O pão da vida
Jesus se declarou o Pão da Vida — o alimento espiritual que satisfaz a fome mais profunda da alma humana. Quem come deste pão viverá para sempre.
Eu sou o Pão da Vida
Jesus disse: 'Eu sou o pão da vida; quem vem a mim nunca terá fome.' Ele é o sustento que sacia a alma eternamente.
ಯೇಸು ಅವರಿಗೆ, "ನಾನೇ ಜೀವದ ರೊಟ್ಟಿ. ನನ್ನ ಬಳಿಗೆ ಬರುವವರಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವರಿಗೆ ಎಂದಿಗೂ ದಾಹವಾಗುವುದಿಲ್ಲ.
ನಾನೇ ಜೀವದ ರೊಟ್ಟಿ.
"ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ," ಎಂದು ಯೇಸು ಹೇಳಿದ್ದಕ್ಕೆ ಯೆಹೂದ್ಯರು ಯೇಸುವಿನ ವಿಷಯವಾಗಿ ಗೊಣಗುಟ್ಟಿ,
ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ, ನೀವು ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿಯೇ ದುಡಿಯಿರಿ. ಅದನ್ನು ಮನುಷ್ಯಪುತ್ರನಾದ ನಾನು ನಿಮಗೆ ಕೊಡುವೆನು. ಇದಕ್ಕಾಗಿ ತಂದೆ ದೇವರು ಮೆಚ್ಚುಗೆಯ ಮುದ್ರೆಯನ್ನು ನನ್ನ ಮೇಲೆ ಹಾಕಿದ್ದಾರೆ," ಎಂದರು.
O pão que dá vida ao mundo
Jesus é o pão vivo que desceu do céu. Quem come da sua carne e bebe do seu sangue tem a vida eterna e será ressuscitado no último dia.
ನಾನೇ ಪರಲೋಕದಿಂದ ಬಂದ ಜೀವದ ರೊಟ್ಟಿ. ಈ ರೊಟ್ಟಿಯನ್ನು ಯಾರು ತಿನ್ನುವರೋ ಅವರು ಸದಾಕಾಲವೂ ಬದುಕುವರು. ಲೋಕದ ಜೀವಕ್ಕಾಗಿ ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ," ಎಂದರು.
ಯೇಸು ಅವರಿಗೆ, "ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಪುತ್ರನಾದ ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ಜೀವವಿರುವುದಿಲ್ಲ.
ಯೇಸು ಅವನಿಗೆ, "ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರಲಾರರು.
Saciar a fome da alma
Bem-aventurados os que têm fome e sede de justiça, porque serão fartos. Nem só de pão vive o homem, mas de toda palavra que sai da boca de Deus.
ನೀತಿಗೋಸ್ಕರ ಹಸಿದು ಬಾಯಾರುವವರು ಧನ್ಯರು,
ಅವರು ತೃಪ್ತಿಹೊಂದುವರು.
ಅದಕ್ಕೆ ಯೇಸು, "ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ, ‘ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ, ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಜೀವಿಸುತ್ತಾನೆ,’" ಎಂದರು.
ಚಿಂತಿಸಬೇಡಿರಿ
"ಆದ್ದರಿಂದ ನಿಮ್ಮ ಜೀವನಕ್ಕಾಗಿ, ಏನು ಊಟಮಾಡಬೇಕು, ಏನು ಕುಡಿಯಬೇಕು ಅಥವಾ ನಿಮ್ಮ ದೇಹಕ್ಕೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವೂ ವಸ್ತ್ರಕ್ಕಿಂತ ದೇಹವೂ ಮೇಲಾದದ್ದಲ್ಲವೇ? ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ಕೂಡಿಡುವುದಿಲ್ಲ. ಆದರೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾರೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಲ್ಲವೇ?