Pais
Deus é nosso Pai celestial — amoroso, provedor, disciplinador e fiel. As Escrituras também honram os pais terrenos e os chamam a criar os filhos na instrução do Senhor.
O Pai celestial
Deus é Pai de misericórdias. Ele nos adotou como filhos, nos ama incondicionalmente e cuida de cada detalhe da nossa vida.
ಇಗೋ, ನಾವು ದೇವರ ಮಕ್ಕಳೆಂದು ಕರೆಯುವುದರಲ್ಲಿ ತಂದೆಯು ಎಂಥಾ ಮಹಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾರಲ್ಲಾ! ನಿಜಕ್ಕೂ ನಾವು ದೇವರ ಮಕ್ಕಳಾಗಿದ್ದೇವೆ. ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳುವುದಿಲ್ಲ, ಏಕೆಂದರೆ ಅದು ತಂದೆಯನ್ನು ತಿಳಿದುಕೊಳ್ಳಲಿಲ್ಲ.
ಇಗೋ, ನಾವು ದೇವರ ಮಕ್ಕಳೆಂದು ಕರೆಯುವುದರಲ್ಲಿ ತಂದೆಯು ಎಂಥಾ ಮಹಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾರಲ್ಲಾ! ನಿಜಕ್ಕೂ ನಾವು ದೇವರ ಮಕ್ಕಳಾಗಿದ್ದೇವೆ. ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳುವುದಿಲ್ಲ, ಏಕೆಂದರೆ ಅದು ತಂದೆಯನ್ನು ತಿಳಿದುಕೊಳ್ಳಲಿಲ್ಲ.
ನಿಮ್ಮನ್ನು ಪುನಃ ಭಯಕ್ಕೆ ದಾಸರನ್ನಾಗಿ ಮಾಡುವ ಆತ್ಮನನ್ನು ನಾವು ಹೊಂದದೆ, ಪುತ್ರತ್ವದ ಪವಿತ್ರಾತ್ಮನನ್ನೇ ಹೊಂದಿದವರಾಗಿ ದೇವರನ್ನು, "ಅಪ್ಪಾ, ತಂದೆಯೇ," ಎಂದು ಕರೆಯುತ್ತೇವೆ. ನಾವು ದೇವರ ಮಕ್ಕಳಾಗಿದ್ದೇವೆ ಎಂಬುದಕ್ಕೆ ದೇವರ ಆತ್ಮರು ನಮ್ಮ ಆತ್ಮದೊಂದಿಗೆ ಸಾಕ್ಷಿಕೊಡುತ್ತಾರೆ.
ಆದರೂ ಯಾರಾರು ಅವರನ್ನು ಸ್ವೀಕರಿಸಿದರೋ, ಅಂದರೆ ಅವರ ಹೆಸರಿನಲ್ಲಿ ವಿಶ್ವಾಸವಿಟ್ಟರೋ ಅವರೆಲ್ಲರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಕೊಟ್ಟರು.
ನಮ್ಮ ತಂದೆಯಾದ ದೇವರಿಂದಲೂ ಕರ್ತ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಇರಲಿ.
ಒಬ್ಬ ತಂದೆಯು ತಮ್ಮ ಮಕ್ಕಳ ಮೇಲೆ ಅನುಕಂಪಗೊಳ್ಳುವಂತೆ,
ಯೆಹೋವ ದೇವರು ತಮಗೆ ಭಯಪಡುವವರ ಮೇಲೆ ಅನುಕಂಪ ತೋರಿಸುವವರಾಗಿದ್ದಾರೆ.
ಒಬ್ಬ ತಂದೆಯು ತಮ್ಮ ಮಕ್ಕಳ ಮೇಲೆ ಅನುಕಂಪಗೊಳ್ಳುವಂತೆ,
ಯೆಹೋವ ದೇವರು ತಮಗೆ ಭಯಪಡುವವರ ಮೇಲೆ ಅನುಕಂಪ ತೋರಿಸುವವರಾಗಿದ್ದಾರೆ.
ದೇವರು ನಮ್ಮ ಪ್ರಕೃತಿಯನ್ನು ಬಲ್ಲವರಾಗಿದ್ದಾರೆ;
ನಾವು ಧೂಳಾಗಿದ್ದೇವೆಂದು ಅವರು ನೆನಪುಮಾಡಿ ಕೊಳ್ಳುತ್ತಾರೆ.
ದೇವರು ತಮ್ಮ ಪರಿಶುದ್ಧ ಸ್ಥಳದಲ್ಲಿ ದಿಕ್ಕಿಲ್ಲದವರಿಗೆ ತಂದೆ,
ವಿಧವೆಯರಿಗೆ ರಕ್ಷಕರಾಗಿದ್ದಾರೆ.
ಆದರೆ ಈಗ ಯೆಹೋವ ದೇವರೇ, ನಮ್ಮ ತಂದೆಯು ನೀನೇ,
ನಾವು ಮಣ್ಣು. ನೀನು ನಮ್ಮ ಕುಂಬಾರನು.
ನಾವೆಲ್ಲರೂ ನಿನ್ನ ಕೈಕೆಲಸಗಳು.
ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ,
ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ
ಯೆಹೋವ ದೇವರಾದ ನೀವೇ ನಮ್ಮ ತಂದೆಯೂ,
ನಮ್ಮ ವಿಮೋಚಕರೂ ಆಗಿದ್ದೀರಿ. ನಿಮ್ಮ ಹೆಸರು ಸದಾಕಾಲವೂ ಇದೆ
ಏಕೆಂದರೆ ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ,
ಆ ಮಗನನ್ನು ನಮಗಾಗಿ ಕೊಡಲಾಗಿದೆ.
ಆಡಳಿತವು ಅವರ ಬಾಹುವಿನ ಮೇಲಿರುವುದು,
ಅದ್ಭುತವಾದವರು ಸಮಾಲೋಚಕರು,
ಪರಾಕ್ರಮಿಯಾದ ದೇವರು, ನಿತ್ಯರಾದ ತಂದೆ,
ಸಮಾಧಾನದ ಪ್ರಭು, ಎಂಬುದು ಅವರ ಹೆಸರಾಗಿರುವುದು.
ಏಕೆಂದರೆ ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ,
ಆ ಮಗನನ್ನು ನಮಗಾಗಿ ಕೊಡಲಾಗಿದೆ.
ಆಡಳಿತವು ಅವರ ಬಾಹುವಿನ ಮೇಲಿರುವುದು,
ಅದ್ಭುತವಾದವರು ಸಮಾಲೋಚಕರು,
ಪರಾಕ್ರಮಿಯಾದ ದೇವರು, ನಿತ್ಯರಾದ ತಂದೆ,
ಸಮಾಧಾನದ ಪ್ರಭು, ಎಂಬುದು ಅವರ ಹೆಸರಾಗಿರುವುದು.
O cuidado paterno de Deus
O Pai celestial sabe do que precisamos antes de pedirmos. Ele dá boas dádivas aos filhos que pedem e cuida até dos passarinhos.
ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ಕೂಡಿಡುವುದಿಲ್ಲ. ಆದರೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾರೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಲ್ಲವೇ?
ಒಂದು ರೂಪಾಯಿಗೆ ಎರಡು ಗುಬ್ಬಿಗಳನ್ನು ಮಾರುವುದಿಲ್ಲವೇ? ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ. ನಿಮ್ಮ ತಲೆಯ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಆದ್ದರಿಂದ ಭಯಪಡಬೇಡಿರಿ; ಅನೇಕ ಗುಬ್ಬಿಗಳಿಗಿಂತಲೂ ನೀವು ಎಷ್ಟೋ ಮೌಲ್ಯವುಳ್ಳವರು.
ಆದರೆ ನೀನು ಪ್ರಾರ್ಥನೆ ಮಾಡುವಾಗ, ನಿನ್ನ ಕೋಣೆಯೊಳಗೆ ಹೋಗಿ, ಬಾಗಿಲನ್ನು ಮುಚ್ಚಿ ಅದೃಶ್ಯವಾಗಿರುವ ನಿನ್ನ ತಂದೆಗೆ ಪ್ರಾರ್ಥನೆ ಸಲ್ಲಿಸು. ಆಗ ರಹಸ್ಯದಲ್ಲಿ ನಡೆಯುವುದನ್ನು ಕಾಣುವ ನಿನ್ನ ತಂದೆ ನಿನಗೆ ಪ್ರತಿಫಲ ಕೊಡುವರು.
ಆದರೆ ನೀನು ಉಪವಾಸ ಮಾಡುವಾಗ, ತಲೆಗೆ ಎಣ್ಣೆ ಹಚ್ಚಿಕೊಂಡು, ಮುಖ ತೊಳೆದುಕೋ. ಹೀಗೆ ಮಾಡಿದರೆ, ಕಾಣದಿರುವ ನಿನ್ನ ತಂದೆಯ ಹೊರತು ಬೇರೆ ಯಾರಿಗೂ ನೀನು ಉಪವಾಸದಿಂದಿರುವುದು ತಿಳಿಯುವುದಿಲ್ಲ ಮತ್ತು ಗುಟ್ಟಾಗಿ ಮಾಡುವುದನ್ನು ಕಾಣುವ ನಿನ್ನ ತಂದೆ, ನಿನಗೆ ಪ್ರತಿಫಲ ಕೊಡುವರು.
"ನಿಮ್ಮಲ್ಲಿ ತಂದೆಯಾಗಿರುವಾತನು, ತನ್ನ ಮಗನು ರೊಟ್ಟಿಯನ್ನು ಕೇಳಿದರೆ ಮಗನಿಗೆ ಕಲ್ಲನ್ನು ಕೊಡುವನೇ, ಮೀನನ್ನು ಕೇಳಿದರೆ, ಮೀನಿಗೆ ಬದಲಾಗಿ ಹಾವನ್ನು ಕೊಡುವನೇ? ಇಲ್ಲವೆ ಮೊಟ್ಟೆಯನ್ನು ಕೇಳಿದರೆ, ಅವನಿಗೆ ಚೇಳನ್ನು ಕೊಡುವನೇ? ಹಾಗಾದರೆ ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯವುಗಳನ್ನು ಕೊಡಬಲ್ಲವರಾದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತಮ್ಮನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮರನ್ನು ದಯಪಾಲಿಸುವರಲ್ಲವೇ!" ಎಂದು ನಾನು ನಿಮಗೆ ಹೇಳುತ್ತೇನೆ ಎಂದರು.
"ಚಿಕ್ಕ ಹಿಂಡೇ, ಭಯಪಡಬೇಡ, ಏಕೆಂದರೆ ನಿಮ್ಮ ತಂದೆಯು ತಮ್ಮ ರಾಜ್ಯವನ್ನು ನಿಮಗೆ ಕೊಡುವುದಕ್ಕೆ ಮೆಚ್ಚಿದ್ದಾರೆ.
ಎಲ್ಲಾ ಉತ್ತಮ ಮತ್ತು ಪೂರ್ಣವಾದ ವರಗಳೂ ಮೇಲಿನಿಂದ ಬಂದವುಗಳೇ, ಅವು ಪರಲೋಕದ ಬೆಳಕಿನ ತಂದೆಯಿಂದ ಇಳಿದು ಬರುತ್ತವೆ. ಆ ತಂದೆಯು ಬದಲಾಗುವ ನೆರಳಿನಂತೆ ಬದಲಾಗುವವರಲ್ಲ.
ದೇವರು ತಮ್ಮ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೋಸ್ಕರ ಕ್ರಿಸ್ತ ಯೇಸುವನ್ನು ಕೊಟ್ಟ ಮೇಲೆ ನಮಗೆ ಉದಾರವಾಗಿ ಅವರೊಂದಿಗೆ ಎಲ್ಲವನ್ನು ಸಹ ಕೊಡದೆ ಇರುವರೇ?
Conhecer o Pai
Jesus é o caminho para o Pai. Ninguém conhece o Pai senão o Filho e aquele a quem o Filho quiser revelar.
ಯೇಸು ಅವನಿಗೆ, "ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರಲಾರರು.
ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ. ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ.
ನನ್ನ ಹೆಸರಿನಲ್ಲಿ ನೀವು ಏನೇನು ಕೇಳಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ತಂದೆಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು.
ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಗೊಳ್ಳುವವರೇ ನನ್ನನ್ನು ಪ್ರೀತಿಸುವವರು. ನನ್ನನ್ನು ಪ್ರೀತಿಸುವವನು ತನ್ನ ತಂದೆಗೆ ಪ್ರಿಯನಾಗಿರುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಿಸಿಕೊಳ್ಳುವೆನು," ಎಂದು ಹೇಳಿದರು.
ಯೇಸು ಅವನಿಗೆ, "ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ಅವನು ನನ್ನ ವಾಕ್ಯವನ್ನು ಕೈಗೊಳ್ಳುವನು. ನನ್ನ ತಂದೆಯು ಅವನನ್ನು ಪ್ರೀತಿಸುವರು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಿವಾಸಮಾಡಿಕೊಳ್ಳುವೆವು.
ದೇವರನ್ನು ಯಾರೂ ಎಂದೂ ಕಂಡಿಲ್ಲ; ತಂದೆ ದೇವರ ಹೃದಯಕ್ಕೆ ಹತ್ತಿರವಾಗಿರುವ ಏಕೈಕ ಪುತ್ರ ಆಗಿರುವವರೂ ಸ್ವತಃ ದೇವರೂ ಆಗಿರುವವರೂ ತಂದೆಯನ್ನು ಪ್ರಕಟಪಡಿಸಿದ್ದಾರೆ.
ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದಿಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು. ಅವುಗಳನ್ನು ನನಗೆ ಕೊಟ್ಟ ನನ್ನ ತಂದೆ ಎಲ್ಲರಿಗಿಂತಲೂ ಮಹೋನ್ನತರು. ನನ್ನ ತಂದೆಯ ಕೈಯಿಂದ ಅವುಗಳನ್ನು ಯಾರೂ ಕಸಿದುಕೊಳ್ಳಲಾರರು. ನಾನು ಮತ್ತು ನನ್ನ ತಂದೆ ಒಂದೇ ಆಗಿದ್ದೇವೆ," ಎಂದು ಉತ್ತರಕೊಟ್ಟರು.
"ತಂದೆಯೇ, ನೀವು ನನಗೆ ಕೊಟ್ಟವರು ನಾನಿರುವಲ್ಲಿಯೇ ನನ್ನೊಂದಿಗೆ ಇದ್ದುಕೊಂಡು ಜಗದುತ್ಪತ್ತಿಗೆ ಮುಂಚೆ ನೀವು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ಕಾಣಬೇಕೆಂದು ನಾನು ಅಪೇಕ್ಷಿಸುತ್ತೇನೆ.
"ನನ್ನ ತಂದೆ ಎಲ್ಲವನ್ನೂ ನನಗೆ ಒಪ್ಪಿಸಿದ್ದಾರೆ. ತಂದೆಯ ಹೊರತು ಬೇರೆ ಯಾರೂ ಪುತ್ರನನ್ನು ಅರಿಯರು ಮತ್ತು ಪುತ್ರನು ಯಾರಿಗೆ ತಂದೆಯನ್ನು ಪ್ರಕಟಪಡಿಸಲು ಇಷ್ಟಪಡುತ್ತಾನೋ ಅವರೇ ಹೊರತು ಯಾರೂ ತಂದೆಯನ್ನು ಅರಿಯರು.
ಆದ್ದರಿಂದ, ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ.
"ಆದರೆ ನೀವು, ‘ಬೋಧಕರು,’ ಎಂದು ಕರೆಯಿಸಿಕೊಳ್ಳಬೇಡಿರಿ. ಏಕೆಂದರೆ ನಿಮಗಿರುವ ಬೋಧಕರು ಒಬ್ಬರೇ ನೀವೆಲ್ಲರೂ ಸಹೋದರರು. ಭೂಮಿಯಲ್ಲಿ ಯಾರನ್ನೂ ‘ತಂದೆ’ ಎಂದು ಕರೆಯಬೇಡಿರಿ, ಪರಲೋಕದಲ್ಲಿ ಇರುವವರೇ ನಿಮ್ಮ ತಂದೆ.
ನಾನು ಈಗ ನನ್ನ ತಂದೆಗೆ ಕೇಳಿಕೊಂಡರೆ ಅವರು ಈಗಲೇ ಹನ್ನೆರಡು ದಳಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡಲಾರರೆಂದು ನೀನು ನೆನಸುತ್ತೀಯಾ?
ನಿಮ್ಮ ತಂದೆಯು ಕರುಣೆಯುಳ್ಳವರಾಗಿರುವ ಪ್ರಕಾರ, ನೀವೂ ಕರುಣೆಯುಳ್ಳವರಾಗಿರಿ.
ನಮ್ಮ ತಂದೆ ದೇವರಿಗೆ ನಿರಂತರವೂ ಮಹಿಮೆಯಾಗಲಿ. ಆಮೆನ್.
Disciplina e amor paterno
O Pai disciplina os filhos que ama. A correção divina produz fruto de justiça e paz para aqueles que foram exercitados por ela.
ಶಿಸ್ತಿಗಾಗಿ ಕಷ್ಟವನ್ನು ನೀವು ಸಹಿಸಿಕೊಳ್ಳಬೇಕು. ದೇವರು ನಿಮ್ಮನ್ನು ಮಕ್ಕಳೆಂದು ನಡೆಸಿಕೊಳ್ಳುತ್ತಾರೆ. ಏಕೆಂದರೆ ತಂದೆಯಿಂದ ಶಿಸ್ತುಹೊಂದದ ಮಕ್ಕಳೆಲ್ಲಿ? ನೀವು ಶಿಕ್ಷೆ ಹೊಂದುವವರೆಲ್ಲರೊಂದಿಗೆ ಪಾಲುಗಾರರಾಗಿರದಿದ್ದರೆ, ನೀವು ಅಕ್ರಮವಾಗಿ ಹುಟ್ಟಿದ ಮಕ್ಕಳೇ ಹೊರತು ನಿಜ ಮಕ್ಕಳಲ್ಲ. ಇದು ಮಾತ್ರವಲ್ಲದೆ, ನಮ್ಮನ್ನು ಶಿಕ್ಷಿಸಿದ ಇಹಲೋಕದ ಶಾರೀರಿಕ ತಂದೆಗಳನ್ನು ನಾವು ಸನ್ಮಾನಿಸಿದೆವಷ್ಟೆ. ಆತ್ಮಗಳಿಗೆ ತಂದೆಯಾದ ದೇವರಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ? ನಮ್ಮ ತಂದೆಯಾದವರು ತಮಗೆ ಒಳ್ಳೆಯದೆಂದು ತಿಳಿದಾಗ, ಸ್ವಲ್ಪಕಾಲ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ತಮ್ಮ ಪವಿತ್ರತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಒಳ್ಳೆಯದಕ್ಕಾಗಿಯೇ ಶಿಕ್ಷಿಸುತ್ತಾರೆ.
ಮಗನೇ, ಯೆಹೋವ ದೇವರ ಶಿಕ್ಷೆಯನ್ನು ತಾತ್ಸಾರ ಮಾಡಬೇಡ;
ಅವರು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.
ಏಕೆಂದರೆ ತಂದೆಯು ತನ್ನ ಮುದ್ದುಮಗನನ್ನು ಶಿಕ್ಷಿಸುವಂತೆ,
ಯೆಹೋವ ದೇವರು ಯಾರನ್ನು ಪ್ರೀತಿಸುತ್ತಾರೋ, ಅವರನ್ನು ಶಿಸ್ತುಗೊಳಿಸುವರು.
ಮಗನೇ, ಯೆಹೋವ ದೇವರ ಶಿಕ್ಷೆಯನ್ನು ತಾತ್ಸಾರ ಮಾಡಬೇಡ;
ಅವರು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.
ಏಕೆಂದರೆ ತಂದೆಯು ತನ್ನ ಮುದ್ದುಮಗನನ್ನು ಶಿಕ್ಷಿಸುವಂತೆ,
ಯೆಹೋವ ದೇವರು ಯಾರನ್ನು ಪ್ರೀತಿಸುತ್ತಾರೋ, ಅವರನ್ನು ಶಿಸ್ತುಗೊಳಿಸುವರು.
Pais terrenos
A Bíblia honra os pais que criam os filhos nos caminhos de Deus. Honrar pai e mãe é mandamento com promessa de vida longa.
ಮಕ್ಕಳೇ, ನೀವು ಕರ್ತನಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಇದು ಸೂಕ್ತವಾದದ್ದು. "ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು," ಎಂಬುದು ವಾಗ್ದಾನ ಸಹಿತವಾದ ಮೊದಲನೆಯ ಆಜ್ಞೆಯಾಗಿದೆ. "ಸನ್ಮಾನಿಸಿದರೆ ನಿನಗೆ ಶುಭವಾಗುವುದು. ನೀನು ಭೂಮಿಯ ಮೇಲೆ ಬಹುಕಾಲ ಬದುಕುವೆ."
ತಂದೆಗಳೇ, ನಿಮ್ಮ ಮಕ್ಕಳನ್ನು ಸಿಟ್ಟಿಗೆಬ್ಬಿಸಬೇಡಿರಿ; ಕರ್ತನ ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಮಕ್ಕಳನ್ನು ಬೆಳೆಸಿರಿ.
ತಂದೆಗಳೇ, ನಿಮ್ಮ ಮಕ್ಕಳನ್ನು ಸಿಟ್ಟಿಗೆಬ್ಬಿಸಬೇಡಿರಿ; ಕರ್ತನ ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಮಕ್ಕಳನ್ನು ಬೆಳೆಸಿರಿ.
ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನೀನು ಬಹುಕಾಲ ಬಾಳುವಂತೆ ನಿನ್ನ ತಂದೆತಾಯಿಗಳನ್ನು ಗೌರವಿಸು.
ಪಾಪ ಸಂಬಧಿತ ಎಚ್ಚರಿಕೆ
ಮಗನೇ, ನಿನ್ನ ತಂದೆಯ ಶಿಕ್ಷಣಗಳನ್ನು ಕೇಳು,
ನಿನ್ನ ತಾಯಿಯ ಉಪದೇಶವನ್ನು ತೊರೆಯಬೇಡ.
ಅವು ನಿನ್ನ ತಲೆಗೆ ಸುಂದರ ಕಿರೀಟ
ನಿನ್ನ ಕೊರಳನ್ನು ಅಲಂಕರಿಸುವ ಹಾರ.
ನೀತಿವಂತನ ತಂದೆಯು ಬಹಳವಾಗಿ ಸಂತೋಷಪಡುವನು;
ಜ್ಞಾನಿಯಾದ ಮಗುವನ್ನು ಪಡೆದವನಿಗೆ ಅವನಿಂದ ಆನಂದವಾಗುವುದು.
ಮೂರ್ಖನು ತನ್ನ ತಂದೆಯ ಶಿಸ್ತನ್ನು ತಿರಸ್ಕರಿಸುತ್ತಾನೆ.
ಆದರೆ ಜಾಣನು ಗದರಿಕೆಯನ್ನು ಲಕ್ಷಿಸುವನು.
ಮಕ್ಕಳ ಮಕ್ಕಳು ವೃದ್ಧರಿಗೆ ಕಿರೀಟ;
ಮಕ್ಕಳ ಭೂಷಣವು ಅವರ ತಂದೆತಾಯಿಗಳೇ.
ತನ್ನ ತಂದೆಯನ್ನಾಗಲಿ, ತನ್ನ ತಾಯಿಯನ್ನಾಗಲಿ ಶಪಿಸುವವನ
ದೀಪವು ಮಧ್ಯರಾತ್ರಿಯ ಕತ್ತಲೆಯಲ್ಲಿ ಆರಿಹೋಗುವುದು.
ಮಕ್ಕಳೇ, ಎಲ್ಲಾ ವಿಧಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ. ಏಕೆಂದರೆ ಇದು ಕರ್ತ ಯೇಸುವಿಗೆ ಬಹು ಮೆಚ್ಚಿಕೆಯಾಗಿದೆ.
ತಂದೆಯರೇ, ನಿಮ್ಮ ಮಕ್ಕಳನ್ನು ರೇಗಿಸಬೇಡಿರಿ. ಹಾಗೆ ಮಾಡಿದರೆ, ಅವರು ನಿರಾಶರಾಗುವರು.
ಮಕ್ಕಳು ಯೆಹೋವ ದೇವರು ಕೊಟ್ಟ ಸೊತ್ತು.
ಗರ್ಭಫಲವು ದೇವರ ಬಹುಮಾನ.
ಯೌವನದಲ್ಲಿ ಹುಟ್ಟಿದ ಮಕ್ಕಳು,
ಯುದ್ಧವೀರನ ಕೈಯಲ್ಲಿಯ ಬಾಣಗಳಂತಿದ್ದಾರೆ.
ಬಾಣಗಳನ್ನು ಬತ್ತಳಿಕೆಯಿಂದ
ತುಂಬಿಸಿಕೊಂಡಿರುವವರು ಧನ್ಯರು,
ಶತ್ರುಗಳ ಸಂಗಡ ನ್ಯಾಯಾಲಯದಲ್ಲಿ ವಾದಿಸುವಾಗ
ಅವರು ನಾಚಿಕೆಪಡರು.
ಜೀವಂತನು; ಜೀವಂತನೇ ನಿನ್ನನ್ನು ಸ್ತುತಿಸುವೆನು.
ಹೌದು, ಜೀವಂತನಾದ
ನಾನೇ ಈ ಹೊತ್ತು ನಿಮ್ಮನ್ನು ಹೊಗಳುವೆನು.
ತಂದೆಯು ಮಕ್ಕಳಿಗೆ ನಿಮ್ಮ ನಿಷ್ಠೆಯನ್ನು ಬೋಧಿಸುವನು.
ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆಯ ಪಾಪಕ್ಕಾಗಿ ಮಕ್ಕಳಿಗಾಗಲಿ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪದ ನಿಮಿತ್ತವೇ ಮರಣಶಿಕ್ಷೆಯನ್ನು ಹೊಂದಬೇಕು.
ದೇವರ ಮಕ್ಕಳ ಪ್ರತ್ಯಕ್ಷತೆಯನ್ನು ಸೃಷ್ಟಿಯು ಆತುರದಿಂದ ಎದುರು ನೋಡುತ್ತಿದೆ.
ತಂದೆಗಳೇ, ಆದಿಯಿಂದ ಇರುವ ದೇವರನ್ನು ನೀವು ಬಲ್ಲವರಾಗಿರುವುದರಿಂದ
ನಾನು ನಿಮಗೆ ಬರೆಯುತ್ತೇನೆ.
ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವುದರಿಂದ
ನಿಮಗೆ ಬರೆಯುತ್ತೇನೆ.
ಮಕ್ಕಳೇ, ನೀವು ತಂದೆಯನ್ನು ತಿಳಿದುಕೊಂಡಿರುವುದರಿಂದ
ನಿಮಗೆ ಬರೆಯುತ್ತೇನೆ.
ತಂದೆಗಳೇ, ಆದಿಯಿಂದ ಇರುವ ದೇವರನ್ನು
ನೀವು ಬಲ್ಲವರಾಗಿರುವುದರಿಂದ ನಿಮಗೆ ಬರೆದಿದ್ದೇನೆ.
ಯೌವನಸ್ಥರೇ, ನೀವು ಬಲ ಹೊಂದಿರುವುದರಿಂದಲೂ
ದೇವರ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದಲೂ
ನೀವು ಕೆಡುಕನನ್ನು ಜಯಿಸಿರುವುದರಿಂದಲೂ
ನಿಮಗೆ ಬರೆದಿದ್ದೇನೆ.
ಲೋಕವನ್ನು ಪ್ರೀತಿಸಬೇಡಿರಿ
ಲೋಕವನ್ನಾಗಲಿ, ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ.