Preservação das escrituras
A Palavra de Deus permanece para sempre. As Escrituras foram preservadas por Deus ao longo dos milênios para instrução, consolação e guia de todas as gerações.
A Palavra eterna
Céus e terra passarão, mas as palavras de Deus jamais passarão. Sua Palavra é eterna, infalível e imutável — a verdade que sustenta tudo.
ಭೂಮ್ಯಾಕಾಶಗಳು ಅಳಿದುಹೋಗುವುವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.
ಭೂಮಿ ಆಕಾಶಗಳು ಗತಿಸಿಹೋಗುವವು, ಆದರೆ ನಿಯಮವೆಲ್ಲಾ ನೆರವೇರುವ ತನಕ ಅದರಲ್ಲಿ ಒಂದು ಚಿಕ್ಕ ಅಕ್ಷರವಾದರೂ ಚಿಕ್ಕ ಚುಕ್ಕೆಯಾದರೂ ಅಳಿದುಹೋಗುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
ಹುಲ್ಲು ಒಣಗಿಹೋಗುವುದು, ಹೂವು ಬಾಡಿಹೋಗುವುದು.
ಆದರೆ ನಮ್ಮ ದೇವರ ವಾಕ್ಯವಾದರೋ ಸದಾಕಾಲ ಇರುವುದು," ಎಂದು ಉತ್ತರವಾಯಿತು.
"ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ.
ಮನುಷ್ಯರ ಪ್ರಭಾವವೆಲ್ಲಾ ಹೊಲದ ಹೂವಿನಂತಿದೆ.
ಹುಲ್ಲು ಒಣಗಿಹೋಗುವುದು.
ಅದರ ಹೂವು ಉದುರಿ ಹೋಗುವುದು.
ಕರ್ತದೇವರ ವಾಕ್ಯವಾದರೋ ಸದಾಕಾಲ ಇರುವುದು."
ಇದೇ ನಿಮಗೆ ಸಾರಲಾದ ಸುವಾರ್ತಾವಾಕ್ಯವು.
ಏಕೆಂದರೆ ನೀವು ತಿರುಗಿ ಹುಟ್ಟಿದವರಾಗಿದ್ದೀರಲ್ಲಾ! ಆ ಜನ್ಮವು ನಾಶವಾಗುವ ಬೀಜದಿಂದಲ್ಲ. ಆದರೆ ನಾಶವಾಗದಂಥದ್ದರಿಂದ ಸಜೀವವಾದ ಸದಾಕಾಲವಿರುವ ದೇವರ ವಾಕ್ಯದ ಮೂಲಕ ಆಗಿದೆ.
"ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ.
ಮನುಷ್ಯರ ಪ್ರಭಾವವೆಲ್ಲಾ ಹೊಲದ ಹೂವಿನಂತಿದೆ.
ಹುಲ್ಲು ಒಣಗಿಹೋಗುವುದು.
ಅದರ ಹೂವು ಉದುರಿ ಹೋಗುವುದು.
ಕರ್ತದೇವರ ವಾಕ್ಯವಾದರೋ ಸದಾಕಾಲ ಇರುವುದು."
ಇದೇ ನಿಮಗೆ ಸಾರಲಾದ ಸುವಾರ್ತಾವಾಕ್ಯವು.
A inspiração divina
Toda Escritura é inspirada por Deus. Homens santos falaram da parte do Senhor, e a Palavra escrita é a expressão fiel da vontade divina.
ಪವಿತ್ರ ವೇದದ ಯಾವ ಪ್ರವಾದನೆಯೂ ಕೇವಲ ಪ್ರವಾದಿಗಳಿಂದ ಸ್ವಂತವಾಗಿ ವಿವರಿಸತಕ್ಕದ್ದಲ್ಲ ಎಂಬುದನ್ನು ಮೊದಲು ತಿಳಿದುಕೊಳ್ಳಿರಿ. ಯಾವ ಪ್ರವಾದನೆಯೂ ಎಂದೂ ಮನುಷ್ಯನ ಚಿತ್ತದಿಂದ ಬರಲಿಲ್ಲ, ಆದರೆ ಪ್ರವಾದಿಗಳು ಪವಿತ್ರಾತ್ಮ ಪ್ರೇರಿತರಾಗಿ ದೇವರಿಂದ ಪಡೆದುಕೊಂಡಿದ್ದನ್ನೇ ಮಾತನಾಡಿದರು.
ಕ್ರಿಸ್ತ ಯೇಸುವೇ ದೇವರ ಅಂತಿಮ ಮಾತು
ಗತಕಾಲದಲ್ಲಿ ನಮ್ಮ ಪಿತೃಗಳ ಸಂಗಡ ವಿವಿಧ ರೀತಿಯಲ್ಲಿಯೂ ಅನೇಕಬಾರಿ ಪ್ರವಾದಿಗಳ ಮುಖಾಂತರವೂ ಮಾತನಾಡಿದ ದೇವರು, ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ಮುಖಾಂತರ ಮಾತನಾಡಿದ್ದಾರೆ. ಈ ಕ್ರಿಸ್ತ ಯೇಸುವನ್ನೇ ದೇವರು ಎಲ್ಲಕ್ಕೂ ಬಾಧ್ಯರನ್ನಾಗಿ ನೇಮಿಸಿದರು. ಇವರ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದರು. ಈ ಕ್ರಿಸ್ತ ಯೇಸುವೇ ದೇವರ ಮಹಿಮೆಯ ಪ್ರಕಾಶವೂ ಅವರ ವ್ಯಕ್ತಿತ್ವದ ಪ್ರತಿರೂಪವಾಗಿರುವ ದೇವಪುತ್ರ ಆಗಿದ್ದಾರೆ. ಈ ಕ್ರಿಸ್ತ ಯೇಸುವೇ ತಮ್ಮ ಶಕ್ತಿಯುತ ವಾಕ್ಯದಿಂದ ಸಮಸ್ತಕ್ಕೂ ಆಧಾರವಾಗಿದ್ದಾರೆ. ಕ್ರಿಸ್ತ ಯೇಸು ತಾವಾಗಿಯೇ ನಮ್ಮ ಪಾಪಗಳನ್ನು ಶುದ್ಧಿಮಾಡಿ ಉನ್ನತದೊಳಗೆ ಮಹೋನ್ನತ ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.
ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.
ದೇವರು ಮಾಡುವ ಕಾರ್ಯವೆಲ್ಲವೂ ಶಾಶ್ವತವಾಗಿರುವುದೆಂದು ನಾನು ಬಲ್ಲೆನು; ಅದಕ್ಕೆ ಯಾವುದನ್ನೂ ಕೂಡಿಸಲಾಗದು ಮತ್ತು ಯಾವುದನ್ನೂ ತೆಗೆಯಲಾಗದು. ತಮ್ಮ ಸನ್ನಿಧಿಯಲ್ಲಿ ಮನುಷ್ಯರು ಭಯಭಕ್ತಿಯಿಂದ ಜೀವಿಸಬೇಕೆಂದು ದೇವರು ಇದನ್ನು ಮಾಡಿದ್ದಾರೆ.
A Palavra como guia e tesouro
A Palavra de Deus é lâmpada para os pés, espada do Espírito e tesouro para o coração. Guardá-la e meditá-la nos protege do pecado.
ನಿಮಗೆ ವಿರೋಧವಾಗಿ ಪಾಪಮಾಡದ ಹಾಗೆ
ನನ್ನ ಹೃದಯದಲ್ಲಿ ನಿಮ್ಮ ವಾಕ್ಯವನ್ನು ಬಚ್ಚಿಟ್ಟುಕೊಂಡಿದ್ದೇನೆ.
ಆಕಾಶವು ದೇವರ ಮಹಿಮೆಯನ್ನು ಸಾರುತ್ತದೆ;
ಅಂತರಿಕ್ಷವು ಅವರ ಕೈಕೆಲಸವನ್ನು ಘೋಷಿಸುತ್ತದೆ.
ಹಗಲೆಲ್ಲಾ ಅವು ಮಾತನಾಡುತ್ತವೆ;
ರಾತ್ರಿಯೆಲ್ಲಾ ಅವು ಅರಿವನ್ನು ಪ್ರಕಟಿಸುತ್ತವೆ.
ಅವುಗಳಿಗೆ ಮಾತೂ ಇಲ್ಲ, ಪದವೂ ಇಲ್ಲ,
ಅವುಗಳ ಸ್ವರವು ಕೇಳುವುದೂ ಇಲ್ಲ.
ಅವುಗಳ ಧ್ವನಿ ಭೂಲೋಕವೆಲ್ಲಾ ಹರಡಿವೆ;
ಅವುಗಳ ಮಾತುಗಳೋ ಲೋಕದ ಕಟ್ಟಕಡೆಯವರೆಗೂ ಹೋಗುತ್ತವೆ;
ಆಕಾಶದಲ್ಲಿ ದೇವರು ಸೂರ್ಯನಿಗೆ ಗುಡಾರ ಹಾಕಿದ್ದಾರೆ.
ಸೂರ್ಯನು ಮದುಮಗನಂತೆ ತನ್ನ ಕೊಠಡಿಯಿಂದ ಹೊರಟುಬಂದು,
ಪಂದ್ಯಕ್ಕೆ ಹರ್ಷದಿಂದ ಓಡುವ ಪರಾಕ್ರಮಶಾಲಿಯಂತೆ ಇದ್ದಾನೆ.
ಆಕಾಶದ ಒಂದು ಕಡೆಯಿಂದ ಉದಯಿಸಿ
ಮತ್ತೊಂದು ಕಡೆಯವರೆಗೆ ಹೊರಟು ಪ್ರಯಾಣಿಸುತ್ತಾನೆ;
ಅದರ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ.
ಯೆಹೋವ ದೇವರ ನಿಯಮವು ಸಂಪೂರ್ಣವಾಗಿದ್ದು,
ಪ್ರಾಣಕ್ಕೆ ಜೀವಕರವಾಗಿದೆ;
ಯೆಹೋವ ದೇವರ ಶಾಸನಗಳು ವಿಶ್ವಾಸಪಾತ್ರವಾಗಿದ್ದು,
ಮುಗ್ಧನನ್ನು ಜ್ಞಾನಿಗಳನ್ನಾಗಿ ಮಾಡುತ್ತವೆ.
ಯೆಹೋವ ದೇವರ ಸೂತ್ರಗಳು ನೀತಿಯುಳ್ಳವುಗಳಾಗಿದ್ದು
ಅವು ಹೃದಯಕ್ಕೆ ಆನಂದಕರವಾಗಿವೆ;
ಯೆಹೋವ ದೇವರ ಆಜ್ಞೆಗಳು ಸ್ಪಷ್ಟವಾಗಿದ್ದು,
ಕಣ್ಣುಗಳಿಗೆ ಪ್ರಕಾಶಕರವಾಗಿವೆ.
ಯೆಹೋವ ದೇವರ ವಾಕ್ಯಗಳು ದೋಷವಿಲ್ಲದ್ದು.
ಅವು ಮಣ್ಣಿನ ಕುಲುಮೆಯಲ್ಲಿ ಶುದ್ಧೀಕರಿಸಿದ ಬೆಳ್ಳಿಯಂತೆಯೂ
ಏಳು ಸಾರಿ ಪುಟಕ್ಕೆ ಹಾಕಿದ ಬಂಗಾರದಂತೆಯೂ ಇವೆ.
ಯೆಹೋವ ದೇವರೇ, ನೀವು ಗತಿಯಿಲ್ಲದವರನ್ನು
ದುಷ್ಟರಿಂದ ಯಾವಾಗಲೂ ಕಾಪಾಡಿ ಸಂರಕ್ಷಿಸುತ್ತೀರಿ,
ಆದರೆ ಇದು ಏನು ಹೇಳುತ್ತದೆ, "ತಕ್ಕ ವಾಕ್ಯವು ನಿನ್ನ ಬಳಿಯಲ್ಲಿ ಇದೆ, ಅದು ನಿನ್ನ ಬಾಯಿಯಲ್ಲಿಯೂ ಹೃದಯದಲ್ಲಿಯೂ ಇದೆ." ಅದೇ ನಾವು ಸಾರುವ ವಿಶ್ವಾಸದ ವಾಕ್ಯ.
ಆದಕಾರಣ, ತಕ್ಕ ವಾಕ್ಯವನ್ನು ಕೇಳುವುದರಿಂದಲೇ ವಿಶ್ವಾಸವು ಬರುತ್ತದೆ, ಅದು ಕ್ರಿಸ್ತನ ವಾಕ್ಯವನ್ನು ಕೇಳುವುದರಿಂದಲೇ ಬರುತ್ತದೆ. ಆದರೆ ಇಸ್ರಾಯೇಲರು ಎಂದೂ ಸುವಾರ್ತೆಯನ್ನು ಕೇಳಲಿಲ್ಲವೋ ಎಂದು ನಾನು ಪ್ರಶ್ನಿಸುತ್ತೇನೆ? ಅವರು ನಿಶ್ಚಯವಾಗಿ ಕೇಳಿದ್ದಾರೆ. ಪವಿತ್ರ ವೇದದಲ್ಲಿ ಹೇಳಿರುವಂತೆ:
"ಅವರ ಸ್ವರವು ಭೂಮಿಯ ಎಲ್ಲಾ ಕಡೆಗಳಲ್ಲಿ ಹೋಗಿರುತ್ತದೆ,
ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿವೆ."
ಪವಿತ್ರ ವೇದದಲ್ಲಿ ಮುಂಚಿತವಾಗಿ ಬರೆದಿರುವುದೆಲ್ಲವೂ ನಮ್ಮ ಬೋಧನೆಗಾಗಿಯೇ ಬರೆಯಲಾಗಿದೆ. ನಾವು ಆ ಬೋಧನೆಗಳ ಮೂಲಕ ಸಹನೆಯನ್ನೂ ಉತ್ತೇಜನೆಯನ್ನೂ ಹೊಂದಿಕೊಂಡು ನಿರೀಕ್ಷೆಯುಳ್ಳವರಾಗಿರಬೇಕೆಂದು ಬರೆಯಲಾಗಿದೆ.
ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಈ ಮಾತುಗಳು ನಿಮ್ಮ ಹೃದಯದಲ್ಲಿ ಇರಬೇಕು. ಅವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸ ಮಾಡಿಸಿ, ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯವಾಗಿ ಮಾತನಾಡಬೇಕು. ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಬೇಕು. ಅವುಗಳನ್ನು ನಿಮ್ಮ ಹಣೆಗೂ ಕಟ್ಟಿಕೊಳ್ಳಬೇಕು. ಅವುಗಳನ್ನು ನಿಮ್ಮ ಮನೆಯ ನಿಲುವು ಪಟ್ಟಿಗಳ ಮೇಲೆಯೂ ನಿಮ್ಮ ಬಾಗಿಲುಗಳ ಮೇಲೆಯೂ ಬರೆಯಬೇಕು.
ಮತ್ತು ತಿಳುವಳಿಕೆಗೆ ಅಪಾರವಾದ ಕ್ರಿಸ್ತನ ಪ್ರೀತಿಯನ್ನು ನೀವು ತಿಳಿದುಕೊಂಡು ದೇವರ ಸರ್ವಸಂಪೂರ್ಣತೆಯಿಂದ ತುಂಬಿದವರಾಗಲಿ ಎಂದು ಅವರನ್ನು ಬೇಡಿಕೊಳ್ಳುತ್ತೇನೆ.
ಏಕೆಂದರೆ ಇದು ನಮ್ಮ ರಕ್ಷಕರಾದ ದೇವರ ಮುಂದೆ ಒಳ್ಳೆಯದಾಗಿಯೂ ಅಂಗೀಕರಿಸತಕ್ಕದ್ದಾಗಿಯೂ ಇದೆ. ಎಲ್ಲಾ ಮನುಷ್ಯರೂ ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಬರಬೇಕೆಂಬುದು ದೇವರ ಚಿತ್ತವಾಗಿದೆ.