O pão da vida
Jesus se declarou o Pão da Vida — o alimento espiritual que satisfaz a fome mais profunda da alma humana. Quem come deste pão viverá para sempre.
Eu sou o Pão da Vida
Jesus disse: 'Eu sou o pão da vida; quem vem a mim nunca terá fome.' Ele é o sustento que sacia a alma eternamente.
ಯೇಸು ಅವರಿಗೆ "ನಾನೇ ಜೀವದ ರೊಟ್ಟಿ ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವನಿಗೆ ಎಂದಿಗೂ ಬಾಯಾರಿಕೆಯಾಗುವುದಿಲ್ಲ.
ನಾನೇ ಜೀವದ ರೊಟ್ಟಿ
ಆತನು, "ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ" ಎಂದು ಹೇಳಿದ್ದಕ್ಕೆ ಯೆಹೂದ್ಯರು ಆತನ ವಿಷಯವಾಗಿ ಗೊಣಗುಟ್ಟಿ,
ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ" ಎಂದನು.
O pão que dá vida ao mundo
Jesus é o pão vivo que desceu do céu. Quem come da sua carne e bebe do seu sangue tem a vida eterna e será ressuscitado no último dia.
ನಾನೇ ಪರಲೋಕದಿಂದ ಇಳಿದು ಬಂದ ಜೀವವುಳ್ಳ ರೊಟ್ಟಿ. ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾ ಕಾಲವು ಬದುಕುವನು; ಮತ್ತು ನಾನು ಕೊಡುವ ರೊಟ್ಟಿ ನನ್ನ ದೇಹವೇ, ಅದನ್ನು ಲೋಕದ ಜೀವಕ್ಕಾಗಿ ಕೊಡುವೆನು" ಎಂದು ಹೇಳಿದನು.
ಅದಕ್ಕೆ ಯೇಸು ಅವರಿಗೆ, "ನಿಮಗೆ ನಿಜ ನಿಜವಾಗಿ ಹೇಳುತ್ತೇನೆ; ನೀವು ಮನುಷ್ಯಕುಮಾರನ ದೇಹವನ್ನು ತಿಂದು ಮತ್ತು ಆತನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ನಿತ್ಯಜೀವವಿರುವುದಿಲ್ಲ.
ಯೇಸು ಅವನಿಗೆ, "ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.
Saciar a fome da alma
Bem-aventurados os que têm fome e sede de justiça, porque serão fartos. Nem só de pão vive o homem, mas de toda palavra que sai da boca de Deus.
ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರು ತೃಪ್ತರಾಗುವರು.
ಯೇಸು, "‘ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ, ಆದರೆ ದೇವರ ಬಾಯಿಂದ ಬರುವ ಪ್ರತಿಯೊಂದು ನುಡಿಯಿಂದಲೂ ಬದುಕುವನು’ ಎಂದು ಬರೆದಿದೆ" ಅಂದನು.
ನಿಮ್ಮ ಅಗತ್ಯಗಳಿಗಾಗಿ ಚಿಂತಿಸಬೇಡಿರಿ
"ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ. ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ?