As 10 parábolas mais importantes de Jesus
Jesus ensinou lições profundas por meio de parábolas, histórias curtas e simbólicas que comunicam verdades espirituais. Cada parábola tem um significado especial e atemporal, revelando o caráter de Deus e ensinando como viver como cristãos. Aqui estão 10 das parábolas mais marcantes e suas lições:
1. Parábola do Semeador (Mateus 13:3-9)
ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಹೇಳಿದನು.
"ಕೇಳಿರಿ, ಬಿತ್ತುವವನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು. ಹಕ್ಕಿಗಳು ಬಂದು ಅವುಗಳನ್ನು ತಿಂದು ಬಿಟ್ಟವು. ಕೆಲವು ಬೀಜಗಳು ಬಹಳ ಮಣ್ಣಿಲ್ಲದ ಬಂಡೆಯ ನೆಲದಲ್ಲಿ ಬಿದ್ದವು. ಮಣ್ಣು ತೆಳ್ಳಗಿದ್ದುದರಿಂದ ಅವು ಬೇಗ ಮೊಳೆತವು. ಆದರೆ ಬಿಸಿಲೇರಿದಾಗ ಬೇರಿಲ್ಲದ ಕಾರಣ ಬಾಡಿ ಒಣಗಿಹೋದವು. ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು, ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು. ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು, ಕೆಲವು ಮೂವತ್ತರಷ್ಟು ಫಲವನ್ನು ಕೊಟ್ಟವು. ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ" ಅಂದನು.
A parábola do semeador fala sobre a receptividade das pessoas à Palavra de Deus. Cada tipo de solo representa diferentes maneiras de receber e aplicar o Evangelho em nossas vidas. Somente um coração fértil e comprometido pode dar frutos espirituais abundantes.
2. O Bom Samaritano (Lucas 10:25-37)
ಒಳ್ಳೆಯ ಸಮಾರ್ಯದವನ ಸಾಮ್ಯ
ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವುದಕ್ಕಾಗಿ, "ಬೋಧಕನೇ, ನಾನು ನಿತ್ಯಜೀವವನ್ನು ಹೊಂದಿಕೊಳ್ಳಲು ಏನು ಮಾಡಬೇಕು?" ಎಂದು ಕೇಳಲು, ಆತನು ಅವನಿಗೆ, "ಧರ್ಮಶಾಸ್ತ್ರದಲ್ಲಿ ಏನು ಬರೆದದೆ? ಹೇಗೆ ಓದಿದ್ದೀ?" ಎಂದು ಕೇಳಿದನು. ಅದಕ್ಕೆ ಅವನು, "‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಬುದ್ಧಿಯಿಂದಲೂ ಪ್ರೀತಿಸಬೇಕು.’ ಮತ್ತು ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂದು ಬರೆದದೆ" ಅಂದನು. ಆತನು ಅವನಿಗೆ, "ನೀನು ಸರಿಯಾಗಿ ಉತ್ತರಕೊಟ್ಟಿರುವಿ, ಅದರಂತೆ ಮಾಡು, ಮಾಡಿದರೆ ನಿತ್ಯಜೀವಕ್ಕೆ ಬಾಧ್ಯನಾಗುವಿ" ಎಂದು ಹೇಳಿದನು. ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವುದಕ್ಕೆ ಅಪೇಕ್ಷಿಸಿ, "ನನ್ನ ನೆರೆಯವನು ಯಾರು?" ಎಂದು ಯೇಸುವನ್ನು ಕೇಳಲು, ಯೇಸು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ, "ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನ ಬೆಟ್ಟದ ಪ್ರದೇಶದಿಂದ ಇಳಿದು ಯೆರಿಕೋ ಎಂಬ ಊರಿಗೆ ಹೋಗುತ್ತಿರುವಾಗ ಕಳ್ಳರ ಕೈಗೆ ಸಿಕ್ಕಿಬಿದ್ದನು. ಅವರು ಅವನನ್ನು ಸುಲಿಗೆ ಮಾಡಿಕೊಂಡು, ಹೊಡೆದು, ಅವನನ್ನು ಅರೆಜೀವಮಾಡಿ ಬಿಟ್ಟುಹೋದರು. ಆಗ ಒಬ್ಬ ಯಾಜಕನು ಆ ದಾರಿಯಲ್ಲಿ ಇಳಿದುಬರುತ್ತಾ ಅವನನ್ನು ಕಂಡು ಓರೆಯಾಗಿ ಹೋದನು. ಅದೇ ರೀತಿಯಲ್ಲಿ ಒಬ್ಬ ಲೇವಿಯು ಆ ಸ್ಥಳಕ್ಕೆ ಬಂದು ಅವನನ್ನು ಕಂಡು ಓರೆಯಾಗಿ ಹೋದನು. ಆದರೆ ಒಬ್ಬ ಸಮಾರ್ಯದವನು ಪ್ರಯಾಣಮಾಡುತ್ತಾ ಅವನು ಬಿದಿದ್ದ ಸ್ಥಳಕ್ಕೆ ಬಂದಾಗ ಅವನನ್ನು ಕಂಡು ಕನಿಕರಿಸಿ, ಅವನ ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು ಗಾಯವನು ಕಟ್ಟಿ ತನ್ನ ಸ್ವಂತ ವಾಹನ ಪಶುವಿನ ಮೇಲೆ ಹತ್ತಿಸಿಕೊಂಡು ಛತ್ರಕ್ಕೆ ಕರೆದುಕೊಂಡು ಹೋಗಿ ಅವನನ್ನು ಆರೈಕೆಮಾಡಿದನು. ಮರುದಿನ ಅವನು ಎರಡು ದಿನಾರಿಗಳನ್ನು ತೆಗೆದು ಛತ್ರದವನಿಗೆ ಕೊಟ್ಟು, ‘ಇವನನ್ನು ಆರೈಕೆಮಾಡು, ಇದಕ್ಕಿಂತ ಹೆಚ್ಚಾಗಿ ಏನಾದರೂ ವೆಚ್ಚಮಾಡಿದರೆ ನಾನು ಹಿಂತಿರುಗಿ ಬಂದಾಗ ನಿನಗೆ ಕೊಡುವೆನು’ ಅಂದನು. ಈ ಮೂವರಲ್ಲಿ ಯಾವನು ಕಳ್ಳರ ಕೈಗೆ ಸಿಕ್ಕಿದವನಿಗೆ ನೆರೆಯವನಾದನೆಂದು ನಿನಗೆ ತೋರುತ್ತದೆ ಹೇಳು?" ಎಂದು ಕೇಳಿದ್ದಕ್ಕೆ, ಆ ಧರ್ಮೋಪದೇಶಕನು, "ಅವನಿಗೆ ದಯೆ ತೋರಿಸಿದವನೇ" ಅಂದನು. ಆಗ ಯೇಸು ಅವನಿಗೆ, "ಹೋಗು, ನೀನೂ ಅದರಂತೆ ಮಾಡು" ಎಂದು ಹೇಳಿದನು.
Essa parábola nos ensina sobre o amor ao próximo, independentemente de raça ou religião. O samaritano ajudou um desconhecido, mostrando que a verdadeira fé se revela no amor ao próximo.
3. A Ovelha Perdida (Lucas 15:4-7)
ಅದೇನೆಂದರೆ, "ನಿಮ್ಮೊಳಗೆ ಯಾವ ಮನುಷ್ಯನಾದರೂ ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ಕಳೆದುಹೋದರೆ ಅವನು ತೊಂಬತ್ತೊಂಬತ್ತನ್ನೂ ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ತನಕ ಅದನ್ನು ಹುಡುಕಿಕೊಂಡು ಹೋಗದೆ ಇದ್ದಾನೆಯೇ? ಸಿಕ್ಕಿದ ಮೇಲೆ ಅವನು ಸಂತೋಷದಿಂದ ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು, ಮನೆಗೆ ಬಂದು ಸ್ನೇಹಿತರನ್ನೂ ನೆರೆಹೊರೆಯವರನ್ನೂ ಕೂಡಿಸಿ, ‘ಕಳೆದುಹೋಗಿದ್ದ ಕುರಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ’ ಎಂದು ಅವರಿಗೆ ಹೇಳುವನಲ್ಲವೇ. ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಹೆಚ್ಚು ಸಂತೋಷವುಂಟಾಗುವುದೆಂದು ನಿಮಗೆ ಹೇಳುತ್ತೇನೆ.
Deus é como o pastor que busca incessantemente uma ovelha perdida. Essa parábola revela o amor incansável de Deus pelos pecadores, celebrando a alegria no céu quando alguém se arrepende.
4. O Filho Pródigo (Lucas 15:11-32)
ದುಂದುಗಾರ ಮಗ
ಇನ್ನೂ ಆತನು ಹೇಳಿದ್ದೇನಂದರೆ, "ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವರಲ್ಲಿ ಕಿರಿಯವನು ತಂದೆಗೆ, ‘ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು’ ಎಂದು ಕೇಳಿಕೊಳ್ಳಲು ತಂದೆಯು ಆಸ್ತಿಯನ್ನು ಅವರಿಗೆ ಹಂಚಿಕೊಟ್ಟನು. ಸ್ವಲ್ಪ ದಿನದ ಮೇಲೆ ಆ ಕಿರಿಯ ಮಗನು ತನ್ನ ಪಾಲನ್ನೆಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಹೊರಟುಹೋಗಿ ಅಲ್ಲಿ ಪಟಿಂಗನಾಗಿ ಬದುಕಿ ತನ್ನ ಆಸ್ತಿಯನ್ನು ಹಾಳುಮಾಡಿಕೊಂಡನು. ಹೀಗೆ ಅವನು ಎಲ್ಲಾ ಹಾಳುಮಾಡಿಕೊಂಡ ಮೇಲೆ ಆ ದೇಶದಲ್ಲೆಲ್ಲಾ ಘೋರವಾದ ಬರ ಬಂದು ಏನೂ ಗತಿಯಿಲ್ಲದವನಾದನು. ಆಗ ಅವನು ಹೋಗಿ ಆ ದೇಶದ ನಿವಾಸಿಗಳೊಳಗೆ ಒಬ್ಬನಲ್ಲಿ ಸೇರಿಕೊಂಡನು. ಆ ಮನುಷ್ಯನು ಹಂದಿಗಳನ್ನು ಮೇಯಿಸುವುದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು. ಹೀಗಿರಲಾಗಿ ಅವನು ಹಂದಿ ತಿನ್ನುತ್ತಿದ್ದ ಕಾಯಿಗಳನ್ನಾದರೂ ತಿಂದು ಹಸಿವನ್ನು ತೀರಿಸಿಕೊಳ್ಳಬೇಕೆಂದು ಆಸೆಪಟ್ಟನು, ಆದರೂ ಯಾರೂ ಅವನಿಗೆ ಕೊಡಲಿಲ್ಲ. ಆಗ ಅವನಿಗೆ ಬುದ್ಧಿಬಂದು ಅವನು, ‘ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವಿದೆ, ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ. ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪ ಮಾಡಿದ್ದೇನೆ. ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ, ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು’ ಎಂದು ಹೇಳುವೆನು ಅಂದುಕೊಂಡು, ಎದ್ದು ತನ್ನ ತಂದೆಯ ಕಡೆಗೆ ಬಂದನು.
"ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು, ಕನಿಕರಪಟ್ಟು, ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು, ಅವನಿಗೆ ಬಹಳವಾಗಿ ಮುದ್ದಿಟ್ಟನು. ಆದರೂ ಮಗನು ಅವನಿಗೆ, ‘ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪ ಮಾಡಿದ್ದೇನೆ. ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಲು, ತಂದೆಯು ತನ್ನ ಆಳುಗಳಿಗೆ, ‘ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ಉಡಿಸಿ, ಇವನ ಕೈಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಜೋಡು ಮೆಡಿಸಿರಿ, ಕೊಬ್ಬಿಸಿದ ಆ ಕರುವನ್ನು ತಂದು ಕೊಯ್ಯಿರಿ, ಹಬ್ಬಮಾಡೋಣ, ಉಲ್ಲಾಸಪಡೋಣ. ಈ ನನ್ನ ಮಗನು ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ. ಪೋಲಿಹೋಗಿದ್ದನು, ಸಿಕ್ಕಿದನು’ ಎಂದು ಹೇಳಿ ಉಲ್ಲಾಸಪಡುವುದಕ್ಕೆ ತೊಡಗಿದರು. ಆದರೆ ಅವನ ಹಿರಿಯ ಮಗನು ಹೊಲದಲ್ಲಿದ್ದನು. ಅವನು ಮನೆಯ ಸಮೀಪಕ್ಕೆ ಬರುತ್ತಿರುವಾಗ ವಾದ್ಯಘೋಷಗಳನ್ನೂ ನರ್ತನಗಳನ್ನು ಕೇಳಿ, ಆಳುಗಳಲ್ಲಿ ಒಬ್ಬನನ್ನು ತನ್ನ ಬಳಿಗೆ ಕರೆದು, ಇದೇನು ಎಂದು ವಿಚಾರಿಸಿದನು. ಆಳು ಅವನಿಗೆ, ‘ನಿನ್ನ ತಮ್ಮ ಬಂದಿದ್ದಾನೆ. ಇವನು ಸುರಕ್ಷಿತನಾಗಿ ಬಂದದ್ದರಿಂದ ನಿನ್ನ ತಂದೆಯು ಆ ಕೊಬ್ಬಿದ ಕರುವನ್ನು ಕೊಯ್ಸಿದ್ದಾನೆ’ ಎಂದು ಹೇಳಿದನು. ಇದನ್ನು ಕೇಳಿ ಹಿರಿಯ ಮಗನು ಕೋಪಗೊಂಡು ಮನೆ ಒಳಕ್ಕೆ ಹೋಗಲು ಇಷ್ಟಪಡಲಿಲ್ಲ. ಆಗ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿಕೊಂಡನು. ಆದರೆ ಅವನು ತನ್ನ ತಂದೆಗೆ, ‘ನೋಡು, ಇಷ್ಟು ವರ್ಷ ನಿನಗೆ ಸೇವೆ ಮಾಡಿದ್ದೇನೆ, ಮತ್ತು ನಾನು ನಿನ್ನ ಅಪ್ಪಣೆಗಳಲ್ಲಿ ಒಂದನ್ನಾದರೂ ಎಂದೂ ಮೀರಲಿಲ್ಲ. ಆದರೂ ನಾನು ನನ್ನ ಸ್ನೇಹಿತರ ಸಂಗಡ ಉಲ್ಲಾಸಪಡುವುದಕ್ಕಾಗಿ ನೀನು ಎಂದೂ ನನಗೆ ಒಂದು ಆಡನ್ನಾದರೂ ಕೊಡಲಿಲ್ಲ. ಆದರೆ ಸೂಳೆಯರನ್ನು ಕಟ್ಟಿಕೊಂಡು ನಿನ್ನ ಬದುಕನ್ನು ಹಾಳುಮಾಡಿದ ಈ ನಿನ್ನ ಮಗನು ಬಂದಾಗ ಕೊಬ್ಬಿದ ಕರುವನ್ನು ಇವನಿಗೆ ಕೊಯ್ಸಿದಿಯಲ್ಲಾ’ ಎಂದು ಉತ್ತರಕೊಟ್ಟನು. ಅದಕ್ಕೆ ತಂದೆಯು, ‘ಕಂದಾ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ ಮತ್ತು ನನ್ನದೆಲ್ಲಾ ನಿನ್ನದೇ. ಆದರೆ ಉಲ್ಲಾಸಪಡುವುದೂ ಸಂತೋಷಗೊಳ್ಳುವುದೂ ನ್ಯಾಯವಾದದ್ದೇ, ಏಕೆಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ; ಪೋಲಿಹೋಗಿದ್ದನು, ಸಿಕ್ಕಿದನು’" ಎಂದು ಹೇಳಿದನು.
A parábola do filho pródigo fala sobre o perdão e o amor incondicional de Deus por Seus filhos, mesmo quando se desviam.
5. A Pérola de Grande Valor (Mateus 13:45-46)
ಮತ್ತು ಪರಲೋಕ ರಾಜ್ಯವು ಉತ್ತಮವಾದ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ. ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಬಂದು ಅದನ್ನು ಕೊಂಡುಕೊಂಡನು.
Jesus ensina que o Reino de Deus é o bem mais precioso e devemos estar dispostos a renunciar tudo para possuí-lo.
6. O Fariseu e o Publicano (Lucas 18:9-14)
ಫರಿಸಾಯನ ಹಾಗೂ ಸುಂಕದವನ ಪ್ರಾರ್ಥನೆ
ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ತಿರಸ್ಕಾರ ಮಾಡುವಂತಹ ಕೆಲವರಿಗೆ ಒಂದು ಸಾಮ್ಯವನ್ನು ಯೇಸು ಹೇಳಿದನು. ಅದೇನೆಂದರೆ, "ಪ್ರಾರ್ಥನೆಮಾಡಬೇಕೆಂದು ಇಬ್ಬರು ಮನುಷ್ಯರು ದೇವಾಲಯಕ್ಕೆ ಹೋದರು. ಒಬ್ಬನು ಫರಿಸಾಯನು, ಇನ್ನೊಬ್ಬನು ಸುಂಕದವನು. ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ, ‘ದೇವರೇ, ದರೋಡೆಕೋರರೂ, ಅನ್ಯಾಯಗಾರರೂ, ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ, ಆದುದರಿಂದ ನಿನಗೆ ಸ್ತೋತ್ರಮಾಡುತ್ತೇನೆ. ವಾರಕ್ಕೆ ಎರಡಾವರ್ತಿ ಉಪವಾಸಮಾಡುತ್ತೇನೆ; ನಾನು ಸಂಪಾದಿಸಿದ ಎಲ್ಲಾದರಲ್ಲಿಯೂ ಹತ್ತರಲ್ಲೊಂದು ಪಾಲು ಕೊಡುತ್ತೇನೆ’ ಎಂದು ಪ್ರಾರ್ಥಿಸಿದನು. ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಆಗದೇ, ‘ದೇವರೇ, ಪಾಪಿಯಾದ ನನ್ನನ್ನು ಕರುಣಿಸು’ ಅಂದನು. ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು. ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು" ಅಂದನು.
Essa parábola nos lembra que Deus valoriza um coração humilde e arrependido, em contraste com a arrogância espiritual. O publicano, ao reconhecer seus pecados, foi justificado diante de Deus.
7. Os Talentos (Mateus 25:14-30)
ತಲಾಂತುಗಳ ಸಾಮ್ಯ
"ದೇವರ ರಾಜ್ಯವು ಹೇಗೆಂದರೆ ದೇಶಾಂತರಕ್ಕೆ ಹೊರಟ್ಟಿದ್ದ ಒಬ್ಬ ಮನುಷ್ಯನು ತನ್ನ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿಕೊಟ್ಟಂತಿರುವುದು. ಅವನು ಒಬ್ಬನಿಗೆ ಐದು ತಲಾಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ತಲಾಂತನ್ನು ವಹಿಸಿಕೊಟ್ಟು ತನ್ನ ಪ್ರಯಾಣಕ್ಕೆ ಹೋದನು. ತಕ್ಷಣವೇ ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು. ಹಾಗೆಯೇ ಎರಡು ತಲಾಂತು ಹೊಂದಿದವನು ಇನ್ನೂ ಎರಡು ಸಂಪಾದಿಸಿಕೊಂಡನು. ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂಮಿಯನ್ನು ಅಗೆದು ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು. ಬಹುಕಾಲದ ಮೇಲೆ ಆ ಸೇವಕರ ಯಜಮಾನನು ಬಂದು ಅವರಿಂದ ಲೆಕ್ಕ ತೆಗೆದುಕೊಳ್ಳಲು ಐದು ತಲಾಂತುಗಳು ಹೊಂದಿದವನು ಮುಂದೆ ಬಂದು ಇನ್ನೂ ಐದು ತಲಾಂತುಗಳನ್ನು ತಂದು, ‘ಯಜಮಾನನೇ, ನೀನು ಐದು ತಲಾಂತಗಳನ್ನು ನನಗೆ ಕೊಟ್ಟಿದ್ದೆಯಲ್ಲಾ, ಇಗೋ, ಇನ್ನು ಐದು ತಲಾಂತು ಸಂಪಾದಿಸಿದ್ದೇನೆ’ ಅಂದನು. ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ; ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಅಂದನು. ಆಗ ಎರಡು ತಲಾಂತು ಹೊಂದಿದವನು ಮುಂದೆ ಬಂದು, ‘ಯಜಮಾನನೇ, ನೀನು ಎರಡು ತಲಾಂತನ್ನು ನನಗೆ ಒಪ್ಪಿಸಿದ್ದೆಯಲ್ಲಾ; ಇಗೋ, ಇನ್ನು ಎರಡು ತಲಾಂತು ಸಂಪಾದಿಸಿದ್ದೇನೆ’ ಅಂದನು. ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಎಂದು ಹೇಳಿದನು. ತರುವಾಯ ಒಂದು ತಲಾಂತು ಹೊಂದಿದವನು ಸಹ ಮುಂದೆಬಂದು, ‘ಯಜಮಾನನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನು, ನೀನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಆಗಿರುವ ಕಠಿಣ ಮನುಷ್ಯನು ಎಂದು ನಾನು ತಿಳಿದು ಹೆದರಿ, ಹೊರಟುಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು; ಇಗೋ, ನಿನ್ನದು ನಿನಗೇ ಸಲ್ಲಿಸುತ್ತಿದ್ದೇನೆ’ ಅಂದನು. ಆಗ ಅವನ ಯಜಮಾನನು ಅವನಿಗೆ, ‘ಮೈಗಳ್ಳನಾದ ದುಷ್ಟ ಸೇವಕನೇ; ನೀನು ನನ್ನನ್ನು ಬಿತ್ತದಿರುವಲ್ಲಿ ಕೊಯ್ಯುವವನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಎಂದು ತಿಳಿದಿದ್ದೇಯಾ? ಹಾಗಾದರೆ, ನೀನು ನನ್ನ ಹಣವನ್ನು ಸಾಹುಕಾರರಲ್ಲಿ ಬಡ್ಡಿಗೆ ಹಾಕಬೇಕಾಗಿತ್ತು; ನಾನು ಬಂದು ನನ್ನದನ್ನು ಬಡ್ಡಿ ಸಹಿತ ಪಡೆದುಕೊಳ್ಳುತ್ತಿದ್ದೆನು ಎಂದು ಹೇಳಿ, ಅವನಿಂದ ಆ ತಲಾಂತನ್ನು ತೆಗೆದು ಹತ್ತು ತಲಾಂತು ಇರುವ ಸೇವಕನಿಗೆ ಕೊಟ್ಟನು. ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲ್ಪಡುವುದು, ಅವರಿಗೆ ಇನ್ನೂ ಹೆಚ್ಚಾಗುವುದು; ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು. ಮತ್ತು ನಿಷ್ಪ್ರಯೋಜಕನಾದ ಈ ಸೇವಕನನ್ನು ಹೊರಗೆ ಕಗ್ಗತ್ತಲೆಗೆ ಹಾಕಿಬಿಡಿರಿ ಎಂದು ಅಪ್ಪಣೆಕೊಟ್ಟನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.’
Nesta história, Jesus ensina sobre a responsabilidade de usar bem os dons e recursos que Deus nos confiou. A fidelidade nas pequenas coisas abre portas para bênçãos maiores.
8. O Rico e Lázaro (Lucas 16:19-31)
ಐಶ್ವರ್ಯವಂತನೂ ಲಾಜರನೂ
"ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಬೆಲೆಬಾಳುವ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು, ಪ್ರತಿದಿನವು ಸುಖಸಂತೋಷಗಳಲ್ಲಿ ಜೀವಿಸುತ್ತಿದ್ದನು. ಅವನ ಮನೇ ಬಾಗಿಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು. ಇವನು ಮೈತುಂಬಾ ಹುಣ್ಣೆದ್ದವನು. ಐಶ್ವರ್ಯವಂತನ ಮೇಜಿನಿಂದ ಬಿದ್ದ ಎಂಜಲನ್ನು ತಿಂದು ಹಸಿವು ತೀರಿಸಿಕೊಳ್ಳಬೇಕೆಂದಿದ್ದನು. ಇಷ್ಟು ಮಾತ್ರವಲ್ಲದೆ ನಾಯಿಗಳು ಸಹ ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು. ಹೀಗಿರುವಲ್ಲಿ ಸ್ವಲ್ಪ ಕಾಲವಾದ ಮೇಲೆ ಆ ಭಿಕ್ಷುಕನು ಸತ್ತನು. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು. ಅವನನ್ನು ಹೂಣಿಟ್ಟರು. ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ, ‘ತಂದೆಯೇ, ಅಬ್ರಹಾಮನೇ ನನ್ನ ಮೇಲೆ ಕರುಣೆ ಇಟ್ಟು ಲಾಜರನನ್ನು ಕಳುಹಿಸು ಅವನು ತನ್ನ ತುದಿ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ಏಕೆಂದರೆ ಈ ಉರಿಯಲ್ಲಿ ಸಂಕಟಪಡುತ್ತಿದ್ದೇನೆ’ ಎಂದು ಕೂಗಿ ಹೇಳಿದನು. ಆದರೆ ಅಬ್ರಹಾಮನು, ‘ಕಂದಾ, ನೀನು ಆಶಿಸಿದ ಸುಖಸಂಪತ್ತನ್ನು ನಿನ್ನ ಜೀವಮಾನದಲ್ಲಿ ಹೊಂದಿದ್ದಿ. ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬುದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ. ಇದು ಮಾತ್ರವಲ್ಲದೆ ನಮಗೂ ನಿಮಗೂ ನಡುವೆ ದೊಡ್ಡದೊಂದು ಆಳವಾದ ಕಂದಕ ಇದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಹೋಗಬೇಕೆಂದಿರುವವರು ಹೋಗಲಾರರು. ಮತ್ತು ಆ ಕಡೆಯಿಂದ ನಮ್ಮ ಬಳಿಗೆ ಯಾರಿಂದಲೂ ಬರಲಿಕ್ಕಾಗದು’ ಅಂದನು. ಆಗ ಅವನು, ‘ಅಪ್ಪಾ, ಹಾಗಾದರೆ ಲಾಜರನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ನನಗೆ ಐದು ಮಂದಿ ಅಣ್ಣತಮ್ಮಂದಿರಿದ್ದಾರೆ. ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದಂತೆ ಅವನು ತಾನು ಕಂಡದ್ದನ್ನು ಅವರಿಗೆ ಚೆನ್ನಾಗಿ ತಿಳಿಸಿ ಹೇಳಲಿ’ ಅಂದನು. ಅದಕ್ಕೆ ಅಬ್ರಹಾಮನು, ‘ಮೋಶೆಯ ಧರ್ಮಶಾಸ್ತ್ರವೂ ಪ್ರವಾದಿಗಳ ಗ್ರಂಥಗಳೂ ಅವರಲ್ಲಿ ಅವೆ, ಅವುಗಳನ್ನು ಕೇಳಲಿ’ ಅನ್ನಲು, ಅವನು ‘ತಂದೆಯೇ, ಅಬ್ರಹಾಮನೇ ಹಾಗಲ್ಲ. ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವರು’ ಅಂದನು. ಅಬ್ರಹಾಮನು ಅವನಿಗೆ, ‘ಅವರು ಮೋಶೆಯ ಮಾತನ್ನೂ ಪ್ರವಾದಿಗಳ ಮಾತನ್ನೂ ಕೇಳದಿದ್ದರೆ ಸತ್ತುಹೋಗಿದ್ದವನೊಬ್ಬನು ಜೀವಿತನಾಗಿ ಎದ್ದರೂ ಅವರು ಒಪ್ಪುವುದಿಲ್ಲ’ ಎಂದು ಹೇಳಿದನು."
A parábola alerta sobre as consequências de negligenciar os necessitados e viver para si mesmo. Também destaca a realidade do julgamento e da vida após a morte.
9. O Joio e o Trigo (Mateus 13:24-30)
ಗೋದಿ ಮತ್ತು ಕಳೆಗಳ ಸಾಮ್ಯ
ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, "ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ. ಆದರೆ ಜನರು ನಿದ್ರೆ ಮಾಡುವ ಸಮಯದಲ್ಲಿ ಅವನ ವೈರಿಯು ಬಂದು ಗೋದಿಯ ನಡುವೆ ಕಳೆಯನ್ನು ಬಿತ್ತಿ ಹೋದನು. ಗೋದಿಯು ಬೆಳೆದು ಫಲ ಬಿಟ್ಟಾಗ ಕಳೆಯು ಸಹ ಕಾಣ ಬಂದಿತು. ಆಗ ಯಜಮಾನನ ಆಳುಗಳು ಅವನ ಬಳಿಗೆ ಬಂದು, ‘ಅಯ್ಯಾ ನೀನು ನಿನ್ನ ಹೊಲದಲ್ಲಿ ಒಳ್ಳೆಯ ಬೀಜವನ್ನು ಬಿತ್ತಿದ್ದಿಯಲ್ಲಾ ಕಳೆ ಎಲ್ಲಿಂದ ಬಂದಿತು?’ ಎಂದು ಕೇಳಿದರು. ಅದಕ್ಕೆ ಅವನು, ‘ಇದು ವೈರಿ ಮಾಡಿದ ಕೆಲಸ’ ಎಂದು ಹೇಳಿದನು, ಅದಕ್ಕೆ ಆಳುಗಳು ಅವನಿಗೆ, ‘ಹಾಗಾದರೆ ನಾವು ಹೋಗಿ ಅದನ್ನು ಕಿತ್ತುಹಾಕುವುದು ನಿಮಗೆ ಇಷ್ಟವಿದೆಯೋ?’ ಎಂದು ಕೇಳಿದರು. ಅವರಿಗೆ ಅವನು, ‘ಬೇಡ, ಕಳೆಯನ್ನು ಕೀಳುವಾಗ ಅದರ ಸಂಗಡ ಗೋದಿಯನ್ನೆಲ್ಲಾದರೂ ಕಿತ್ತೀರಿ. ಸುಗ್ಗಿ ಕಾಲದ ತನಕ ಎರಡೂ ಒಟ್ಟಿಗೆ ಬೆಳೆಯಲಿ. ಸುಗ್ಗಿ ಕಾಲದಲ್ಲಿ ನಾನು ಕೊಯ್ಯುವವರಿಗೆ, ಮೊದಲು ಕಳೆಯನ್ನು ಕಿತ್ತು ತೆಗೆದು ಹೊರೆಕಟ್ಟಿ ಅದನ್ನು ಸುಡುವುದಕ್ಕೆ ಹಾಕಿ, ಗೋದಿಯನ್ನು ಕೂಡಿಸಿ ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು’" ಅಂದನು.
Essa história simboliza o bem e o mal coexistindo no mundo até o julgamento final, quando Deus fará a separação entre os justos e os ímpios.
10. As Dez Virgens (Mateus 25:1-13)
ಹತ್ತುಮಂದಿ ಕನ್ಯೆಯರ ಸಾಮ್ಯ
"ಪರಲೋಕ ರಾಜ್ಯವು ತಮ್ಮ ದೀಪಾರತಿಗಳನ್ನು ತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಟಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ. ಅವರಲ್ಲಿ ಐದು ಮಂದಿ ಬುದ್ಧಿವಂತೆಯರು, ಐದು ಮಂದಿ ಬುದ್ಧಿಹೀನರು. ಅವಿವೇಕಿಗಳು ತಮ್ಮ ದೀಪಾರತಿಗಳನ್ನು ತೆಗೆದುಕೊಂಡರು, ಆದರೆ ತಮ್ಮೊಂದಿಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ. ಆದರೆ ಬುದ್ಧಿವಂತರಾದ ಕನ್ನಿಕೆಯರು ತಮ್ಮ ದೀಪಾರತಿಗಳೊಂದಿಗೆ ಪಾತ್ರೆಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು. ಮದಲಿಂಗನು ಬರುವುದಕ್ಕೆ ತಡಮಾಡಲು ಅವರೆಲ್ಲರೂ ತೂಕಡಿಸಿ ನಿದ್ರಿಸಿದರು. ಆದರೆ ಅರ್ಧರಾತ್ರಿಯಲ್ಲಿ, ‘ಇಗೋ, ಮದಲಿಂಗನು ಬರುತ್ತಿದ್ದಾನೆ ಅವನನ್ನು ಎದುರುಗೊಳ್ಳಲು ಹೊರಡಿರಿ’ ಎಂಬ ಕೂಗು ಕೇಳಿಸಿತು. ಆಗ ಆ ಕನ್ನಿಕೆಯರೆಲ್ಲರು ಎಚ್ಚೆತ್ತು ತಮ್ಮ ದೀಪಾರತಿಗಳನ್ನು ಸರಿಮಾಡಿಕೊಂಡರು. ಆಗ ಬುದ್ಧಿಹೀನರಾದ ಕನ್ನಿಕೆಯರು ಬುದ್ಧಿವಂತರಾಗಿದ್ದ ಕನ್ನಿಕೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿರಿ. ಏಕೆಂದರೆ ನಮ್ಮ ದೀಪಗಳು ಆರಿಹೋಗುತ್ತವೆ’ ಎಂದು ಕೇಳಿದರು. ಅದಕ್ಕೆ ಆ ಬುದ್ಧಿವಂತರಾದ ಕನ್ನಿಕೆಯರು, ಆಗುವುದಿಲ್ಲ ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆ ಹೋದೀತು; ನೀವು ಮಾರುವವರ ಬಳಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು’ ಅಂದರು. ಅವರು ಕೊಂಡುಕೊಳ್ಳುವುದಕ್ಕೆ ಹೊರಟುಹೋದಾಗ ಮದಲಿಂಗನು ಬಂದನು. ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಗೆ ಹೋದರು, ಬಾಗಿಲನ್ನು ಮುಚ್ಚಲಾಯಿತು. ಅನಂತರ ಉಳಿದ ಕನ್ನಿಕೆಯರು ಸಹ ಬಂದು, ‘ಕರ್ತನೇ, ಕರ್ತನೇ, ನಮಗೆ ಬಾಗಿಲು ತೆರೆಯಿರಿ’ ಅಂದರು. ಆದರೆ ಆತನು ಅವರಿಗೆ ಉತ್ತರವಾಗಿ, ‘ನಿಮ್ಮನ್ನು ನಾನರಿಯೆನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅಂದನು. ಏಕೆಂದರೆ ಆ ದಿನವಾದರೂ ಗಳಿಗೆಯಾದರೂ ನಿಮಗೆ ತಿಳಿಯದು, ಆದಕಾರಣ ಎಚ್ಚರವಾಗಿರಿ.
Jesus enfatiza a necessidade de estarmos sempre preparados espiritualmente para Sua segunda vinda, pois ninguém sabe o momento exato.
As parábolas de Jesus continuam sendo fontes ricas de sabedoria e direção para a vida cristã. Ao aplicarmos esses ensinamentos, nos aproximamos mais de Deus e de Sua vontade.
Se este artigo te ajudou, faça sua parte e compartilhe a Palavra de Deus com aqueles que você ama.