O poder da oração
A oração é o canal mais poderoso de comunicação com Deus. Através dela, milagres acontecem, montanhas são movidas e o impossível se torna possível.
Pedidos com fé
Jesus ensinou: pedi e recebereis. Tudo o que pedirmos em seu nome, crendo, Ele fará. A fé transforma a oração em poder.
"ಬೇಡಿಕೊಳ್ಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು.
ನೀವು ನಂಬಿಕೆಯಿಂದ ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅವುಗಳನ್ನೆಲ್ಲಾ ಪಡೆಯುವಿರಿ," ಎಂದರು.
ಆದಕಾರಣ, ನೀವು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಎಲ್ಲವೂ ನಿಮಗೆ ಸಿಕ್ಕಿವೆಯೆಂದು ನಂಬಿರಿ. ಅವು ನಿಮಗೆ ಲಭಿಸುವವು.
ನನ್ನ ಹೆಸರಿನಲ್ಲಿ ನೀವು ಏನೇನು ಕೇಳಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ತಂದೆಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು. ನೀವು ನನ್ನ ಹೆಸರಿನಲ್ಲಿ ನನ್ನನ್ನು ಏನಾದರೂ ಕೇಳಿಕೊಂಡರೆ ನಾನು ಅದನ್ನು ಮಾಡುವೆನು.
Oração e milagres
A oração dos justos tem grande poder. Pedro orou e Dorcas ressuscitou. Jesus disse que certos demônios só se expulsam com jejum e oração.
ಪೇತ್ರನು ಅವರೆಲ್ಲರನ್ನು ಕೋಣೆಯಿಂದ ಹೊರಗೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಮೃತ ಸ್ತ್ರೀಯ ಕಡೆಗೆ ತಿರುಗಿಕೊಂಡು, "ತಬಿಥಾ, ಏಳು," ಎಂದು ಹೇಳಿದನು. ಆಕೆ ತನ್ನ ಕಣ್ಣು ತೆರೆದು ಪೇತ್ರನನ್ನು ಕಂಡು ಎದ್ದು ಕುಳಿತುಕೊಂಡಳು.
ಯೇಸು ಅವರಿಗೆ, "ಈ ತರವಾದದ್ದು ದೇವರ ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವುದರಿಂದಲೂ ಹೋಗಲಾರದು," ಎಂದರು.
ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯನನ್ನು ಕರೆಕಳುಹಿಸಲಿ. ಅವರು ಕರ್ತ ಯೇಸುವಿನ ಹೆಸರಿನಿಂದ ಎಣ್ಣೆ ಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ. ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುತ್ತದೆ. ಕರ್ತ ಯೇಸು ಅವನನ್ನು ಎಬ್ಬಿಸುವರು. ಪಾಪಗಳನ್ನು ಮಾಡಿದವನಾಗಿದ್ದರೆ ಅವನು ಕ್ಷಮೆಯನ್ನು ಪಡೆಯುತ್ತಾನೆ. ನೀವು ಸ್ವಸ್ಥವಾಗಬೇಕಾದರೆ, ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು, ಅರಿಕೆಮಾಡಿ, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಪ್ರಾರ್ಥನೆಯು ಶಕ್ತಿಯುತವೂ ಪರಿಣಾಮಕಾರಿಯೂ ಆಗಿರುತ್ತದೆ.
ಆಗ ಅವರು ಸಹ ಇಕ್ಕಟ್ಟಿನಲ್ಲಿ ಯೆಹೋವ ದೇವರಿಗೆ ಮೊರೆಯಿಟ್ಟರು;
ದೇವರು ಅವರ ಸಂಕಟಗಳೊಳಗಿಂದ ಅವರನ್ನು ಹೊರಗೆ ಬರಮಾಡಿದನು.
ದೇವರು ಬಿರುಗಾಳಿಯನ್ನು ಶಾಂತ ಮಾಡಿದರು.
ಅದರ ತೆರೆಗಳು ನಿಂತುಹೋದವು.
ಅವು ಶಾಂತವಾದಾಗ ಜನರು ಸಂತೋಷಪಟ್ಟರು.
ಹೀಗೆ ಅವರು ಅಪೇಕ್ಷಿಸಿದ ಬಂದರಿಗೆ ದೇವರು ಅವರನ್ನು ನಡೆಸಿದರು.
Orar em todo tempo
A Bíblia nos exorta a orar sem cessar, com ações de graças e súplicas, revestidos da armadura espiritual. A oração traz paz sobrenatural.
ಯಾವ ವಿಷಯವಾಗಿಯೂ ಚಿಂತೆ ಮಾಡದೆ, ಸರ್ವ ವಿಷಯದಲ್ಲಿ ಕೃತಜ್ಞತಾಸ್ತುತಿಯೊಡನೆ ಪ್ರಾರ್ಥನೆ ವಿಜ್ಞಾಪನೆಗಳನ್ನು ಮಾಡುತ್ತಾ ನಿಮ್ಮ ಬೇಡಿಕೆಯನ್ನು ದೇವರಿಗೆ ಸಮರ್ಪಿಸಿರಿ. ಆಗ ಎಲ್ಲಾ ಗ್ರಹಿಕೆಯನ್ನೂ ಮೀರುವ ದೇವರ ಸಮಾಧಾನವು ನಿಮ್ಮ ಹೃದಯಗಳನ್ನೂ ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಯುವುದು.
ನೀವು ಪವಿತ್ರಾತ್ಮ ದೇವರಲ್ಲಿ ಎಲ್ಲಾ ಸಮಯಗಳಲ್ಲಿಯೂ ಸಕಲ ವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಕರ್ತನ ಜನರೆಲ್ಲರಿಗಾಗಿ ಪ್ರಾರ್ಥನೆ ಮಾಡುತ್ತಾ ಎಚ್ಚರವಾಗಿರಿ.