A paixão de Cristo
A paixão de Cristo é o ato de amor supremo da história. Jesus sofreu voluntariamente a cruz, carregando os pecados da humanidade para nos dar vida eterna.
O caminho da cruz
Jesus sabia o que o aguardava. Mesmo em agonia, submeteu-se à vontade do Pai e caminhou resolutamente para o Calvário.
ಯೇಸು ತನ್ನ ಮರಣವನ್ನು ಮತ್ತು ಪುನರುತ್ಥಾನವನ್ನು ಮುಂತಿಳಿಸಿದು
ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು.
ಮತ್ತು ಅವರಿಗೆ, "ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನ ಸಂಗಡ ಎಚ್ಚರವಾಗಿರಿ" ಎಂದು ಹೇಳಿದನು.
ಆತನು ತನ್ನನ್ನು ತಗ್ಗಿಸಿಕೊಂಡು ಮರಣವನ್ನು ಅಂದರೆ
ಶಿಲುಬೆಯ ಮರಣವನ್ನಾದರೂ ಹೊಂದುವಷ್ಟು ವಿಧೇಯನಾದನು.
ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ, ಮರಣ ಭಯದಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವುದಕ್ಕೂ ಅವರಂತೆ ರಕ್ತಮಾಂಸಧಾರಿಯಾದನು.
O sacrifício voluntário
Ninguém tirou a vida de Jesus — Ele a deu voluntariamente. Ele veio para servir e dar a sua vida em resgate por muitos.
ತಂದೆಯು ನನ್ನನ್ನು ಪ್ರೀತಿಸುತ್ತಾನೆ ಏಕೆಂದರೆ, ನಾನು ನನ್ನ ಪ್ರಾಣವನ್ನು ಮರಳಿ ಪಡೆದುಕೊಳ್ಳುವಂತೆ ಅದನ್ನು ಕೊಡುತ್ತಿದ್ದೇನೆ. ನನ್ನ ಪ್ರಾಣವನ್ನು ಯಾರೂ ನನ್ನಿಂದ ತೆಗೆದುಕೊಳ್ಳುವುದಿಲ್ಲ. ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ಅದನ್ನು ಕೊಡುವುದಕ್ಕೆ ನನಗೆ ಅಧಿಕಾರ ಉಂಟು. ಅದನ್ನು ಪುನಃ ಪಡೆದುಕೊಳ್ಳುವುದಕ್ಕೂ ನನಗೆ ಅಧಿಕಾರವಿದೆ. ಈ ಆಜ್ಞೆಯನ್ನು ನಾನು ನನ್ನ ತಂದೆಯಿಂದ ಹೊಂದಿದ್ದೇನೆ" ಎಂದನು.
ಮನುಷ್ಯಕುಮಾರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಬರಲಿಲ್ಲ, ಸೇವೆಮಾಡುವುದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವುದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವುದಕ್ಕಾಗಿ ಬಂದನು" ಎಂದು ಹೇಳಿದನು.
ಆಗ ಮುಖ್ಯಯಾಜಕರು ಮತ್ತು ಹಿರೀಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಆತನ ವಿರುದ್ಧವಾಗಿ ಸಾಕ್ಷಿ ಹುಡುಕುತ್ತಾ ಇದ್ದರು. ಆದರೆ ಅವರಿಗೆ ಸರಿಯಾದ ಒಂದು ಸಾಕ್ಷ್ಯವೂ ದೊರಕಲಿಲ್ಲ.
ಆದರೆ ನಾವು ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ.
ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿದ್ದೀರಿ. ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ಆತನ ಹೆಜ್ಜೆಯ ಜಾಡಿಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿ ಹೋದನು. ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ. ಬಯ್ಯುವವರನ್ನು ಆತನು ಪ್ರತಿಯಾಗಿ ಬಯ್ಯಲಿಲ್ಲ, ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ, ನ್ಯಾಯವಾಗಿ ತೀರ್ಪು ಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು. ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.
ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು,
ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.
ನಿಜವಾಗಿಯೂ ನಮ್ಮ ವ್ಯಾಧಿಗಳನ್ನು ಸಂಕಷ್ಟವನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ ಹೌದು,
ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು.
ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿಮಿತ್ತ ಅವನು ಜಜ್ಜಲ್ಪಟ್ಟನು;
ನಮಗೆ ಸುಕ್ಷೇಮವನ್ನು ಉಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು.