Poder
O poder de Deus opera nos que creem. A Bíblia revela que o cristão recebe poder do alto para viver, servir e vencer — não por força própria, mas pelo Espírito de Deus.
Poder do Espírito Santo
Jesus prometeu que seus seguidores receberiam poder ao descer sobre eles o Espírito Santo. Esse poder capacita para testemunho e serviço.
ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ" ಅಂದನು.
ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.
ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ.
Poder na Palavra e na fé
A Palavra de Deus é viva e eficaz, mais cortante que espada de dois gumes. O poder não está em palavras, mas na demonstração do Espírito.
ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
ದೇವರ ರಾಜ್ಯವು ಮಾತಿನಲ್ಲಿ ಅಲ್ಲ, ಶಕ್ತಿಯಲ್ಲಿ ಅಡಗಿದೆ.
"ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು, ಹೊಸ ಭಾಷೆಗಳಲ್ಲಿ ಮಾತನಾಡುವರು; ಹಾವುಗಳನ್ನು ಕೈಗಳಿಂದ ಎತ್ತಿಕೊಳ್ಳುವರು; ವಿಷಪದಾರ್ಥಗಳನ್ನೇನಾದರು ಕುಡಿದರೂ ಅವರಿಗೆ ಯಾವ ಹಾನಿಯೂ ಆಗುವುದಿಲ್ಲ. ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಸ್ವಸ್ಥವಾಗುವುದು" ಎಂದು ಹೇಳಿದನು.
"ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವವನು ನಾನು ಮಾಡುವ ಕಾರ್ಯಗಳನ್ನು ತಾನು ಸಹ ಮಾಡುತ್ತಾನೆ; ಮತ್ತು ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಮಾಡುವನು, ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.
Fortalecidos pelo Senhor
Tudo posso naquele que me fortalece. O cristão encontra poder não em si mesmo, mas na força do Senhor e na sua armadura espiritual.
ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.
ದೇವರ ಸರ್ವಾಯುಧಗಳು
ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
ಆತನ ಮಹಿಮಾ ಶಕ್ತಿಯ ಪ್ರಕಾರ ಎಲ್ಲಾ ಸಾಮರ್ಥ್ಯದಲ್ಲಿ ಬಲಹೊಂದಿ, ಎಲ್ಲವನ್ನೂ ತಾಳ್ಮೆಯಿಂದಲೂ, ದೀರ್ಘಶಾಂತಿಯಿಂದಲೂ ಸಹಿಸಿಕೊಳ್ಳುವವರಾಗಿರಬೇಕೆಂತಲೂ,
ಹೀಗಿರಲಾಗಿ ದೇವರಿಗೆ ಅಧೀನರಾಗಿದ್ದು ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿ ಹೋಗುವನು.
ಆತನು ಎದ್ದು ಗಾಳಿಯನ್ನು ಗದರಿಸಿ, ಸಮುದ್ರಕ್ಕೆ "ಶಾಂತವಾಗಿರು, ಮೊರೆಯಬೇಡ" ಎಂದು ಅಪ್ಪಣೆಕೊಡುತ್ತಲೇ ಗಾಳಿ ನಿಂತುಹೋಗಿ ಸಮುದ್ರವು ಶಾಂತವಾಯಿತು. ತರುವಾಯ ಆತನು ಅವರನ್ನು, "ಯಾಕೆ ಭಯಪಡುತ್ತೀರಿ? ಇನ್ನೂ ನಿಮಗೆ ನಂಬಿಕೆಯಿಲ್ಲವೇ?" ಎಂದು ಕೇಳಲು ಅವರು ಬಹು ಭಯಪಟ್ಟು, "ಈತನು ಯಾರಿರಬಹುದು? ಗಾಳಿಯೂ, ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ" ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.