Preservação das escrituras
A Palavra de Deus permanece para sempre. As Escrituras foram preservadas por Deus ao longo dos milênios para instrução, consolação e guia de todas as gerações.
A Palavra eterna
Céus e terra passarão, mas as palavras de Deus jamais passarão. Sua Palavra é eterna, infalível e imutável — a verdade que sustenta tudo.
ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.
ನಿಮಗೆ ಸತ್ಯವಾಗಿ ಹೇಳುತ್ತೇನೆ, ಆಕಾಶವೂ ಭೂಮಿಯೂ ಅಳಿದುಹೋಗುವ ತನಕ ಧರ್ಮನಿಯಮವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಚುಕ್ಕೆಯಾಗಲಿ, ಒಂದು ಅಕ್ಷರವಾಗಲಿ ಅಳಿದುಹೋಗುವುದಿಲ್ಲ.
ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು, ನಮ್ಮ ದೇವರ ಮಾತೋ ಸದಾಕಾಲವೂ ಇರುವುದು" ಎಂದು ಉತ್ತರವಾಯಿತು.
ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ:
"ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ.
ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ.
ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು.
ಆದರೆ ಕರ್ತನ ಮಾತೋ ಸದಾಕಾಲವೂ ಇರುವುದು."
ಆ ಮಾತು ಯಾವುದೆಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
ಏಕೆಂದರೆ ನೀವು ಹೊಸದಾಗಿ ಹುಟ್ಟಿರುವಂಥದ್ದು ನಾಶವಾಗುವ ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ ವಾಕ್ಯದಿಂದಲೇ. ಅದು ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು. ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ:
"ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ.
ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ.
ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು.
ಆದರೆ ಕರ್ತನ ಮಾತೋ ಸದಾಕಾಲವೂ ಇರುವುದು."
ಆ ಮಾತು ಯಾವುದೆಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
A inspiração divina
Toda Escritura é inspirada por Deus. Homens santos falaram da parte do Senhor, e a Palavra escrita é a expressão fiel da vontade divina.
ಯಾವ ಪ್ರವಾದನಾ ವಾಕ್ಯವೂ ಕೇವಲ ಮನುಷ್ಯನ ಸ್ವಬುದ್ಧಿಯಿಂದ ವಿವರಿಸತಕ್ಕಂಥದ್ದಲ್ಲವೆಂಬುದನ್ನು ಮುಖ್ಯವಾಗಿ ಮೊದಲು ತಿಳಿದುಕೊಳ್ಳಿರಿ. ಏಕೆಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ. ಆದರೆ ಮನುಷ್ಯರು ಪವಿತ್ರಾತ್ಮಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತನಾಡಿರುವುದು.
ದೇವರು ತನ್ನ ಮಗನ ಮೂಲಕ ಮಾತನಾಡಿದ್ದು
ದೇವರು ಪುರಾತನ ಕಾಲದಲ್ಲಿ ನಮ್ಮ ಪೂರ್ವಿಕರ ಸಂಗಡ ಪ್ರವಾದಿಗಳ ಮುಖಾಂತರ ಹಲವಾರು ವಿಧದಲ್ಲಿ, ಅನೇಕಸಾರಿ ಮಾತನಾಡಿದ್ದಾನೆ. ಆದರೆ ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತನಾಡಿದ್ದಾನೆ. ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದನು. ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.
ದೇವರ ಕಾರ್ಯವೆಲ್ಲವು ನಿತ್ಯವೆಂದು ಬಲ್ಲೆನು. ಅದಕ್ಕೆ ಯಾವುದನ್ನೂ ಸೇರಿಸಲಾರೆವು. ಅದರಿಂದ ಯಾವುದನ್ನೂ ತೆಗೆಯಲಾರೆವು. ದೇವರ ಈ ನಿಯಮಕ್ಕೆ ಮನುಷ್ಯರು ತನ್ನ ಎದುರಿನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕೆಂಬುದೇ ಕಾರಣ.
A Palavra como guia e tesouro
A Palavra de Deus é lâmpada para os pés, espada do Espírito e tesouro para o coração. Guardá-la e meditá-la nos protege do pecado.
ನಿನಗೆ ವಿರುದ್ಧವಾಗಿ ಪಾಪಮಾಡದಂತೆ,
ನಿನ್ನ ನುಡಿಗಳನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೇನೆ.
ದೇವರ ಸೃಷ್ಟಿ ಮತ್ತು ಧರ್ಮಶಾಸ್ತ್ರದ ಮಹಿಮೆ
ಆಕಾಶವು ದೇವರ ಪ್ರಭಾವವನ್ನು ಪ್ರಚುರಪಡಿಸುತ್ತದೆ;
ಗಗನವು ಆತನ ಕೈಕೆಲಸವನ್ನು ತಿಳಿಸುತ್ತದೆ.
ದಿನವು ದಿನಕ್ಕೆ ದೇವರ ಮಹಿಮೆಯನ್ನು ತಿಳಿಸುತ್ತಿರುವುದು;
ರಾತ್ರಿಯು ರಾತ್ರಿಗೆ ಜ್ಞಾನವನ್ನು ಪ್ರಕಟಿಸುತ್ತಿರುವುದು.
ಶಬ್ದವಿಲ್ಲ, ಮಾತಿಲ್ಲ, ಅವುಗಳ ಸ್ವರ ಕೇಳಿಸುವುದಿಲ್ಲ.
ಆದರೂ ಅವುಗಳ ಪ್ರಭುತ್ವವು ಭೂಮಿಯಲ್ಲೆಲ್ಲಾ ಪ್ರಸರಿಸಿದೆ;
ಅವುಗಳ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿರುತ್ತವೆ.
ಅಲ್ಲಿ ದೇವರು ಸೂರ್ಯನಿಗೋಸ್ಕರ ಗುಡಾರವನ್ನು ಏರ್ಪಡಿಸಿದ್ದಾನೆ.
ಅವನು ತನ್ನ ಮಂಟಪದೊಳಗಿಂದ ಬರುವ ಮದಲಿಂಗನೋ ಎಂಬಂತೆ ಹೊರಟುಬರುವನು.
ಅವನು ಶೂರನಂತೆ ತನಗೆ ನೇಮಕವಾದ ಮಾರ್ಗದಲ್ಲಿ ಓಡುವುದಕ್ಕೆ ಉಲ್ಲಾಸಗೊಂಡಿದ್ದಾನೆ.
ಆಕಾಶದ ಒಂದು ಕಡೆಯಿಂದ ಹೊರಟು ಮತ್ತೊಂದು ಕಡೆಗೆ ಬರುತ್ತಾನೆ;
ಅವನ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ.
ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು;
ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು.
ಯೆಹೋವನ ಕಟ್ಟಳೆಗಳು ನಂಬಿಕೆಗೆ ಯೋಗ್ಯವಾದದ್ದು;
ಅವು ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ.
ಯೆಹೋವನ ಆಜ್ಞೆಗಳು ನೀತಿಯುಳ್ಳವುಗಳಾಗಿವೆ;
ಮನಸ್ಸನ್ನು ಹರ್ಷಪಡಿಸುತ್ತವೆ.
ಯೆಹೋವನ ಆಜ್ಞೆ ಪವಿತ್ರವಾದದ್ದು; ಕಣ್ಣುಗಳನ್ನು ಕಳೆಗೊಳಿಸುತ್ತದೆ.
ಯೆಹೋವನ ಮಾತುಗಳು ಯಥಾರ್ಥವಾದವುಗಳೇ;
ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ.
ಜನರಲ್ಲಿ ಎಲ್ಲೆಲ್ಲೂ ನೀಚರೇ ತುಂಬಿಕೊಂಡಿದ್ದರೂ,
ಜನರೊಳಗೆ ದುಷ್ಟತ್ವ ಆಳ್ವಿಕೆಗೆ ಬಂದಿದ್ದರೂ,
"ದೇವರ ವಾಕ್ಯವು ನಿನ್ನ ಸಮೀಪದಲ್ಲಿಯೇ ಇದೆ; ಅದು ನಿನ್ನ ಬಾಯಲ್ಲಿಯೂ, ನಿನ್ನ ಹೃದಯದಲ್ಲಿಯೂ ಇದೆ." ಆ ವಾಕ್ಯವು ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.
ಆದಕಾರಣ ಸಾರಿದ ಸುವಾರ್ತೆಯನ್ನು ಕೇಳುವುದರಿಂದ ನಂಬಿಕೆಯು ಹುಟ್ಟುತ್ತದೆ, ಕೇಳಿಸಿಕೊಳ್ಳುವುದು ಕ್ರಿಸ್ತನ ವಾಕ್ಯವಾಗಿದೆ. ಆದರೂ "ಅವರಿಗೆ ಕೇಳಿಸಲಿಲ್ಲವೇನೋ?" ಎಂದು ಹೇಳುತ್ತೇನೆ. ಹೌದು ನಿಶ್ಚಯವಾಗಿ ಕೇಳಿಸಿಕೊಂಡಿದ್ದರು. "ಸಾರುವವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು."
ಈ ಮೊದಲು ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವುದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಶಾಸ್ತ್ರಗಳು ಬರೆಯಲ್ಪಟ್ಟವು.
ನಾನು ಈಗ ನಿಮಗೆ ತಿಳಿಸುವ ಮಾತುಗಳು ನಿಮ್ಮ ಹೃದಯದಲ್ಲಿರಬೇಕು. ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ, ಮನೆಯಲ್ಲಿ ಕುಳಿತಿರುವಾಗಲೂ, ದಾರಿಯಲ್ಲಿ ನಡೆಯುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡಬೇಕು. ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು, ಇವು ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತೆ ಇರಬೇಕು. ನಿಮ್ಮ ಮನೆಬಾಗಿಲಿನ ನಿಲುವು ಪಟ್ಟಿಗಳಲ್ಲಿಯೂ ಮತ್ತು ದ್ವಾರಗಳ ಮೇಲೆಯೂ ಇವುಗಳನ್ನು ಬರೆಯಬೇಕು.
ಬುದ್ಧಿಗಿಂತಲೂ ಮಿಗಿಲಾಗಿರುವ ಕ್ರಿಸ್ತನ ಪ್ರೀತಿಯನ್ನು ತಿಳಿದುಕೊಂಡು, ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ದೇವರು ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.
ಹಾಗೆ ಮಾಡುವುದು ನಮ್ಮ ರಕ್ಷಕನಾದ ದೇವರ ಸನ್ನಿಧಿಯಲ್ಲಿ ಒಳ್ಳೆಯದು, ಮೆಚ್ಚಿಕೆಯಾಗಿಯೂ ಇದೆ. ಎಲ್ಲಾ ಜನರೂ ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರಬೇಕೆಂಬುದೇ ಆತನ ಚಿತ್ತವಾಗಿದೆ.