Palavras de conforto
Deus é o Deus de todo conforto. Ele consola os que choram, restaura os quebrantados e promete que a dor presente dará lugar à alegria eterna.
O Deus de toda consolação
Bendito seja o Deus e Pai de nosso Senhor Jesus Cristo, Pai das misericórdias e Deus de toda consolação, que nos consola em todas as tribulações.
ಪೌಲನು ತನಗೆ ಉಂಟಾದ ಆದರಣೆಯಿಂದ ಅನೇಕರಿಗೆ ಉಪಯೋಗ ಉಂಟಾಗುವುದೆಂದು ಹೇಳಿದ್ದು
ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವ ದೇವರೂ ಆಗಿದ್ದು, ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲ್ಲಿ ನಮ್ಮನ್ನು ಸಂತೈಸುವವನಾಗಿದ್ದಾನೆ. ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಬಿದ್ದಿರುವವರನ್ನು ಸಂತೈಸುವುದಕ್ಕೆ ಶಕ್ತರಾಗುತ್ತೇವೆ.
ಪೌಲನು ತನಗೆ ಉಂಟಾದ ಆದರಣೆಯಿಂದ ಅನೇಕರಿಗೆ ಉಪಯೋಗ ಉಂಟಾಗುವುದೆಂದು ಹೇಳಿದ್ದು
ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವ ದೇವರೂ ಆಗಿದ್ದು, ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲ್ಲಿ ನಮ್ಮನ್ನು ಸಂತೈಸುವವನಾಗಿದ್ದಾನೆ. ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಬಿದ್ದಿರುವವರನ್ನು ಸಂತೈಸುವುದಕ್ಕೆ ಶಕ್ತರಾಗುತ್ತೇವೆ. ಏಕೆಂದರೆ ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಕ್ರಿಸ್ತನ ಮೂಲಕವಾಗಿ ಹೆಚ್ಚಾದ ಆದರಣೆಯೂ ನಮಗೆ ದೊರೆಯುತ್ತದೆ. ನಾವು ಕಷ್ಟಗಳನ್ನನುಭವಿಸುವುದರಿಂದ ನಿಮಗೆ ಆದರಣೆಯೂ, ರಕ್ಷಣೆಯೂ ಉಂಟಾಗುತ್ತದೆ. ನಾವು ಸಮಾಧಾನದಿಂದಿರುವುದಾದರೆ ಅದರಿಂದ ನಿಮಗೆ ಆದರಣೆ ಆಗುತ್ತದೆ. ನಾವು ಅನುಭವಿಸುವಂಥ ಬಾಧೆಗಳನ್ನು ನೀವೂ ತಾಳ್ಮೆಯಿಂದ ಸಹಿಸಿಕೊಳ್ಳುವಂತೆ ಅದು ನಿಮ್ಮನ್ನು ಧೈರ್ಯಗೊಳಿಸುತ್ತದೆ. ನೀವು ಬಾಧೆಗಳಲ್ಲಿ ನಮ್ಮೊಂದಿಗೆ ಪಾಲುಗಾರರಾಗಿರುವ ಪ್ರಕಾರವೇ ಆದರಣೆಯೂ ಪಾಲುಗಾರರಾಗಿದ್ದೀರೆಂದು ತಿಳಿದಿರುವುದರಿಂದ ನಿಮ್ಮ ವಿಷಯದಲ್ಲಿ ನಮಗಿರುವ ನಿರೀಕ್ಷೆಯು ದೃಢವಾಗಿದೆ.
ಏಕೆಂದರೆ ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಕ್ರಿಸ್ತನ ಮೂಲಕವಾಗಿ ಹೆಚ್ಚಾದ ಆದರಣೆಯೂ ನಮಗೆ ದೊರೆಯುತ್ತದೆ.
ಆತನು ಕುಗ್ಗಿಹೋದವನ ದುರವಸ್ಥೆಯನ್ನು ತಿರಸ್ಕರಿಸಲಿಲ್ಲ,
ಅದಕ್ಕೆ ಅಸಹ್ಯಪಡಲಿಲ್ಲ;
ತನ್ನ ಮುಖವನ್ನು ಅವನಿಗೆ ಮರೆಮಾಡದೆ,
ಅವನ ಪ್ರಾರ್ಥನೆಗೆ ಕಿವಿಗೊಟ್ಟನು.
ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ;
ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ.
Promessas de restauração
Deus sarará o quebrantado de coração e atará as suas feridas. Quem semeia em lágrimas, colherá com júbilo.
ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ,
ಅವರ ಗಾಯಗಳನ್ನು ಕಟ್ಟುತ್ತಾನೆ.
ಆತನ ಕೋಪವು ಕ್ಷಣಮಾತ್ರವೇ;
ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವುದು;
ಸಂಜೆಗೆ ದುಃಖವೆಂಬುದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ,
ಮುಂಜಾನೆ ಹರ್ಷಧ್ವನಿಯು ಕೇಳಿಸುವುದು.
ಯೆಹೋವನು ಭಕ್ತಪಾಲಕನೂ, ಸರ್ವಾಧಿಪತಿಯೂ ಎಂಬುದು
ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ;
ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು;
ಆತನು ನಿನ್ನನ್ನು ಉದ್ಧಾರಮಾಡುವನು.
ನೀತಿವಂತನನ್ನು ಎಂದಿಗೂ ಕದಲಗೊಡಿಸನು.
ನಾನು ದೇಶಭ್ರಷ್ಟನಾಗಿ ಅಲೆದಾಡಿದ್ದನ್ನು ನೀನೇ ಬಲ್ಲೆ.
ನನ್ನ ಕಣ್ಣೀರು ನಿನ್ನ ಬುದ್ದಲಿಯಲ್ಲಿ ತುಂಬಿದೆಯಲ್ಲಾ;
ಅದರ ವಿಷಯವಾಗಿ ನಿನ್ನ ಪುಸ್ತಕದಲ್ಲಿ ಬರೆದದೆಯಲ್ಲಾ.
ಯೆಹೋವನು ಕುಗ್ಗಿದವರಿಗೆ ಆಶ್ರಯವೂ,
ಆಪತ್ಕಾಲದಲ್ಲಿ ದುರ್ಗವೂ ಆಗಿರುವನು.
ಯೆಹೋವನು ನನ್ನ ಬಂಡೆಯು, ನನ್ನ ಕೋಟೆಯು,
ನನ್ನ ವಿಮೋಚಕನು, ನನ್ನ ದೇವರು, ನನ್ನ ಆಶ್ರಯಗಿರಿಯು,
ನನ್ನ ಗುರಾಣಿಯು, ನನ್ನ ರಕ್ಷಣೆಯ ಕೊಂಬು ಮತ್ತು ನನ್ನ ದುರ್ಗವು ಆಗಿದ್ದಾನೆ.
Paz e descanso
Jesus disse: 'Vinde a mim, todos os cansados e sobrecarregados, e eu vos aliviarei.' A paz de Deus que excede todo entendimento guarda o coração.
ಯೇಸುವಿನಿಂದ ವಿಶ್ರಾಂತಿಯ ಆಹ್ವಾನ
"ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು.
ಯೇಸುವಿನಿಂದ ವಿಶ್ರಾಂತಿಯ ಆಹ್ವಾನ
"ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು. ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.
ದುಃಖಪಡುವವರು ಧನ್ಯರು; ಅವರು ದೇವರಿಂದ ಸಮಾಧಾನ ಹೊಂದುವರು.
"ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.
ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ" ಎಂದು ಹೇಳಿದನು.
ಹಾಗೆಯೇ, ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರುಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವುದು, ಮತ್ತು ನಿಮ್ಮ ಆನಂದವನ್ನು ಯಾರು ನಿಮ್ಮಿಂದ ತೆಗೆದು ಹಾಕಲು ಸಾಧ್ಯವಿಲ್ಲ.
ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.
ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ, ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಪಾಡುವುದು.
Esperança eterna
Deus enxugará toda lágrima. A dor presente é momentânea, mas a glória futura é eterna. O Senhor transforma luto em dança.
ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, "ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು. ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು" ಎಂದು ಹೇಳಿತು.
ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, "ಇಗೋ, ನಾನು ಎಲ್ಲವನ್ನು ನೂತನಗೊಳಿಸುತ್ತೇನೆ" ಎಂದನು. ಮತ್ತು ಒಬ್ಬನು ನನಗೆ, "ನೀನು ಇದನ್ನು ಬರೆ. ಏಕೆಂದರೆ ಈ ಮಾತುಗಳು ನಂಬತಕ್ಕವೂ, ಸತ್ಯವಾದವೂ ಆಗಿವೆ" ಎಂದು ಹೇಳಿದನು.
ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.
ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.
ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು.
ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.
ಚೀಯೋನಿಗೆ ರಕ್ಷಣೆಯ ವಾಗ್ದಾನಗಳು
ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು;
ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,
ಯೆಹೋವನು ನೇಮಿಸಿರುವ ಶುಭವರ್ಷ, ನಮ್ಮ ದೇವರು ಮುಯ್ಯಿತೀರಿಸುವ ದಿನ ಇವುಗಳನ್ನು ಪ್ರಚುರಗೊಳಿಸುವುದಕ್ಕೂ,
ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ,
ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ.
ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.
ತಾಯಿ ಮಗನನ್ನು ಸಂತೈಸುವ ಪ್ರಕಾರ ನಾನು ನಿಮ್ಮನ್ನು ಸಂತೈಸುವೆನು;
ಯೆರೂಸಲೇಮಿನಲ್ಲೇ ನಿಮಗೆ ದುಃಖಶಮನವಾಗುವುದು.
Nunca sozinhos
Deus nunca nos abandona. Ele está ao nosso lado em cada vale, segura nossa mão e promete que o choro não durará para sempre.
ಯೆಹೋವನು ತಾನೇ ನಿನ್ನ ಮುಂದೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ; ಅಂಜಬೇಡ, ಧೈರ್ಯದಿಂದಿರು" ಎಂದು ಹೇಳಿದನು.
ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. "ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ" ಎಂದು ದೇವರು ತಾನೇ ಹೇಳಿದ್ದಾನೆ.
ಯೆಹೋವನು ತನ್ನ ಪ್ರಜೆಯನ್ನು ಬಾಧಿಸುವವರಿಗೆ ಮಾಡುವ ದಂಡನೆ
ಯೆಹೋವನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಆಶ್ರಯದುರ್ಗವಾಗಿದ್ದಾನೆ; ತನ್ನ ಮೊರೆಹೊಕ್ಕವರನ್ನು ಬಲ್ಲನು.
ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು;
ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು;
ತನ್ನ ಪ್ರೀತಿಯಲ್ಲಿ ನಿನ್ನ ಜೀವನವನ್ನು ನೂತನಗೊಳಿಸುವನು;
ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು.
ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.
ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.
ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ಒಳ್ಳೆದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿ ಕರ್ತನಿಗೆ ಒಪ್ಪಿಸಲಿ.
ಹೀಗಿರುವುದರಿಂದ ದೇವರ ಬಲವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ಎತ್ತುವನು. ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ.
ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ,
ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು;
ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.
ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ,
ಆತನ ಪ್ರಸನ್ನತೆಯನ್ನು ನೋಡುವುದಕ್ಕೂ,
ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ
ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು
ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು.
ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು;
ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು;
ಪರ್ವತಶಿಖರದ ಮೇಲೆ ನನ್ನನ್ನು ಸುರಕ್ಷಿತವಾಗಿ ನಿಲ್ಲಿಸುವನು.
ನಿನ್ನ ನುಡಿಯು ನನ್ನನ್ನು ಚೈತನ್ಯಗೊಳಿಸುತ್ತದೆ,
ಆಪತ್ಕಾಲದಲ್ಲಿ ಇದೇ ನನಗೆ ಆದರಣೆ.
ಹೀನಸ್ಥಿತಿಯವರನ್ನು ಉನ್ನತಸ್ಥಿತಿಗೆ ಏರಿಸಿ,
ದುಃಖಿಸುವವರನ್ನು ಸುರಕ್ಷಿತ ಸ್ಥಳಕ್ಕೆ ಕರೆತರುತ್ತಾನೆ.
ಅದಕ್ಕೆ ಯೇಸು, "ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ನನ್ನ ನಿಮಿತ್ತವೂ, ಸುವಾರ್ತೆಯ ನಿಮಿತ್ತವೂ ಮನೆಯನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಾಯಿಯನ್ನಾಗಲಿ, ತಂದೆಯನ್ನಾಗಲಿ, ಮಕ್ಕಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ಬಿಟ್ಟು ಬಿಟ್ಟಿರುವನೋ, ಅವನಿಗೆ ಈ ಕಾಲದಲ್ಲಿಯೇ ಮನೆ, ಸಹೋದರರು, ಸಹೋದರಿಯರು, ತಾಯಿ, ಮಕ್ಕಳು, ಹೊಲಗದ್ದೆಗಳು ಇವೆಲ್ಲವೂ ಹಿಂಸೆಗಳ ಸಹಿತವಾಗಿ ನೂರರಷ್ಟು ಸಿಕ್ಕೇ ಸಿಗುತ್ತವೆ ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು.
ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು, ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕಳುಹಿಸಿ ಕೊಡುವನು. ಆ ಸಹಾಯಕನು ಯಾರೆಂದರೆ ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ, ತಿಳಿಯದೆಯೂ ಇರುವುದರಿಂದ ಆತನನ್ನು ಸ್ವೀಕರಿಸಲಾರದು. ನೀವು ಆತನನ್ನು ಬಲ್ಲಿರಿ, ಹೇಗೆಂದರೆ ಆತನು ನಿಮ್ಮೊಂದಿಗೆ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.
"ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ, ನಿಮ್ಮ ಬಳಿಗೆ ಬರುತ್ತೇನೆ.