Palavras de conforto
Deus é o Deus de todo conforto. Ele consola os que choram, restaura os quebrantados e promete que a dor presente dará lugar à alegria eterna.
O Deus de toda consolação
Bendito seja o Deus e Pai de nosso Senhor Jesus Cristo, Pai das misericórdias e Deus de toda consolação, que nos consola em todas as tribulações.
ಸಂತೈಸುವ ದೇವರು
ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ಅವರು ಕರುಣೆಯುಳ್ಳ ತಂದೆಯೂ ಎಲ್ಲರನ್ನೂ ಆದರಿಸುವ ದೇವರೂ ಆಗಿದ್ದಾರೆ. ದೇವರು ನಮಗಾಗುವ ಎಲ್ಲಾ ಬಾಧೆಗಳಲ್ಲಿ ನಮ್ಮನ್ನು ಸಂತೈಸುವವರಾಗಿದ್ದಾರೆ. ಇತರರು ಬಾಧೆಗಳನ್ನು ಅನುಭವಿಸುತ್ತಿರುವಾಗ, ನಾವು ಸಹ ದೇವರಿಂದ ಹೊಂದಿರುವ ಸಂತೈಸುವಿಕೆಯಿಂದ ಅವರನ್ನು ಸಂತೈಸಲು ನಮ್ಮನ್ನು ಶಕ್ತರನ್ನಾಗಿ ಮಾಡಿದ್ದಾರೆ.
ಸಂತೈಸುವ ದೇವರು
ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ಅವರು ಕರುಣೆಯುಳ್ಳ ತಂದೆಯೂ ಎಲ್ಲರನ್ನೂ ಆದರಿಸುವ ದೇವರೂ ಆಗಿದ್ದಾರೆ. ದೇವರು ನಮಗಾಗುವ ಎಲ್ಲಾ ಬಾಧೆಗಳಲ್ಲಿ ನಮ್ಮನ್ನು ಸಂತೈಸುವವರಾಗಿದ್ದಾರೆ. ಇತರರು ಬಾಧೆಗಳನ್ನು ಅನುಭವಿಸುತ್ತಿರುವಾಗ, ನಾವು ಸಹ ದೇವರಿಂದ ಹೊಂದಿರುವ ಸಂತೈಸುವಿಕೆಯಿಂದ ಅವರನ್ನು ಸಂತೈಸಲು ನಮ್ಮನ್ನು ಶಕ್ತರನ್ನಾಗಿ ಮಾಡಿದ್ದಾರೆ. ಕ್ರಿಸ್ತ ಯೇಸುವಿನ ಸಂಕಟವು ನಮ್ಮಲ್ಲಿ ಹೇಗೆ ಅಧಿಕವಾಗಿದೆಯೋ ಹಾಗೆಯೇ, ಕ್ರಿಸ್ತ ಯೇಸುವಿನ ಮೂಲಕ ನಮ್ಮ ಸಂತೈಸುವಿಕೆಯೂ ನಮ್ಮಲ್ಲಿ ಅಧಿಕವಾಗಿರುತ್ತದೆ. ನಮಗೆ ಕಷ್ಟಸಂಕಟಗಳು ಬಂದರೆ, ಅದು ನಿಮ್ಮ ಆದರಣೆ ಮತ್ತು ರಕ್ಷಣೆಗೋಸ್ಕರವೇ ಇರುತ್ತದೆ. ನಾವು ಸಂತೈಸುವಿಕೆಯನ್ನು ಹೊಂದಿರುವುದಾದರೆ, ಅದು ನಿಮ್ಮ ಆದರಣೆಗಾಗಿಯೇ. ಆ ಆದರಣೆಯು ನಮ್ಮಂತೆ ನೀವು ಅನುಭವಿಸುವ ಕಷ್ಟಸಂಕಟಗಳನ್ನು ಸಹನೆಯಿಂದ ಅನುಭವಿಸುವಂತೆ ಮಾಡುವುದು. ನಿಮಗಾಗಿರುವ ನಮ್ಮ ನಿರೀಕ್ಷೆಯು ಸ್ಥಿರವಾಗಿದೆ. ಏಕೆಂದರೆ, ನಮ್ಮ ಕಷ್ಟಸಂಕಟಗಳಲ್ಲಿ ನೀವು ಪಾಲುಗಾರರಾಗಿದ್ದಂತೆಯೇ, ನಮ್ಮ ಸಂತೈಸುವಿಕೆಗಳಲ್ಲಿಯೂ ನೀವು ನಮ್ಮೊಂದಿಗೆ ಪಾಲುಗಾರರಾಗಿದ್ದೀರಿ ಎಂದು ನಮಗೆ ಗೊತ್ತಿದೆ.
ಕ್ರಿಸ್ತ ಯೇಸುವಿನ ಸಂಕಟವು ನಮ್ಮಲ್ಲಿ ಹೇಗೆ ಅಧಿಕವಾಗಿದೆಯೋ ಹಾಗೆಯೇ, ಕ್ರಿಸ್ತ ಯೇಸುವಿನ ಮೂಲಕ ನಮ್ಮ ಸಂತೈಸುವಿಕೆಯೂ ನಮ್ಮಲ್ಲಿ ಅಧಿಕವಾಗಿರುತ್ತದೆ.
ಏಕೆಂದರೆ ಸಂಕಟಪಡುವವನ ಸಂಕಟವನ್ನು
ಅವರು ತಿರಸ್ಕರಿಸಲಿಲ್ಲ, ಅಸಹ್ಯಪಡಲಿಲ್ಲ;
ತಮ್ಮ ಮುಖವನ್ನು ಅವನಿಂದ ಮರೆಮಾಡಲಿಲ್ಲ;
ಆದರೆ ಆತನು ಮೊರೆ ಇಡಲು, ಅವರು ಕೇಳಿದರು.
ಮುರಿದ ಹೃದಯದವರಿಗೆ ಯೆಹೋವ ದೇವರು ಸಮೀಪವಾಗಿದ್ದಾರೆ;
ಜಜ್ಜಿದ ಆತ್ಮವುಳ್ಳವರನ್ನು ರಕ್ಷಿಸುತ್ತಾರೆ.
Promessas de restauração
Deus sarará o quebrantado de coração e atará as suas feridas. Quem semeia em lágrimas, colherá com júbilo.
ದೇವರು ಮುರಿದ ಹೃದಯದವರನ್ನು ಸ್ವಸ್ಥಮಾಡಿ,
ಅವರ ಗಾಯಗಳನ್ನು ಕಟ್ಟುತ್ತಾರೆ.
ಅವರ ಕೋಪವು ಕ್ಷಣಮಾತ್ರವೇ;
ಆದರೆ ಅವರ ದಯೆಯು ಜೀವಮಾನವೆಲ್ಲಾ ಇರುತ್ತದೆ;
ರಾತ್ರಿಯಲ್ಲಿ ದುಃಖ ಬಂದಿದ್ದರೂ;
ಬೆಳಿಗ್ಗೆ ಆನಂದವು ಬರುವುದು.
ದೇವರು ನಮ್ಮ ಆಶ್ರಯವೂ ಬಲವೂ ಆಗಿದ್ದಾರೆ;
ಇಕ್ಕಟ್ಟಿನಲ್ಲಿ ವಿಶೇಷ ಸಹಾಯಕರಾಗಿದ್ದಾರೆ.
ಯೆಹೋವ ದೇವರ ಮೇಲೆ ನಿಮ್ಮ ಭಾರವನ್ನು ಹಾಕಿರಿ.
ಅವರು ನಿಮಗೆ ಆಧಾರವಾಗಿರುವರು.
ದೇವರು ಎಂದೆಂದಿಗೂ
ನೀತಿವಂತನನ್ನು ಕದಲಗೊಡಿಸುವುದಿಲ್ಲ.
ನನ್ನ ಗೋಳಾಟವನ್ನು ಎಣಿಕೆ ಮಾಡಿರಿ,
ನಿಮ್ಮ ಸುರುಳಿಯಲ್ಲಿ ನನ್ನ ಕಣ್ಣೀರ ಲೆಕ್ಕಮಾಡಿರಿ,
ಅವು ನಿಮ್ಮ ಗ್ರಂಥದಲ್ಲಿ ಬರೆದಿದೆಯಲ್ಲವೇ?
ಯೆಹೋವ ದೇವರು ಕುಗ್ಗಿದವರಿಗೆ ಆಶ್ರಯವಾಗಿರುವರು,
ಇಕ್ಕಟ್ಟಿನ ದಿವಸಗಳಲ್ಲಿ ಭದ್ರಕೋಟೆಯಾಗಿರುವರು.
ಯೆಹೋವ ದೇವರು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ವಿಮೋಚಕರೂ ಆಗಿದ್ದಾರೆ;
ನನ್ನ ಬಂಡೆಯಾದ ದೇವರಲ್ಲಿ, ನಾನು ಭರವಸವಿಡುವೆನು
ಅವರು ನನ್ನ ಗುರಾಣಿ ಮತ್ತು ನನ್ನ ರಕ್ಷಣೆಯ ಕೊಂಬು, ನನ್ನ ಉನ್ನತವಾದ ದುರ್ಗ ಆಗಿದ್ದಾರೆ.
Paz e descanso
Jesus disse: 'Vinde a mim, todos os cansados e sobrecarregados, e eu vos aliviarei.' A paz de Deus que excede todo entendimento guarda o coração.
"ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.
"ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು. ನಾನು ಸಾತ್ವಿಕನೂ ದೀನ ಹೃದಯದವನೂ ಆಗಿರುವುದರಿಂದ ನೀವು ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ. ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.
ದುಃಖಿಸುವವರು ಧನ್ಯರು,
ಅವರು ಆದರಣೆ ಹೊಂದುವರು.
ನಾನು ಸಮಾಧಾನವನ್ನು ನಿಮಗೆ ಬಿಟ್ಟು ಹೋಗುತ್ತೇನೆ. ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಅಂಜದಿರಲಿ.
"ನನ್ನಲ್ಲಿ ನಿಮಗೆ ಸಮಾಧಾನ ಇರುವಂತೆ ಇವುಗಳನ್ನು ನಾನು ನಿಮ್ಮೊಂದಿಗೆ ಮಾತನಾಡಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟವಿರುವದು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ," ಎಂದರು.
ಈಗ ನಿಮಗೆ ನಿಜವಾಗಿಯೂ ದುಃಖವಿದೆ. ಆದರೆ ನಾನು ನಿಮ್ಮನ್ನು ತಿರುಗಿ ಕಾಣುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವುದು. ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವುದಿಲ್ಲ.
ಯಾವ ವಿಷಯವಾಗಿಯೂ ಚಿಂತೆ ಮಾಡದೆ, ಸರ್ವ ವಿಷಯದಲ್ಲಿ ಕೃತಜ್ಞತಾಸ್ತುತಿಯೊಡನೆ ಪ್ರಾರ್ಥನೆ ವಿಜ್ಞಾಪನೆಗಳನ್ನು ಮಾಡುತ್ತಾ ನಿಮ್ಮ ಬೇಡಿಕೆಯನ್ನು ದೇವರಿಗೆ ಸಮರ್ಪಿಸಿರಿ.
ಆಗ ಎಲ್ಲಾ ಗ್ರಹಿಕೆಯನ್ನೂ ಮೀರುವ ದೇವರ ಸಮಾಧಾನವು ನಿಮ್ಮ ಹೃದಯಗಳನ್ನೂ ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಯುವುದು.
Esperança eterna
Deus enxugará toda lágrima. A dor presente é momentânea, mas a glória futura é eterna. O Senhor transforma luto em dança.
ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, "ಇಗೋ ದೇವರ ನಿವಾಸವು ಮಾನವರೊಂದಿಗೆ ಇದೆ. ದೇವರು ಅವರೊಡನೆ ವಾಸಮಾಡುವರು. ಮಾನವರು ದೇವರಿಗೆ ಪ್ರಜೆಯಾಗಿರುವರು. ದೇವರು ತಾವೇ ಅವರ ಸಂಗಡ ಇರುವರು. ‘ದೇವರು ಅವರ ಕಣ್ಣೀರನ್ನೆಲ್ಲಾ ಒರೆಸಿಬಿಡುವರು. ಇನ್ನು ಮರಣವಿರುವುದಿಲ್ಲ.’ ಇನ್ನು ದುಃಖವಾಗಲಿ, ಗೋಳಾಟವಾಗಲಿ, ನೋವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು!" ಎಂದು ಹೇಳಿತು.
ಆಗ ಸಿಂಹಾಸನದ ಮೇಲೆ ಕುಳಿತಿದ್ದವರು, "ಇಗೋ, ನಾನು ಎಲ್ಲವನ್ನೂ ನೂತನಗೊಳಿಸುತ್ತೇನೆ!" ಎಂದರು ಮತ್ತು ನನಗೆ, "ನೀನು ಇದನ್ನು ಬರೆ. ಏಕೆಂದರೆ ಈ ಮಾತುಗಳು ನಂಬತಕ್ಕವೂ ಸತ್ಯವಾದವೂ ಆಗಿವೆ!" ಎಂದು ಹೇಳಿದನು.
ನಿರೀಕ್ಷೆಯ ದೇವರು, ನೀವು ಪವಿತ್ರಾತ್ಮನ ಶಕ್ತಿಯಿಂದ ನಿಮ್ಮ ನಿರೀಕ್ಷೆಯನ್ನು ಹೆಚ್ಚಿಸಿ, ನೀವು ನಿಮ್ಮ ವಿಶ್ವಾಸದಿಂದ ಸಕಲ ಸಂತೋಷದಿಂದಲೂ ಸಮಾಧಾನದಿಂದಲೂ ಪ್ರವಾಹಿಸುವಂತೆ ಮಾಡಲಿ.
ಈ ಲೋಕದ ನಡುವಳಿಕೆಯನ್ನು ಹೊಂದಿಕೊಳ್ಳದೇ, ನಿಮ್ಮ ಮನಸ್ಸನ್ನು ರೂಪಾಂತರಿಸಿಕೊಂಡು ನವೀಕರಿಸಿಕೊಳ್ಳಿರಿ. ಆಗ ನೀವು ಉತ್ತಮವಾದ, ಮೆಚ್ಚುಗೆಯಾಗಿರುವಂಥ ಮತ್ತು ಪರಿಪೂರ್ಣವಾದ ದೇವರ ಚಿತ್ತ ಯಾವುದು ಎಂಬುದನ್ನು ತಿಳಿದುಕೊಳ್ಳುವಿರಿ.
ನೀನಂತೂ ಹೆದರಬೇಡ, ಏಕೆಂದರೆ ನಾನೇ ನಿನ್ನ ದೇವರು,
ನಾನು ನಿನ್ನನ್ನು ಬಲಪಡಿಸುತ್ತೇನೆ.
ನಾನು ನಿನಗೆ ಸಹಾಯ ಮಾಡುತ್ತೇನೆ.
ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿಹಿಡಿಯುತ್ತೇನೆ.
ಯೆಹೋವ ದೇವರ ದಯೆಯ ವರ್ಷ
ಸಾರ್ವಭೌಮ ಯೆಹೋವ ದೇವರ ಆತ್ಮರು ನನ್ನ ಮೇಲೆ ಇದ್ದಾರೆ.
ಏಕೆಂದರೆ ಯೆಹೋವ ದೇವರು
ನನ್ನನ್ನು ಬಡವರಿಗೆ ಶುಭಸಂದೇಶವನ್ನು ಸಾರುವುದಕ್ಕೆ ಅಭಿಷೇಕಿಸಿದ್ದಾರೆ.
ಮುರಿದ ಹೃದಯಗಳನ್ನು ಕಟ್ಟುವುದಕ್ಕೂ,
ಬಂಧಿತರಿಗೆ ಸ್ವಾತಂತ್ರ್ಯವನ್ನು ಘೋಷಿಸಲು
ಮತ್ತು ಕೈದಿಗಳಿಗೆ ಕತ್ತಲೆಯಿಂದ ಬಿಡುಗಡೆ ಮಾಡಲು
ಯೆಹೋವ ದೇವರ ಮೆಚ್ಚುಗೆಯ ವರ್ಷವನ್ನು ಸಾರಿ ಹೇಳುವುದಕ್ಕೂ,
ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧ ಮಾಡುವುದಕ್ಕೂ,
ದುಃಖವುಳ್ಳವರೆಲ್ಲರನ್ನು ಆದರಿಸುವುದಕ್ಕೂ,
ಚೀಯೋನಿನಲ್ಲಿ ದುಃಖಿಸುವವರಿಗೆ
ಬೂದಿಗೆ ಬದಲಾಗಿ ಸೌಂದರ್ಯದ ಕಿರೀಟವನ್ನೂ,
ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ,
ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರ ಎಂಬ ಮೇಲಂಗಿಯನ್ನು
ಕೊಡುವುದಕ್ಕೂ ನನ್ನನ್ನು ನೇಮಿಸಿದ್ದಾರೆ.
ಆಗ ಅವರಿಗೆ ನೀತಿವೃಕ್ಷಗಳೆಂದೂ,
ಯೆಹೋವ ದೇವರು ತಾನು ಮಹಿಮೆ ಹೊಂದುವುದಕ್ಕೋಸ್ಕರ
ನೆಟ್ಟ ಗಿಡಗಳೆಂದೂ ಹೆಸರಾಗುವುದು.
ತಾಯಿ ತನ್ನ ಮಗುವನ್ನು ಆದರಿಸುವ ಪ್ರಕಾರವೇ,
ನಾನು ನಿಮ್ಮನ್ನು ಆದರಿಸುವೆನು.
ಯೆರೂಸಲೇಮಿನ ನಿಮಿತ್ತವೇ, ಆದರಣೆ ಪಡುವಿರಿ."
Nunca sozinhos
Deus nunca nos abandona. Ele está ao nosso lado em cada vale, segura nossa mão e promete que o choro não durará para sempre.
ಯೆಹೋವ ದೇವರು ತಾವೇ ನಿನ್ನ ಮುಂದೆ ಹೋಗುತ್ತಾರೆ. ಅವರು ನಿನ್ನ ಸಂಗಡ ಇರುವರು, ಅವರು ನಿನ್ನನ್ನು ತೊರೆಯುವುದಿಲ್ಲ, ಮರೆತುಬಿಡುವುದಿಲ್ಲ. ನೀನು ಭಯಪಡಬೇಡ, ಅಂಜಿಕೊಳ್ಳಬೇಡ," ಎಂದು ಹೇಳಿದನು.
ಹಣದಾಶೆಯಿಂದ ನಿಮ್ಮ ಜೀವನ ದೂರವಾಗಿರಲಿ, ನಿಮಗಿರುವವುಗಳಲ್ಲಿ ತೃಪ್ತರಾಗಿರಿ. ಏಕೆಂದರೆ ದೇವರು ಹೀಗೆ ಹೇಳಿದ್ದಾರೆ,
"ನಾನು ನಿನ್ನನ್ನು ಎಂದಿಗೂ ಕೈಬಿಡುವುದಿಲ್ಲ,
ಎಂದಿಗೂ ತೊರೆಯುವುದಿಲ್ಲ!"
ಯೆಹೋವ ದೇವರು ಒಳ್ಳೆಯವರು.
ಇಕ್ಕಟ್ಟಿನ ದಿವಸದಲ್ಲಿ ಆಶ್ರಯದಾತರಾಗಿದ್ದಾರೆ.
ತಮ್ಮಲ್ಲಿ ನಂಬಿಕೆ ಇಡುವವರನ್ನು ಅವರು ಪರಿಪಾಲಿಸುತ್ತಾರೆ.
ನಿನ್ನ ದೇವರಾದ ಯೆಹೋವ ದೇವರು ನಿನ್ನೊಂದಿಗಿದ್ದಾರೆ.
ನಿನ್ನನ್ನು ರಕ್ಷಿಸಲು ಶಕ್ತರಾಗಿದ್ದಾರೆ.
ನಿನ್ನಲ್ಲಿ ಬಹಳವಾಗಿ ಹರ್ಷಾನಂದಗೊಳ್ಳುವರು.
ತಮ್ಮ ಪ್ರೀತಿಯ ನಿಮಿತ್ತ ಅವರು ಇನ್ನು ಮುಂದೆ ನಿನ್ನನ್ನು ಖಂಡಿಸುವುದಿಲ್ಲ,
ಆದರೆ ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವರು."
ನಾನು ನಿಮ್ಮನ್ನು ಕುರಿತು ಮಾಡುವ ಯೋಜನೆಗಳನ್ನು ಬಲ್ಲೆನು. ಅವು ಕೇಡಿಗಲ್ಲ, ಹಿತಕ್ಕಾಗಿರುವ ಯೋಜನೆಗಳು. ನಿಮಗೆ ಭವಿಷ್ಯವನ್ನೂ, ನಿರೀಕ್ಷೆಯನ್ನೂ ಕೊಡುವುದಕ್ಕಿವೆ.
ಆದ್ದರಿಂದ ಯಾರಾದರೂ ಕ್ರಿಸ್ತ ಯೇಸುವಿನಲ್ಲಿದ್ದರೆ, ಅವರು ನೂತನ ಸೃಷ್ಟಿಯಾಗಿದ್ದಾರೆ: ಹಳೆಯದೆಲ್ಲವೂ ಹೋಗಿ ಅವರಿಗೆ ಹೊಸ ಸೃಷ್ಟಿಯು ಬರುವುದು.
ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ತಮ್ಮ ಆತ್ಮಗಳನ್ನು ನಂಬಿಗಸ್ತ ಆಗಿರುವ ಸೃಷ್ಟಿಕರ್ತ ದೇವರಿಗೆ ಒಪ್ಪಿಸಿ, ಒಳ್ಳೆಯದನ್ನು ಮಾಡಲಿ.
ಹೀಗಿರುವುದರಿಂದ ದೇವರ ಪರಾಕ್ರಮವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ, ಆಗ ದೇವರು ಸಕಾಲದಲ್ಲಿ ನಿಮ್ಮನ್ನು ಮೇಲಕ್ಕೆತ್ತುವರು. ನಿಮ್ಮ ಚಿಂತೆಯನ್ನೆಲ್ಲಾ ದೇವರ ಮೇಲೆ ಹಾಕಿರಿ. ಅವರು ನಿಮಗೋಸ್ಕರ ಚಿಂತಿಸುತ್ತಾರೆ.
ನಾನು ಕಾರ್ಗತ್ತಲಿನ
ಕಣಿವೆಯಲ್ಲಿ ನಡೆಯುವಾಗಲೂ,
ನೀವು ನನ್ನೊಂದಿಗಿರುವುದರಿಂದ
ನಾನು ಕೇಡಿಗೆ ಹೆದರೆನು;
ನಿಮ್ಮ ದೊಣ್ಣೆಯೂ ನಿಮ್ಮ ಕೋಲೂ
ನನ್ನನ್ನು ಸಂತೈಸುತ್ತವೆ.
ಯೆಹೋವ ದೇವರ ಮನೆಯಲ್ಲಿ ನಾನು ಜೀವಮಾನವೆಲ್ಲಾ ವಾಸಮಾಡುತ್ತಾ,
ಅದರ ದಯೆಯನ್ನು ನೋಡುತ್ತಾ
ಅವರ ಮಂದಿರದಲ್ಲಿ ಅವರನ್ನೇ ಧ್ಯಾನಿಸುತ್ತಾ
ಇರಬೇಕೆಂಬ ಒಂದೇ ವರವನ್ನು
ಯೆಹೋವ ದೇವರಿಂದ ಕೇಳಿಕೊಂಡು
ಅದನ್ನೇ ಹುಡುಕುತ್ತಿರುವೆನು.
ಕೇಡಿನ ಸಮಯದಲ್ಲಿ ಯೆಹೋವ ದೇವರು ನನ್ನನ್ನು
ತಮ್ಮ ಗುಡಾರದಲ್ಲಿ ಬಚ್ಚಿಡುವರು.
ತಮ್ಮ ಪರಿಶುದ್ಧ ಗುಡಾರದಲ್ಲಿ ನನ್ನನ್ನು ಮರೆಮಾಡುವರು.
ಎತ್ತರವಾದ ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವರು.
ನಿಮ್ಮ ವಾಗ್ದಾನವು ನನ್ನ ಜೀವದ ಸಂರಕ್ಷಣೆಯಾಗಿದೆ.
ಅವು ನನ್ನ ಸಂಕಷ್ಟಗಳಲ್ಲಿ ಆದರಣೆಯಾಗಿವೆ.
ದೇವರು ತಗ್ಗಿದವರನ್ನು ಉನ್ನತದಲ್ಲಿಡುತ್ತಾರೆ;
ದುಃಖವುಳ್ಳವರನ್ನು ಭದ್ರತೆಗೆ ಒಯ್ಯುತ್ತಾರೆ.
ಅದಕ್ಕೆ ಯೇಸು, "ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಯಾರಾದರೂ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಮನೆಯನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಹೊಲವನ್ನಾಗಲಿ ಬಿಟ್ಟುಬಿಟ್ಟರೆ, ಅವರು ಈಗಿನ ಕಾಲದಲ್ಲಿ ಹಿಂಸೆಗಳ ಸಹಿತವಾಗಿ ಮನೆಗಳನ್ನೂ ಸಹೋದರರನ್ನೂ ಸಹೋದರಿಯರನ್ನೂ ತಾಯಂದಿರನ್ನೂ ಮಕ್ಕಳನ್ನೂ ಹೊಲವನ್ನೂ ನೂರರಷ್ಟು ಪಡೆಯುವುದಲ್ಲದೆ ಮುಂದಿನ ಲೋಕದಲ್ಲಿ ನಿತ್ಯಜೀವವನ್ನು ಹೊಂದುವರು.
ನಾನು ತಂದೆಯನ್ನು ಕೇಳಿಕೊಳ್ಳುವೆನು. ಆಗ ತಂದೆ ನಿಮಗೆ ಬೇರೊಬ್ಬ ಸಹಾಯಕರನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕೊಡುವರು. ಅವರೇ ಸತ್ಯದ ಆತ್ಮರಾಗಿದ್ದಾರೆ. ಲೋಕವು ಅವರನ್ನು ನೋಡದೆಯೂ ತಿಳಿಯದೆಯೂ ಇರುವುದರಿಂದ ಸತ್ಯದ ಆತ್ಮರಾಗಿರುವ ಅವರನ್ನು ಸ್ವೀಕರಿಸಲಾರದು. ನೀವು ಅವರನ್ನು ಬಲ್ಲಿರಿ. ಏಕೆಂದರೆ ಅವರು ನಿಮ್ಮೊಂದಿಗಿರುವರು ಮತ್ತು ನಿಮ್ಮೊಳಗೂ ನೆಲೆಸಿರುವರು. ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ. ನಿಮ್ಮ ಬಳಿಗೆ ನಾನು ಬರುತ್ತೇನೆ.