನ್ನೇ ಗದರಿಸುತ್ತಾನೆ.
Pais terrenos
A Bíblia honra os pais que criam os filhos nos caminhos de Deus. Honrar pai e mãe é mandamento com promessa de vida longa.
ತಂದೆತಾಯಿಗಳೂ ಮಕ್ಕಳೂ
ಮಕ್ಕಳೇ, ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ವಿಧೇಯರಾಗಿರಿ. ಇದು ನ್ಯಾಯವಾದದ್ದು. ವಾಗ್ದಾನಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ, "ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು, ಗೌರವಿಸಿದರೆ ನಿನಗೆ ಶುಭವಾಗುವುದು, ನೀನು ಭೂಮಿಯ ಮೇಲೆ ಬಹುಕಾಲ ಬದುಕುವಿ."
ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.
ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.
"ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ.
ಪಾಪಿಗಳ ಕುರಿತು ಎಚ್ಚರಿಕೆಗಳು
ಮಗನೇ, ನಿನ್ನ ತಂದೆಯ ಉಪದೇಶವನ್ನು ಕೇಳು,
ನಿನ್ನ ತಾಯಿಯ ಬೋಧನೆಯನ್ನು ತೊರೆಯಬೇಡ.
ಅವು ನಿನ್ನ ತಲೆಗೆ ಸುಂದರವಾದ ಪುಷ್ಪಕಿರೀಟ,
ಕೊರಳಿಗೆ ಹಾರದಂತಿರುವುದು.
ಧರ್ಮಿಯ ತಂದೆಯು ಅತಿ ಸಂತೋಷಪಡುವನು,
ಜ್ಞಾನಿಯನ್ನು ಹೆತ್ತವನು ಅವನಲ್ಲಿ ಆನಂದಿಸುವನು.
ಮೂರ್ಖನು ತಂದೆಯ ಶಿಕ್ಷೆಯನ್ನು ತಿರಸ್ಕರಿಸುವನು,
ಗದರಿಕೆಯನ್ನು ಗಮನಿಸುವವನು ಜಾಣನು.
ಮಕ್ಕಳ ಸಂತತಿಯವರು ವೃದ್ಧರಿಗೆ ಕಿರೀಟ,
ತಂದೆತಾಯಿಗಳು ಮಕ್ಕಳಿಗೆ ಭೂಷಣ.
ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ಶಪಿಸುವವನ ದೀಪವು,
ಮಧ್ಯರಾತ್ರಿಯ ಅಂಧಕಾರದಲ್ಲಿ ಆರಿಹೋಗುವುದು.
ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಯಾಕೆಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ. ತಂದೆಗಳೇ, ನಿಮ್ಮ ಮಕ್ಕಳನ್ನು ಕೆಣಕಿ ಅವರನ್ನು ಮನಗುಂದಿಸಿಬೇಡಿರಿ.
ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು;
ಗರ್ಭಫಲವು ಆತನ ಬಹುಮಾನವೇ.
ಯೌವನದಲ್ಲಿ ಹುಟ್ಟಿದ ಮಕ್ಕಳು,
ಯುದ್ಧವೀರನ ಕೈಯಲ್ಲಿರುವ ಅಂಬುಗಳಂತಿದ್ದಾರೆ;
ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು.
ಊರ ಬಾಗಿಲಲ್ಲಿ ವೈರಿಗಳ ಸಂಗಡ ವ್ಯಾಜ್ಯವಾಡುವಾಗ
ಅಂಥವರು ಅವಮಾನ ಹೊಂದುವುದಿಲ್ಲ.
ಜೀವಂತನು, ಜೀವಂತನೇ ನಿನ್ನನ್ನು ಸ್ತುತಿಸುವನು, ಹೌದು, ಜೀವಂತನಾದ ನಾನೇ ಈ ಹೊತ್ತು ನಿನ್ನನ್ನು ಹೊಗಳುವೆನು.
ತಂದೆಯು ಮಕ್ಕಳಿಗೆ ನಿನ್ನ ಸತ್ಯಸಂಧತೆಯನ್ನು ಬೋಧಿಸುವನು.
ಮಕ್ಕಳ ಪಾಪಕ್ಕಾಗಿ ತಂದೆಗೂ, ತಂದೆಯ ಪಾಪಕ್ಕಾಗಿ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು.
ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೆಂದು ಸೃಷ್ಟಿಯು ಬಹು ಕಾತುರದಿಂದ ಎದುರು ನೋಡುತ್ತಿದೆ.
ತಂದೆಗಳಿರಾ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ. ಮಕ್ಕಳೇ, ನೀವು ತಂದೆಯನ್ನು ಬಲ್ಲವರಾಗಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ.
ತಂದೆಗಳಿರಾ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಶಕ್ತರಾಗಿರುವುದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದಲೂ ನೀವು ಕೆಡುಕನನ್ನು ಜಯಿಸಿರುವುದರಿಂದಲೂ ನಾನು ನಿಮಗೆ ಬರೆದಿದ್ದೇನೆ.
ದೇವರನ್ನು ಪ್ರೀತಿಸುವವರು ಲೋಕವನ್ನು ಪ್ರೀತಿಸಬಾರದು
ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಿನ ಪ್ರೀತಿಯು ಅವನಲ್ಲಿಲ್ಲ.