O poder da oração
A oração é o canal mais poderoso de comunicação com Deus. Através dela, milagres acontecem, montanhas são movidas e o impossível se torna possível.
Pedidos com fé
Jesus ensinou: pedi e recebereis. Tudo o que pedirmos em seu nome, crendo, Ele fará. A fé transforma a oração em poder.
"ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು;
ನೀವು ನಂಬಿಕೊಂಡು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನೆಲ್ಲಾ ಹೊಂದುವಿರಿ" ಅಂದನು.
ಆದಕಾರಣ ನೀವು ಪ್ರಾರ್ಥನೆಮಾಡಿ ಏನೇನು ಬೇಡಿಕೊಳ್ಳುತ್ತೀರೋ ಅದನ್ನೆಲ್ಲಾ ಹೊಂದಿದ್ದೇವೆಂದು ನಂಬಿರಿ; ಅದು ನಿಮಗೆ ಸಿಕ್ಕುವುದೆಂದು ನಿಮಗೆ ಹೇಳುತ್ತೇನೆ.
ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ನೆರವೇರಿಸುವೆನು. ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವುದು. ನೀವು ನನ್ನ ಹೆಸರಿನಲ್ಲಿ ನನ್ನನ್ನು ಏನಾದರೂ ಬೇಡಿಕೊಂಡರೆ ನಾನು ಅದನ್ನು ನೆರವೇರಿಸುವೆನು.
Oração e milagres
A oração dos justos tem grande poder. Pedro orou e Dorcas ressuscitou. Jesus disse que certos demônios só se expulsam com jejum e oração.
ಪೇತ್ರನು ಅವರೆಲ್ಲರನ್ನು ಹೊರಕ್ಕೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಶವದ ಕಡೆಗೆ ತಿರುಗಿಕೊಂಡು; "ತಬಿಥಾ, ಎದ್ದೇಳು" ಅಂದನು. ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕುಳಿತುಕೊಂಡಳು.
ಅದಕ್ಕೆ ಆತನು, "ಈ ಬಗೆಯ ದೆವ್ವಗಳು ದೇವರ ಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವ ರೀತಿಯಿಂದಲೂ ಬಿಟ್ಟು ಹೋಗುವುದಿಲ್ಲವೆಂದು" ಅವರಿಗೆ ಹೇಳಿದನು.
ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದರೆ, ಅವನು ಸಭೆಯ ಹಿರಿಯರನ್ನು ಕರೆದು ಪ್ರಾರ್ಥಿಸುವಂತೆ ವಿನಂತಿಸಲಿ. ಅವರು ಕರ್ತನ ಹೆಸರಿನಲ್ಲಿ ಅವನಿಗೆ ಎಣ್ಣೆ ಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ. ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ ಪಾಪಗಳನ್ನು ಕ್ಷಮಿಸುವನು. ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.
ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು,
ಆತನು ಅವರನ್ನು ಕಷ್ಟದಿಂದ ಹೊರತಂದನು.
ಆತನು ಬಿರುಗಾಳಿಯನ್ನು ಶಾಂತಪಡಿಸಿದನು;
ತೆರೆಗಳು ನಿಂತವು.
ಸಮುದ್ರವು ಶಾಂತವಾದುದರಿಂದ,
ಹಡಗಿನವರು ಸಂತೋಷಪಟ್ಟರು,
ಅವರು ಮುಟ್ಟಬೇಕಾದ ರೇವಿಗೆ ಆತನು ಅವರನ್ನು ಸೇರಿಸಿದನು.
Orar em todo tempo
A Bíblia nos exorta a orar sem cessar, com ações de graças e súplicas, revestidos da armadura espiritual. A oração traz paz sobrenatural.
ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ. ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ, ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಪಾಡುವುದು.
ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಗಳಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರಿ. ನನಗಾಗಿಯೂ ಪ್ರಾರ್ಥನೆ ಮಾಡಿರಿ.