Purificação
A purificação é um tema central na Bíblia. Deus nos chama a sermos limpos — não apenas externamente, mas no coração, na mente e em toda a conduta de vida.
Purificados pelo sangue de Cristo
O sangue de Jesus nos purifica de todo pecado. Sua morte na cruz é o sacrifício perfeito que nos torna limpos diante de Deus.
ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
ನಾವು ನಮ್ಮ ಪಾಪಗಳನ್ನು ದೇವರಿಗೆ ಅರಿಕೆಮಾಡಿದರೆ ಅವರು ನಂಬಿಗಸ್ತರೂ ನೀತಿವಂತರೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ, ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವರು.
ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ?
ಈ ಕ್ರಿಸ್ತ ಯೇಸುವೇ ದೇವರ ಮಹಿಮೆಯ ಪ್ರಕಾಶವೂ ಅವರ ವ್ಯಕ್ತಿತ್ವದ ಪ್ರತಿರೂಪವಾಗಿರುವ ದೇವಪುತ್ರ ಆಗಿದ್ದಾರೆ. ಈ ಕ್ರಿಸ್ತ ಯೇಸುವೇ ತಮ್ಮ ಶಕ್ತಿಯುತ ವಾಕ್ಯದಿಂದ ಸಮಸ್ತಕ್ಕೂ ಆಧಾರವಾಗಿದ್ದಾರೆ. ಕ್ರಿಸ್ತ ಯೇಸು ತಾವಾಗಿಯೇ ನಮ್ಮ ಪಾಪಗಳನ್ನು ಶುದ್ಧಿಮಾಡಿ ಉನ್ನತದೊಳಗೆ ಮಹೋನ್ನತ ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.
ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.
Purificação interior
Deus cria em nós um coração puro. A purificação começa no interior — nos pensamentos, intenções e motivações do coração.
ಓ ದೇವರೇ, ಶುದ್ಧ ಹೃದಯವನ್ನು ನನ್ನಲ್ಲಿ ಸೃಷ್ಟಿಮಾಡಿರಿ,
ಸ್ಥಿರವಾದ ಆತ್ಮವನ್ನು ನನ್ನಲ್ಲಿ ನವೀಕರಿಸಿರಿ.
ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಗೆ ಅನುಸಾರವಾಗಿ
ನನ್ನನ್ನು ಕರುಣಿಸಿರಿ.
ನಿಮ್ಮ ಮಹಾ ಅನುಕಂಪಕ್ಕೆ ಅನುಸಾರವಾಗಿ
ನನ್ನ ಅತಿಕ್ರಮಗಳನ್ನು ಅಳಿಸಿಬಿಡಿರಿ.
ನನ್ನ ಎಲ್ಲಾ ಅಪರಾಧಗಳಿಂದ ನನ್ನನ್ನು ತೊಳೆದುಬಿಡಿರಿ;
ನನ್ನ ಪಾಪದಿಂದ ನನ್ನನ್ನು ಶುದ್ಧಮಾಡಿರಿ.
ದೇವರ ಸಮೀಪಕ್ಕೆ ಬನ್ನಿರಿ. ಆಗ ನಿಮ್ಮ ಸಮೀಪಕ್ಕೆ ದೇವರು ಬರುವರು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ. ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.
ಪ್ರಿಯರೇ, ಇಂಥಾ ವಾಗ್ದಾನಗಳು ನಮಗಿರುವುದರಿಂದ ನಮ್ಮ ದೇಹಾತ್ಮಗಳನ್ನು ಮಲಿನಗೊಳಿಸುವ ಎಲ್ಲಾ ವಿಷಯಗಳಿಂದ ನಮ್ಮನ್ನು ಶುದ್ಧಮಾಡಿ, ದೇವರ ಮೇಲಿನ ಭಯಭಕ್ತಿಯಿಂದ ನಮ್ಮ ಪವಿತ್ರತೆಯನ್ನು ಪರಿಪೂರ್ಣಗೊಳಿಸೋಣ.
ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತಕ್ಷವಾಗಲಿಲ್ಲ. ಕ್ರಿಸ್ತ ಯೇಸು ಪ್ರತ್ಯಕ್ಷರಾದಾಗ ನಾವು ಅವರ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ನಾವು ಅವರನ್ನು ಅವರಿರುವ ಪ್ರಕಾರವೇ ನೋಡುವೆವು. ಕ್ರಿಸ್ತ ಯೇಸುವಿನಲ್ಲಿ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.
Lavados pela Palavra
A Palavra de Deus e o batismo nos purificam. Jesus disse: 'Vós já estais limpos pela palavra que vos tenho falado.'
ನಾನು ನಿಮಗೆ ಹೇಳಿದ ವಾಕ್ಯದ ದೆಸೆಯಿಂದ ನೀವು ಈಗ ಶುದ್ಧರಾಗಿದ್ದೀರಿ.
ಗಂಡಂದಿರೇ, ಕ್ರಿಸ್ತ ಯೇಸು ಸಭೆಯನ್ನು ಪ್ರೀತಿಸಿ, ಅದಕ್ಕಾಗಿ ತಮ್ಮನ್ನು ತಾವೇ ಒಪ್ಪಿಸಿಕೊಟ್ಟಂತೆಯೇ ನೀವು ನಿಮ್ಮ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ. ಕ್ರಿಸ್ತ ಯೇಸು ತಮ್ಮ ಸಭೆಯನ್ನು ವಾಕ್ಯದ ನೀರಿನ ಸ್ನಾನದಿಂದ ಪವಿತ್ರಗೊಳಿಸಿ, ಶುದ್ಧಮಾಡಿ,
ಈಗ ನೀನು ತಡಮಾಡುವುದೇಕೆ? ಎದ್ದೇಳು, ಅವರ ಹೆಸರನ್ನು ಕರೆದು, ದೀಕ್ಷಾಸ್ನಾನವನ್ನು ಹೊಂದಿ ನಿನ್ನ ಪಾಪಗಳನ್ನು ತೊಳೆದುಕೋ,’ ಎಂದನು.
ಈ ನೀರು ದೀಕ್ಷಾಸ್ನಾನವನ್ನು ಸೂಚಿಸುವಂತದ್ದಾಗಿದೆ. ಈ ದೀಕ್ಷಾಸ್ನಾನ ಕ್ರಿಸ್ತ ಯೇಸುವಿನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ಮೈಕೊಳೆಯನ್ನು ಹೋಗಲಾಡಿಸುವಂಥದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿಯು ಬೇಕೆಂದು ದೇವರನ್ನು ಬೇಡಿಕೊಳ್ಳುವಂಥದ್ದಾಗಿದೆ.
"ನಿಮ್ಮನ್ನು ತೊಳೆದುಕೊಂಡು ಶುದ್ಧಮಾಡಿಕೊಳ್ಳಿರಿ.
ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟಕೃತ್ಯಗಳನ್ನು ತೆಗೆದುಹಾಕಿರಿ.
ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ.
ಯೇಸು ಮುಂದುವರಿದು, "ಆದರೆ ಮನುಷ್ಯನೊಳಗಿಂದ ಹೊರಡುವಂಥದ್ದು ಅವನನ್ನು ಅಶುದ್ಧ ಮಾಡುತ್ತವೆ. ಮನುಷ್ಯನ ಹೃದಯದೊಳಗಿಂದ ಜಾರತ್ವ, ಕಳ್ಳತನ, ಕೊಲೆ, ವ್ಯಭಿಚಾರ, ಲೋಭ, ದುಷ್ಟತ್ವ, ವಂಚನೆ, ಅಶ್ಲೀಲತೆ, ಅಸೂಯೆ, ನಿಂದೆ, ಗರ್ವ ಮತ್ತು ಮೂರ್ಖತನ ಮುಂತಾದ ದುರಾಲೋಚನೆಗಳು ಹೊರಡುತ್ತವೆ. ಈ ಎಲ್ಲಾ ಕೇಡುಗಳು ಮನುಷ್ಯನ ಒಳಗಿಂದ ಹೊರಟು ಅವನನ್ನು ಅಶುದ್ಧ ಮಾಡುತ್ತವೆ," ಎಂದರು.