Perdão e misericórdia
O perdão é o coração do evangelho. Deus nos perdoou em Cristo e nos chama a perdoar uns aos outros, assim como fomos perdoados — sem limites e sem condições.
O perdão de Deus
Deus é rico em misericórdia. Ele apaga nossas transgressões e não se lembra mais dos nossos pecados. Quem confessa, alcança perdão.
ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.
ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.
ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡುವುದಿಲ್ಲ.
ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡುವುದಿಲ್ಲ.
ಪೂರ್ವಕ್ಕೂ, ಪಶ್ಚಿಮಕ್ಕೂ ಎಷ್ಟು ದೂರವೋ,
ನಮ್ಮ ದ್ರೋಹಗಳನ್ನು ನಮ್ಮಿಂದ ತೆಗೆದು ಅಷ್ಟು ದೂರ ಮಾಡಿದ್ದಾನೆ.
ಕರ್ತನೇ, ನೀನು ಒಳ್ಳೆಯವನೂ, ಕ್ಷಮಿಸುವವನೂ,
ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದಿಯಲ್ಲಾ.
ಕರ್ತನೇ, ನೀನು ಒಳ್ಳೆಯವನೂ, ಕ್ಷಮಿಸುವವನೂ,
ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದಿಯಲ್ಲಾ.
ಕರ್ತನೇ, ನೀನು ಒಳ್ಳೆಯವನೂ, ಕ್ಷಮಿಸುವವನೂ,
ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದಿಯಲ್ಲಾ.
ನಾನು ಅವರ ದುಷ್ಕೃತ್ಯಗಳನ್ನು ಕರುಣೆಯಿಂದ ಕ್ಷಮಿಸುವೆನು
ಮತ್ತು ಅವರ ಪಾಪಗಳನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ’" ಎಂದು ಕರ್ತನು ನುಡಿಯುತ್ತಾನೆ.
Perdoar como fomos perdoados
Jesus ensinou que devemos perdoar setenta vezes sete. Se não perdoarmos aos outros, o Pai celestial também não nos perdoará.
ಕರುಣೆಯಿಲ್ಲದ ಸೇವಕನ ಸಾಮ್ಯ
ಆಗ ಪೇತ್ರನು ಆತನ ಬಳಿಗೆ ಬಂದು, "ಕರ್ತನೇ ನನ್ನ ಸಹೋದರನು ನನ್ನ ವಿರುದ್ಧ ಪಾಪ ಮಾಡಿದರೆ ನಾನು ಎಷ್ಟು ಸಾರಿ ಅವನನ್ನು ಕ್ಷಮಿಸಬೇಕು? ಏಳು ಸಾರಿಯೋ?" ಎಂದು ಕೇಳಿದನು. ಯೇಸು ಅವನಿಗೆ, "ಏಳು ಸಾರಿ ಎಂದಲ್ಲ ಏಳೆಪ್ಪತ್ತು ಸಾರಿ ಎಂದು ನಿನಗೆ ಹೇಳುತ್ತೇನೆ.
ಕರುಣೆಯಿಲ್ಲದ ಸೇವಕನ ಸಾಮ್ಯ
ಆಗ ಪೇತ್ರನು ಆತನ ಬಳಿಗೆ ಬಂದು, "ಕರ್ತನೇ ನನ್ನ ಸಹೋದರನು ನನ್ನ ವಿರುದ್ಧ ಪಾಪ ಮಾಡಿದರೆ ನಾನು ಎಷ್ಟು ಸಾರಿ ಅವನನ್ನು ಕ್ಷಮಿಸಬೇಕು? ಏಳು ಸಾರಿಯೋ?" ಎಂದು ಕೇಳಿದನು. ಯೇಸು ಅವನಿಗೆ, "ಏಳು ಸಾರಿ ಎಂದಲ್ಲ ಏಳೆಪ್ಪತ್ತು ಸಾರಿ ಎಂದು ನಿನಗೆ ಹೇಳುತ್ತೇನೆ.
ಕರುಣೆಯಿಲ್ಲದ ಸೇವಕನ ಸಾಮ್ಯ
ಆಗ ಪೇತ್ರನು ಆತನ ಬಳಿಗೆ ಬಂದು, "ಕರ್ತನೇ ನನ್ನ ಸಹೋದರನು ನನ್ನ ವಿರುದ್ಧ ಪಾಪ ಮಾಡಿದರೆ ನಾನು ಎಷ್ಟು ಸಾರಿ ಅವನನ್ನು ಕ್ಷಮಿಸಬೇಕು? ಏಳು ಸಾರಿಯೋ?" ಎಂದು ಕೇಳಿದನು. ಯೇಸು ಅವನಿಗೆ, "ಏಳು ಸಾರಿ ಎಂದಲ್ಲ ಏಳೆಪ್ಪತ್ತು ಸಾರಿ ಎಂದು ನಿನಗೆ ಹೇಳುತ್ತೇನೆ.
ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸಹೋದರನಿಗೆ ಹೃದಯಪೂರ್ವಕವಾಗಿ ಕ್ಷಮಿಸದೇ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ನಿಮಗೂ ಹಾಗೆಯೇ ಮಾಡುವನು" ಅಂದನು.
ನೀವು ಜನರ ತಪ್ಪುಗಳನ್ನು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷಮಿಸುವನು. ಆದರೆ ನೀವು ಜನರ ತಪ್ಪುಗಳನ್ನು ಕ್ಷಮಿಸದೇ ಹೋದರೆ ನಿಮ್ಮ ತಂದೆ ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.
ನೀವು ಜನರ ತಪ್ಪುಗಳನ್ನು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷಮಿಸುವನು. ಆದರೆ ನೀವು ಜನರ ತಪ್ಪುಗಳನ್ನು ಕ್ಷಮಿಸದೇ ಹೋದರೆ ನಿಮ್ಮ ತಂದೆ ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.
ನೀವು ಜನರ ತಪ್ಪುಗಳನ್ನು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷಮಿಸುವನು.
ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆ
ನಮ್ಮ ತಪ್ಪುಗಳನ್ನು ಕ್ಷಮಿಸು.
ಕರುಣೆಯುಳ್ಳವರು ಧನ್ಯರು; ಅವರು ಕರುಣೆ ಹೊಂದುವರು.
A prática do perdão
Perdoar é um ato de obediência e liberdade. A Escritura nos exorta a suportar uns aos outros e perdoar de coração, se alguém tiver algo contra outro.
ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾದರೂ ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ, ತಪ್ಪುಹೊರಿಸದೆ ಕ್ಷಮಿಸಿರಿ, ಕರ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವೂ ಕ್ಷಮಿಸಿರಿ.
ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾದರೂ ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ, ತಪ್ಪುಹೊರಿಸದೆ ಕ್ಷಮಿಸಿರಿ, ಕರ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವೂ ಕ್ಷಮಿಸಿರಿ.
ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾದರೂ ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ, ತಪ್ಪುಹೊರಿಸದೆ ಕ್ಷಮಿಸಿರಿ, ಕರ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವೂ ಕ್ಷಮಿಸಿರಿ.
ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.
ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.
ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.
ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು.
ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು.
ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ಸಾಮ್ರಾಜ್ಯಕ್ಕೆ ಸೇರಿಸಿದನು. ಈ ಕುಮಾರನಲ್ಲಿ ನಮ್ಮ ಪಾಪಗಳು ಕ್ಷಮಿಸಲ್ಪಟ್ಟು ನಮಗೆ ವಿಮೋಚನೆಯಾಯಿತು.
Misericórdia e graça
Deus é compassivo e tardio em irar-se. A misericórdia triunfa sobre o juízo, e quem se humilha diante de Deus encontra graça abundante.
ನಿಮ್ಮ ಉಡುಪುಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಳ್ಳಿರಿ.
ನಿಮ್ಮ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ.
ಆತನು ದಯೆಯೂ, ಕನಿಕರವೂ,
ದೀರ್ಘಶಾಂತಿಯೂ, ಮಹಾಪ್ರೀತಿಯೂ ಉಳ್ಳವನಾಗಿ
ತಾನು ವಿಧಿಸುವ ಕೇಡಿಗೆ ಮನಮರುಗುವಂಥವನು.
ನಿನಗೆ ಯಾವ ದೇವರು ಸಮಾನ?
ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ,
ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ.
ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ.
ಕರುಣೆಯೇ ಆತನಿಗೆ ಇಷ್ಟ.
ಆದರೆ ನೀನು ದಯೆಯೂ ಕನಿಕರವೂ ಉಳ್ಳ ದೇವರಾಗಿರುವುರಿಂದ ನಿನ್ನ ಮಹಾಕೃಪಾನುಸಾರವಾಗಿ ಅವರನ್ನು ನಾಶಮಾಡಲಿಲ್ಲ, ಕೈಬಿಡಲೂ ಇಲ್ಲ.
ನೀನು ಕೃಪೆಯುಳ್ಳವನಿಗೆ ಕೃಪಾವಂತನೂ,
ದೋಷವಿಲ್ಲದವನಿಗೆ ನಿರ್ದೋಷಿಯೂ,
ಈಗ ನನ್ನವರೆಂದು ಹೆಸರುಗೊಂಡಿರುವ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ನನ್ನ ಕಡೆಗೆ ತಿರುಗಿಕೊಂಡು, ನನ್ನನ್ನು ಕುರಿತು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ, ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ದೇಶಕ್ಕೆ ಆರೋಗ್ಯವನ್ನು ದಯಪಾಲಿಸುವೆನು.
ಪಸ್ಕಾಚರಣೆಗೆ ಸಿದ್ಧತೆ
ತರುವಾಯ ಹಿಜ್ಕೀಯನು, ಇಸ್ರಾಯೇಲ್ ದೇವರಾದ ಯೆಹೋವನ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬರಬೇಕೆಂದು, ಎಲ್ಲಾ ಇಸ್ರಾಯೇಲರಿಗೂ, ಯೆಹೂದ್ಯರಿಗೂ, ಎಫ್ರಾಯೀಮ್ಯರಿಗೂ, ಮನಸ್ಸೆಯವರಿಗೂ ದೂತರ ಮುಖಾಂತರವಾಗಿ ಮತ್ತು ಪತ್ರಗಳ ಮೂಲಕವಾಗಿ ತಿಳಿಯಪಡಿಸಿದನು. ಎರಡನೆಯ ತಿಂಗಳಿನಲ್ಲಿ ಪಸ್ಕಹಬ್ಬವನ್ನು ಯೆರೂಸಲೇಮಿನಲ್ಲಿ ಆಚರಿಸಬೇಕೆಂದು ಅರಸನು, ಪದಾಧಿಕಾರಿಗಳು ಅಭಿಪ್ರಾಯಪಟ್ಟರು. ಯಾಕೆಂದರೆ ಯಾಜಕರಲ್ಲಿ ಸಾಕಷ್ಟು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡಿರಲಿಲ್ಲ. ಜನರು ಯೆರೂಸಲೇಮಿನಲ್ಲಿ ಇನ್ನೂ ಒಟ್ಟಾಗಿ ಸೇರಿ ಬಂದಿರಲಿಲ್ಲವಾದುದರಿಂದ ಕೂಡಲೆ ಪಸ್ಕಹಬ್ಬವನ್ನು ಆಚರಿಸಲು ಸಾಧ್ಯವಾಗುವುದಿಲ್ಲವೆಂದು ಅರಸನಿಗೂ ಅವನ ಸರದಾರರಿಗೂ ಯೆರೂಸಲೇಮಿನ ಸರ್ವಸಂಘದವರಿಗೂ ತಿಳಿದುಕೊಂಡರು. ಈ ಅಭಿಪ್ರಾಯವು ಅರಸನಿಗೂ ಸರ್ವಸಮೂಹಕ್ಕೂ ಸರಿಕಂಡದ್ದರಿಂದ ಅವರು, "ಸರ್ವಜನರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಬರಬೇಕು" ಎಂಬುದಾಗಿ ಬೇರ್ಷೆಬದಿಂದ ದಾನ್ ವರೆಗೂ ವಾಸಮಾಡುತ್ತಿದ್ದ ಇಸ್ರಾಯೇಲರೊಳಗೆ ಡಂಗುರ ಹೊಡಿಸಬೇಕೆಂದು ನಿರ್ಣಯಿಸಿದರು. ಜನರಲ್ಲಿ ಹೆಚ್ಚು ಮಂದಿ ಆ ವರೆಗೂ ಧರ್ಮಶಾಸ್ತ್ರವಿಧಿಯ ಪ್ರಕಾರ ಪಸ್ಕಹಬ್ಬವನ್ನು ಆಚರಿಸಿರಲಿಲ್ಲ.
ಅರಸನ ಮತ್ತು ಅವನ ಪದಾಧಿಕಾರಿಗಳಿಂದ ಪತ್ರಗಳನ್ನು ತೆಗೆದುಕೊಂಡು ಹೋದ ದೂತರು ಇಸ್ರಾಯೇಲ್ ಮತ್ತು ಯೆಹೂದ ದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: "ಇಸ್ರಾಯೇಲರೇ, ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನು ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದಿರುವ ನಿಮ್ಮ ಕಡೆಗೆ ತಿರುಗಿಕೊಳ್ಳುವನು. ನಿಮ್ಮ ಪೂರ್ವಿಕರು ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ವಿರೋಧವಾಗಿ ದ್ರೋಹಿಗಳಾಗಿದ್ದುದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು. ಈಗ ನೀವು ನಿಮ್ಮ ಪೂರ್ವಿಕರಂತೆ ರಾಜಾಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡಿರುವ ಪವಿತ್ರಾಲಯಕ್ಕೆ ಬಂದು ಆತನನ್ನು ಆರಾಧಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವುದು. ನೀವು ಯೆಹೋವನ ಕಡೆಗೆ ತಿರುಗಿಕೊಳ್ಳವುದಾದರೆ ನಿಮ್ಮ ಸಹೋದರರೂ, ಮಕ್ಕಳೂ ತಮ್ಮನ್ನು ಸೆರೆ ಒಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ, ತಿರುಗಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಯೆಹೋವನು ದಯೆಯೂ, ಕನಿಕರವೂ ಉಳ್ಳವನಾಗಿದ್ದಾನೆ. ಆತನು ತನ್ನ ಕಡೆಗೆ ತಿರುಗಿಕೊಳ್ಳುವ ನಿಮ್ಮನ್ನು ಕಟಾಕ್ಷಿಸದೆ ಇರುವುದಿಲ್ಲ."
ಪಸ್ಕ ಆಚರಣೆ
ದೂತರು ಎಫ್ರಾಯೀಮ್, ಮನಸ್ಸೆ, ಜೆಬುಲೂನ್ ಪ್ರಾಂತ್ಯಗಳಲ್ಲಿ, ಪಟ್ಟಣದಿಂದ ಪಟ್ಟಣಕ್ಕೆ ಹೋದರು. ಜನರು ಅವರನ್ನು ಕಂಡು ನಕ್ಕು ಗೇಲಿಮಾಡಿದರು. ಕೆಲವು ಮಂದಿ ಆಶೇರ್ಯರೂ, ಮನಸ್ಸೆಯವರೂ, ಜೆಬುಲೂನ್ಯರೂ ಮಾತ್ರ ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು. ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ ಪ್ರೇರಣೆಹೊಂದಿ ಏಕ ಮನಸ್ಸುಳ್ಳವರಾಗಿ, ಯೆಹೋವನ ವಾಕ್ಯಕ್ಕೆ ಅನುಸಾರವಾಗಿ ಅರಸನಿಂದಲೂ, ಪದಾಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು. ಹೀಗೆ, ಅನೇಕಾನೇಕ ಜನರು ಎರಡನೆಯ ತಿಂಗಳಿನಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿ ಸೇರಿಬಂದರು; ಆ ಜನಸಮೂಹವು ಮಹಾಸಮೂಹವಾಗಿತ್ತು. ಅವರು ಯೆರೂಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಎಲ್ಲಾ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು. ನಂತರ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕಹಬ್ಬಕ್ಕಾಗಿ ಕುರಿಮರಿಗಳನ್ನು ಕೊಯ್ದರು.ಆಗ ಯಾಜಕರೂ, ಲೇವಿಯರೂ ನಾಚಿಕೆಪಟ್ಟು, ತಮ್ಮನ್ನು ಶುದ್ಧಿಪಡಿಸಿಕೊಂಡು ಯೆಹೋವನ ಆಲಯದಲ್ಲಿ ಸರ್ವಾಂಗಹೋಮಗಳನ್ನ ಸಮರ್ಪಿಸಿದರು. ಅವರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು, ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಿಂದ ತಮಗೆ ನೇಮಕವಾದ ಸೇವೆಯನ್ನು ಮಾಡುತ್ತಿದ್ದರು. ಯಾಜಕರೂ ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಅದನ್ನು ಪ್ರೋಕ್ಷಿಸಿದರು. ಸಮೂಹದಲ್ಲಿ ಅನೇಕರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಇದ್ದುದರಿಂದ ಅಶುದ್ಧರಾದವರೆಲ್ಲರ, ಪಸ್ಕಹಬ್ಬದ ಯಜ್ಞಪಶುಗಳು ಯೆಹೋವನಿಗೆ ಮೀಸಲಾಗುವಂತೆ ಅವುಗಳನ್ನು ಲೇವಿಯರೇ ವಧಿಸಿದರು. ಜನರಲ್ಲಿ ಅನೇಕರು ಅಂದರೆ, ಹೆಚ್ಚಾಗಿ ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್, ಹಾಗು ಜೆಬುಲೂನ್ ಪ್ರಾಂತ್ಯಗಳವರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ ಪಸ್ಕದ (ಹಬ್ಬ) ಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು, "ಯೆಹೋವನೇ, ದಯಾಪರನಾದ ದೇವರೇ, ಅವರೆಲ್ಲರಿಗೆ ಕ್ಷಮೆಯನ್ನು ಅನುಗ್ರಹಿಸು" ಎಂದು ವಿಜ್ಞಾಪನೆ ಮಾಡಿದನು. ದೇವಾಲಯಕ್ಕೆ ಯಾತ್ರಿಕರಾಗಿ ಬಂದಿರುವವರಲ್ಲಿ ಇರಬೇಕಾದ ಪರಿಶುದ್ಧತ್ವವು ಅನೇಕರಲ್ಲಿ ಇಲ್ಲದಿದ್ದರೂ ಪೂರ್ವಿಕರ ದೇವರಾದ ಯೆಹೋವನನ್ನು ಹುಡುಕಬೇಕೆಂದು ಮನಸ್ಸುಮಾಡಿರುವವರಿಗೆಲ್ಲರಿಗೂ ಕ್ಷಮೆಯನ್ನು ಅನುಗ್ರಹಿಸು ಎಂದು ವಿಜ್ಞಾಪನೆ ಮಾಡಿದನು. ಯೆಹೋವನು ಹಿಜ್ಕೀಯನ ಪ್ರಾರ್ಥನೆಯನ್ನು ಲಾಲಿಸಿ ಜನರನ್ನು ಸ್ವಸ್ಥಗೊಳಿಸಿದನು. ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಇಸ್ರಾಯೇಲರು ಏಳು ದಿನಗಳವರೆಗೂ ಮಹಾ ಸಂತೋಷದಿಂದ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುತ್ತಾ ಇದ್ದರು. ಲೇವಿಯರೂ, ಯಾಜಕರೂ ಮಹಾವಾದ್ಯಗಳೊಡನೆ ಯೆಹೋವನನ್ನು ಪ್ರತಿದಿನವೂ ಸ್ತುತಿ ಕೀರ್ತಿಸುತ್ತಾ ಇದ್ದರು. ಹಿಜ್ಕೀಯನು ಯೆಹೋವನ ಸೇವೆಯಲ್ಲಿ ನಿಪುಣರಾದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತನಾಡಿದನು. ನೇಮಕವಾದ ಏಳು ದಿನಗಳ ಹಬ್ಬದವರೆಗೂ ಜನರು ಸಮಾಧಾನ ಯಜ್ಞಗಳನ್ನು ಅರ್ಪಿಸುತ್ತಾ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಅರಿಕೆಮಾಡಿಕೊಳ್ಳುತ್ತಾ ಔತಣಮಾಡಿದರು. ಅಲ್ಲದೆ ಸಮೂಹದವರು ಇನ್ನೂ ಏಳು ದಿನಗಳ ಕಾಲ ಹಬ್ಬವನ್ನು ಆ ಆಚರಿಸಬೇಕೆಂದು ತೀರ್ಮಾನಿಸಿ ಇನ್ನೂ ಏಳು ದಿನಗಳ ಕಾಲ ಬಹಳ ಸಂತೋಷದಿಂದ ಹಬ್ಬವನ್ನು ಆಚರಿಸಿದರು ಹೂದದ ಅರಸನಾದ ಹಿಜ್ಕೀಯನು ಹಿಂಡುಗಳಿಂದ ಸಾವಿರ ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ, ಪದಾಧಿಕಾರಿಗಳು ಸಾವಿರ ಹೋರಿಗಳನ್ನೂ, ಹತ್ತು ಸಾವಿರ ಕುರಿಗಳನ್ನೂ ಯಜ್ಞಕ್ಕಾಗಿ ದಾನಮಾಡಿದರು. ಯಾಜಕರಲ್ಲಿ ಬಹು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡರು. ಯೆಹೂದ್ಯರ ಸರ್ವಸಮೂಹದವರೂ, ಯಾಜಕರು, ಲೇವಿಯರೂ, ಇಸ್ರಾಯೇಲ್ ಪ್ರಾಂತ್ಯಗಳಿಂದ ಸೇರಿಬಂದವರೆಲ್ಲರೂ ಹಾಗು ಇಸ್ರಾಯೇಲ್ ಯೆಹೂದ ಪ್ರಾಂತ್ಯಗಳಲ್ಲಿದ್ದ ಪ್ರವಾಸಿಗಳು ಈ ಉತ್ಸವದಲ್ಲಿ ಪಾಲುಗೊಂಡಿದ್ದರು. ದಾವೀದನ ಮಗನೂ ಇಸ್ರಾಯೇಲರ ಅರಸನೂ ಆದ ಸೊಲೊಮೋನನ ಕಾಲದಿಂದ ಯೆರೂಸಲೇಮಿನಲ್ಲಿ ಅಂಥ ಉತ್ಸವವು ನಡೆದಿರಲಿಲ್ಲವಾದುದರಿಂದ ಯೆರೂಸಲೇಮಿನಲ್ಲಿ ಮಹಾಸಂತೋಷವುಂಟಾಯಿತು. ಆಮೇಲೆ ಯಾಜಕರಾಗಿದ್ದ ಲೇವಿಯರು ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಪ್ರಾರ್ಥನೆಯ ಸ್ವರವು ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆಯು ಪರಲೋಕದಲ್ಲಿರುವ ಆತನ ಪರಿಶುದ್ಧ ನಿವಾಸಕ್ಕೆ ತಲುಪಿತು.
Arrependimento e perdão
O arrependimento genuíno abre as portas do perdão. Deus convida todos ao arrependimento e promete perdoar completamente quem volta a Ele.
ಪೇತ್ರನು ಅವರಿಗೆ, "ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.
ಆದುದರಿಂದ ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ಹಾಗೆ ತಿರುಗಿದರೆ ಕರ್ತನ, ಸನ್ನಿಧಾನದಿಂದ
"ಆದುದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪ ಕ್ಷಮಾಪಣೆಯು ದೊರೆಯುತ್ತದೆಂಬುದು ನಿಮಗೆ ಸಾರೋಣವಾಗಿತ್ತೆಂದು ನಿಮಗೆ ತಿಳಿದಿರಲಿ. ಮೋಶೆಯ ಧರ್ಮಶಾಸ್ತ್ರದ ಮೂಲಕ ನೀವು ಬಿಡುಗಡೆಯಾಗಿ ನೀತಿವಂತರೆನಿಸಿಕೊಳ್ಳದೆ ಇದ್ದಿರಿ. ಆದರೆ ಆತನನ್ನು ನಂಬುವವರೆಲ್ಲರೂ ಆತನ ಮೂಲಕವಾಗಿ ಬಿಡುಗಡೆಹೊಂದಿ ನೀತಿವಂತರೆನಿಸಿ ಕೊಳ್ಳುತ್ತಾರೆ.
ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ.
ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು
ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು.
ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ. ಸೆಲಾ
ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು,
ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.
ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ;
ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು;
ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.
ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ;
ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು;
ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.
Perdão nos relacionamentos
Se teu irmão pecar contra ti, repreende-o; se se arrepender, perdoa-lhe. Não guarde ressentimento — liberte-se pelo perdão.
ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಗದರಿಸು. ಅವನು ಪಶ್ಚಾತ್ತಾಪಪಟ್ಟರೆ ಅವನ ತಪ್ಪನ್ನು ಕ್ಷಮಿಸಿಬಿಡು. ಅವನು ದಿನಕ್ಕೆ ಏಳು ಸಾರಿ ನಿನಗೆ ತಪ್ಪುಮಾಡಿ ಏಳು ಸಾರಿಯೂ ನಿನ್ನ ಕಡೆಗೆ ತಿರುಗಿಕೊಂಡು, ‘ನಾನು ಪಶ್ಚಾತ್ತಾಪಪಡುತ್ತೇನೆ ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ ಅವನನ್ನು ಕ್ಷಮಿಸು" ಎಂದು ಹೇಳಿದನು.
"ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ; ಕ್ಷಮಿಸಿರಿ, ಆಗ ನಿಮಗೂ ಕ್ಷಮಿಸಲ್ಪಡುವುದು.
"ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ; ಕ್ಷಮಿಸಿರಿ, ಆಗ ನಿಮಗೂ ಕ್ಷಮಿಸಲ್ಪಡುವುದು.
"ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ; ಕ್ಷಮಿಸಿರಿ, ಆಗ ನಿಮಗೂ ಕ್ಷಮಿಸಲ್ಪಡುವುದು.
ಆಗ ಯೇಸು, "ತಂದೆಯೇ, ಅವರನ್ನು ಕ್ಷಮಿಸು ತಾವು ಏನು ಮಾಡುತ್ತೇವೆಂಬುದನ್ನು ಅವರು ಅರಿಯರು" ಅಂದನು. ಆ ಮೇಲೆ ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ಪಾಲು ಮಾಡಿದರು.
ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಕ್ಷಮಿಸಿರಿ; ಆಗ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವನು" ಅಂದನು.
ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಕ್ಷಮಿಸಿರಿ; ಆಗ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವನು" ಅಂದನು.
ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಕ್ಷಮಿಸಿರಿ; ಆಗ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವನು" ಅಂದನು. ಆದರೆ ನೀವು ಕ್ಷಮಿಸದಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.
"‘ನಿಮ್ಮ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡನ್ನು ಮಾಡದೆ, ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ, ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು.
ಪ್ರೀತಿ, ಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು,
ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.
ಇದರಿಂದ ನೀನು ದೇವರ ಮತ್ತು ಮನುಷ್ಯರ ದಯೆಯನ್ನೂ,
ಸಮ್ಮತಿಯನ್ನೂ ಪಡೆದುಕೊಳ್ಳುವಿ.
ದೋಷವನ್ನು ಮುಚ್ಚಿಡುವವನು ಪ್ರೇಮವನ್ನು ಸೆಳೆಯುವನು,
ಎತ್ತಿ ಆಡುತ್ತಿರುವವನು ಸ್ನೇಹವನ್ನು ಕಳೆದುಕೊಳ್ಳುವನು.
ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.
ಮನಸ್ಸಿಗೆ ನೋವುಂಟುಮಾಡಿದವನು ಒಬ್ಬನು ನಿಮ್ಮಲ್ಲಿ ಇದ್ದರೂ ಅವನು ನನ್ನನ್ನು ಮಾತ್ರ ದುಃಖಪಡಿಸದೆ ನಿಮ್ಮಲ್ಲಿ ಬಹುಜನರನ್ನೂ ನೋಯಿಸಿದ್ದಾನೆ. ಆ ದುಃಖವು ಎಲ್ಲರಲ್ಲಿಯೂ ಉಂಟಾಯಿತೆಂದು ನಾನು ಹೇಳುವುದಿಲ್ಲ. ಇಂಥವನಿಗೆ ನಿಮ್ಮಲ್ಲಿ ಬಹುಜನರಿಂದಾದ ಆ ಶಿಕ್ಷೆಯೇ ಸಾಕು. ಇನ್ನೂ ಅವನನ್ನು ಶಿಕ್ಷಿಸದೇ ಮನ್ನಿಸಿರಿ, ಸಂತೈಸಿರಿ. ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿ ಹೋಗುವನು. ಆದ್ದರಿಂದ ಅವನಿಗೆ ನಿಮ್ಮ ಪ್ರೀತಿಯನ್ನು ತೋರಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳಿಗೂ ಪ್ರಾಯಶ್ಚಿತ್ತವಾಗಿದ್ದಾನೆ.
ಅದಕ್ಕೆ ಆಕೆಯು "ಕರ್ತನೇ, ಯಾರೂ ಶಿಕ್ಷೆ ವಿಧಿಸಲಿಲ್ಲ" ಎಂದಳು. ಯೇಸು ಆಕೆಗೆ "ನಾನೂ ಸಹ ನಿನ್ನನ್ನು ಶಿಕ್ಷೆ ವಿಧಿಸುವುದಿಲ್ಲ, ಹೋಗು, ಇನ್ನು ಮುಂದೆ ಪಾಪಮಾಡಬೇಡ" ಎಂದು ಹೇಳಿದನು.
ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದರೆ, ಅವನು ಸಭೆಯ ಹಿರಿಯರನ್ನು ಕರೆದು ಪ್ರಾರ್ಥಿಸುವಂತೆ ವಿನಂತಿಸಲಿ. ಅವರು ಕರ್ತನ ಹೆಸರಿನಲ್ಲಿ ಅವನಿಗೆ ಎಣ್ಣೆ ಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ. ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ ಪಾಪಗಳನ್ನು ಕ್ಷಮಿಸುವನು.
ಇಸ್ರಾಯೇಲಿನ ವಿಶ್ವಾಸಘಾತ
ಯೆಹೋವನು ಹೀಗೆನ್ನುತ್ತಾನೆ, "ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನ ಹೆಂಡತಿಯಾದ ಮೇಲೆ, ಅವಳನ್ನು ಮೊದಲ ಗಂಡನು ತಿರುಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವುದಲ್ಲವೇ?
ಹೀಗಿರಲು ಬಹುಮಂದಿಯೊಡನೆ ವ್ಯಭಿಚಾರ ಮಾಡಿದ ನೀನು ನನ್ನ ಬಳಿಗೆ ಹಿಂದಿರುಗಿ ಬರುತ್ತಿಯಾ?
ಕಣ್ಣೆತ್ತಿ ಬೋಳು ಗುಡ್ಡಗಳನ್ನು ನೋಡು, ಯಾವುದರಲ್ಲಿ ನಿನ್ನನ್ನು ನೀನು ಕೆಡಿಸಿಕೊಳ್ಳಲಿಲ್ಲ?
ಅರಬಿಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚು ಹಾಕುತ್ತಾ ಕುಳಿತಿದ್ದಿ;
ನಿನ್ನ ವ್ಯಭಿಚಾರದಿಂದಲೂ, ನಿನ್ನ ಕೆಟ್ಟತನದಿಂದಲೂ ದೇಶವನ್ನು ಅಪವಿತ್ರಮಾಡಿದ್ದಿ.
ಆದಕಾರಣ ಹದಮಳೆಗೆ ಅಡ್ಡಿಯಾಯಿತು, ಹಿಂಗಾರೂ ಆಗಲಿಲ್ಲ; ಆದರೂ ನೀನು ವ್ಯಭಿಚಾರಿಯಾಗಿ ನಾಚಿಕೆಗೆಟ್ಟಿದ್ದಿ.
ಈಗ ನನ್ನನ್ನು, ‘ನನ್ನ ತಂದೆ, ನನ್ನ ಯೌವನದ ಆಪ್ತನು’ ಎಂದು ಕರೆಯುತ್ತೀಯಲ್ಲಾ.
‘ಆತನು ನಿತ್ಯ ಕೋಪಮಾಡುವವನೋ? ಕೊನೆಯ ತನಕ ಕೋಪವನ್ನು ಇಟ್ಟುಕೊಳ್ಳುವನೋ?’ ಎಂದು ಅಂದುಕೊಳ್ಳುತ್ತಿದ್ದಿ. ಇಗೋ, ನೀನು ಹೀಗೆ ಮಾತನಾಡಿದರೇನು? ಅನೇಕ ದುಷ್ಕೃತ್ಯಗಳನ್ನು ನಡೆಸಿ ಕೃತಾರ್ಥಳಾಗಿರುವೆ." ಎಂಬುದೇ.
ಭ್ರಷ್ಟಳಾದ ಇಸ್ರಾಯೇಲಿನ ಪಾಪಕ್ಕಿಂತ ದ್ರೋಹಿಯಾದ ಯೆಹೂದದ ಪಾಪವು ಹೆಚ್ಚು
ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು, "ಭ್ರಷ್ಟಳಾದ ಇಸ್ರಾಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ವ್ಯಭಿಚಾರಿಯಾಗಿ ನಡೆದಳಷ್ಟೆ. ಅವಳು ಇವುಗಳನ್ನೆಲ್ಲಾ ನಡೆಸಿದ ಮೇಲೆ ನನ್ನ ಬಳಿಗೆ ಪುನಃ ಬಂದಾಳು ಅಂದುಕೊಂಡೆನು. ಆದರೆ ಬರಲಿಲ್ಲ. ಆಗ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ಇದನ್ನು ನೋಡಿದಳು. ಭ್ರಷ್ಟಳಾದ ಇಸ್ರಾಯೇಲ್ ನನಗೆ ವಿಮುಖಳಾಗಿ ವ್ಯಭಿಚಾರ ಮಾಡಿದ ಕಾರಣದಿಂದಲೇ ನಾನು ಅವಳನ್ನು ನಿರಾಕರಿಸಿ, ತ್ಯಾಗಪತ್ರ ಕೊಟ್ಟದ್ದನ್ನು ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನೋಡಿಯೂ, ಅಂಜದೆಯೂ ತಾನೂ ಹೋಗಿ ವ್ಯಭಿಚಾರವನ್ನು ನಡೆಸಿದಳು. ಕಲ್ಲು ಮರಗಳನ್ನು ಪೂಜಿಸಿ ವ್ಯಭಿಚಾರ ಮಾಡುವುದು ಲಘುವೆಂದು ಭಾವಿಸಿಕೊಂಡ ಆಕೆ ತನ್ನ ವ್ಯಭಿಚಾರದಿಂದ ದೇಶವನ್ನು ಅಪವಿತ್ರಪಡಿಸಿದಳು. ಇಸ್ರಾಯೇಲಿಗೆ ಇಷ್ಟು ದಂಡನೆಯಾದರೂ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನನ್ನ ಕಡೆಗೆ ಪೂರ್ಣಮನದಿಂದಲ್ಲ, ಕಪಟದಿಂದಲೇ ನನ್ನ ಕಡೆ ತಿರುಗಿಕೊಂಡಿದ್ದಾಳೆ" ಎಂಬುದೇ ಯೆಹೋವನಾದ ನನ್ನ ನುಡಿ.
ಮತ್ತು ಯೆಹೋವನು ನನಗೆ ಹೀಗೆ ಹೇಳಿದನು, "ಭ್ರಷ್ಟಳಾದ ಇಸ್ರಾಯೇಲ್ ದ್ರೋಹಿಯಾದ ಯೆಹೂದಕ್ಕಿಂತಲೂ ಶಿಷ್ಟಳಾಗಿ ಕಂಡುಬಂದಿದ್ದಾಳೆ. ನೀನು ಹೋಗಿ ಉತ್ತರದಿಕ್ಕಿಗೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ಭ್ರಷ್ಟಳಾದ ಇಸ್ರಾಯೇಲೇ, ಹಿಂದಿರುಗು, ನಾನು ಕೋಪದ ಮುಖದಿಂದ ನಿನ್ನನ್ನು ನೋಡೆನು, ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ. ಇದೊಂದನ್ನು ಮಾಡು, ನೀನು ನೋಡಿದ ಕಡೆಯೆಲ್ಲಾ ತಿರುಗುತ್ತಾ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ, ನನ್ನ ಮಾತನ್ನು ಕೇಳದೆ, ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹ ಮಾಡಿದ್ದಿ ಎಂಬುವುದನ್ನು ಒಪ್ಪಿಕೋ’ ಇದೇ ಯೆಹೋವನ ನುಡಿ.
ಭ್ರಷ್ಟರಾದ ಮಕ್ಕಳೇ, ತಿರುಗಿಕೊಳ್ಳಿರಿ, ನಾನು ನಿಮಗೆ ಪತಿ. ಒಂದು ಪಟ್ಟಣಕ್ಕೆ ಒಬ್ಬನಂತೆಯೂ, ಗೋತ್ರಕ್ಕೆ ಇಬ್ಬರಂತೆಯೂ ಆರಿಸಿ ಚೀಯೋನಿಗೆ ಕರೆತರುವೆನು.
ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ದಯಪಾಲಿಸುವೆನು; ಅವರು ನಿಮ್ಮನ್ನು ಜ್ಞಾನ ಮತ್ತು ವಿವೇಕಗಳಿಂದ ಪೋಷಿಸುವರು.
ನೀವು ದೇಶದಲ್ಲಿ ಹೆಚ್ಚಿ ಅಭಿವೃದ್ಧಿಗೆ ಬಂದ ಕಾಲದಲ್ಲಿ, ‘ಯೆಹೋವನ ನಿಬಂಧನ ಮಂಜೂಷ’ ಇದರ ಪ್ರಸ್ತಾವವಿರದು. ಅದು ಜ್ಞಾಪಕಕ್ಕೆ ಬಾರದು, ಯಾರೂ ಸ್ಮರಿಸರು, ಅದು ಇಲ್ಲವಲ್ಲಾ ಎಂದು ದುಃಖಿಸರು, ಹೊಸದಾಗಿ ಕಲ್ಪಿಸಿಕೊಳ್ಳರು" ಇದು ಯೆಹೋವನ ನುಡಿ.
ಆ ಕಾಲದಲ್ಲಿ ಯೆರೂಸಲೇಮನ್ನು ಯೆಹೋವನ ಸಿಂಹಾಸನವೆಂದು ಕರೆಯುವರು; ಯೆಹೋವನ ನಾಮಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ಜನಾಂಗಗಳವರು ನೆರೆದು ಬರುವರು; ಅವರು ಇನ್ನು ಮೇಲೆ ತಮ್ಮ ದುಷ್ಟ ಹೃದಯದ ಹಟದಂತೆ ನಡೆಯರು.
ಆ ಕಾಲದಲ್ಲಿ ಯೆಹೂದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ನಡೆಯುವುದು. ಎರಡೂ ಸೇರಿ ನಾನು ನಿಮ್ಮ ಪೂರ್ವಿಕರಿಗೆ ಬಾಧ್ಯವಾಗಿ ದಯಪಾಲಿಸಿದ ದೇಶಕ್ಕೆ ಉತ್ತರ ಸೀಮೆಯನ್ನು ಬಿಟ್ಟು ಬರುವವು.
ಪಶ್ಚಾತ್ತಾಪ ಪಡುವ ತನ್ನ ಜನರನ್ನು ಯೆಹೋವನು ಸ್ವೀಕರಿಸುವನು
"ಇಸ್ರಾಯೇಲೇ, ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಆರಿಸಿಕೊಂಡು, ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತ ಜನಾಂಗಗಳ ಬಾಧ್ಯತೆಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು ‘ತಂದೆ’ ಎನ್ನುವಿ ಅಂದುಕೊಂಡೆನು.
ಆದರೆ ಇಸ್ರಾಯೇಲ್ ವಂಶದವರೇ, ಒಬ್ಬ ಹೆಂಗಸು ಪತಿದ್ರೋಹ ಮಾಡಿದಂತೆ ನೀವು ನನಗೆ ದ್ರೋಹವನ್ನು ಮಾಡಿದ್ದೀರಿ" ಎಂದು ಯೆಹೋವನು ನುಡಿಯುತ್ತಾನೆ.
ಆಹಾ, ಬೋಳುಗುಡ್ಡಗಳಲ್ಲಿ ಒಂದು ಶಬ್ದ! ತಾವು ಡೊಂಕು ದಾರಿಯನ್ನು ಹಿಡಿದು ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟಿದ್ದೇವೆಂದು ಇಸ್ರಾಯೇಲರು ಕಣ್ಣೀರು ಸುರಿಸಿ ದೇವರ ಕೃಪೆಯನ್ನು ಬೇಡುತ್ತಿದ್ದಾರಲ್ಲಾ.
"ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು" ಎಂದು ಯೆಹೋವನು ನುಡಿಯುತ್ತಾನೆ.
ಅದಕ್ಕೆ ಜನರು, "ಇಗೋ, ನಿನ್ನ ಬಳಿಗೆ ಬಂದೆವು, ನೀನು ಯೆಹೋವನು, ನಮ್ಮ ದೇವರು.
ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಜಾತ್ರೆಯ ಗದ್ದಲದಿಂದಲೂ ಮೋಸವಾಯಿತು; ನಿಜನಿಜವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವನಲ್ಲಿ ನೆಲೆಗೊಂಡಿದೆ.
ನಮ್ಮ ಪೂರ್ವಿಕರು ದುಡಿದದ್ದನ್ನೂ, ಅವರ ದನ ಮತ್ತು ಕುರಿಗಳನ್ನೂ
ಅವರ ಗಂಡು, ಹೆಣ್ಣು ಮಕ್ಕಳನ್ನೂ ಬಾಳ್ ದೇವತೆಯು ನಮ್ಮ ಬಾಲ್ಯಾರಭ್ಯ ನುಂಗುತ್ತಾ ಬಂದಿದೆ.
ನಾವೇ ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ, ನಮ್ಮ ನಾಚಿಕೆಯು ನಮ್ಮನ್ನು ಮುಚ್ಚಿಬಿಡಲಿ.
ನಾವು ಮತ್ತು ನಮ್ಮ ಪೂರ್ವಿಕರೂ ಬಾಲ್ಯದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವನಿಗೆ ಪಾಪಮಾಡುತ್ತಾ ಬಂದಿದ್ದೇವಷ್ಟೆ. ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಲೇ ಇಲ್ಲ" ಎಂದು ಮೊರೆಯಿಡುತ್ತಾರೆ.
ಮೊಟ್ಟಮೊದಲು ನಿಮ್ಮ ನಿಮ್ಮೊಳಗೆ ಪ್ರಾಮಾಣಿಕವಾದ ಪ್ರೀತಿಯಿರಲಿ. ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.