Profecia
A profecia é a voz de Deus revelada ao seu povo. Através dos profetas, Deus comunicou seus planos, advertiu contra o pecado e anunciou a vinda do Messias.
Profecia e revelação divina
A profecia na Bíblia não é invenção humana, mas homens santos de Deus falaram movidos pelo Espírito Santo, revelando os mistérios divinos.
ಏಕೆಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ. ಆದರೆ ಮನುಷ್ಯರು ಪವಿತ್ರಾತ್ಮಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತನಾಡಿರುವುದು.
ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ
ಯೆಹೋವನಾದ ದೇವರು ಏನನ್ನೂ ಮಾಡುವುದಿಲ್ಲ.
ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡರು. ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಇಳಿದುಬಂದನು; ಅವರು ನಾನಾ ಭಾಷೆಗಳನ್ನಾಡಿದರು, ಪ್ರವಾದಿಸಿದರು.
Profecias messiânicas cumpridas
As profecias do Antigo Testamento sobre o Messias se cumpriram em Jesus. Seu nascimento, ministério e sacrifício foram anunciados séculos antes.
ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.
ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು; ಆ ಮಾತು ಏನೆಂದರೆ,
"ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು;
ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.
‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ."
ಸಮಾಧಾನಪ್ರದನಾದ ರಾಜನ ಆಗಮನ
ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ!
ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ;
ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.
ಎಲ್ಲಾ ಮನುಷ್ಯರು ನೀತಿವಂತರಾಗುವುದಕ್ಕೆ ಯೇಸು ಕ್ರಿಸ್ತನನ್ನು ನಂಬುವುದೇ ಮಾರ್ಗ
ಈಗಲಾದರೋ ದೇವರಿಂದ ದೊರಕುವ ನೀತಿಯು ನಂಬುವವರೆಲ್ಲರಿಗೆ ಧರ್ಮಶಾಸ್ತ್ರ ನಿಯಮಗಳಿಲ್ಲದೆ ಪ್ರಕಟವಾಗಿದೆ. ಅದು ಮೋಶೆಯ ಧರ್ಮಶಾಸ್ತ್ರದಿಂದಲೂ ಪ್ರವಾದಿಗಳ ನುಡಿಗಳಿಂದಲೂ ಸಾಕ್ಷಿಗೊಂಡಿರುತ್ತವೆ. ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.
Discernimento profético
A Bíblia nos alerta para examinar tudo e reter o que é bom. Nem todo que profetiza fala da parte de Deus — devemos provar os espíritos.
ಆತ್ಮಪ್ರೇರಿತ ನುಡಿಗಳು ಸತ್ಯವೋ ಅಸತ್ಯವೋ ಎಂದು ತಿಳಿದುಕೊಳ್ಳುವುದಕ್ಕಾಗಿ ಅವುಗಳನ್ನು ಪರೀಕ್ಷಿಸಿ ನೋಡಬೇಕು
ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ.
ಆದರೆ ಎಲ್ಲವನ್ನೂ ಪರೀಕ್ಷಿಸಿ ಒಳ್ಳೆಯದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ. ಸಕಲವಿಧವಾದ ಕೆಟ್ಟತನಕ್ಕೆ ದೂರವಾಗಿರಿ.
ಸುಳ್ಳು ಪ್ರವಾದಿಗಳಿದ್ದಾರೆ ಎಚ್ಚರಿಕೆ
"ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.
ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ ಇದೇ ಆಗಿದೆ.
ನನಗೆ ಪ್ರವಾದನ ವರವಿದ್ದರೂ, ಎಲ್ಲಾ ರಹಸ್ಯಗಳೂ, ಸಕಲ ವಿಧವಾದ ವಿದ್ಯೆಗಳನ್ನು ತಿಳಿದ್ದರೂ, ಬೆಟ್ಟಗಳನ್ನೂ ತೆಗೆದಿಡುವುಷ್ಟು ನಂಬಿಕೆಯಿದ್ದರೂ, ಪ್ರೀತಿಯಿಲ್ಲದವನಾಗಿದ್ದರೆ ನಾನು ಏನೂ ಅಲ್ಲದವನಾಗಿದ್ದೇನೆ.
ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೇ ದೇವಜನರೊಂದಿಗೆ ಒಂದೇ ಸಂಸ್ಥಾನದವರೂ ದೇವರ ಮನೆಯವರೂ ಆಗಿದ್ದೀರಿ. ಅಪೊಸ್ತಲರೂ ಪ್ರವಾದಿಗಳೂ ಎಂಬ ಅಡಿಪಾಯದ ಮೇಲೆ ನೀವೂ ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯವಾದ ಮೂಲೆಗಲ್ಲು.
"ನೀನು ಹಿಂದಿರುಗಿ ಹೋಗಿ, ನನ್ನ ಜನಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ನಿನ್ನ ಪಿತೃವಾದ ದಾವೀದನ ದೇವರಾದ ಯೆಹೋವನು ಹೇಳಿದ್ದೇನೆಂದರೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.