Reino
O Reino de Deus é o tema central da pregação de Jesus. Desde o início de seu ministério, Ele proclamou: 'Arrependei-vos, porque é chegado o Reino dos céus.'
O anúncio do Reino
Jesus inaugurou seu ministério proclamando a chegada do Reino. Ele convida todos ao arrependimento e à fé nessa nova realidade.
ಅಂದಿನಿಂದ ಯೇಸು, "ಪಶ್ಚಾತ್ತಾಪಪಡಿರಿ ಪರಲೋಕ ರಾಜ್ಯವು ಸಮೀಪಿಸಿತು" ಎಂದು ಸಾರುವುದಕ್ಕೆ ಪ್ರಾರಂಭಿಸಿದನು.
"ಕಾಲವು ಪರಿಪೂರ್ಣವಾಯಿತು, ದೇವರ ರಾಜ್ಯವು ಸಮೀಪಿಸಿತು; ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ."
ಅಲ್ಲಿರುವ ರೋಗಿಗಳನ್ನು ವಾಸಿಮಾಡಿ ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ’ ಎಂದು ಹೇಳಿರಿ.
ಪರ್ವತಗಳ ಮೇಲೆ ತ್ವರೆಪಡುತ್ತಾ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಸಾರುವ ದೂತನ ಪಾದಗಳು ಎಷ್ಟೋ ಅಂದವಾಗಿವೆ!
ಶುಭವರ್ತಮಾನವನ್ನು, ಶುಭದ ಸುವಾರ್ತೆಯನ್ನು ತಂದು, ರಕ್ಷಣೆಯನ್ನು ಪ್ರಕಟಿಸುತ್ತಾ, "ನಿನ್ನ ದೇವರು ರಾಜ್ಯಭಾರವನ್ನು ವಹಿಸಿದ್ದಾನೆ" ಎಂದು ಚೀಯೋನಿಗೆ ತಿಳಿಸುವವನಾಗಿದ್ದಾನೆ.
A natureza do Reino
O Reino de Deus é governo soberano do Senhor sobre todas as coisas. Ele é o Rei eterno, imortal e invisível.
ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.
ಯೆಹೋವನೇ, ಎಲ್ಲಾ ಮಹಿಮೆ, ವೈಭವ, ಪರಾಕ್ರಮ, ಪ್ರಭಾವ, ಪ್ರತಾಪ, ಪ್ರತಿಭೆ ಎಲ್ಲವೂ ನಿನ್ನವೆ. ಭೂಮ್ಯಾಕಾಶಗಳಲ್ಲಿ ಇರುವದೆಲ್ಲಾ ನಿನ್ನದೇ. ಯೆಹೋವನೇ ರಾಜ್ಯವು ನಿನ್ನದು. ನೀನು ಮಹೋನ್ನತನಾಗಿ ಸರ್ವವನ್ನು ಆಳುವವನಾಗಿರುತ್ತೀ.
ಮಹಾಮಹಿಮೆಯುಳ್ಳ ಈ ಅರಸನು ಯಾರು?
ಸೇನಾಧೀಶ್ವರನಾದ ಯೆಹೋವನೇ,
ಮಹಾಮಹಿಮೆಯುಳ್ಳ ಅರಸನು ಈತನೇ. ಸೆಲಾ.
ಏಕೆಂದರೆ ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಆಜ್ಞೆಕೊಡುವಾತನು, ಯೆಹೋವನು ನಮ್ಮ ರಾಜನು, ಆತನೇ ನಮ್ಮನ್ನು ರಕ್ಷಿಸುವನು.
ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವುದು.
Entrar no Reino
Para entrar no Reino é preciso nascer de novo, tornar-se como criança e buscar primeiro a justiça de Deus acima de tudo.
ಯೇಸು ಅವನಿಗೆ, "ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು," ಎಂದು ಉತ್ತರ ಕೊಟ್ಟನು.
ಅದಕ್ಕೆ ಯೇಸು "ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು.
ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.
ಆದರೆ ಯೇಸು, "ಮಕ್ಕಳನ್ನು ಬಿಡಿರಿ. ನನ್ನ ಹತ್ತಿರ ಬರುವುದಕ್ಕೆ ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ಪರಲೋಕ ರಾಜ್ಯವು ಇಂಥವರದೇ" ಎಂದು ಹೇಳಿದನು.
ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಪರಲೋಕ ರಾಜ್ಯವು ಅವರದು.
ಪರಲೋಕ ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು. ಭೂಲೋಕದಲ್ಲಿ ನೀನು ಯಾವುದನ್ನು ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಟ್ಟಿರುವುದು. ಮತ್ತು ಭೂಲೋಕದಲ್ಲಿ ನೀನು ಯಾವುದನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಟ್ಟಿರುವುದು" ಅಂದನು.
Cidadãos do Reino
Os cristãos são concidadãos dos santos e membros da família de Deus, chamados a viver dignamente do Reino que receberam.
ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೇ ದೇವಜನರೊಂದಿಗೆ ಒಂದೇ ಸಂಸ್ಥಾನದವರೂ ದೇವರ ಮನೆಯವರೂ ಆಗಿದ್ದೀರಿ. ಅಪೊಸ್ತಲರೂ ಪ್ರವಾದಿಗಳೂ ಎಂಬ ಅಡಿಪಾಯದ ಮೇಲೆ ನೀವೂ ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯವಾದ ಮೂಲೆಗಲ್ಲು.
ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
ಮೊದಲನೇಯ ಪುನರುತ್ಥಾನದಲ್ಲಿ ಸೇರಿದವರು ಧನ್ಯರೂ ಮತ್ತು ಪರಿಶುದ್ಧರೂ ಆಗಿದ್ದಾರೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಆ ಸಾವಿರ ವರ್ಷ ಆಳುವರು.
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು, ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.