A paixão de Cristo
A paixão de Cristo é o ato de amor supremo da história. Jesus sofreu voluntariamente a cruz, carregando os pecados da humanidade para nos dar vida eterna.
O caminho da cruz
Jesus sabia o que o aguardava. Mesmo em agonia, submeteu-se à vontade do Pai e caminhou resolutamente para o Calvário.
ಯೇಸು ತಮ್ಮ ಮರಣವನ್ನು ಮುಂತಿಳಿಸಿದ್ದು
ತಾವು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ಬಹು ಕಷ್ಟಗಳನ್ನು ಅನುಭವಿಸಿ ಕೊಲೆಗೀಡಾಗಿ ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದು ಬರುವುದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತಮ್ಮ ಶಿಷ್ಯರಿಗೆ ತಿಳಿಸಲಾರಂಭಿಸಿದರು.
ಯೇಸು ಅವರಿಗೆ, "ನನ್ನ ಪ್ರಾಣವು ಸಾಯುವಷ್ಟು ತೀವ್ರವಾದ ದುಃಖಕ್ಕೆ ಒಳಗಾಗಿದೆ. ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರಿ," ಎಂದರು.
ಹೀಗೆ ಅವರು ಆಕಾರದಲ್ಲಿ ಮನುಷ್ಯರಾಗಿ ಕಾಣಿಸಿಕೊಂಡಾಗ
ತಮ್ಮನ್ನು ತಾವೇ ತಗ್ಗಿಸಿಕೊಂಡು
ಮರಣವನ್ನು ಎಂದರೆ ಶಿಲುಬೆಯ
ಮರಣವನ್ನೂ ಹೊಂದುವಷ್ಟು ವಿಧೇಯರಾದರು.
ಮಕ್ಕಳು ರಕ್ತಮಾಂಸಧಾರಿಗಳು ಆಗಿರುವುದರಿಂದ ಯೇಸು ತಮ್ಮ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ, ಸೈತಾನನನ್ನು ನಾಶಮಾಡುವುದಕ್ಕೂ ಮರಣ ಭಯದಿಂದ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವುದಕ್ಕೂ ಅವರ ಮಾನವತ್ವದಲ್ಲಿ ಪಾಲುಗಾರರಾದರು.
O sacrifício voluntário
Ninguém tirou a vida de Jesus — Ele a deu voluntariamente. Ele veio para servir e dar a sua vida em resgate por muitos.
ಮರಳಿ ಪಡೆಯುವಂತೆ ನನ್ನ ಪ್ರಾಣವನ್ನು ನಾನು ಕೊಡುವುದರಿಂದ ನನ್ನ ತಂದೆಯು ನನ್ನನ್ನು ಪ್ರೀತಿಸುತ್ತಾರೆ. ಯಾರೂ ನನ್ನ ಪ್ರಾಣವನ್ನು ನನ್ನಿಂದ ತೆಗೆಯುವುದಿಲ್ಲ. ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುವೆನು. ನಾನು ಅದನ್ನು ಕೊಡುವುದಕ್ಕೆ ನನಗೆ ಅಧಿಕಾರವಿದೆ. ಅದನ್ನು ಪುನಃ ತೆಗೆದುಕೊಳ್ಳುವುದಕ್ಕೂ ನನಗೆ ಅಧಿಕಾರವಿದೆ. ಈ ಆಜ್ಞೆಯನ್ನು ನಾನು ನನ್ನ ತಂದೆಯಿಂದ ಪಡೆದಿದ್ದೇನೆ," ಎಂದರು.
ಮನುಷ್ಯಪುತ್ರನಾದ ನಾನು ಸಹ ಸೇವೆಮಾಡಿಸಿಕೊಳ್ಳುವುದಕ್ಕಾಗಿ ಅಲ್ಲ, ಸೇವೆಮಾಡುವುದಕ್ಕಾಗಿಯೂ ಅನೇಕರಿಗಾಗಿ ನನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕಾಗಿಯೂ ಬಂದಿದ್ದೇನೆ," ಎಂದು ಹೇಳಿದರು.
ಮುಖ್ಯಯಾಜಕರೂ ಆಲೋಚನಾ ಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಅವರ ವಿರೋಧವಾಗಿ ಸಾಕ್ಷಿಯನ್ನು ಹುಡುಕಿದರು. ಆದರೆ ಒಂದು ಸಾಕ್ಷಿಯೂ ಸಿಗಲಿಲ್ಲ.
ಆದರೆ ಕ್ರಿಸ್ತ ಯೇಸು ನಾವು ಇನ್ನೂ ಪಾಪಿಗಳಾಗಿದ್ದಾಗಲೇ ನಮಗೋಸ್ಕರ ಪ್ರಾಣ ಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ಇಟ್ಟಿರುವ ತಮ್ಮ ಪ್ರೀತಿಯನ್ನು ತೋರಿಸಿದ್ದಾರೆ.
ಇದಕ್ಕಾಗಿಯೇ ನಿಮ್ಮನ್ನು ಕರೆಯಲಾಯಿತು: ಕ್ರಿಸ್ತ ಯೇಸು ಸಹ ನಮಗೋಸ್ಕರ ಬಾಧೆಯನ್ನು ಅನುಭವಿಸಿ ತಮ್ಮ ಹೆಜ್ಜೆಯ ಜಾಡಿನಲ್ಲಿ ನೀವು ನಡೆಯಬೇಕೆಂದು ಆದರ್ಶವನ್ನು ಬಿಟ್ಟುಹೋದರು.
"ಕ್ರಿಸ್ತ ಯೇಸುವು ಯಾವ ಪಾಪವನ್ನೂ ಮಾಡಲಿಲ್ಲ,
ಅವರ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ."
ಬೈಯ್ಯುವವರನ್ನು ಅವರು ಪ್ರತಿಯಾಗಿ ಬೈಯಲಿಲ್ಲ. ಅವರು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವ ತಂದೆಗೆ ತಮ್ಮನ್ನು ಒಪ್ಪಿಸಿದರು. ನಾವು ನಮ್ಮ ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಕ್ರಿಸ್ತ ಯೇಸು ಶಿಲುಬೆಯ ಮೇಲೆ, "ನಮ್ಮ ಪಾಪಗಳನ್ನು ತಾವೇ ತಮ್ಮ ದೇಹದಲ್ಲಿ ಹೊತ್ತರು. ಅವರ ಗಾಯಗಳಿಂದ ನಿಮಗೆ ಗುಣವಾಯಿತು."
ಆತನು ತಿರಸ್ಕೃತನೂ ಮಾನವಕುಲದಿಂದ ನಿರಾಕರಿಸಲಾದವನೂ,
ದುಃಖಿತ ಮನುಷ್ಯನೂ, ನೋವನ್ನು ಅನುಭವಿಸಿದವನೂ ಆಗಿದ್ದನು.
ನಾವು ನಮ್ಮ ಮುಖಗಳನ್ನು ಆತನಿಂದ ಮರೆಮಾಡಿಕೊಂಡೆವು.
ಆತನು ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಆತನನ್ನು ಅತ್ಯಲ್ಪವಾಗಿ ಎಣಿಸಿದೆವು.
ನಿಶ್ಚಯವಾಗಿಯೂ ಆತನು ನಮ್ಮ ನೋವನ್ನು ತೆಗೆದುಕೊಂಡನು;
ಹೌದು, ನಮ್ಮ ದುಃಖಗಳನ್ನು ಸಹ ಹೊತ್ತುಕೊಂಡನು.
ಆದರೂ ನಾವು ಆತನನ್ನು ಪೆಟ್ಟು ತಿಂದವನು,
ದೇವರಿಂದ ಶಿಕ್ಷೆಹೊಂದಿದವನು, ಬಾಧೆಪಟ್ಟವನು ಎಂದು ಭಾವಿಸಿಕೊಂಡೆವು.
ನಮ್ಮ ಉಲ್ಲಂಘನೆಗಳಿಗಾಗಿ ಆತನು ತಿವಿತಕ್ಕೆ ಒಳಗಾದನು.
ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಿಹೋದನು.
ನಮಗೆ ಸಮಾಧಾನವನ್ನು ತಂದ ದಂಡನೆಯು ಆತನ ಮೇಲಿತ್ತು.
ಆತನ ಗಾಯಗಳಿಂದ ನಮಗೆ ಗುಣವಾಯಿತು.