Pecado
O pecado é a realidade que separa a humanidade de Deus. Mas a Bíblia também revela a solução: o sangue de Cristo que nos purifica e a graça que nos liberta de toda condenação.
A universalidade do pecado
Todos pecaram e carecem da glória de Deus. Não há justo, nem sequer um. O pecado entrou no mundo por um homem, mas a graça veio por Jesus.
ಎಲ್ಲರೂ ಪಾಪ ಮಾಡಿ ದೇವರ ಮಹಿಮೆಯನ್ನು ಹೊಂದದೇ ಹೋಗಿದ್ದಾರೆ.
ಎಲ್ಲರೂ ಪಾಪ ಮಾಡಿ ದೇವರ ಮಹಿಮೆಯನ್ನು ಹೊಂದದೇ ಹೋಗಿದ್ದಾರೆ. ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಅದು ಕ್ರಿಸ್ತ ಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವುದು.
ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ.
ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.
ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ;
ನಾವೆಲ್ಲರೂ ಎಲೆಗಳೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.
ಪಾಪಮಾಡುವ ಪ್ರತಿಯೊಬ್ಬನೂ ಅಧರ್ಮವನ್ನು ಮಾಡುವವನಾಗಿದ್ದಾನೆ; ಪಾಪವು ಅಧರ್ಮವೇ.
Liberdade da condenação
Não há condenação para os que estão em Cristo Jesus. Ele nos libertou da lei do pecado e da morte para vivermos em novidade de vida.
ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಯಾವ ಅಪರಾಧ ನಿರ್ಣಯವೂ ಇಲ್ಲ, ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ವಿಮುಕ್ತಿಗೊಳಿಸಿತು.
ಹೀಗಿರುವುದರಿಂದ ಸಾವಿಗೆ ಒಳಗಾಗುವ ಈ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ. ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ. ಯಾಕೆಂದರೆ ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ. ಹಾಗಾದರೇನು? ನಾವು ಧರ್ಮಶಾಸ್ತ್ರಾಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಎಂದಿಗೂ ಮಾಡಬಾರದು. ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ನೀವು ಒಪ್ಪಿಸಿ ಕೊಡುತ್ತೀರೋ ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬುದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; ನಂಬಿಕೆಯೆಂಬ ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ ಆದರೆ ನೀವು ಮೊದಲು ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಿಕೊಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದ್ದರಿಂದಲೂ, ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದ್ದರಿಂದಲೂ ದೇವರಿಗೆ ಸ್ತೋತ್ರವಾಗಲಿ.
ಹಾಗಾದರೇನು? ನಾವು ಧರ್ಮಶಾಸ್ತ್ರಾಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಎಂದಿಗೂ ಮಾಡಬಾರದು.
ಧರ್ಮಶಾಸ್ತ್ರವು ಆತ್ಮೀಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ದೇಹಧರ್ಮಕ್ಕೆ ಒಳಗಾದವನೂ, ಪಾಪದ ಅಧೀನದಲ್ಲಿ ಗುಲಾಮನಾಗಿರುವುದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ. ಹೇಗೆಂದರೆ ನಾನು ಮಾಡುವುದು ನನಗೇ ತಿಳಿಯುತ್ತಿಲ್ಲ, ಯಾವುದನ್ನು ಮಾಡಬೇಕೆಂದು ನಾನು ಇಚ್ಚಿಸುತ್ತೇನೋ ಅದನ್ನು ಮಾಡದೇ ಅದಕ್ಕೆ ವಿರುದ್ಧವಾದದ್ದನ್ನು ಮಾಡುತ್ತೇನೆ. ಆದರೆ ನಾನು ಮಾಡುವಂಥದಕ್ಕೆ ನನ್ನ ಮನಸ್ಸು ಒಪ್ಪದಿದ್ದರೆ ಧರ್ಮಶಾಸ್ತ್ರವು ಉತ್ತಮವಾದದ್ದೆಂದು ಒಪ್ಪಿಕೊಂಡ ಹಾಗಾಯಿತು. ಹೀಗಿರಲಾಗಿ ಆ ಅಸಹ್ಯವಾದದ್ದನ್ನು ಮಾಡುವವನು ಇನ್ನು ನಾನಲ್ಲ, ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತದೆ.
ಅದಕ್ಕೆ ಯೇಸು, "ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪ ಮಾಡುವವರೆಲ್ಲರು ಪಾಪಕ್ಕೆ ದಾಸರಾಗಿದ್ದಾರೆ.
Confissão e perdão
Se confessarmos os nossos pecados, Deus é fiel e justo para nos perdoar e purificar de toda injustiça. A confissão liberta a alma.
ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಗೊಳಿಸಿಕೊಂಡ ಹಾಗಾಯಿತು ಮತ್ತು ಸತ್ಯವೆಂಬುದು ನಮ್ಮಲ್ಲಿಲ್ಲವೆಂದು ತಿಳಿಯುತ್ತದೆ. ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.
ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.
ನಾವು ದೇವರೊಂದಿಗೆ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿಕೊಳ್ಳುತ್ತಾ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುತ್ತಿಲ್ಲ ಎಂದು ತಿಳಿದು ಬರುತ್ತದೆ.
ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು;
ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು.
ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು;
ನನ್ನ ದೋಷವನ್ನು ಪರಿಹರಿಸಿ, ನನ್ನನ್ನು ಶುದ್ಧಿಗೊಳಿಸು.
ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ;
ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ.
ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ.
ಹುಟ್ಟಿದಂದಿನಿಂದ ನಾನು ಪಾಪಿಯೇ;
ಮಾತೃಗರ್ಭವನ್ನು ಹೊಂದಿದ ದಿನದಿಂದ ದ್ರೋಹಿಯೇ.
ಯಥಾರ್ಥಚಿತ್ತವೇ ನಿನಗೆ ಸಂತೋಷ;
ಸುಜ್ಞಾನದ ರಹಸ್ಯಗಳನ್ನು ನನಗೆ ತಿಳಿಯಪಡಿಸು.
ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮಕಿಸಿಯೋ ಎಂಬಂತೆ
ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗುವೆನು;
ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು.
ನನ್ನಲ್ಲಿ ಸಂಭ್ರಮೋತ್ಸವದ ಧ್ವನಿ ಉಂಟಾಗುವಂತೆ ಮಾಡು;
ಆಗ ನೀನು ಜಜ್ಜಿದ ಎಲುಬುಗಳು ಆನಂದಪಡುವವು.
ನನ್ನ ದೋಷಕ್ಕೆ ವಿಮುಖನಾಗು;
ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು.
ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು
ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು.
ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ. ಸೆಲಾ
ಯಾರ ದ್ರೋಹವು ಪರಿಹಾರವಾಗಿದೆಯೋ,
ಯಾರ ಪಾಪವು ಕ್ಷಮಿಸಲ್ಪಟ್ಟಿದೆಯೋ ಅವನೇ ಧನ್ಯನು.
ಯೆಹೋವನೇ, ನನ್ನ ಪಾಪವು ಬಹುಘೋರವಾಗಿದೆ;
ಆದರೂ ನಿನ್ನ ಹೆಸರಿನ ನಿಮಿತ್ತ ಅದನ್ನು ಕ್ಷಮಿಸು.
ಯೆಹೋವನೇ, ನೀನು ಆದಿಯಿಂದಲೂ ನನ್ನನ್ನು ಕರುಣಿಸುವವನಾಗಿ,
ನನಗೆ ಮಾಡಿದ ಮಹೋಪಕಾರಗಳನ್ನು ನೆನಸಿಕೋ.
ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ಮತ್ತು ದ್ರೋಹಗಳನ್ನೂ ಮನಸ್ಸಿನಲ್ಲಿಡದೆ,
ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಪುಮಾಡಿಕೋ.
ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವವನು ಯಾರು?
ಮರೆಯಾದ ದೋಷಗಳಿಂದ ನನ್ನನ್ನು ನಿರ್ಮಲಮಾಡು.
ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು,
ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.
Vencendo o pecado
Cristo nos resgatou e nos restaurou. Devemos mortificar as obras da carne, fugir do pecado e prosseguir em santidade.
ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.
ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು," ಅಂದನು.
ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.
ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.
ಪಾಪಮಾಡುವವನು ಸೈತಾನನಿಗೆ ಸಂಬಂಧಪಟ್ಟವನಾಗಿದ್ದಾನೆ. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ಸೈತಾನನ ಕೆಲಸಗಳನ್ನು ನಾಶಮಾಡುವುದಕ್ಕೋಸ್ಕರ ದೇವಕುಮಾರನು ಪ್ರತ್ಯಕ್ಷನಾದನು.
ದೇವರಿಂದ ಹುಟ್ಟಿರುವವನು ಪಾಪಮಾಡುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವನು ತನ್ನನ್ನು ತಾನು ಕಾಪಾಡಿಕೊಳ್ಳುವನು. ಕೆಡುಕನು ಅವನನ್ನು ಮುಟ್ಟುವುದಿಲ್ಲ.
ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.
ಜಾರತ್ವ ಮತ್ತು ಯಾವ ವಿಧವಾದ ಅಶುದ್ಧತ್ವ ಅಥವಾ ದ್ರವ್ಯಾಶೆ ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು.
ನಿಷ್ಪ್ರಯೋಜಕವಾದ ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ. ಆ ಜನರು ರಹಸ್ಯವಾಗಿ ನಡಿಸುವ ಕೆಲಸಗಳನ್ನು ಕುರಿತು ಹೇಳುವುದಕ್ಕೂ ಅವಮಾನಕರವಾಗಿದೆ.
"ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ," ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ.
Responsabilidade e restauração
O pecado tem consequências, mas Deus restaura o arrependido. Devemos corrigir uns aos outros com mansidão e cobrir o pecado com amor.
ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ.
ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ನೀತಿನಿಯಮಗಳನ್ನು ನೆರವೇರಿಸಿರಿ.
"ನಿನ್ನ ಸಹೋದರನು ನಿನ್ನ ವಿರುದ್ಧ ತಪ್ಪು ಮಾಡಿದರೆ, ನೀನು ಹೋಗಿ ಅವನು ಒಬ್ಬನೇ ಇರುವಾಗ ಅವನ ತಪ್ಪನ್ನು ಅವನಿಗೆ ಅರಿವಾಗುವಂತೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ನೀನು ಸಂಪಾದಿಸಿಕೊಂಡಿರುವಿ.
"ನಿನ್ನ ಸಹೋದರನು ನಿನ್ನ ವಿರುದ್ಧ ತಪ್ಪು ಮಾಡಿದರೆ, ನೀನು ಹೋಗಿ ಅವನು ಒಬ್ಬನೇ ಇರುವಾಗ ಅವನ ತಪ್ಪನ್ನು ಅವನಿಗೆ ಅರಿವಾಗುವಂತೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ನೀನು ಸಂಪಾದಿಸಿಕೊಂಡಿರುವಿ.
ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯನ್ನುಂಟುಮಾಡಿದರೆ ಅಂಥವನ ಕೊರಳಿಗೆ ದೊಡ್ಡ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಳುಗಿಸಿಬಿಡುವುದು ಅವನಿಗೆ ಉತ್ತಮ.
"ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಧೂಳನ್ನು ಏಕೆ ಯೋಚಿಸುವೇ?
ನೀವು ಜನರ ತಪ್ಪುಗಳನ್ನು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷಮಿಸುವನು.
ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.
ಹೀಗಿರುವುದರಿಂದ ಒಳ್ಳೆಯದನ್ನು ಮಾಡಬೇಕೆಂದು ಗೊತ್ತಿದರೂ ಅದನ್ನು ಮಾಡದೆ ಇರುವವನು ಪಾಪ ಮಾಡುವವನಾಗಿದ್ದಾನೆ.
ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.
ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.
ಅದೇ ಬಾಯಿಂದ ಸ್ತುತಿ ಮತ್ತು ಶಾಪ ಎರಡೂ ಬರುತ್ತವೆ. ನನ್ನ ಸಹೋದರರೇ,
ಮೊಟ್ಟಮೊದಲು ನಿಮ್ಮ ನಿಮ್ಮೊಳಗೆ ಪ್ರಾಮಾಣಿಕವಾದ ಪ್ರೀತಿಯಿರಲಿ. ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.
Fuga do pecado
Bem-aventurado o que não anda no conselho dos ímpios. O caminho do justo é guardado pelo Senhor, e sua Palavra nos protege da queda.
ಯಾರು ದುಷ್ಟರ ಆಲೋಚನೆಯಂತೆ ನಡೆಯದೆ,
ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ,
ಧರ್ಮನಿಂದಕರೊಡನೆ ಕುಳಿತುಕೊಳ್ಳದೆ,
ನಿನ್ನ ನುಡಿಗನುಸಾರವಾಗಿ ನನ್ನ ಹೆಜ್ಜೆಯನ್ನು ದೃಢಪಡಿಸು,
ಯಾವ ಅನ್ಯಾಯವಾದರೂ ನನ್ನನ್ನು ಆಳದಂತೆ ಮಾಡು.
ನಿರ್ದೋಷದ ನಡತೆಯವನು ನಿರ್ಭಯವಾಗಿ ನಡೆಯುವನು,
ವಕ್ರಮಾರ್ಗಿಯು ಬೈಲಿಗೆ ಬೀಳುವನು.
ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನು ತರುತ್ತಾನೆ; ಕೆಟ್ಟವನು ಕೆಟ್ಟಬೊಕ್ಕಸದೊಳಗಿನಿಂದ ಕೆಟ್ಟದ್ದನ್ನು ತರುತ್ತಾನೆ; ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು, ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.
ತರುವಾಯ ಪಿಲಾತನು ಪುನಃ ಹೊರಗೆ ಹೋಗಿ ಯೆಹೂದ್ಯರಿಗೆ, "ನನಗೆ ಅವನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲವೆಂಬುದು ನಿಮಗೆ ತಿಳಿಯುವಂತೆ ಅವನನ್ನು ನಿಮ್ಮ ಬಳಿಗೆ ತರುತ್ತೇನೆ ನೋಡಿರಿ" ಎಂದು ಹೇಳಿದನು. ಯೇಸು ಮುಳ್ಳಿನ ಕಿರೀಟವನ್ನು ಮತ್ತು ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಧರಿಸಿದವನಾಗಿ ಹೊರಗೆ ಬಂದನು. ಆಗ ಪಿಲಾತನು ಅವರಿಗೆ, "ಇಗೋ, ಈ ಮನುಷ್ಯನು" ಎಂದನು. ಮುಖ್ಯಯಾಜಕರೂ ಮತ್ತು ಕಾವಲುಗಾರರು ಆತನನ್ನು ಕಾಣುತ್ತಲೇ, "ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು" ಎಂದು ಕೂಗಿದರು. ಪಿಲಾತನು ಅವರಿಗೆ, "ಬೇಕಾದರೆ ನೀವೇ ಅವನನ್ನು ತೆಗೆದುಕೊಂಡು ಹೋಗಿ ಶಿಲುಬೆಗೆ ಹಾಕಿರಿ, ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲ" ಎಂದನು.
ನೀವು ಯಾರ ಪಾಪಗಳನ್ನು ಕ್ಷಮಿಸಿಬಿಡುತ್ತೀರೋ, ಅವರಿಗೆ ಅವುಗಳು ಕ್ಷಮಾಪಣೆಯಾಗುತ್ತದೆ; ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಅವುಗಳು ಉಳಿಯುತ್ತವೆ" ಎಂದು ಹೇಳಿದನು.
ನಿನ್ನ ಮುಖವು ಕಳೆಗುಂದಲು ಕಾರಣವೇನು? ನೀನು ತಲೆ ತಗ್ಗಿಸಲು ಕಾರಣವೇನು? ನೀನು ಒಳ್ಳೆಯ ಕೆಲಸ ಮಾಡಿದ್ದರೆ ನಿನ್ನ ತಲೆಯು ಎತ್ತಲ್ಪಡುವುದಲ್ಲವೇ? ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವುದು, ಅದು ನಿನ್ನನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವುದು. ಆದರೆ ನೀನು ಅದನ್ನು ಹಿಡಿತದಲ್ಲಿ ಇರಿಸಿಕೊಳ್ಳಬೇಕು" ಎಂದು ಹೇಳಿದನು.