Planejamento
O planejamento é sábio, mas deve sempre se submeter à vontade de Deus. A Bíblia ensina que devemos planejar com prudência, mas confiar que Deus dirige nossos passos.
Planejar com sabedoria
Contar nossos dias nos ensina a ter coração sábio. O planejamento prudente é elogiado na Escritura como expressão de bom senso.
ನಮ್ಮ ದಿನಗಳು ಕೊಂಚವೇ ಎಂದು ಎಣಿಸಿಕೊಳ್ಳುವ ಹಾಗೆ ನಮಗೆ ಕಲಿಸು;
ಆಗ ಜ್ಞಾನದ ಹೃದಯವನ್ನು ಪಡೆದುಕೊಳ್ಳುವೆವು.
ನಿಮ್ಮಲ್ಲಿ ಯಾವನಾದರೂ ಒಂದು ಗೋಪುರವನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕುಳಿತುಕೊಂಡು, ಅದಕ್ಕೆ ಎಷ್ಟು ಖರ್ಚು ಆದೀತು, ಅದನ್ನು ತೀರಿಸುವುದಕ್ಕೆ ಸಾಕಾಗುವಷ್ಟು ಹಣ ನನ್ನಲ್ಲಿ ಇದೆಯೋ ಎಂದು ಲೆಕ್ಕಮಾಡುವುದಿಲ್ಲವೇ?
ಆಲೋಚನೆ ಹೇಳುವವರಿಲ್ಲದೆ ಉದ್ದೇಶಗಳು ನೆರವೇರವು,
ಬಹು ಮಂದಿ ಆಲೋಚನಾಪರರು ಇರುವಲ್ಲಿ ಅವು ನೆರವೇರುವವು.
ನಿನ್ನ ಕಾರ್ಯಭಾರವನ್ನು ಯೆಹೋವನಿಗೆ ವಹಿಸಿದರೆ,
ನಿನ್ನ ಉದ್ದೇಶಗಳು ಸಫಲವಾಗುವವು.
ದುಡ್ಡಿನಾಶೆಯಿಂದ ದುಡಿಯಬೇಡ,
ಸ್ವಬುದ್ಧಿಯನ್ನೇ ಆಶ್ರಯಿಸಬೇಡ.
Deus dirige os passos
O coração do homem planeja, mas a resposta certa vem do Senhor. Seus caminhos são mais altos que os nossos, e seus planos prevalecem.
ಮನುಷ್ಯನು ತನ್ನ ಮನದಂತೆ ದಾರಿಯನ್ನು ಆರಿಸಿಕೊಂಡರೂ,
ಯೆಹೋವನೇ ಅವನಿಗೆ ಗತಿಯನ್ನು ಏರ್ಪಡಿಸುವನು.
ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ,
ಯೆಹೋವನ ಸಂಕಲ್ಪವೇ ಈಡೇರುವುದು.
ಯೆಹೋವನು ಹೀಗೆನ್ನುತ್ತಾನೆ, "ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ, ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ.
ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ನಿಮ್ಮ ಮಾರ್ಗಗಳಿಗಿಂತ ನನ್ನ ಮಾರ್ಗಗಳೂ,
ನಿಮ್ಮ ಆಲೋಚನೆಗಳಿಗಿಂತ ನನ್ನ ಆಲೋಚನೆಗಳೂ ಅಷ್ಟು ಉನ್ನತವಾಗಿವೆ.
ಈ ವಿವೇಕವು ಸಹ ಅತಿಶಯವಾದ ಆಲೋಚನಾಪರನೂ, ಸುಜ್ಞಾನ ಶ್ರೇಷ್ಠನೂ ಆಗಿರುವ,
ಸೇನಾಧೀಶ್ವರನಾದ ಯೆಹೋವನಿಂದಲೇ ಉಂಟಾಗುತ್ತದೆ.
Confiança no plano de Deus
Os planos do Senhor são de paz e esperança. Ele revela seus segredos aos seus servos e guia com fidelidade cada caminho confiado a Ele.
ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.
ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ
ಯೆಹೋವನಾದ ದೇವರು ಏನನ್ನೂ ಮಾಡುವುದಿಲ್ಲ.
ಆತನು ನಿನ್ನ ಇಷ್ಟಾರ್ಥವನ್ನು ನೆರವೇರಿಸಲಿ;
ನಿನ್ನ ಎಲ್ಲಾ ಸಂಕಲ್ಪಗಳನ್ನು ಸಫಲಮಾಡಲಿ.
ಹೊತ್ತಾರೆ ನಿನ್ನ ಕೃಪೆಯು ನನಗೆ ಪ್ರಕಟವಾಗಲಿ;
ನಿನ್ನಲ್ಲಿ ಭರವಸವಿಟ್ಟಿದ್ದೇನಲ್ಲಾ.
ನಾನು ನಡೆಯತಕ್ಕ ಮಾರ್ಗವನ್ನು ತಿಳಿಸು;
ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ.
ಪ್ರತಿಯೊಂದು ಕಾರ್ಯಕ್ಕೂ ಸೂಕ್ತ ಸಮಯವುಂಟು
ಪ್ರತಿಯೊಂದು ಕಾರ್ಯಕ್ಕೂ ನಿಗದಿಯಾದ ಸಮಯವಿದೆ, ಆಕಾಶದ ಕೆಳಗೆ ನಡೆಯುವ ಒಂದೊಂದು ಕೆಲಸಕ್ಕೂ ತಕ್ಕ ಸಮಯವುಂಟು.
ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅದನ್ನು ಪ್ರಕಟಪಡಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸುವವನಾಗಿದ್ದಾನೆ.
ಬಲಾತ್ಕಾರಿಯನ್ನು ನೋಡಿ ಹೊಟ್ಟೆಕಿಚ್ಚುಪಡದಿರು,
ಅವನ ನಡತೆಯನ್ನು ಎಷ್ಟು ಮಾತ್ರಕ್ಕೂ ಅನುಸರಿಸಬೇಡ.
ವಕ್ರಬುದ್ಧಿಯವನು ಯೆಹೋವನಿಗೆ ಅಸಹ್ಯನು,
ಯಥಾರ್ಥರಿಗೆ ಆತನ ಸ್ನೇಹವು ದೊರೆಯುವುದು.