Promessas
As promessas de Deus são firmes e verdadeiras. Nenhuma delas jamais falhou. A Bíblia é um livro de promessas — de amor, proteção, provisão e vida eterna para os que creem.
A fidelidade de Deus
De todas as boas promessas que o Senhor fez, nenhuma falhou. Ele é fiel para cumprir tudo o que prometeu desde a eternidade.
"ಭೂನಿವಾಸಿಗಳೆಲ್ಲರು ಹೋಗುವ ಮಾರ್ಗವಾಗಿ ಇಂದು ನಾನು ಹೋಗಬೇಕಾಗಿದೆ. ನಿಮ್ಮ ದೇವರಾದ ಯೆಹೋವ ದೇವರು ನಿಮಗೋಸ್ಕರ ಹೇಳಿದ ಎಲ್ಲಾ ಒಳ್ಳೆಯ ವಾಗ್ದಾನಗಳಲ್ಲಿ ಒಂದೂ ತಪ್ಪಲಿಲ್ಲವೆಂದು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಅರಿತಿದ್ದೀರಿ. ಅವುಗಳಲ್ಲಿ ಒಂದು ಮಾತಾದರೂ ತಪ್ಪದೆ ಅವೆಲ್ಲಾ ನಿಮಗೆ ಸಂಭವಿಸಿದವು.
ಹೀಗಿರುವುದರಿಂದ ನಿಮ್ಮ ದೇವರಾದ ಯೆಹೋವ ದೇವರು ಒಬ್ಬರೇ ದೇವರು; ಅವರೇ ನಂಬಿಗಸ್ತರಾದ ದೇವರು; ತಮ್ಮನ್ನು ಪ್ರೀತಿಸಿ, ತಮ್ಮ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಅವರು ತಮ್ಮ ಒಡಂಬಡಿಕೆಯ ಪ್ರೀತಿಯನ್ನು ಸಾವಿರ ತಲೆಗಳವರೆಗೂ ತೋರಿಸುವರು.
ನಿಮ್ಮನ್ನು ಕರೆಯುವ ದೇವರು ನಂಬಿಗಸ್ತರು, ಅವರೇ ಅದನ್ನು ಸಾಧಿಸುವವರೂ ಆಗಿದ್ದಾರೆ.
ನಾವು ನಮ್ಮ ನಿರೀಕ್ಷೆಯ ಅರಿಕೆಯನ್ನು ಚಂಚಲರಾಗದೆ ಬಿಗಿಯಾಗಿ ಹಿಡಿಯೋಣ. ಏಕೆಂದರೆ ವಾಗ್ದಾನ ಮಾಡಿದವರು ನಂಬಿಗಸ್ತರು.
ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಅತ್ಯಂತ ಮಹತ್ವವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ದೇವರು ನಮಗೆ ದಯಪಾಲಿಸಿದ್ದಾರೆ.
Promessas de cuidado e proteção
Deus prometeu estar conosco nas águas e no fogo, fortalecer-nos e nos segurar com a destra da sua justiça. Nada nos separará do seu amor.
ನೀನಂತೂ ಹೆದರಬೇಡ, ಏಕೆಂದರೆ ನಾನೇ ನಿನ್ನ ದೇವರು,
ನಾನು ನಿನ್ನನ್ನು ಬಲಪಡಿಸುತ್ತೇನೆ.
ನಾನು ನಿನಗೆ ಸಹಾಯ ಮಾಡುತ್ತೇನೆ.
ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿಹಿಡಿಯುತ್ತೇನೆ.
ನೀನು ಜಲರಾಶಿಯನ್ನು ದಾಟಿಹೋಗುವಾಗ,
ನಾನು ನಿನ್ನೊಂದಿಗಿರುವೆನು;
ನದಿಗಳನ್ನು ನೀನು ದಾಟುವಾಗ,
ಅವು ನಿನ್ನನ್ನು ಮುಳುಗಿಸುವುದಿಲ್ಲ;
ಬೆಂಕಿಯಲ್ಲಿ ನಡೆಯುವಾಗ,
ನೀನು ಸುಟ್ಟುಹೋಗುವುದಿಲ್ಲ;
ಜ್ವಾಲೆಯು ನಿನ್ನನ್ನು ದಹಿಸದು.
ಆದರೆ ಯೆಹೋವ ದೇವರನ್ನು ನಿರೀಕ್ಷಿಸುವವರೋ
ಹೊಸ ಬಲವನ್ನು ಹೊಂದುವರು.
ಅವರು ಹದ್ದುಗಳಂತೆ
ರೆಕ್ಕೆಗಳಿಂದ ಬೆಟ್ಟವನ್ನು ಏರುವರು.
ಅವರು ಓಡಿ ದಣಿಯರು. ನಡೆದು ಬಳಲರು.
ನಾನು ನಿಮ್ಮನ್ನು ಕುರಿತು ಮಾಡುವ ಯೋಜನೆಗಳನ್ನು ಬಲ್ಲೆನು. ಅವು ಕೇಡಿಗಲ್ಲ, ಹಿತಕ್ಕಾಗಿರುವ ಯೋಜನೆಗಳು. ನಿಮಗೆ ಭವಿಷ್ಯವನ್ನೂ, ನಿರೀಕ್ಷೆಯನ್ನೂ ಕೊಡುವುದಕ್ಕಿವೆ.
Promessas de salvação e vida eterna
A promessa suprema de Deus é a vida eterna em Cristo. Quem crê no Filho tem a vida eterna e a certeza da ressurreição.
ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕೊಟ್ಟರು. ಅದಕ್ಕಾಗಿಯೇ ಅವರನ್ನು ನಂಬುವ ಪ್ರತಿಯೊಬ್ಬರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕು.
ಯೇಸು ಆಕೆಗೆ, "ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವರು ಸತ್ತರೂ ಬದುಕುವರು. ಜೀವಿಸುವ ಪ್ರತಿಯೊಬ್ಬರೂ ನನ್ನಲ್ಲಿ ನಂಬಿಕೆಯಿಟ್ಟರೆ, ಅವರು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯಾ?" ಎಂದು ಕೇಳಿದ್ದಕ್ಕೆ,
ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾರಾದರೂ ನನ್ನ ಸ್ವರವನ್ನು ಕೇಳಿ, ಬಾಗಿಲನ್ನು ತೆರೆದರೆ, ನಾನು ಪ್ರವೇಶ ಮಾಡಿ, ಆ ವ್ಯಕ್ತಿಯ ಸಂಗಡ ಊಟಮಾಡುವೆನು. ಅವರೂ ನನ್ನ ಸಂಗಡ ಊಟಮಾಡುವರು.
ಜಯಹೊಂದುವವರಿಗೆ ಹೀಗೆ ಬಿಳಿಯ ವಸ್ತ್ರಗಳನ್ನು ಹೊದಿಸಲಾಗುವುದು. ಅವರ ಹೆಸರನ್ನು ಜೀವಬಾಧ್ಯರ ಪಟ್ಟಿಯಿಂದ ನಾನು ಅಳಿಸಿಬಿಡದೆ, ಅವರ ಹೆಸರನ್ನು ನನ್ನ ತಂದೆಯ ಮುಂದೆಯೂ ಅವರ ದೂತರ ಮುಂದೆಯೂ ಅರಿಕೆ ಮಾಡುವೆನು.
ಈ ಕಾರಣದಿಂದ ಕರೆಯಲಾದವರು ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಸ್ವೀಕರಿಸುವಂತೆ ಕ್ರಿಸ್ತ ಯೇಸು ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿದ್ದಾರೆ. ಮೊದಲಿನ ಒಡಂಬಡಿಕೆಯ ಕೆಳಗೆ ಮಾಡಿದ ಪಾಪಗಳಿಂದ ಅವರನ್ನು ವಿಮೋಚಿಸಲು ಯೇಸು ಆಗಲೇ ಈಡಾಗಿ ತಮ್ಮ ಪ್ರಾಣಕೊಟ್ಟಿದ್ದಾರೆ.
ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತಕ್ಷವಾಗಲಿಲ್ಲ. ಕ್ರಿಸ್ತ ಯೇಸು ಪ್ರತ್ಯಕ್ಷರಾದಾಗ ನಾವು ಅವರ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ನಾವು ಅವರನ್ನು ಅವರಿರುವ ಪ್ರಕಾರವೇ ನೋಡುವೆವು. ಕ್ರಿಸ್ತ ಯೇಸುವಿನಲ್ಲಿ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.
Aliança inabalável
Desde a aliança com Noé até a nova aliança em Cristo, Deus sempre cumpre sua Palavra. Ele nos restaura e nos aperfeiçoa pela graça.
ಜಲಪ್ರಳಯದಿಂದ ಇನ್ನು ಮೇಲೆ ಎಲ್ಲಾ ಜೀವಿಗಳು ನಾಶವಾಗುವುದಿಲ್ಲ. ಭೂಮಿಯನ್ನು ಹಾಳು ಮಾಡುವುದಕ್ಕೆ ಇನ್ನು ಮುಂದೆ ಇಂಥ ಪ್ರಳಯವು ಇರುವುದಿಲ್ಲ ಎಂದು ನನ್ನ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ."
ನನ್ನ ಮಳೆಬಿಲ್ಲನ್ನು ಮೇಘಗಳಲ್ಲಿ ಇಟ್ಟಿದ್ದೇನೆ, ಅದು ನನಗೂ ಭೂಮಿಗೂ ಮಾಡಿಕೊಂಡ ಒಡಂಬಡಿಕೆಗೆ ಗುರುತಾಗಿರುವುದು.
ಯೇಸುವಾದರೋ ಈಗ ಅದಕ್ಕಿಂತ ಶ್ರೇಷ್ಠ ಸೇವೆಯನ್ನು ಹೊಂದಿದವರಾಗಿದ್ದಾರೆ. ಅಷ್ಟೇ ಅಲ್ಲದೆ ಇವರು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಒಡಂಬಡಿಕೆಗೆ ಸಹ ಮಧ್ಯಸ್ಥರಾಗಿದ್ದಾರೆ.
ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತಮ್ಮ ನಿತ್ಯ ಪ್ರಭಾವಕ್ಕೆ ಕರೆದ ಕೃಪಾಪೂರ್ಣ ಆಗಿರುವ ದೇವರು ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ತಾವೇ ನಿಮ್ಮನ್ನು ಪರಿಪೂರ್ಣಮಾಡಿ, ಸ್ಥಿರಪಡಿಸಿ, ಬಲಪಡಿಸಿ ನೆಲೆಗೊಳಿಸುವರು.
ಕರ್ತದೇವರು ತಮ್ಮ ವಾಗ್ದಾನದ ವಿಷಯವಾಗಿ ತಡಮಾಡುತ್ತಾರೆಂಬದಾಗಿ ಕೆಲವರು ಎಣಿಸುವ ಪ್ರಕಾರ ಅವರು ತಡಮಾಡುವವರಲ್ಲ. ಆದರೆ ಯಾವನಾದರೂ ನಾಶವಾಗುವುದರಲ್ಲಿ ಅವರು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಡಬೇಕೆಂದು ಅಪೇಕ್ಷಿಸುವವರಾಗಿದ್ದು ನಮ್ಮ ಕಡೆಗೆ ದೀರ್ಘಶಾಂತರಾಗಿದ್ದಾರೆ.
ಪ್ರಿಯರೇ, ಇಂಥಾ ವಾಗ್ದಾನಗಳು ನಮಗಿರುವುದರಿಂದ ನಮ್ಮ ದೇಹಾತ್ಮಗಳನ್ನು ಮಲಿನಗೊಳಿಸುವ ಎಲ್ಲಾ ವಿಷಯಗಳಿಂದ ನಮ್ಮನ್ನು ಶುದ್ಧಮಾಡಿ, ದೇವರ ಮೇಲಿನ ಭಯಭಕ್ತಿಯಿಂದ ನಮ್ಮ ಪವಿತ್ರತೆಯನ್ನು ಪರಿಪೂರ್ಣಗೊಳಿಸೋಣ.
ಆದರೆ ಸಮಸ್ತವೂ ಪಾಪದ ಅಧೀನಕ್ಕೆ ಒಳಗಾಯಿತು ಎಂದು ಪವಿತ್ರ ವೇದ ಸ್ಪಷ್ಟೀಕರಿಸುತ್ತದೆ. ಇದು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬರಿಗೂ ಮಾಡಿದ ವಾಗ್ದಾನವು ಅವರ ನಂಬಿಕೆಯ ಆಧಾರವಾಗಿ ಕೊಡಲಾಗುತ್ತದೆ.
ಬೇಡಿರಿ, ಹುಡುಕಿರಿ, ತಟ್ಟಿರಿ
"ಬೇಡಿಕೊಳ್ಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು.
ದೇಹ ಸಾಧನೆಯೂ ಸ್ವಲ್ಪಮಟ್ಟಿಗೆ ಲಾಭಕರವಾಗಿದೆ. ಭಕ್ತಿಯಾದರೋ ಎಲ್ಲಾ ವಿಧದಲ್ಲಿಯೂ ಲಾಭಕರವಾದದ್ದು. ಅದಕ್ಕೆ ಈಗಲೂ ಮುಂದೆಯೂ ಜೀವ ವಾಗ್ದಾನ ಉಂಟು.