Recompensa
Deus recompensa os que o buscam com fé. A Bíblia está repleta de promessas de recompensa para os fiéis, os generosos, os perseverantes e os que servem ao Senhor de todo coração.
Deus recompensa a fé
Sem fé é impossível agradar a Deus, porque quem dele se aproxima precisa crer que Ele existe e recompensa os que o buscam diligentemente.
ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವರು, ದೇವರು ಇದ್ದಾರೆಂತಲೂ ತಮ್ಮನ್ನು ಜಾಗ್ರತೆಯಿಂದ ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾರೆಂತಲೂ ನಂಬಬೇಕು.
ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತದೇವರು ತಮ್ಮನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದ ಜೀವದ ಕಿರೀಟವನ್ನು ಹೊಂದುವನು.
ನಿಮ್ಮಲ್ಲಿ ಯಾರಿಗಾದರೂ ಜ್ಞಾನ ಕಡಿಮೆಯಾಗಿದ್ದರೆ, ಅವರು ದೇವರನ್ನು ಕೇಳಿಕೊಳ್ಳಲಿ, ಅದು ಅವರಿಗೆ ದೊರಕುವುದು. ದೇವರು ತಪ್ಪು ಕಂಡುಹಿಡಿಯದೆ ಎಲ್ಲರಿಗೂ ಉದಾರಮನಸ್ಸಿನಿಂದ ಕೊಡುವರು.
ಆದರೆ ಅಲ್ಲಿಂದಲೂ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು, ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಅವರನ್ನು ಕಂಡುಕೊಳ್ಳುವಿರಿ.
"ಬೇಡಿಕೊಳ್ಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು.
ಆದಕಾರಣ, ನೀವು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಎಲ್ಲವೂ ನಿಮಗೆ ಸಿಕ್ಕಿವೆಯೆಂದು ನಂಬಿರಿ. ಅವು ನಿಮಗೆ ಲಭಿಸುವವು.
Recompensa pelo serviço
O Senhor vê cada ato de fidelidade e promete galardão aos que servem com dedicação. O servo bom e fiel será honrado.
"ಆಗ ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ, ಒಳ್ಳೆಯದನ್ನು ಮಾಡಿದ್ದಿ. ಚಿಕ್ಕ ಕಾರ್ಯದಲ್ಲಿ ನೀನು ನಂಬಿಗಸ್ತನಾದದ್ದರಿಂದ ನಾನು ನಿನ್ನನ್ನು ದೊಡ್ಡ ಕಾರ್ಯಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು. ನೀನು ನಿನ್ನ ಯಜಮಾನನ ಸಂತೋಷದಲ್ಲಿ ಭಾಗಿಯಾಗು,’ ಎಂದನು.
ನೀವು ಏನನ್ನು ಮಾಡಿದರೂ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೆ ಕರ್ತನಿಗೋಸ್ಕರವೇ ಎಂದು ಹೃದಯಪೂರ್ವಕವಾಗಿ ಮಾಡಿರಿ. ಕರ್ತ ಯೇಸುವಿನಿಂದ ಬಾಧ್ಯತೆಯನ್ನು ಬಹುಮಾನವಾಗಿ ಹೊಂದುವಿರೆಂದು ತಿಳಿದಿದ್ದೀರಲ್ಲಾ. ಏಕೆಂದರೆ ನೀವು ಕರ್ತ ಆಗಿರುವ ಕ್ರಿಸ್ತ ಯೇಸುವನ್ನೇ ಸೇವೆಮಾಡುವವರಾಗಿದ್ದೀರಿ.
ಆದ್ದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರವಾಗಿ ನಿಲ್ಲಿರಿ. ಯಾವುದೂ ನಿಮ್ಮನ್ನು ಕದಲಿಸದಿರಲಿ. ಕರ್ತನಲ್ಲಿ ನಿಮ್ಮ ಪ್ರಯಾಸವು ನಿಷ್ಫಲವಾಗುವುದಿಲ್ಲವೆಂದು ತಿಳಿದು, ಕರ್ತನ ಕೆಲಸಕ್ಕೆ ಯಾವಾಗಲೂ ನಿಮ್ಮನ್ನು ಸಂಪೂರ್ಣವಾಗಿ ಒಪ್ಪಿಸಿಕೊಡಿರಿ.
ಒಳ್ಳೆಯದನ್ನು ಮಾಡುವುದರಲ್ಲಿ ಎದೆಗುಂದದಿರೋಣ. ಏಕೆಂದರೆ ನಾವು ಬೇಸರಗೊಳ್ಳದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.
ಆದರೆ ಮೊದಲನೆಯವರಾದ ಅನೇಕರು ಕಡೆಯವರಾಗುವರು, ಕಡೆಯವರಾದವರು ಮೊದಲನೆಯವರಾಗುವರು.
ದೇವರು, "ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲ ಕೊಡುವರು."
Generosidade e provisão
Quem dá com generosidade receberá em abundância. Deus supre todas as necessidades segundo as suas riquezas em glória.
ಕೊಡಿರಿ, ಆಗ ನಿಮಗೂ ಕೊಡುವರು. ಒಳ್ಳೆಯ ಅಳತೆಯಲ್ಲಿ ಒತ್ತಿ, ಕುಲುಕಿ, ಚೆಲ್ಲುವಂತೆ ಮನುಷ್ಯರು ನಿಮ್ಮ ಮಡಿಲಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು," ಎಂದರು.
ನಿಮಗೆ ಒಳ್ಳೆಯದನ್ನು ಮಾಡುವವರಿಗೆ ನೀವು ಒಳ್ಳೆಯದನ್ನು ಮಾಡಿದರೆ ವಿಶೇಷವೇನು? ಪಾಪಿಗಳು ಸಹ ಹಾಗೆಯೇ ಮಾಡುತ್ತಾರಲ್ಲಾ.
ರೋಗಿಗಳನ್ನು ಸ್ವಸ್ಥಮಾಡಿರಿ, ಮರಣಹೊಂದಿದವರನ್ನು ಎಬ್ಬಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ. ನೀವು ಉಚಿತವಾಗಿ ಪಡೆದಿದ್ದೀರಿ; ಉಚಿತವಾಗಿ ಕೊಡಿರಿ.
ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತರಾಗಿರುವುದರಿಂದ ನೀವು ಯಾವಾಗಲೂ ಎಲ್ಲಾ ವಿಷಯಗಳಲ್ಲಿಯೂ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಿ.
ದುಷ್ಟನು ಮೋಸದ ಸಂಬಳವನ್ನು ಸಂಪಾದಿಸುತ್ತಾನೆ,
ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹವಾದ ಬಹುಮಾನವಿರುವುದು.
ಯೆಹೋವ ದೇವರ ಭಯವೂ ದೀನತೆಯೂ ಕೊಡುವ ಪ್ರತಿಫಲ,
ಐಶ್ವರ್ಯವೂ ಮಾನವೂ ಜೀವವೂ ಆಗಿದೆ.
ಪ್ರೀತಿ, ನಂಬಿಗಸ್ತಿಕೆಗಳು ನಿನ್ನನ್ನು ಬಿಡದಿರಲಿ;
ಅವು ನಿನ್ನ ಕೊರಳಿನ ಸುತ್ತಲೂ ಕಟ್ಟಿರಲಿ,
ನಿನ್ನ ಹೃದಯದ ಹಲಗೆಯ ಮೇಲೆ ಅವು ಬರೆದಿರಲಿ.
ಆಗ ದೇವರ ಮುಂದೆಯೂ ಮನುಷ್ಯರ ಮುಂದೆಯೂ ದಯೆಯನ್ನೂ,
ಒಳ್ಳೆಯ ಹೆಸರನ್ನೂ ನೀನು ಪಡೆದುಕೊಳ್ಳುವೆ.
ಕಾಣಿಕೆಯನ್ನು ಕೊಡುವವನಿಗೆ ಬಾಗಿಲು ತೆರೆಯುತ್ತದೆ;
ಅದು ದೊಡ್ಡವರ ಸನ್ನಿಧಾನಕ್ಕೂ ಅವನನ್ನು ಕರೆದುಕೊಂಡು ಹೋಗುತ್ತದೆ.
O que Deus reservou para os seus
Olhos não viram, ouvidos não ouviram o que Deus preparou para os que o amam. Suas recompensas eternas superam toda imaginação.
ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ:
"ದೇವರು ತಮ್ಮನ್ನು ಪ್ರೀತಿಸುವವರಿಗಾಗಿ ಸಿದ್ಧ ಮಾಡಿರುವಂಥದ್ದನ್ನು
ಯಾವ ಕಣ್ಣೂ ಕಾಣಲಿಲ್ಲ,
ಯಾವ ಕಿವಿಯೂ ಕೇಳಲಿಲ್ಲ,
ಅದು ಮನುಷ್ಯನ ಹೃದಯದಲ್ಲಿಯೂ ಹುಟ್ಟಲಿಲ್ಲ."
ದೇವರು ನಿಮ್ಮ ಮನೋನೇತ್ರಗಳನ್ನು ಬೆಳಗಿಸಲಿ ಎಂದು ಬೇಡಿಕೊಳ್ಳುತ್ತಿದ್ದೇನೆ. ಆಗ ಮಾತ್ರವೇ ನೀವು ದೇವರ ಕರೆಯ ನಿರೀಕ್ಷೆಯನ್ನೂ, ಪರಿಶುದ್ಧರಲ್ಲಿ ಅವರಿಗಿರುವ ವಾರಸುತನದ ಮಹಿಮೆಯನ್ನೂ ನೀವು ತಿಳಿದುಕೊಳ್ಳುವಿರಿ.
ದೇವರು ತಮ್ಮ ಸ್ವಂತ ಮಹಿಮೆಗಾಗಿಯೂ ಸದ್ಗುಣಕ್ಕಾಗಿಯೂ ನಮ್ಮನ್ನು ಕರೆದಿದ್ದಾರೆ. ಏಕೆಂದರೆ, ದೇವರ ತಿಳುವಳಿಕೆಯ ಮೂಲಕವಾಗಿ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ದೇವರ ಶಕ್ತಿಯು ನಮಗೆ ಕೊಡಲಾಗಿದೆ.
ಈ ನಿರೀಕ್ಷೆಯು ನಮ್ಮನ್ನು ನಿರಾಶೆ ಪಡಿಸುವುದಿಲ್ಲ. ಏಕೆಂದರೆ ದೇವರು ನಮಗೆ ಅನುಗ್ರಹಿಸಿರುವ ಪವಿತ್ರಾತ್ಮ ಮೂಲಕ ನಮ್ಮ ಹೃದಯಗಳಲ್ಲಿ ತಮ್ಮ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾರೆ.
ದೇವರು ತಮ್ಮ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೋಸ್ಕರ ಕ್ರಿಸ್ತ ಯೇಸುವನ್ನು ಕೊಟ್ಟ ಮೇಲೆ ನಮಗೆ ಉದಾರವಾಗಿ ಅವರೊಂದಿಗೆ ಎಲ್ಲವನ್ನು ಸಹ ಕೊಡದೆ ಇರುವರೇ?
ಆದರೆ ನಾನು ಕೊಡುವ ನೀರನ್ನು ಕುಡಿಯುವವರಿಗೆ ಎಂದೆಂದಿಗೂ ದಾಹವಾಗದು. ನಾನು ಅವರಿಗೆ ಕೊಡುವ ನೀರು ಅವರಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬುಗ್ಗೆಯಾಗಿರುವುದು," ಎಂದರು.
ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಕೇಳಿಕೊಳ್ಳಲಿಲ್ಲ. ಕೇಳಿರಿ, ನೀವು ಪಡೆದುಕೊಳ್ಳುವಿರಿ. ಆಗ ನಿಮ್ಮ ಆನಂದವು ಪರಿಪೂರ್ಣವಾಗಿರುವುದು.
ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮ್ಮ ಹಿತಕ್ಕಾಗಿಯೇ. ನಾನು ಹೋಗದಿದ್ದರೆ ಸಹಾಯಕರು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಅವರನ್ನು ನಿಮ್ಮ ಬಳಿಗೆ ಕಳುಹಿಸುವೆನು.
ಹೀಗೆ ನಾನು ಕ್ರಿಸ್ತ ಯೇಸುವಿನಲ್ಲಿ ದೇವರ ಸ್ವರ್ಗೀಯ ಕರೆಯ ಬಹುಮಾನದ ಗುರಿಯೆಡೆಗೆ ಮುಂದೆ ಸಾಗುತ್ತಾ ಇದ್ದೇನೆ.
Buscar, pedir, perseverar
Jesus ensinou: pedi e recebereis, buscai e achareis. Deus se alegra em dar boas dádivas aos seus filhos que pedem com fé.
ನೀತಿಗೋಸ್ಕರ ಹಸಿದು ಬಾಯಾರುವವರು ಧನ್ಯರು,
ಅವರು ತೃಪ್ತಿಹೊಂದುವರು.
"ಆದ್ದರಿಂದ ನೀನು ದಾನಧರ್ಮ ಮಾಡುವಾಗ, ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳ ಹಾಗೆ ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ತುತೂರಿಯನ್ನು ಊದಿಸಬೇಡ. ಅವರು ತಮ್ಮ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
ಆದರೆ ನೀನು ಪ್ರಾರ್ಥನೆ ಮಾಡುವಾಗ, ನಿನ್ನ ಕೋಣೆಯೊಳಗೆ ಹೋಗಿ, ಬಾಗಿಲನ್ನು ಮುಚ್ಚಿ ಅದೃಶ್ಯವಾಗಿರುವ ನಿನ್ನ ತಂದೆಗೆ ಪ್ರಾರ್ಥನೆ ಸಲ್ಲಿಸು. ಆಗ ರಹಸ್ಯದಲ್ಲಿ ನಡೆಯುವುದನ್ನು ಕಾಣುವ ನಿನ್ನ ತಂದೆ ನಿನಗೆ ಪ್ರತಿಫಲ ಕೊಡುವರು.
ನೀವು ಬದುಕುವ ಹಾಗೆ
ಒಳ್ಳೆಯದನ್ನು ಹುಡುಕಿ, ಕೆಟ್ಟದ್ದನ್ನಲ್ಲ.
ಆಗ ನೀವು ಹೇಳಿಕೊಳ್ಳುವಂತೆ
ಸರ್ವಶಕ್ತರಾದ ಯೆಹೋವ ದೇವರು ನಿಮ್ಮ ಸಂಗಡ ಇರುವರು.
ನನ್ನ ಕೈಗಳನ್ನು ನಿಮ್ಮ ಕಡೆಗೆ ಚಾಚುತ್ತೇನೆ;
ನನ್ನ ಪ್ರಾಣವು ದಾಹಗೊಂಡ ಭೂಮಿಯ ಹಾಗೆ ನಿಮಗಾಗಿ ದಾಹಗೊಂಡಿದೆ.
Contentamento e eternidade
A verdadeira recompensa está na vida que Deus dá. O presente do trabalho, a satisfação no labor e a alegria no Senhor são dádivas de Deus.
ಜನರು ತಮ್ಮ ಜೀವಮಾನದಲ್ಲಿ ಸಂತೋಷವಾಗಿದ್ದು ಒಳ್ಳೆಯದನ್ನು ಮಾಡುವುದಕ್ಕಿಂತ ಉತ್ತಮವಾದದ್ದೇನೂ ಇಲ್ಲವೆಂದು ನಾನು ಬಲ್ಲೆನು. ಇದಲ್ಲದೆ ಪ್ರತಿಯೊಬ್ಬನು ಅನ್ನಪಾನಗಳನ್ನು ಸೇವಿಸಿ, ತನ್ನ ಎಲ್ಲಾ ಪ್ರಯಾಸಗಳಲ್ಲಿ ಸುಖವನ್ನು ಅನುಭವಿಸುವುದು ದೇವರ ದಾನದಿಂದಲೇ.
ದೇವರು ಮನುಷ್ಯನಿಗೆ ಕೊಟ್ಟದ್ದನ್ನು ಸೂರ್ಯನ ಕೆಳಗೆ ಅವನು ಕೈಗೊಂಡ ಪ್ರಯಾಸದ ಸುಖವನ್ನು ಅನುಭವಿಸಿ, ತಿಂದು, ಕುಡಿಯುವುದು ತೃಪ್ತಿಕರವಾದದ್ದೂ ಆಗಿದೆ, ಎಂದು ಒಂದು ಒಳ್ಳೆಯದನ್ನು ಕಂಡುಕೊಂಡೆನು. ಏಕೆಂದರೆ ಇದು ಮನುಷ್ಯನ ಪಾಲು.
ಮನುಷ್ಯನಿಗೆ ದೇವರು ಆಸ್ತಿಪಾಸ್ತಿಗಳನ್ನು ದಯಪಾಲಿಸಿ, ಅವುಗಳನ್ನು ಅನುಭವಿಸುವುದಕ್ಕೆ ಸಾಮರ್ಥ್ಯ ಕೊಟ್ಟಿದ್ದರೆ, ಅವನು ತನ್ನ ಪಾಲನ್ನು ತೆಗೆದುಕೊಂಡು, ತನ್ನ ಪ್ರಯಾಸದಲ್ಲಿ ಆನಂದಿಸುವುದೂ ದೇವರ ದಾನದಿಂದಲೇ.
ನೀವು ಬದುಕುವ ಹಾಗೆಯೂ, ನಿಮಗೆ ಒಳ್ಳೆಯದಾಗುವ ಹಾಗೆಯೂ, ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಮಾರ್ಗಗಳಲ್ಲೇ ನಡೆದುಕೊಳ್ಳಬೇಕು.
ಆದ್ದರಿಂದ ನಾವು ಅಧೈರ್ಯಪಡುವುದಿಲ್ಲ. ನಮ್ಮ ಹೊರಗಿನ ಮನುಷ್ಯ ಕ್ಷಯಿಸುತ್ತಿದ್ದರೂ ನಮ್ಮ ಆಂತರ್ಯ ಮನುಷ್ಯ ಅನುದಿನವೂ ನೂತನವಾಗುತ್ತಿದೆ.
ಹೀಗಿರುವುದರಿಂದ ದೇವರ ಪರಾಕ್ರಮವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ, ಆಗ ದೇವರು ಸಕಾಲದಲ್ಲಿ ನಿಮ್ಮನ್ನು ಮೇಲಕ್ಕೆತ್ತುವರು.
ಕರ್ತದೇವರ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆಗ ಅವರು ನಿಮ್ಮನ್ನು ಮೇಲಕ್ಕೆತ್ತುವರು.
ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ.
ಆದರೆ ಕ್ರಿಸ್ತ ಯೇಸುವಿನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುತ್ತದೆ. ಆದುದರಿಂದ ಬೇರೆ ಯಾರೂ ನಿಮಗೆ ಬೋಧಿಸುವ ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಬೋಧಿಸುವುದು. ಆ ಬೋಧನೆಯು ಸುಳ್ಳಲ್ಲ, ಸತ್ಯವಾದದ್ದು. ಆದ್ದರಿಂದ ಅದು ನಿಮಗೆ ಬೋಧಿಸಿದ ಪ್ರಕಾರವೇ, ಕ್ರಿಸ್ತ ಯೇಸುವಿನಲ್ಲಿ ನೀವು ನೆಲೆಗೊಳ್ಳಿರಿ.
ಈ ಸಂಗತಿಗಳಿಗೆ ನಾವೇ ಸಾಕ್ಷಿಗಳು; ತನಗೆ ವಿಧೇಯರಾಗಿರುವವರಿಗೆ ದೇವರು ದಯಪಾಲಿಸಿದ ಪವಿತ್ರಾತ್ಮ ದೇವರು ಸಾಕ್ಷಿ," ಎಂದರು.
ಯೆಹೋವ ದೇವರು ಮೋಶೆಗೆ, "ಬೆಟ್ಟವನ್ನೇರಿ, ನನ್ನ ಬಳಿಗೆ ಬಂದು ಇಲ್ಲೇ ಇರು. ನಿಯಮವನ್ನು ಹಾಗು ಆಜ್ಞೆಗಳನ್ನು ನೀನು ಜನರಿಗೆ ಬೋಧನೆಮಾಡುವಂತೆ ಬರೆದಿರುವ ಕಲ್ಲಿನ ಹಲಗೆಗಳನ್ನು ನಾನು ನಿನಗೆ ಕೊಡುತ್ತೇನೆ," ಎಂದು ಹೇಳಿದರು.