O papel da mulher
A Bíblia honra a mulher como colaboradora essencial no plano de Deus. De Provérbios 31 às mulheres do Novo Testamento, a Escritura celebra a sabedoria, a força e a fé feminina.
A mulher virtuosa
Mulher virtuosa, quem a achará? Seu valor excede o de rubis. Ela é sábia, trabalhadora, generosa e temida pelo Senhor.
ಗುಣವತಿಯಾದ ಹೆಂಡತಿ ಎಲ್ಲಿ ಸಿಕ್ಕಾಳು?
ಅವಳು ಹವಳಕ್ಕಿಂತಲೂ ಬಹು ಅಮೂಲ್ಯಳು.
ಅವಳ ಪತಿಯ ಹೃದಯವು ಅವಳಲ್ಲಿ ಭರವಸೆ ಇಡುತ್ತದೆ,
ಅವನಿಗೆ ಯಾವ ಆದಾಯದ ಕೊರತೆಯೂ ಇರುವುದಿಲ್ಲ.
ತನ್ನ ಜೀವಮಾನದಲ್ಲೆಲ್ಲಾ ಆಕೆಯು ಅವನಿಗೆ ಕೆಟ್ಟದ್ದನ್ನಲ್ಲ,
ಒಳ್ಳೆಯದನ್ನೇ ಮಾಡುವಳು.
ಆಕೆಯು ಉಣ್ಣೆಯನ್ನೂ ಸೆಣಬನ್ನೂ ತಂದು,
ತನ್ನ ಚಟುವಟಿಕೆಯ ಕೈಗಳಿಂದ ಕೆಲಸ ಮಾಡುವಳು.
ಆಕೆಯು ವರ್ತಕರ ಹಡಗುಗಳಂತೆ ಇರುವಳು;
ದೂರದಿಂದ ಆಹಾರವನ್ನು ಆಕೆಯು ತರುವಳು.
ಇನ್ನೂ ಕತ್ತಲಿರುವಾಗಲೇ ಆಕೆಯು ಏಳುವಳು;
ತನ್ನ ಮನೆಯವರಿಗೆ ಆಹಾರವನ್ನು ಕೊಟ್ಟು,
ತನ್ನ ದಾಸಿಯರಿಗೆ ದಿನದ ಕೆಲಸವನ್ನು ಹಂಚುವಳು.
ಆಕೆಯು ಹೊಲವನ್ನು ನೋಡಿ, ಅದನ್ನು ಕೊಂಡುಕೊಳ್ಳುತ್ತಾಳೆ.
ತನ್ನ ಕೈಕೆಲಸದ ಆದಾಯದಿಂದ ದ್ರಾಕ್ಷಾಲತೆಗಳನ್ನು ನೆಡುತ್ತಾಳೆ.
ಆಕೆಯು ನಡುಕಟ್ಟಿ ಆಸಕ್ತಿಯಿಂದ ಕೆಲಸ ಮಾಡುತ್ತಾಳೆ.
ತನ್ನ ಶಕ್ತಿಯುತ ತೋಳುಗಳಿಂದ ಕೆಲಸ ಮಾಡುತ್ತಾಳೆ.
ತನ್ನ ವ್ಯಾಪಾರವು ಲಾಭದಾಯಕವೆಂದು ಅವಳು ನೋಡುತ್ತಾಳೆ.
ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು.
ಅವಳು ರಾಟೆಯ ಮೇಲೆ ಕೈಹಾಕಿ,
ಕದಿರನ್ನು ಹಿಡಿಯುತ್ತಾಳೆ.
ಆಕೆಯು ಬಡವರಿಗಾಗಿ ಕೈ ಬಿಚ್ಚಿ ಕೊಡುತ್ತಾಳೆ.
ಹೌದು, ದಿಕ್ಕಿಲ್ಲದವರಿಗೆ ದಾನ ಮಾಡುತ್ತಾಳೆ.
ಆಕೆಯು ನಯವಾದ ನಾರುಮಡಿಯನ್ನು ನೇಯ್ದು ಮಾರಾಟ ಮಾಡುತ್ತಾಳೆ.
ಆಕೆಯು ನಡುಕಟ್ಟುಗಳನ್ನು ತಯಾರಿಸಿ ವರ್ತಕರಿಗೆ ಒದಗಿಸುತ್ತಾಳೆ.
ಆಕೆಯ ಉಡುಪು ಬಲವೂ ಘನತೆಯೂ ಆಗಿವೆ.
ಭವಿಷ್ಯತ್ತಿನ ಭಯವಿಲ್ಲದೆ ಆಕೆಯು ನಗುವಳು.
ಆಕೆಯು ಜ್ಞಾನದಿಂದ ಮಾತನಾಡುತ್ತಾಳೆ.
ಆಕೆಯ ನಾಲಿಗೆಯ ಮೇಲೆ ನಂಬಿಗಸ್ತ ಶಿಕ್ಷಣ ಇದೆ.
ಆಕೆಯು ತನ್ನ ಗೃಹಕೃತ್ಯಗಳನ್ನೆಲ್ಲಾ ಚೆನ್ನಾಗಿ ನೋಡಿಕೊಳ್ಳುತ್ತಾಳೆ.
ಸೋಮಾರಿಯಾಗಿ ಕೆಲಸಮಾಡದೆ ಆಹಾರವನ್ನು ತಿನ್ನುವುದಿಲ್ಲ.
ಜ್ಞಾನಿಯಾದ ಸ್ತ್ರೀಯು ತನ್ನ ಮನೆಯನ್ನು ಕಟ್ಟುತ್ತಾಳೆ;
ಬುದ್ಧಿಹೀನಳೋ ತನ್ನ ಕೈಗಳಿಂದಲೇ ಅದನ್ನು ಕಿತ್ತುಹಾಕುತ್ತಾಳೆ.
ಪಾಪ ಸಂಬಧಿತ ಎಚ್ಚರಿಕೆ
ಮಗನೇ, ನಿನ್ನ ತಂದೆಯ ಶಿಕ್ಷಣಗಳನ್ನು ಕೇಳು,
ನಿನ್ನ ತಾಯಿಯ ಉಪದೇಶವನ್ನು ತೊರೆಯಬೇಡ.
Beleza interior
A beleza verdadeira não é exterior, mas o caráter incorruptível de um espírito manso e tranquilo. Isso tem grande valor diante de Deus.
ಅದೇ ರೀತಿಯಾಗಿ ಪತ್ನಿಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. ಪತಿಯರಲ್ಲಿ ಯಾರಾದರೂ ವಾಕ್ಯವನ್ನು ಸ್ವೀಕರಿಸದವರಾಗಿದ್ದರೂ ಪತ್ನಿಯರ ನಡತೆಯಿಂದ ವಾಕ್ಯವಿಲ್ಲದೆ ಅವರನ್ನು ಗೆಲ್ಲುವಂತೆ, ನೀವು ನಿರ್ಮಲರಾಗಿಯೂ ಭಯಭರಿತರಾಗಿಯೂ ನಡೆದುಕೊಳ್ಳುವದನ್ನು ಅವರು ನೋಡಲಿ. ವಿಚಿತ್ರವಾಗಿ ಜಡೆ ಹೆಣೆದುಕೊಳ್ಳುವುದೂ ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವುದೂ ಇಲ್ಲವೆ ತುಂಬಾ ಬೆಲೆಯ ಉಡಿಗೆಗಳನ್ನು ಧರಿಸಿಕೊಳ್ಳುವುದೂ ಇವೇ ನಿಮ್ಮ ಅಲಂಕಾರವಾಗಿರಬಾರದು. ಅದರ ಬದಲು ಸಾತ್ವಿಕವಾದ ಶಾಂತಮನಸ್ಸು ಎಂಬ ಹೃದಯದ ಆಂತರ್ಯದ ಅಲಂಕಾರವೇ ನಿಮ್ಮದಾಗಿರಲಿ. ಇದು ದೇವರ ದೃಷ್ಟಿಗೆ ಬಹು ಅಮೂಲ್ಯವಾದದ್ದಾಗಿದೆ. ಪೂರ್ವಕಾಲದಲ್ಲಿ ದೇವರ ಮೇಲೆ ನಿರೀಕ್ಷೆಯಿಟ್ಟ ಪರಿಶುದ್ಧ ಸ್ತ್ರೀಯರು ಸಹ ಹೀಗೆಯೇ ತಮ್ಮನ್ನು ಅಲಂಕರಿಸಿಕೊಂಡರು. ಅವರು ತಮ್ಮ ತಮ್ಮ ಪತಿಯರಿಗೆ ಅಧೀನರಾಗಿದ್ದರು. ಹಾಗೆಯೇ ಸಾರಳು ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು "ಯಜಮಾನ" ಎಂದು ಕರೆದಳು. ನೀವು ಸಾರಳ ಪುತ್ರಿಯರಾಗಿದ್ದೀರಲ್ಲಾ. ನೀವು ಒಳ್ಳೆಯದು ಯಾವುದೋ ಅದನ್ನು ಮಾಡುವುದಾದರೆ ಯಾವುದಕ್ಕೂ ಭಯಪಡಬೇಕಾಗಿರುವುದಿಲ್ಲ.
ಅದೇ ರೀತಿಯಾಗಿ ಪುರುಷರೇ, ಸ್ತ್ರೀಯು ಬಲಹೀನಳೆಂಬುದನ್ನು ತಿಳಿದು ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ಇರಿ. ಅವರು ಜೀವ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವುದಿಲ್ಲ.
ಹಾಗೆಯೇ ಸ್ತ್ರೀಯರು ಸಭ್ಯತೆ ಹಾಗೂ ಸ್ವಸ್ಥಬುದ್ಧಿಯುಳ್ಳವರಾಗಿದ್ದು ಗೌರವಕ್ಕೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆ, ಚಿನ್ನ, ಮುತ್ತುಗಳು, ಬೆಲೆಯುಳ್ಳ ವಸ್ತ್ರ ಇವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ,
ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು. ಚಾಡಿ ಹೇಳದವರೂ ಸ್ವಸ್ಥ ಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು.
Parceria e dignidade
Deus criou homem e mulher à sua imagem. A mulher não é inferior, mas parceira e co-herdeira da graça da vida.
ಹೀಗೆ ದೇವರು ಮನುಷ್ಯನನ್ನು ತಮ್ಮ ಸ್ವರೂಪದಲ್ಲಿ ಸೃಷ್ಟಿ ಮಾಡಿದರು.
ದೇವರ ಸ್ವರೂಪದಲ್ಲಿಯೇ ಅವರನ್ನು ಸೃಷ್ಟಿ ಮಾಡಿದರು.
ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿ ಮಾಡಿದರು.
ದೇವರು ಅವರನ್ನು ಆಶೀರ್ವದಿಸಿ, "ನೀವು ಸಂತಾನವುಳ್ಳವರಾಗಿ, ಸಂಖ್ಯೆಯಲ್ಲಿ ಹೆಚ್ಚಿರಿ, ಭೂಮಿಯನ್ನು ತುಂಬಿಸಿ ಅದನ್ನು ಆಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ನೆಲದ ಮೇಲೆ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ಆಳ್ವಿಕೆ ನಡೆಸಿರಿ," ಎಂದು ಅವರಿಗೆ ಹೇಳಿದರು.
ಅನಂತರ ಯೆಹೋವ ದೇವರು, "ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಬೀಳುವ ಸಹಕಾರಿಣಿಯನ್ನು ಉಂಟುಮಾಡುವೆನು," ಎಂದರು.
ಬಳಿಕ ದೇವರು ಸ್ತ್ರೀಗೆ ಹೀಗೆ ಹೇಳಿದರು,
"ನಾನು ನಿನ್ನ ಗರ್ಭ ವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು.
ನೀನು ನೋವಿನಿಂದ ಮಕ್ಕಳನ್ನು ಹೆರುವಿ.
ನಿನ್ನ ಗಂಡನ ಮೇಲೆ ನಿನ್ನ ಬಯಕೆ ಇರುವುದು.
ಅವನು ನಿನ್ನನ್ನು ಆಳುವನು."
ಆದರೂ, ಕರ್ತ ದೇವರಲ್ಲಿ ಪುರುಷನಿಲ್ಲದೆ ಸ್ತ್ರೀಯು ಇಲ್ಲ; ಸ್ತ್ರೀಯಿಲ್ಲದ ಪುರುಷನೂ ಇಲ್ಲ. ಏಕೆಂದರೆ ಸ್ತ್ರೀಯು ಪುರುಷನಿಂದ ಉತ್ಪತ್ತಿಯಾದಂತೆ, ಪುರುಷನು ಸ್ತ್ರೀಯಿಂದ ಜನಿಸುತ್ತಾನೆ. ಆದರೆ ಸಮಸ್ತವೂ ದೇವರಿಂದಲೇ ಆಗಿರುತ್ತದೆ.
ಹೆಂಡತಿಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. ಏಕೆಂದರೆ, ಕ್ರಿಸ್ತ ಯೇಸು ಸಭೆಗೆ ಶಿರಸ್ಸಾಗಿರುವ ಪ್ರಕಾರ ಗಂಡನು ಹೆಂಡತಿಗೆ ಶಿರಸ್ಸಾಗಿದ್ದಾನೆ. ಕ್ರಿಸ್ತ ಯೇಸು ತಮ್ಮ ಸಭೆ ಎಂಬ ದೇಹಕ್ಕೆ ರಕ್ಷಕರಾಗಿದ್ದಾರೆ. ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು.
ಅದೇ ಪ್ರಕಾರ, ವೃದ್ಧಸ್ತ್ರೀಯರು ನಡತೆಯಲ್ಲಿ ಭಕ್ತಿಗೆ ತಕ್ಕ ಹಾಗೆ ಇರುವವರಾಗಿರಬೇಕು. ಅವರು ಸುಳ್ಳಾಗಿ ದೂರುವವರೂ ಮದ್ಯಾಸಕ್ತರೂ ಆಗಿರದೆ, ಒಳ್ಳೆಯವುಗಳನ್ನು ಬೋಧಿಸುವವರಾಗಿರಬೇಕು ಎಂದು ಅವರಿಗೆ ಉಪದೇಶಿಸು. ಇದಲ್ಲದೆ ದೇವರ ವಾಕ್ಯವು ದೂಷಣೆಯಾಗದಂತೆ ಯೌವನ ಸ್ತ್ರೀಯರು ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವವರೂ ಸ್ವಶಿಸ್ತನ್ನು ಹೊಂದಿದವರೂ ಪತಿವ್ರತೆಯರೂ ಮನೆಯಲ್ಲಿ ಕೆಲಸ ಮಾಡುವವರೂ ದಯೆವುಳ್ಳವರೂ ತಮ್ಮ ಗಂಡಂದಿರಿಗೆ ಅಧೀನರೂ ಆಗಿರಬೇಕೆಂದು ವೃದ್ಧಸ್ತ್ರೀಯರಿಂದ ಕಲಿತುಕೊಳ್ಳಿರಿ.