A Palavra de Deus
A Palavra de Deus é viva, eficaz e eterna. Desde 'No princípio era o Verbo' até 'O céu e a terra passarão, mas as minhas palavras não hão de passar', ela é a revelação suprema do Criador.
No princípio era o Verbo
A Palavra é Deus encarnado. No princípio era o Verbo, o Verbo estava com Deus, e o Verbo era Deus. Todas as coisas foram feitas por Ele.
ವಾಕ್ಯವು ದೇಹಧಾರಿಯಾದದ್ದು
ಆದಿಯಲ್ಲಿ ವಾಕ್ಯವಿತ್ತು, ಆ ವಾಕ್ಯವು ದೇವರ ಬಳಿಯಲ್ಲಿತ್ತು, ಆ ವಾಕ್ಯವು ದೇವರಾಗಿತ್ತು.
ವಾಕ್ಯವು ದೇಹಧಾರಿಯಾದದ್ದು
ಆದಿಯಲ್ಲಿ ವಾಕ್ಯವಿತ್ತು, ಆ ವಾಕ್ಯವು ದೇವರ ಬಳಿಯಲ್ಲಿತ್ತು, ಆ ವಾಕ್ಯವು ದೇವರಾಗಿತ್ತು.
ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.
ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.
ಆಗ ದೇವರು, "ಬೆಳಕಾಗಲಿ" ಎನ್ನಲು, ಬೆಳಕಾಯಿತು.
ಈ ಕ್ರಿಸ್ತ ಯೇಸುವೇ ದೇವರ ಮಹಿಮೆಯ ಪ್ರಕಾಶವೂ ಅವರ ವ್ಯಕ್ತಿತ್ವದ ಪ್ರತಿರೂಪವಾಗಿರುವ ದೇವಪುತ್ರ ಆಗಿದ್ದಾರೆ. ಈ ಕ್ರಿಸ್ತ ಯೇಸುವೇ ತಮ್ಮ ಶಕ್ತಿಯುತ ವಾಕ್ಯದಿಂದ ಸಮಸ್ತಕ್ಕೂ ಆಧಾರವಾಗಿದ್ದಾರೆ. ಕ್ರಿಸ್ತ ಯೇಸು ತಾವಾಗಿಯೇ ನಮ್ಮ ಪಾಪಗಳನ್ನು ಶುದ್ಧಿಮಾಡಿ ಉನ್ನತದೊಳಗೆ ಮಹೋನ್ನತ ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.
ವಿಶ್ವವು ದೇವರ ವಾಕ್ಯದಿಂದ ಉಂಟಾದವೆಂದೂ ಕಾಣುವಂತವುಗಳು ಕಾಣದವುಗಳಿಂದ ಉಂಟಾದವು ಎಂಬುದನ್ನು ನಾವು ನಂಬಿಕೆಯಿಂದ ತಿಳಿದುಕೊಂಡದ್ದರಿಂದ ಗ್ರಹಿಸುತ್ತೇವೆ.
ಯೆಹೋವ ದೇವರ ವಾಕ್ಯದಿಂದ ಆಕಾಶವೂ,
ಅವರ ಬಾಯಿಯ ಉಸಿರಿನಿಂದ ನಕ್ಷತ್ರ ಮಂಡಲವೂ ಉಂಟಾದವು.
A Palavra é viva e eficaz
A Palavra de Deus é mais cortante que espada de dois gumes. Ela julga pensamentos e intenções do coração, transforma e liberta.
ಯಾಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಕ್ರಿಯಾತ್ಮಕವಾದದ್ದು, ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು, ಪ್ರಾಣ ಮತ್ತು ಆತ್ಮಗಳ ಕೀಲು ಮಜ್ಜೆಗಳನ್ನು ವಿಭಾಗಿಸುವಷ್ಟರ ಮಟ್ಟಿಗೆ ಛೇದಿಸುವಂಥದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸಿ ತೀರ್ಪು ನೀಡುವಂಥದ್ದು ಆಗಿದೆ.
ಯಾಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಕ್ರಿಯಾತ್ಮಕವಾದದ್ದು, ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು, ಪ್ರಾಣ ಮತ್ತು ಆತ್ಮಗಳ ಕೀಲು ಮಜ್ಜೆಗಳನ್ನು ವಿಭಾಗಿಸುವಷ್ಟರ ಮಟ್ಟಿಗೆ ಛೇದಿಸುವಂಥದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸಿ ತೀರ್ಪು ನೀಡುವಂಥದ್ದು ಆಗಿದೆ.
"ನನ್ನ ವಾಕ್ಯ ಬೆಂಕಿಗೆ ಸಮಾನ, ಬಂಡೆಯನ್ನು ಪುಡಿಪುಡಿ ಮಾಡುವ ಸುತ್ತಿಗೆಗೆ ಸಮಾನ." ಇದು ಯೆಹೋವ ದೇವರಾದ ನನ್ನ ನುಡಿ.
ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಳ್ಳಿರಿ. ದೇವರ ವಾಕ್ಯವೆಂಬ ಪವಿತ್ರಾತ್ಮರ ಖಡ್ಗವನ್ನು ಎತ್ತಿ ಹಿಡಿಯಿರಿ.
Toda Escritura é inspirada
Toda a Escritura é inspirada por Deus e útil para ensino, correção e instrução na justiça. Ela é perfeita e imutável.
ಪವಿತ್ರ ವೇದಗಳೆಲ್ಲವೂ ದೇವರ ಶ್ವಾಸದಿಂದಲೇ ಉಂಟಾದದ್ದು. ಅದು ಉಪದೇಶಕ್ಕೂ ಖಂಡನೆಗೂ ತಿದ್ದುಪಾಟಿಗೂ ನೀತಿಯ ಶಿಕ್ಷಣಕ್ಕೂ ಉಪಯುಕ್ತವಾಗಿದೆ.
ಪವಿತ್ರ ವೇದಗಳೆಲ್ಲವೂ ದೇವರ ಶ್ವಾಸದಿಂದಲೇ ಉಂಟಾದದ್ದು. ಅದು ಉಪದೇಶಕ್ಕೂ ಖಂಡನೆಗೂ ತಿದ್ದುಪಾಟಿಗೂ ನೀತಿಯ ಶಿಕ್ಷಣಕ್ಕೂ ಉಪಯುಕ್ತವಾಗಿದೆ. ಆದ್ದರಿಂದ ದೇವರ ಮನುಷ್ಯನು ಪರಿಪೂರ್ಣನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
ಪವಿತ್ರ ವೇದಗಳೆಲ್ಲವೂ ದೇವರ ಶ್ವಾಸದಿಂದಲೇ ಉಂಟಾದದ್ದು. ಅದು ಉಪದೇಶಕ್ಕೂ ಖಂಡನೆಗೂ ತಿದ್ದುಪಾಟಿಗೂ ನೀತಿಯ ಶಿಕ್ಷಣಕ್ಕೂ ಉಪಯುಕ್ತವಾಗಿದೆ. ಆದ್ದರಿಂದ ದೇವರ ಮನುಷ್ಯನು ಪರಿಪೂರ್ಣನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
Luz para o caminho
A Palavra é lâmpada para os pés e luz para nosso caminho. Ela ilumina, orienta e protege o que nela medita dia e noite.
ನಿಮ್ಮ ವಾಕ್ಯವು ನನ್ನ ಪಾದಕ್ಕೆ ದೀಪವೂ
ನನ್ನ ದಾರಿಗೆ ಬೆಳಕೂ ಆಗಿದೆ.
ನಿಮ್ಮ ವಾಕ್ಯವು ನನ್ನ ಪಾದಕ್ಕೆ ದೀಪವೂ
ನನ್ನ ದಾರಿಗೆ ಬೆಳಕೂ ಆಗಿದೆ.
ನಿಮ್ಮ ವಾಕ್ಯಗಳನ್ನು ತೆರೆಯುವಾಗ, ಅದು ಬೆಳಕನ್ನು ಕೊಡುವುದು;
ಅದು ಮುಗ್ಧರಿಗೆ ಅರಿವನ್ನು ನೀಡುವುದು.
ಯೆಹೋವ ದೇವರೇ, ನಿಮ್ಮ ವಾಕ್ಯವು ಶಾಶ್ವತವಾಗಿದೆ;
ಅದು ಪರಲೋಕದಲ್ಲಿ ಸ್ಥಿರವಾಗಿದೆ.
ಯೌವನಸ್ಥನು ಯಾವುದರಿಂದ ತನ್ನ ನಡತೆಯನ್ನು ಶುದ್ಧವಾಗಿಟ್ಟುಕೊಳ್ಳುವನು?
ನಿಮ್ಮ ವಾಕ್ಯದ ಪ್ರಕಾರ ಜೀವಿಸುವುದರಿಂದಲೇ.
ನಿಮಗೆ ವಿರೋಧವಾಗಿ ಪಾಪಮಾಡದ ಹಾಗೆ
ನನ್ನ ಹೃದಯದಲ್ಲಿ ನಿಮ್ಮ ವಾಕ್ಯವನ್ನು ಬಚ್ಚಿಟ್ಟುಕೊಂಡಿದ್ದೇನೆ.
ನಿಮ್ಮ ಮಾತುಗಳೆಲ್ಲಾ ಸತ್ಯವಾದವುಗಳೇ;
ನಿಮ್ಮ ನೀತಿ ನಿಯಮಗಳೆಲ್ಲಾ ನಿತ್ಯವಾದವುಗಳೇ.
ש ಸೀನ್ ಮತ್ತು ಷೀನ್
Obedecer a Palavra
Seja praticante da Palavra e não apenas ouvinte. Jesus disse que quem ouve e pratica é como o homem sábio que edificou sobre a rocha.
ನೀವು ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.
ನೀವು ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.
ನೀವು ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ. ಯಾವನಾದರೂ ವಾಕ್ಯವನ್ನು ಕೇಳುವವನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಮುಖವನ್ನು ನೋಡಿಕೊಂಡ ಮನುಷ್ಯನಂತಿರುವನು. ಏಕೆಂದರೆ ಇವನು ತನ್ನನ್ನು ಕನ್ನಡಿಯಲ್ಲಿ ನೋಡಿಕೊಂಡು ಹೋಗಿದ್ದರೂ ತಾನು ಹೀಗಿದ್ದೇನೆಂಬುದನ್ನು ಆ ಕ್ಷಣವೇ ಮರೆತುಬಿಡುವನು.
ಆದಕಾರಣ ಎಲ್ಲಾ ಮಾಲಿನ್ಯವನ್ನೂ ಉಳಿದಿರುವ ದುಷ್ಟತನವನ್ನೂ ತೆಗೆದುಹಾಕಿ, ನಿಮ್ಮೊಳಗೆ ಬೇರೂರಿರುವ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.
ಬುದ್ಧಿವಂತ ಹಾಗೂ ಬುದ್ಧಿಹೀನ
"ಆದ್ದರಿಂದ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವ ಪ್ರತಿಯೊಬ್ಬನೂ ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಸಮಾನ.
ಅದಕ್ಕೆ ಯೇಸು, "ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ, ‘ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ, ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಜೀವಿಸುತ್ತಾನೆ,’" ಎಂದರು.
ಅದಕ್ಕೆ ಯೇಸು, "ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ, ‘ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ, ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಜೀವಿಸುತ್ತಾನೆ,’" ಎಂದರು.
ಅದಕ್ಕೆ ಯೇಸು, "ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವರು ಹೆಚ್ಚು ಭಾಗ್ಯವಂತರು," ಎಂದರು.
ಅದಕ್ಕೆ ಯೇಸು ಉತ್ತರವಾಗಿ ಅವನಿಗೆ, " ‘ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ’ ಎಂದು ಪವಿತ್ರ ವೇದದಲ್ಲಿ ಬರೆದಿದೆ," ಎಂದರು.
ಜನರೆಲ್ಲರೂ ಬೆರಗಾಗಿ, "ಇದೆಂಥಾ ಮಾತಾಗಿದೆ! ಈತನು ಅಧಿಕಾರದಿಂದಲೂ ಶಕ್ತಿಯಿಂದಲೂ ಅಶುದ್ಧಾತ್ಮಗಳಿಗೆ ಅಪ್ಪಣೆಕೊಡಲು ಅವು ಹೊರಗೆ ಬರುತ್ತವಲ್ಲಾ!" ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
A Palavra que permanece
Céus e terra passarão, mas as palavras de Jesus jamais passarão. A Palavra do Senhor permanece para sempre — eterna e infalível.
ಭೂಮ್ಯಾಕಾಶಗಳು ಅಳಿದುಹೋಗುವುವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.
ಭೂಮ್ಯಾಕಾಶಗಳು ಅಳಿದುಹೋಗುವುವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.
ಹುಲ್ಲು ಒಣಗಿಹೋಗುವುದು, ಹೂವು ಬಾಡಿಹೋಗುವುದು.
ಆದರೆ ನಮ್ಮ ದೇವರ ವಾಕ್ಯವಾದರೋ ಸದಾಕಾಲ ಇರುವುದು," ಎಂದು ಉತ್ತರವಾಯಿತು.
ಏಕೆಂದರೆ ಯೆಹೋವ ದೇವರ ವಾಕ್ಯವು ಯಥಾರ್ಥವೂ ಸತ್ಯವೂ ಆಗಿರುತ್ತವೆ.
ಅವರ ಮಾಡುವ ಎಲ್ಲಾ ಕೆಲಸಗಳಲ್ಲಿಯೂ ನಂಬಿಗಸ್ತರಾಗಿರುತ್ತಾರೆ.
ಏಕೆಂದರೆ ಯೆಹೋವ ದೇವರ ವಾಕ್ಯವು ಯಥಾರ್ಥವೂ ಸತ್ಯವೂ ಆಗಿರುತ್ತವೆ.
ಅವರ ಮಾಡುವ ಎಲ್ಲಾ ಕೆಲಸಗಳಲ್ಲಿಯೂ ನಂಬಿಗಸ್ತರಾಗಿರುತ್ತಾರೆ.
"ದೇವರ ಪ್ರತಿಯೊಂದು ಮಾತು ದೋಷವಿಲ್ಲದ್ದು;
ದೇವರಲ್ಲಿ ಭರವಸವಿಡುವವನಿಗೆ ಅವರು ಗುರಾಣಿಯಾಗಿದ್ದಾರೆ.
ಏಕೆಂದರೆ ಯೆಹೋವ ದೇವರೇ ಜ್ಞಾನವನ್ನು ಕೊಡುತ್ತಾರೆ;
ಅವರ ಬಾಯಿಂದಲೇ ಅರಿವೂ ತಿಳುವಳಿಕೆಯೂ ಹೊರಟುಬರುತ್ತವೆ.
ಏಕೆಂದರೆ ಯೆಹೋವ ದೇವರೇ ಜ್ಞಾನವನ್ನು ಕೊಡುತ್ತಾರೆ;
ಅವರ ಬಾಯಿಂದಲೇ ಅರಿವೂ ತಿಳುವಳಿಕೆಯೂ ಹೊರಟುಬರುತ್ತವೆ.
O poder da Palavra
A Palavra transforma, sara e liberta. Quem permanece na Palavra de Jesus conhece a verdade, e a verdade o liberta.
ಅಬ್ರಹಾಮನ ಮಕ್ಕಳು
ಯೇಸು ತಮ್ಮನ್ನು ನಂಬಿದ್ದ ಯೆಹೂದ್ಯರಿಗೆ ಹೇಳಿದ್ದೇನೆಂದರೆ, "ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾಗಿಯೂ ನೀವು ನನ್ನ ಶಿಷ್ಯರಾಗುವಿರಿ.
ಅಬ್ರಹಾಮನ ಮಕ್ಕಳು
ಯೇಸು ತಮ್ಮನ್ನು ನಂಬಿದ್ದ ಯೆಹೂದ್ಯರಿಗೆ ಹೇಳಿದ್ದೇನೆಂದರೆ, "ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾಗಿಯೂ ನೀವು ನನ್ನ ಶಿಷ್ಯರಾಗುವಿರಿ. ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಸತ್ಯವು ನಿಮ್ಮನ್ನು ಸ್ವತಂತ್ರರಾಗಿ ಮಾಡುವುದು," ಎಂದು ಹೇಳಿದರು.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾರು ನನ್ನ ಮಾತನ್ನು ಪಾಲಿಸುತ್ತಾರೋ ಅವರು ಎಂದೆಂದಿಗೂ ಮರಣವನ್ನು ಕಾಣುವುದಿಲ್ಲ," ಎಂದರು.
"ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದ ತಂದೆಯನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ. ಅವರು ನ್ಯಾಯತೀರ್ಪಿಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವವನ್ನು ಹೊಂದಿದ್ದಾರೆ.
ಯೇಸು ಅವನಿಗೆ, "ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ಅವನು ನನ್ನ ವಾಕ್ಯವನ್ನು ಕೈಗೊಳ್ಳುವನು. ನನ್ನ ತಂದೆಯು ಅವನನ್ನು ಪ್ರೀತಿಸುವರು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಿವಾಸಮಾಡಿಕೊಳ್ಳುವೆವು.
ನಾನು ನಿಮಗೆ ಹೇಳಿದ ವಾಕ್ಯದ ದೆಸೆಯಿಂದ ನೀವು ಈಗ ಶುದ್ಧರಾಗಿದ್ದೀರಿ.
ನೀವು ಸತ್ಯದಿಂದ ಇವರನ್ನು ಸಮರ್ಪಿಸಿರಿ. ನಿಮ್ಮ ವಾಕ್ಯವೇ ಸತ್ಯವು.
ಆದ್ದರಿಂದ ಯೇಸು ಸತ್ತವರೊಳಗಿಂದ ಜೀವಂತವಾಗಿ ಎದ್ದಾಗ, ಅವರ ಶಿಷ್ಯರು ಅವರು ಹೇಳಿದ ಈ ಮಾತನ್ನು ನೆನಪು ಮಾಡಿಕೊಂಡು ಪವಿತ್ರ ವೇದವನ್ನೂ ಯೇಸು ತಮಗೆ ಹೇಳಿದ ಮಾತನ್ನೂ ನಂಬಿದರು.
ಇನ್ನೂ ಹೆಚ್ಚು ಜನರು ಯೇಸುವಿನ ವಾಕ್ಯದ ದೆಸೆಯಿಂದ ನಂಬಿದರು.
ಪವಿತ್ರ ವೇದವು ಹೇಳಿದ ಪ್ರಕಾರ ನನ್ನಲ್ಲಿ ನಂಬಿಕೆಯಿಡುವವರ ಅಂತರಂಗದಿಂದ ಜೀವಜಲದ ಹೊಳೆಗಳು ಹರಿಯುವವು," ಎಂದು ಕೂಗಿ ಹೇಳಿದರು.
Meditar na Palavra
A meditação na Palavra traz prosperidade e bom sucesso. Ela é fonte de sabedoria, consolo e orientação para toda a vida.
ಈ ದೇವರ ನಿಯಮವು ನಿನ್ನ ಬಾಯಿಂದ ತೊಲಗಬಾರದು, ಅದರಲ್ಲಿ ಬರೆದಿರುವ ಪ್ರಕಾರವೇ ಕೈಗೊಂಡು ನಡೆಯುವ ಹಾಗೆ ಹಗಲುರಾತ್ರಿ ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವು ಸಮೃದ್ಧಿಯಾಗಿ ನೀನು ಜಯಶಾಲಿಯಾಗುವೆ.
ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರ ಮಾಡಿಕೊಂಡೆನು,
ನಿನ್ನ ನುಡಿಗಳು ನನಗೆ ಹರ್ಷವೂ, ಹೃದಯಾನಂದವೂ ಆದವು.
ಸೇನಾಧೀಶ್ವರನಾದ ದೇವರೇ,
ಯೆಹೋವ ದೇವರೇ, ನಾನು ನಿನ್ನ ಹೆಸರಿನವನಲ್ಲವೇ!
ನೀನು, "ಯೇಸುವೇ ಕರ್ತ," ಎಂದು ಬಾಯಿಂದ ಅರಿಕೆಮಾಡಿ, ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರೆಂದು ಹೃದಯದಲ್ಲಿ ನಂಬಿದರೆ ನೀನು ರಕ್ಷಣೆ ಹೊಂದುವೆ. ನೀನು ನಿನ್ನ ಹೃದಯದಿಂದ ನಂಬಿ ನೀತಿವಂತನೆಂದು ಎಣಿಸಿಕೊಳ್ಳುವಿ ಮತ್ತು ನಿನ್ನ ಬಾಯಿಂದ ನಿನ್ನ ವಿಶ್ವಾಸವನ್ನು ಅರಿಕೆ ಮಾಡಿದಾಗ ರಕ್ಷಣೆ ಹೊಂದುತ್ತಿ.
ದೇವರ ಮಾತುಗಳಲ್ಲಿ ನಾನು ಹೆಮ್ಮೆಪಡುವೆನು.
ದೇವರಲ್ಲಿಯೇ ಭರವಸೆ ಇಡುವೆನು, ನಾನು ಭಯಪಡುವುದಿಲ್ಲ.
ಸಾಯುವ ಮನುಷ್ಯನು ನನಗೇನು ಮಾಡಬಲ್ಲ?
ದೇವರ ಮಾರ್ಗವು ಪರಿಪೂರ್ಣವಾದದ್ದು,
ಯೆಹೋವ ದೇವರ ವಾಕ್ಯವು ದೋಷವಿಲ್ಲದ್ದು;
ತಮ್ಮಲ್ಲಿ ಆಶ್ರಯ ಹೊಂದಿದ ಎಲ್ಲರಿಗೂ ಅವರು ಗುರಾಣಿಯಾಗಿದ್ದಾರೆ.
ನಿಮ್ಮ ರಕ್ಷಣೆಯ ಸಹಾಯವನ್ನು ನನಗೆ ಗುರಾಣಿಯನ್ನಾಗಿ ಮಾಡಿದ್ದೀರಿ.
ನಿಮ್ಮ ಬಲಗೈ ನನಗೆ ಆಧಾರವಾಗಿದೆ;
ನಿಮ್ಮ ಸಹಾಯವು ನನ್ನನ್ನು ಘನವಂತನನ್ನಾಗಿ ಮಾಡಿದೆ.
ನೀವು ನನ್ನ ಕಾಲಡಿಗಳಿಗೆ ವಿಶಾಲಸ್ಥಳ ಒದಗಿಸಿದ್ದೀರಿ,
ಆದುದರಿಂದ ನನ್ನ ಹಿಮ್ಮಡಿಗಳು ಜಾರುವುದಿಲ್ಲ.
ನಿಮ್ಮಲ್ಲಿ ಜೀವನವನ್ನು ಪ್ರೀತಿಸುವವನು
ಮತ್ತು ಬಹಳ ದಿನಗಳವರೆಗೆ ಬದುಕಬೇಕೆ?
ನೀನು ಕೇಡಿನಿಂದ ನಿನ್ನ ನಾಲಿಗೆಯನ್ನು,
ಮೋಸವನ್ನು ನುಡಿಯದ ಹಾಗೆ ನಿನ್ನ ತುಟಿಗಳನ್ನೂ ನಿಯಂತ್ರಿಸಿಕೋ.
ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ ಯೆಹೋವ ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಬದುಕುತ್ತಾನೆಂದು ನಿಮಗೆ ಬೋಧಿಸುವಂತೆ ದೇವರು ನಿಮ್ಮನ್ನು ಹಸಿವೆಯಿಂದ ಬಳಲುವಂತೆ ಮಾಡಿದರು. ನೀವು ತಿಳಿಯದಂಥ ಮತ್ತು ನಿಮ್ಮ ಪಿತೃಗಳು ತಿಳಿಯದಂಥ ಮನ್ನವನ್ನು ನಿಮಗೆ ಉಣ್ಣಲು ಕೊಟ್ಟರು.
ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ರಕ್ಷಣೆಯಲ್ಲಿ ಬೆಳೆಯುವ ಹಾಗೆ ಆತ್ಮಿಕವಾದ ಶುದ್ಧಹಾಲನ್ನು ಬಯಸಿರಿ.
ಕ್ರಿಸ್ತನ ದೀನತೆಯ ಅನುಸರಣೆ
ನೀವು ಕ್ರಿಸ್ತನೊಂದಿಗೆ ಐಕ್ಯವಾಗಿರುವುದರಿಂದ ಉತ್ತೇಜನ, ಅವರ ಪ್ರೀತಿಯಿಂದ ಸಂತೈಸುವಿಕೆ, ಆತ್ಮನಲ್ಲಿ ಅನ್ಯೋನ್ಯತೆ, ಕನಿಕರದ ವಾತ್ಸಲ್ಯಗಳು ಇರುವುದಾದರೆ, ನೀವು ಒಂದೇ ಮನಸ್ಸು, ಒಂದೇ ಪ್ರೀತಿ, ಆತ್ಮ, ಹಾಗೂ ಒಂದೇ ಗುರಿಯುಳ್ಳವರಾಗಿ, ನನ್ನ ಸಂತೋಷವನ್ನು ಪರಿಪೂರ್ಣಗೊಳಿಸಿರಿ. ಸ್ವಾರ್ಥ ಉದ್ದೇಶದಿಂದಾಗಲಿ, ವ್ಯರ್ಥ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ ಪ್ರತಿಯೊಬ್ಬನೂ ದೀನತ್ವದಿಂದ ಮತ್ತೊಬ್ಬನನ್ನು ತನಗಿಂತಲೂ ಶ್ರೇಷ್ಠನೆಂದು ಎಣಿಸಲಿ. ಪ್ರತಿಯೊಬ್ಬನೂ ಸ್ವಹಿತವನ್ನು ನೋಡದೆ ಪರಹಿತವನ್ನು ಸಹ ನೋಡಲಿ.
ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿಯೂ ಇರಲಿ:
ಅವರು ದೇವರ ಸ್ವರೂಪವಾಗಿದ್ದರೂ,
ದೇವರಿಗೆ ಸಮಾನರಾಗಿರುವುದನ್ನು ಬಿಡಲೊಲ್ಲೆನೆಂದು ಎಣಿಸದೆ,
ತಮ್ಮನ್ನು ತಾವೇ ಬರಿದುಮಾಡಿಕೊಂಡು
ಗುಲಾಮನ ರೂಪವನ್ನು ಧರಿಸಿಕೊಂಡು
ಮನುಷ್ಯರಿಗೆ ಸಮನಾದರು.
ಹೀಗೆ ಅವರು ಆಕಾರದಲ್ಲಿ ಮನುಷ್ಯರಾಗಿ ಕಾಣಿಸಿಕೊಂಡಾಗ
ತಮ್ಮನ್ನು ತಾವೇ ತಗ್ಗಿಸಿಕೊಂಡು
ಮರಣವನ್ನು ಎಂದರೆ ಶಿಲುಬೆಯ
ಮರಣವನ್ನೂ ಹೊಂದುವಷ್ಟು ವಿಧೇಯರಾದರು.
ಈ ಕಾರಣದಿಂದಲೇ ದೇವರು ಅವರನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ
ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಅವರಿಗೆ ದಯಪಾಲಿಸಿದ್ದಾರೆ.
ಆದ್ದರಿಂದ ಪರಲೋಕ, ಭೂಲೋಕ, ಭೂಮಿಯ ಕೆಳಗಿರುವವರೆಲ್ಲರೂ
ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ,
ತಂದೆಯಾದ ದೇವರ ಮಹಿಮೆಗಾಗಿ
ಯೇಸು ಕ್ರಿಸ್ತನು ಕರ್ತದೇವರು ಎಂಬುದಾಗಿ ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವುದು.
ಗೊಣಗುಟ್ಟದೆ ಎಲ್ಲವನ್ನೂ ಮಾಡಿರಿ
ಹೀಗಿರುವಲ್ಲಿ ನನ್ನ ಪ್ರಿಯ ಸ್ನೇಹಿತರೇ, ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರುವಾಗಲೂ ನೀವು ಯಾವಾಗಲೂ ನನಗೆ ವಿಧೇಯರಾದಂತೆ ಈಗಲೂ ವಿಧೇಯರಾಗಿ, ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ರಕ್ಷಣೆಯನ್ನು ಕಾರ್ಯರೂಪಕ್ಕೆ ತನ್ನಿರಿ. ಏಕೆಂದರೆ, ತಮ್ಮ ಸದುದ್ದೇಶವನ್ನು ನೆರವೇರಿಸುವಂತೆ ನಿಮ್ಮಲ್ಲಿ ಬಯಕೆಯನ್ನೂ ಕಾರ್ಯಸಾಧನೆಯನ್ನೂ ನಿರ್ಮಿಸುವವರು ದೇವರೇ.
ಗೊಣಗುಟ್ಟದೆಯೂ ವಿವಾದವಿಲ್ಲದೆಯೂ ಎಲ್ಲವನ್ನೂ ಮಾಡಿರಿ. ಹೀಗೆ ನೀವು ನಿಂದಾರಹಿತರೂ ದೋಷವಿಲ್ಲದವರೂ, "ನಿಷ್ಕಳಂಕರಾದ ದೇವರ ಮಕ್ಕಳಾಗಿ, ವಕ್ರವಾದ ದುಷ್ಟ ಜನಾಂಗದ ಮಧ್ಯದಲ್ಲಿ," ಜೀವವಾಕ್ಯವನ್ನು ಹಿಡಿದುಕೊಂಡು, ಲೋಕದಲ್ಲಿ ನಕ್ಷತ್ರಗಳಂತೆ ಹೊಳೆಯುವವರಾಗಿರುವಿರಿ. ನೀವು ಜೀವವಾಕ್ಯವನ್ನು ಹಿಡಿದವರಾಗಿದ್ದರೆ, ಹೀಗೆ ನಾನು ಓಡಿದ ಓಟವೂ ಪ್ರಯಾಸವೂ ವ್ಯರ್ಥವಾಗಲಿಲ್ಲವೆಂದು ತಿಳಿದು ಕ್ರಿಸ್ತನ ಪುನರಾಗಮನ ದಿನದಲ್ಲಿ ಅಭಿಮಾನ ಪಡುವೆನು. ನಿಮ್ಮ ವಿಶ್ವಾಸದಿಂದ ಬರುವ ಯಜ್ಞದ ಮೇಲೆಯೂ ಸೇವೆಯ ಮೇಲೆಯೂ ನಾನು ಪಾನಸಮರ್ಪಣೆಯಾದರೂ ಸಹ ಹರ್ಷದಿಂದ ನಿಮ್ಮೆಲ್ಲರೊಡನೆ ಆನಂದಿಸುವೆನು. ಇದಕ್ಕಾಗಿಯೇ ನೀವೂ ಹರ್ಷಿಸಿರಿ. ನನ್ನೊಡನೆ ಆನಂದಿಸಿರಿ.
ತಿಮೊಥೆಯನೂ ಎಪಫ್ರೊದೀತನೂ
ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸುವುದಕ್ಕೆ ಕರ್ತ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಹೀಗೆ ಅವನ ಮುಖಾಂತರ ನಿಮ್ಮ ವಿಷಯವನ್ನು ತಿಳಿದು ನಾನು ಸಹ ಉತ್ತೇಜನಗೊಳ್ಳುವೆನು. ಅವನ ಹಾಗೆ ನಿಮ್ಮ ಯೋಗಕ್ಷೇಮವನ್ನು ಕುರಿತು ಯಥಾರ್ಥವಾಗಿ ಚಿಂತಿಸುವವರು, ನನ್ನ ಬಳಿ ಬೇರೆ ಯಾರೂ ಇಲ್ಲ. ಎಲ್ಲರೂ ಸ್ವಕಾರ್ಯಗಳನ್ನೇ ಹುಡುಕುತ್ತಾರೆಯೇ ಹೊರತು ಕ್ರಿಸ್ತ ಯೇಸುವಿನ ಕಾರ್ಯಗಳನ್ನು ಹುಡುಕುವುದಿಲ್ಲ. ಆದರೆ ತಿಮೊಥೆಯನ ಗುಣಸ್ವಭಾವವನ್ನು ನೀವು ಬಲ್ಲಿರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ಸುವಾರ್ತೆಯಲ್ಲಿ ನನ್ನೊಂದಿಗೆ ಶ್ರಮಿಸಿದ್ದಾನೆ. ಆದ್ದರಿಂದ ನನಗೆ ಏನು ಸಂಭವಿಸುವುದು ಎಂದು ತಿಳಿದ ಕೂಡಲೇ ಅವನನ್ನು ಕಳುಹಿಸುವ ನಿರೀಕ್ಷೆಯಿದೆ. ಇದಲ್ಲದೆ ನಾನು ಸಹ ಬೇಗನೆ ಬರುವೆನೆಂದು ಕರ್ತ ದೇವರಲ್ಲಿ ಭರವಸೆಯುಳ್ಳವನಾಗಿದ್ದೇನೆ.
ಆದರೂ ನನ್ನ ಸಹೋದರನೂ ಜೊತೆ ಕೆಲಸದವನೂ ಸಹಸೈನಿಕನೂ ಆಗಿರುವ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವುದು ಅವಶ್ಯವೆಂದು ನಾನು ನೆನೆಸಿದ್ದೇನೆ. ಅವನು ನನ್ನ ಕೊರತೆಯಲ್ಲಿ ಸೇವೆ ಮಾಡುವಂತೆ ನೀವು ಕಳುಹಿಸಿದ ನಿಮ್ಮ ಸಂದೇಶಕನೂ ಆಗಿದ್ದಾನೆ. ಏಕೆಂದರೆ ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದಾನೆ. ತಾನು ಅಸ್ವಸ್ಥನಾದ ಸುದ್ದಿಯು ನಿಮಗೆ ಮುಟ್ಟಿತೆಂದು ತಿಳಿದು ತುಂಬಾ ವ್ಯಸನಪಡುತ್ತಿದ್ದಾನೆ. ಅವನು ಅಸ್ವಸ್ಥನಾಗಿ ಸಾಯುವ ಹಾಗೆ ಇದ್ದದ್ದು ನಿಜವೇ. ಆದರೆ ದೇವರು ಅವನನ್ನು ಕರುಣಿಸಿದರು. ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖ ಬಾರದಂತೆ ನನ್ನನ್ನು ಕರುಣಿಸಿದರು. ಆದ್ದರಿಂದ ನೀವು ಅವನನ್ನು ನೋಡಿ ಪುನಃ ಆನಂದಿಸುವಂತೆಯೂ ನನಗೆ ದುಃಖ ಕಡಿಮೆಯಾಗುವಂತೆಯೂ ನಾನು ಅವನನ್ನು ಅತ್ಯಾಸಕ್ತಿಯಿಂದ ಕಳುಹಿಸಿದ್ದೇನೆ. ನೀವು ಅವನನ್ನು ಪೂರ್ಣ ಆನಂದದಿಂದ ಕರ್ತನಲ್ಲಿ ಸೇರಿಸಿಕೊಳ್ಳಿರಿ ಮತ್ತು ಅಂಥವರನ್ನು ಸನ್ಮಾನಿಸಿರಿ. ಅವನು ಕ್ರಿಸ್ತನ ಸೇವೆಯ ನಿಮಿತ್ತ ಸಾಯುವ ಹಾಗಿದ್ದನು. ನೀವು ನನಗೆ ಮಾಡಲು ಸಾಧ್ಯವಾಗದೆ ಹೋದ ಸಹಾಯವನ್ನು ತಾನೇ ಪೂರ್ತಿ ಮಾಡುವುದಕ್ಕಾಗಿ, ಅವನು ತನ್ನ ಪ್ರಾಣವನ್ನೇ ಅಪಾಯಕ್ಕೆ ಗುರಿಪಡಿಸಿಕೊಂಡನು.
Palavras de vida
As palavras de Deus são espírito e vida. Quem fala deve falar como oráculos de Deus, com verdade, sabedoria e edificação.
ಅಜಾಗರೂಕತೆಯ ಮಾತುಗಳು ಖಡ್ಗಗಳಂತೆ ಚುಚ್ಚುತ್ತವೆ,
ಆದರೆ ಜ್ಞಾನವಂತರ ನಾಲಿಗೆಯು ಸ್ವಸ್ಥತೆಯನ್ನು ತರುವುದು.
ಆತಂಕವು ಹೃದಯವನ್ನು ಕುಗ್ಗಿಸುವುದು,
ಆದರೆ ಕನಿಕರದ ಮಾತು ಹುರಿದುಂಬಿಸುವುದು.
ನೀತಿವಂತನ ಬಾಯಿಯು ಜೀವದ ಬುಗ್ಗೆ;
ಆದರೆ ದುಷ್ಟನ ಬಾಯಿ ಹಿಂಸೆಯನ್ನು ಮರೆಮಾಡುತ್ತದೆ.
ಮೃದುವಾದ ಉತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ.
ಆದರೆ ಬಿರುಸಾದ ಮಾತುಗಳು ಕೋಪವನ್ನು ಎಬ್ಬಿಸುತ್ತದೆ.
ತನ್ನ ಬಾಯಿಯ ಫಲದಿಂದ ಮನುಷ್ಯನ ಹೊಟ್ಟೆಯು ತೃಪ್ತಿ ಹೊಂದುವುದು;
ತನ್ನ ತುಟಿಗಳ ಆದಾಯದಿಂದ ಅವನು ತೃಪ್ತಿಹೊಂದುವನು.
ನಾಲಿಗೆಗೆ ಮರಣ ಮತ್ತು ಜೀವದ ಶಕ್ತಿಯಿದೆ;
ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.
ಆದರೆ ಬಾಯೊಳಗಿಂದ ಹೊರಗೆ ಹೊರಡುವಂಥವು ಹೃದಯದೊಳಗಿಂದ ಬಂದು ಮನುಷ್ಯನನ್ನು ಅಶುದ್ಧ ಮಾಡುತ್ತವೆ. ಏಕೆಂದರೆ ಹೃದಯದೊಳಗಿಂದ ದುರಾಲೋಚನೆಗಳು, ಕೊಲೆ, ವ್ಯಭಿಚಾರ, ಅನೈತಿಕತೆ, ಕಳ್ಳತನ, ಸುಳ್ಳುಸಾಕ್ಷಿ, ದೂರು ಇವು ಹೊರ ಬರುತ್ತವೆ.
ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು. ನೀನು ನಿನ್ನ ಮಾತುಗಳಿಂದಲೇ ನೀತಿವಂತನೆಂದು ನಿರ್ಣಯಿಸಲಾಗುವುದು ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯೆಂದು ನಿರ್ಣಯಿಸಲಾಗುವುದು," ಎಂದು ಹೇಳಿದರು.
ಸರ್ಪಸಂತತಿಯವರೇ, ಕೆಟ್ಟವರಾಗಿರುವ ನೀವು ಒಳ್ಳೆಯದೇನನ್ನಾದರೂ ಮಾತನಾಡುವಿರೋ? ಹೃದಯದಲ್ಲಿ ತುಂಬಿರುವದನ್ನೇ ಅವನ ಬಾಯಿ ಮಾತನಾಡುತ್ತದೆ.
ಏಕೆಂದರೆ ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವುದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ, ಅವನು ಪರಿಪೂರ್ಣನೂ ತನ್ನ ಇಡೀ ದೇಹವನ್ನೇ ಸ್ವಾಧೀನದಲ್ಲಿಟ್ಟುಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.
ಕುದುರೆಗಳು ನಮಗೆ ವಿಧೇಯವಾಗುವ ಹಾಗೆ ಅವುಗಳ ಬಾಯಿಗೆ ಕಡಿವಾಣ ಹಾಕುತ್ತೇವಲ್ಲಾ, ಆಗ ಅವುಗಳ ದೇಹವನ್ನೆಲ್ಲಾ ತಿರುಗಿಸುವುದಕ್ಕೆ ಆಗುತ್ತದೆ. ಹಡಗುಗಳ ಉದಾಹರಣೆಯೂ ಅದರಂತೆ ಇದೆ. ಅವು ಬಹು ದೊಡ್ಡವಾಗಿದ್ದರೂ ಬಲವಾದ ಗಾಳಿಯಿಂದ ಬಡಿಸಿಕೊಂಡು ಹೋಗುತ್ತವೆ. ಆದರೂ ಬಹು ಸಣ್ಣ ಚುಕ್ಕಾಣಿಯಿಂದ ಅವುಗಳನ್ನು ನಡೆಸುವವನು ತನ್ನ ಮನಸ್ಸಿಗೆ ಬಂದ ಕಡೆಗೆ ಅವುಗಳನ್ನು ತಿರುಗಿಸುತ್ತಾನೆ. ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಒಂದು ಸಣ್ಣ ಬೆಂಕಿ ಕಿಡಿಯು ದೊಡ್ಡಕಾಡನ್ನೇ ಸುಟ್ಟುಬಿಡುತ್ತದೆ ನೋಡಿರಿ. ನಮ್ಮ ದೇಹದ ಅಂಗಗಳಲ್ಲಿ ನಾಲಿಗೆಯು ಸಹ ಬೆಂಕಿಯೂ ದುಷ್ಟ ಲೋಕವೂ ಆಗಿದೆ. ಹೀಗೆ ನಾಲಿಗೆಯು ನಮ್ಮ ಅಂಗಗಳಲ್ಲಿ ಇದ್ದು, ಇಡೀ ದೇಹವನ್ನೆಲ್ಲಾ ಮಲಿನಗೊಳಿಸುತ್ತದೆ. ಅದು ನರಕದ ಬೆಂಕಿಯಿಂದ ಹೊತ್ತಿಕೊಂಡು, ಮಾನವರ ಇಡೀ ಜೀವನಕ್ಕೆ ಬೆಂಕಿ ಹಚ್ಚುವದಾಗಿದೆ.
ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಮಾನವರು ಹತೋಟಿಗೆ ತರುತ್ತಾರೆ ಮತ್ತು ತಂದಿದ್ದಾರೆ. ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾಗಿದೆ. ಮರಣಕರವಾದ ವಿಷದಿಂದ ತುಂಬಿಕೊಂಡಿದೆ.
ಆದಕಾರಣ, ತಕ್ಕ ವಾಕ್ಯವನ್ನು ಕೇಳುವುದರಿಂದಲೇ ವಿಶ್ವಾಸವು ಬರುತ್ತದೆ, ಅದು ಕ್ರಿಸ್ತನ ವಾಕ್ಯವನ್ನು ಕೇಳುವುದರಿಂದಲೇ ಬರುತ್ತದೆ. ಆದರೆ ಇಸ್ರಾಯೇಲರು ಎಂದೂ ಸುವಾರ್ತೆಯನ್ನು ಕೇಳಲಿಲ್ಲವೋ ಎಂದು ನಾನು ಪ್ರಶ್ನಿಸುತ್ತೇನೆ? ಅವರು ನಿಶ್ಚಯವಾಗಿ ಕೇಳಿದ್ದಾರೆ. ಪವಿತ್ರ ವೇದದಲ್ಲಿ ಹೇಳಿರುವಂತೆ:
"ಅವರ ಸ್ವರವು ಭೂಮಿಯ ಎಲ್ಲಾ ಕಡೆಗಳಲ್ಲಿ ಹೋಗಿರುತ್ತದೆ,
ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿವೆ."