Reino dos céus
O Reino dos Céus é comparado por Jesus a tesouros, sementes e redes. Através de parábolas, Ele revelou os mistérios de um Reino que já está entre nós, mas que se consumará na eternidade.
O valor incomparável do Reino
O Reino dos Céus é como um tesouro escondido ou uma pérola de grande valor. Quem o encontra, vende tudo para possuí-lo.
ಹೂಳಿಟ್ಟ ನಿಕ್ಷೇಪ ಹಾಗೂ ಮುತ್ತುಗಳ ಸಾಮ್ಯ
"ಪರಲೋಕ ರಾಜ್ಯವು ಹೊಲದಲ್ಲಿ ಹೂಳಿಟ್ಟ ನಿಕ್ಷೇಪಕ್ಕೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಮನುಷ್ಯನು ಕಂಡುಕೊಂಡು ಮುಚ್ಚಿಟ್ಟು, ಅದರ ಸಂತೋಷದ ನಿಮಿತ್ತ ಹೊರಟುಹೋಗಿ, ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.
"ಪರಲೋಕ ರಾಜ್ಯವು ಒಳ್ಳೆಯ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ. ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡು, ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಅದನ್ನು ಕೊಂಡುಕೊಳ್ಳುತ್ತಾನೆ.
ಸಾಸಿವೆಕಾಳಿನ ಸಾಮ್ಯ
ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದರು: "ಪರಲೋಕ ರಾಜ್ಯವು, ಒಬ್ಬ ಮನುಷ್ಯನು ಸಾಸಿವೆ ಕಾಳನ್ನು ತೆಗೆದುಕೊಂಡುಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದಕ್ಕೆ ಹೋಲಿಕೆಯಾಗಿದೆ. ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದ್ದರೂ ಅದು ಬೆಳೆದಾಗ, ಎಲ್ಲಾ ಸಸ್ಯಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು, ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸಮಾಡುತ್ತವೆ."
ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದರು: "ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀಯು ತೆಗೆದುಕೊಂಡು ಹುಳಿಯಿಲ್ಲದ ಸುಮಾರು ಇಪ್ಪತ್ತೇಳು ಕಿಲೋಗ್ರಾಂ ಹಿಟ್ಟಿನಲ್ಲಿ ಕಲಸಿದಾಗ ಆ ಹಿಟ್ಟೆಲ್ಲಾ ಹುಳಿಯಾಯಿತು."
Parábolas do Reino
Jesus ensinou sobre o Reino mediante parábolas que revelam seu crescimento, seu juízo e a separação final entre justos e injustos.
ಕಳೆಯನ್ನು ಕುರಿತು ಸಾಮ್ಯ
ಯೇಸು ಮತ್ತೊಂದು ಸಾಮ್ಯವನ್ನು ಹೇಳಿದರು: "ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ. ಆದರೆ ಜನರು ನಿದ್ರಿಸುತ್ತಿರುವಾಗ, ಅವನ ವೈರಿಯು ಬಂದು ಗೋಧಿಯ ನಡುವೆ ಕಳೆಯನ್ನು ಬಿತ್ತಿ ಹೊರಟುಹೋದನು. ಗೋಧಿಯು ಮೊಳೆತು ಬೆಳೆಯುತ್ತಿರುವಾಗ, ಕಳೆ ಸಹ ಕಾಣಿಸಿಕೊಂಡಿತು.
"ಮನೆಯ ಯಜಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ, ‘ಅಯ್ಯಾ, ನೀನು ನಿನ್ನ ಹೊಲದಲ್ಲಿ ಒಳ್ಳೆಯ ಬೀಜವನ್ನು ಬಿತ್ತಿದೆಯಲ್ಲಾ? ಆದರೆ ಈ ಕಳೆಯು ಎಲ್ಲಿಂದ ಬಂತು?’ ಎಂದು ಕೇಳಿದರು.
"ಯಜಮಾನನು ಅವರಿಗೆ, ‘ವೈರಿಯು ಇದನ್ನು ಮಾಡಿದ್ದಾನೆ,’ ಎಂದನು.
"ಆಗ ಸೇವಕರು ಅವನಿಗೆ, ‘ನಾವು ಹೋಗಿ ಅವುಗಳನ್ನು ಕಿತ್ತುಹಾಕೋಣವೇ?’ ಎಂದು ಕೇಳಿದರು.
"ಆದರೆ ಯಜಮಾನನು, ‘ಬೇಡ, ನೀವು ಕಳೆಯನ್ನು ಕೀಳುವಾಗ, ಅವುಗಳೊಂದಿಗೆ ಗೋಧಿಯನ್ನೂ ಕಿತ್ತುಬಿಟ್ಟೀರಿ. ಸುಗ್ಗಿಯ ಕಾಲದವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ. ಸುಗ್ಗಿಯ ಕಾಲದಲ್ಲಿ ನಾನು ಕೊಯ್ಯುವವರಿಗೆ: ಮೊದಲು ಕಳೆಯನ್ನು ಕೂಡಿಸಿ ಅವುಗಳನ್ನು ಸುಡುವುದಕ್ಕೆ ಬೇರೆ ಕಟ್ಟಿಡಿರಿ, ಗೋಧಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು,’ ಅಂದನು."
ಕಳೆಯ ಸಾಮ್ಯದ ವಿವರಣೆ
ತರುವಾಯ ಯೇಸು ಜನಸಮೂಹವನ್ನು ಕಳುಹಿಸಿಬಿಟ್ಟು ಮನೆಯೊಳಕ್ಕೆ ಹೋದರು. ಆಗ ಶಿಷ್ಯರು ಯೇಸುವಿನ ಬಳಿಗೆ ಬಂದು, "ಹೊಲದಲ್ಲಿರುವ ಕಳೆಯ ಸಾಮ್ಯವನ್ನು ನಮಗೆ ವಿವರಿಸಿರಿ," ಎಂದರು.
ಯೇಸು ಉತ್ತರವಾಗಿ ಅವರಿಗೆ, "ಒಳ್ಳೆಯ ಬೀಜ ಬಿತ್ತುವವನು ಮನುಷ್ಯಪುತ್ರನು. ಹೊಲವು ಈ ಲೋಕ; ಒಳ್ಳೆಯ ಬೀಜವು ದೇವರ ರಾಜ್ಯದ ಮಕ್ಕಳು; ಕಳೆಯು ಕೆಡುಕನ ಮಕ್ಕಳಾಗಿದ್ದಾರೆ. ಅದನ್ನು ಬಿತ್ತಿದ ವೈರಿಯು ಸೈತಾನನೇ. ಸುಗ್ಗಿಯ ಕಾಲವು ಲೋಕಾಂತ್ಯವಾಗಿದೆ. ಕೊಯ್ಯುವವರು ದೇವದೂತರೇ.
"ಹೇಗೆ ಕಳೆಯನ್ನು ಕಿತ್ತು ಬೆಂಕಿಯಲ್ಲಿ ಸುಡುವರೋ, ಹಾಗೆಯೇ ಈ ಲೋಕಾಂತ್ಯದಲ್ಲಿ ಆಗುವುದು. ಮನುಷ್ಯಪುತ್ರನು ತನ್ನ ದೂತರನ್ನು ಕಳುಹಿಸುವನು. ಅವರು ಪಾಪಕ್ಕೆ ಆತಂಕವಾದ ಎಲ್ಲವನ್ನೂ, ಕೇಡುಮಾಡುವ ಎಲ್ಲರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ, ದೂತರು ಅವರನ್ನು ಅಗ್ನಿಕುಂಡದಲ್ಲಿ ಹಾಕುವರು. ಅಲ್ಲಿ ಗೋಳಾಟವೂ ಹಲ್ಲು ಕಡಿಯುವಿಕೆಯೂ ಇರುವವು. ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವುದಕ್ಕೆ ಕಿವಿಯುಳ್ಳವರು ಕೇಳಲಿ.
ಬಲೆಯ ಸಾಮ್ಯ
"ಪರಲೋಕ ರಾಜ್ಯವು, ಸರೋವರದಲ್ಲಿ ಬೀಸಲಾಗಿ ಎಲ್ಲಾ ತರವಾದ ಮೀನುಗಳನ್ನು ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ. ಬಲೆ ತುಂಬಿದಾಗ, ಬೆಸ್ತರು ಅದನ್ನು ದಡಕ್ಕೆ ಎಳೆದು ಕೂತುಕೊಂಡು ಒಳ್ಳೆಯವುಗಳನ್ನು ಬುಟ್ಟಿಗಳಲ್ಲಿ ತುಂಬಿಸಿ, ಕೆಟ್ಟವುಗಳನ್ನು ಹೊರಗೆ ಬಿಸಾಡುತ್ತಾರೆ. ಹಾಗೆಯೇ ಲೋಕಾಂತ್ಯದಲ್ಲಿ ಇರುವುದು. ದೇವದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸಿ, ಅವರನ್ನು ಅಗ್ನಿಕುಂಡದಲ್ಲಿ ಹಾಕುವರು. ಅಲ್ಲಿ ಗೋಳಾಟವೂ ಹಲ್ಲು ಕಡಿಯುವಿಕೆಯೂ ಇರುವವು," ಎಂದು ಹೇಳಿದರು.
Quem herda o Reino
Os humildes, os pobres de espírito e as crianças são herdeiros do Reino. Mas é difícil para os ricos entrarem nele.
"ಆತ್ಮದಲ್ಲಿ ಬಡವರಾಗಿರುವವರು ಧನ್ಯರು,
ಪರಲೋಕ ರಾಜ್ಯವು ಅವರದು.
ದುಃಖಿಸುವವರು ಧನ್ಯರು,
ಅವರು ಆದರಣೆ ಹೊಂದುವರು.
ಸಾತ್ವಿಕರು ಧನ್ಯರು,
ಅವರು ಭೂಮಿಗೆ ಬಾಧ್ಯರಾಗುವರು.
ನೀತಿಗೋಸ್ಕರ ಹಸಿದು ಬಾಯಾರುವವರು ಧನ್ಯರು,
ಅವರು ತೃಪ್ತಿಹೊಂದುವರು.
ಕರುಣೆಯುಳ್ಳವರು ಧನ್ಯರು,
ಅವರು ಕರುಣೆ ಪಡೆಯುವರು.
ಹೃದಯದಲ್ಲಿ ಶುದ್ಧರಾಗಿರುವವರು ಧನ್ಯರು,
ಅವರು ದೇವರನ್ನು ಕಾಣುವರು.
ಸಮಾಧಾನ ಪಡಿಸುವವರು ಧನ್ಯರು,
ಅವರು ದೇವರ ಮಕ್ಕಳೆನಿಸಿಕೊಳ್ಳುವರು.
ನೀತಿಯ ನಿಮಿತ್ತವಾಗಿ ಹಿಂಸೆಗೊಳಗಾಗುವವರು ಧನ್ಯರು,
ಪರಲೋಕ ರಾಜ್ಯವು ಅವರದು.
"ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ, ಹಿಂಸಿಸಿ ನಿಮ್ಮ ಮೇಲೆ ಎಲ್ಲಾ ವಿಧವಾದ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು. ಸಂತೋಷಪಟ್ಟು ಆನಂದಿಸಿರಿ. ಏಕೆಂದರೆ ಪರಲೋಕದಲ್ಲಿ ನಿಮಗೆ ಮಹಾ ಪ್ರತಿಫಲ ಸಿಕ್ಕುವುದು. ಅವರು ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನು ಸಹ ಇದೇ ರೀತಿಯಲ್ಲಿ ಹಿಂಸೆಪಡಿಸಿದರು.
ಪರಲೋಕದಲ್ಲಿ ದೊಡ್ಡವನು
ಅದೇ ಸಮಯದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, "ಪರಲೋಕ ರಾಜ್ಯದಲ್ಲಿ ಅತಿ ದೊಡ್ಡವನು ಯಾರು?" ಎಂದು ಕೇಳಿದರು.
ಆಗ ಯೇಸು ಒಂದು ಚಿಕ್ಕ ಮಗುವನ್ನು ತಮ್ಮ ಬಳಿಗೆ ಕರೆದು, ಅದನ್ನು ಅವರ ಮಧ್ಯದಲ್ಲಿ ನಿಲ್ಲಿಸಿ, "ನೀವು ಪರಿವರ್ತನೆ ಹೊಂದಿ ಚಿಕ್ಕಮಕ್ಕಳಂತೆ ಆಗದಿದ್ದರೆ, ಪರಲೋಕ ರಾಜ್ಯದೊಳಗೆ ಪ್ರವೇಶಿಸುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ಯಾರು ಈ ಚಿಕ್ಕಮಗುವಿನಂತೆ ತಮ್ಮನ್ನು ತಾವು ತಗ್ಗಿಸಿಕೊಳ್ಳುವರೋ ಅವರೇ ಪರಲೋಕ ರಾಜ್ಯದಲ್ಲಿ ಅತಿ ದೊಡ್ಡವರಾಗಿರುವರು.
ಆದರೆ ಯೇಸು, "ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿರಿ, ಅವುಗಳಿಗೆ ಅಡ್ಡಿಮಾಡಬೇಡಿರಿ, ಪರಲೋಕ ರಾಜ್ಯವು ಇಂಥವರದೇ," ಎಂದರು.
ಆಗ ಯೇಸು ತಮ್ಮ ಶಿಷ್ಯರಿಗೆ, "ಐಶ್ವರ್ಯವಂತನು ಪರಲೋಕ ರಾಜ್ಯದಲ್ಲಿ ಸೇರುವುದು ಕಷ್ಟ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ ಎಂದು ಪುನಃ ನಿಮಗೆ ಹೇಳುತ್ತೇನೆ," ಎಂದರು.
ಇದನ್ನು ಕೇಳಿದಾಗ ಯೇಸುವಿನ ಶಿಷ್ಯರು ಅತ್ಯಂತ ವಿಸ್ಮಯಗೊಂಡು, "ಹಾಗಾದರೆ ಯಾರು ರಕ್ಷಣೆಹೊಂದುವರು?" ಎಂದು ಕೇಳಿದರು.
ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ, "ಮನುಷ್ಯರಿಗೆ ಇದು ಅಸಾಧ್ಯ; ಆದರೆ ದೇವರಿಗೆ ಎಲ್ಲವೂ ಸಾಧ್ಯ," ಎಂದು ಹೇಳಿದರು.
ನನ್ನ ಪ್ರಿಯರೇ, ಕೇಳಿರಿ, ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ ತಮ್ಮನ್ನು ಪ್ರೀತಿಸುವವರಿಗೆ ತಾವು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರನ್ನಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು, ಅದನ್ನು ಎಂದಿಗೂ ಎಂದೆಂದಿಗೂ ವಶಪಡಿಸಿಕೊಳ್ಳುವರು.’
Buscar o Reino acima de tudo
Jesus ensinou que devemos buscar primeiro o Reino e sua justiça. Nem todo que diz 'Senhor, Senhor' entrará — só quem faz a vontade do Pai.
ನಿಜ ಹಾಗೂ ಸುಳ್ಳು ಶಿಷ್ಯರು
"ನನ್ನನ್ನು, ‘ಸ್ವಾಮೀ, ಸ್ವಾಮೀ,’ ಎಂದು ಹೇಳುವವರೆಲ್ಲರೂ ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ. ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ಅದರಲ್ಲಿ ಪ್ರವೇಶಿಸುವನು.
ಆದ್ದರಿಂದ ಈ ಆಜ್ಞೆಗಳಲ್ಲಿ ಅತ್ಯಂತ ಚಿಕ್ಕದಾದ ಒಂದನ್ನು ಮೀರಿ, ಹಾಗೆಯೇ ಮೀರಲು ಇತರರಿಗೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಅತಿ ಚಿಕ್ಕವನೆಂದು ಎನಿಸಿಕೊಳ್ಳುವನು. ಆದರೆ ಈ ಆಜ್ಞೆಗಳನ್ನು ಪಾಲಿಸಿ ಇತರರಿಗೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಎನಿಸಿಕೊಳ್ಳುವನು. ನಿಮ್ಮ ನೀತಿಯು ಫರಿಸಾಯರ ಮತ್ತು ನಿಯಮ ಬೋಧಕರ ನೀತಿಗಿಂತಲೂ ಹೆಚ್ಚಿನದಾಗದಿದ್ದರೆ, ನೀವು ಪರಲೋಕ ರಾಜ್ಯವನ್ನು ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.
"ಆದ್ದರಿಂದ ನೀವು ಹೀಗೆ ಪ್ರಾರ್ಥಿಸಿರಿ:
" ‘ಪರಲೋಕದಲ್ಲಿರುವ ನಮ್ಮ ತಂದೆಯೇ,
ನಿಮ್ಮ ನಾಮವು ಪರಿಶುದ್ಧವೆಂದು ಎಣಿಸಲಾಗಲಿ,
ನಿಮ್ಮ ರಾಜ್ಯವು ಬರಲಿ;
ನಿಮ್ಮ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ
ಭೂಲೋಕದಲ್ಲಿಯೂ ನೆರವೇರಲಿ.
ಸ್ನಾನಿಕ ಯೋಹಾನನು ಮಾರ್ಗ ಸಿದ್ಧಮಾಡಿದ್ದು
ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನು ಯೂದಾಯ ಪ್ರಾಂತದ ಅರಣ್ಯಕ್ಕೆ ಬಂದು, "ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ," ಎಂದು ಸಾರುತ್ತಿದ್ದನು.
ಅಂದಿನಿಂದ ಯೇಸು, "ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ," ಎಂದು ಬೋಧಿಸತೊಡಗಿದರು.
ನೀವು ಹೋಗುತ್ತಾ, ‘ಪರಲೋಕ ರಾಜ್ಯವು ಸಮೀಪವಾಯಿತು,’ ಎಂದು ಸಾರಿ ಹೇಳಿರಿ.
ಅನೇಕರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು, ಪರಲೋಕ ರಾಜ್ಯದಲ್ಲಿ ಅಬ್ರಹಾಮ್, ಇಸಾಕ್, ಯಾಕೋಬರೊಂದಿಗೆ ಹಬ್ಬದ ಔತಣಕ್ಕೆ ಕುಳಿತುಕೊಳ್ಳುವರು.
ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಸ್ತ್ರೀಯರಲ್ಲಿ ಹುಟ್ಟಿದವರಲ್ಲಿ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಹುಟ್ಟಲಿಲ್ಲ; ಆದರೂ ಪರಲೋಕ ರಾಜ್ಯದಲ್ಲಿರುವ ಅತ್ಯಂತ ಚಿಕ್ಕವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ. ಸ್ನಾನಿಕನಾದ ಯೋಹಾನನ ದಿನಗಳಿಂದ ಇದುವರೆಗೆ, ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಒಳಗಾಗಿದೆ, ಬಲಾತ್ಕಾರಿಗಳು ಅದನ್ನು ಬಲವಂತವಾಗಿ ತೆಗೆದುಕೊಳ್ಳುತ್ತಾರೆ.
A herança eterna
O Reino dos Céus é inabalável e eterno. Deus nos chama a fazer firme a nossa vocação e eleição para entrar nesse Reino.
ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು, ಸ್ವೀಕರಿಸುವವರಾಗಿದ್ದುದರಿಂದ ನಾವು ಕೃತಜ್ಞತೆಯಿಂದ ಇರೋಣ. ನಾವು ದೇವರಿಗೆ ಭಯಭಕ್ತಿಯಿಂದ ಕೂಡಿದ ಮೆಚ್ಚಿಕೆಯುಳ್ಳ ಸೇವೆಯನ್ನು ಸಲ್ಲಿಸುವಂತೆ ಕೃತಜ್ಞತೆಯನ್ನು ತೋರಿಸುವವರಾಗಿರೋಣ. ಏಕೆಂದರೆ ನಮ್ಮ, "ದೇವರು ದಹಿಸುವ ಅಗ್ನಿಯಾಗಿದ್ದಾರೆ."
ನಿಮ್ಮ ರಾಜ್ಯದ ಮಹಿಮೆಯನ್ನು ಹೇಳುವರು;
ನಿಮ್ಮ ಪರಾಕ್ರಮವನ್ನು ನುಡಿಯುವರು.
ಮಾನವರಿಗೆ ನಿಮ್ಮ ಪರಾಕ್ರಮ ಕ್ರಿಯೆಗಳನ್ನೂ,
ನಿಮ್ಮ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು.
ನಿಮ್ಮ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ;
ನಿಮ್ಮ ಅಧಿಪತ್ಯವು ಎಲ್ಲಾ ತಲತಲಾಂತರಗಳಲ್ಲಿ ಇರುವುದು.
ಯೆಹೋವ ದೇವರು ತಮ್ಮ ಎಲ್ಲಾ ಪ್ರತಿಜ್ಞೆಗಳಲ್ಲಿ ನಂಬಿಗಸ್ತರಾಗಿರುತ್ತಾರೆ.
ಎಲ್ಲಾ ಕಾರ್ಯಗಳಲ್ಲಿಯೂ ಅವರ ಅನುಗ್ರಹ ಉಳಿದಿದೆ.
ಆದ್ದರಿಂದ ಪ್ರಿಯರೇ, ನಿಮ್ಮ ಕರೆಯುವಿಕೆಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳಲು ಸರ್ವ ಪ್ರಯತ್ನವನ್ನು ಮಾಡಿರಿ. ಏಕೆಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ಪಾಪದಲ್ಲಿ ಬಿದ್ದುಹೋಗುವುದಿಲ್ಲ. ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವು ತಮ್ಮ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಭಾಗ್ಯವನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವರು.
ನನ್ನನ್ನು ಪ್ರತಿಯೊಂದು ದುಷ್ಟದಾಳಿಯಿಂದ ಕರ್ತ ಯೇಸು ತಪ್ಪಿಸಿ, ತಮ್ಮ ಪರಲೋಕ ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ತರುವರು. ಯುಗಯುಗಾಂತರಗಳಲ್ಲಿಯೂ ಅವರಿಗೆ ಮಹಿಮೆ. ಆಮೆನ್.
"ಚಿಕ್ಕ ಹಿಂಡೇ, ಭಯಪಡಬೇಡ, ಏಕೆಂದರೆ ನಿಮ್ಮ ತಂದೆಯು ತಮ್ಮ ರಾಜ್ಯವನ್ನು ನಿಮಗೆ ಕೊಡುವುದಕ್ಕೆ ಮೆಚ್ಚಿದ್ದಾರೆ.
ಏಕೆಂದರೆ ಯಾವ ಜಾರನಾಗಲಿ, ಅಶುದ್ಧನಾಗಲಿ, ದೇವರಲ್ಲದವುಗಳನ್ನು ಪೂಜಿಸುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಹಕ್ಕುಬಾಧ್ಯತೆಯನ್ನು ಹೊಂದುವುದಿಲ್ಲವೆಂಬುದು ನಿಮಗೆ ಮನದಟ್ಟಾಗಿರಲಿ.