Reino
O Reino de Deus é o tema central da pregação de Jesus. Desde o início de seu ministério, Ele proclamou: 'Arrependei-vos, porque é chegado o Reino dos céus.'
O anúncio do Reino
Jesus inaugurou seu ministério proclamando a chegada do Reino. Ele convida todos ao arrependimento e à fé nessa nova realidade.
ಅಂದಿನಿಂದ ಯೇಸು, "ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ," ಎಂದು ಬೋಧಿಸತೊಡಗಿದರು.
"ಕಾಲವು ಪರಿಪೂರ್ಣವಾಗಿದೆ, ದೇವರ ರಾಜ್ಯವು ಸಮೀಪಿಸಿದೆ, ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ," ಎಂದು ಹೇಳಿದರು.
ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿ, ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ,’ ಎಂದು ಹೇಳಿರಿ.
ಒಳ್ಳೆಯ ಶುಭಸಮಾಚಾರವನ್ನು ತರುವವನ,
ರಕ್ಷಣೆಯನ್ನು ಪ್ರಕಟಿಸುವವನ
ಚೀಯೋನಿಗೆ ನಿನ್ನ ದೇವರು
ದೊರೆತನ ಮಾಡುತ್ತಾನೆ ಎಂದು ಹೇಳಿ,
ಒಳ್ಳೆಯ ಶುಭಸಮಾಚಾರವನ್ನು ತಂದು,
ಸಮಾಧಾನವನ್ನು ಪ್ರಕಟಿಸಿ ಹೇಳುವವನ ಪಾದಗಳು
ಪರ್ವತಗಳ ಮೇಲೆ ಎಷ್ಟೊಂದು ಅಂದವಾಗಿವೆ!
A natureza do Reino
O Reino de Deus é governo soberano do Senhor sobre todas as coisas. Ele é o Rei eterno, imortal e invisível.
ನಿತ್ಯವಾದ ಅರಸರೂ ಅಮರರೂ ಅದೃಶ್ಯರೂ ಆಗಿರುವ ಜ್ಞಾನಿಯಾದ ಒಬ್ಬರೇ ದೇವರಿಗೆ ಯುಗಯುಗಾಂತರಗಳಲ್ಲಿಯೂ ಘನವೂ ಮಹಿಮೆಯೂ ಉಂಟಾಗಲಿ. ಆಮೆನ್.
ಯೆಹೋವ ದೇವರೇ, ಮಹತ್ವವೂ, ಪರಾಕ್ರಮವೂ,
ಮಹಿಮೆಯೂ, ಜಯವೂ, ವೈಭವವೂ ನಿಮ್ಮವೇ.
ಆಕಾಶಗಳಲ್ಲಿಯೂ, ಭೂಮಿಯಲ್ಲಿಯೂ ಇರುವುದೆಲ್ಲಾ ನಿಮ್ಮದೇ.
ಯೆಹೋವ ದೇವರೇ, ರಾಜ್ಯವು ನಿಮ್ಮದು.
ನೀವು ಸಮಸ್ತಕ್ಕೂ ತಲೆಯಾಗಿ ಉನ್ನತರು.
ಮಹಿಮೆಯ ಅರಸ ಯಾರು?
ಸೇನಾಧೀಶ್ವರ ಯೆಹೋವ ದೇವರೇ ಆಗಿರುತ್ತಾರೆ.
ಇವರೇ ಮಹಿಮೆಯ ಅರಸರು.
ಏಕೆಂದರೆ ಯೆಹೋವ ದೇವರು ನಮ್ಮ ನ್ಯಾಯಾಧಿಪತಿಯಾಗಿದ್ದಾರೆ.
ಯೆಹೋವ ದೇವರು ನಮಗೆ ಆಜ್ಞೆಕೊಡುವವರು.
ಯೆಹೋವ ದೇವರೇ, ನಮ್ಮ ರಾಜ.
ಯೆಹೋವ ದೇವರೇ ನಮ್ಮನ್ನು ರಕ್ಷಿಸುವವರು.
ಯೆಹೋವ ದೇವರು ಭೂಮಿಗೆಲ್ಲಾ ಅರಸನಾಗಿರುವರು. ಆ ದಿವಸದಲ್ಲಿ ಯೆಹೋವ ದೇವರು ಒಬ್ಬರೇ ಇರುವರು. ಆತನ ಹೆಸರು ಒಂದೇ ಹೆಸರಾಗಿರುವುದು.
Entrar no Reino
Para entrar no Reino é preciso nascer de novo, tornar-se como criança e buscar primeiro a justiça de Deus acima de tudo.
ಯೇಸು ಅವನಿಗೆ, "ಒಬ್ಬನು ಮತ್ತೊಮ್ಮೆ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು, ಎಂದು ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ."
ಯೇಸು ಅವನಿಗೆ, "ಯಾರು ನೀರಿನಿಂದಲೂ ಆತ್ಮದಿಂದಲೂ ಹುಟ್ಟುವದಿಲ್ಲವೋ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು, ಎಂದು ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ.
ನೀವು ಮೊದಲು ದೇವರ ರಾಜ್ಯವನ್ನೂ ಅದರ ನೀತಿಯನ್ನೂ ಹುಡುಕಿರಿ. ಆಗ ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.
ಆದರೆ ಯೇಸು, "ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿರಿ, ಅವುಗಳಿಗೆ ಅಡ್ಡಿಮಾಡಬೇಡಿರಿ, ಪರಲೋಕ ರಾಜ್ಯವು ಇಂಥವರದೇ," ಎಂದರು.
ನೀತಿಯ ನಿಮಿತ್ತವಾಗಿ ಹಿಂಸೆಗೊಳಗಾಗುವವರು ಧನ್ಯರು,
ಪರಲೋಕ ರಾಜ್ಯವು ಅವರದು.
ನಾನು ನಿನಗೆ ಪರಲೋಕ ರಾಜ್ಯದ ಬೀಗದ ಕೈಗಳನ್ನು ಕೊಡುವೆನು; ನೀನು ಭೂಮಿಯಲ್ಲಿ ಯಾವುದನ್ನು ಬಂಧಿಸುತ್ತೀಯೋ ಅದು ಪರಲೋಕದಲ್ಲಿಯೂ ಬಂಧಿತವಾಗುವುದು. ನೀನು ಭೂಮಿಯಲ್ಲಿ ಏನನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲಾಗುವುದು," ಎಂದರು.
Cidadãos do Reino
Os cristãos são concidadãos dos santos e membros da família de Deus, chamados a viver dignamente do Reino que receberam.
ಹೀಗಿರಲಾಗಿ, ನೀವು ಇನ್ನು ಮೇಲೆ ಪರಕೀಯರೂ ಪರದೇಶದವರೂ ಆಗಿರದೆ ದೇವಜನರೊಂದಿಗೆ ಜೊತೆ ನಾಗರಿಕರೂ ದೇವರ ಮನೆಯವರೂ ಆಗಿದ್ದೀರಿ. ಕ್ರಿಸ್ತ ಯೇಸು ಎಂಬ ಮುಖ್ಯ ಮೂಲೆಗಲ್ಲಿನೊಂದಿಗೆ ಅಪೊಸ್ತಲರು ಹಾಗೂ ಪ್ರವಾದಿಗಳೆಂಬ ಅಸ್ತಿವಾರದ ಮೇಲೆ ನೀವು ಕಟ್ಟಲಾಗಿದ್ದೀರಿ.
"ಚಿಕ್ಕ ಹಿಂಡೇ, ಭಯಪಡಬೇಡ, ಏಕೆಂದರೆ ನಿಮ್ಮ ತಂದೆಯು ತಮ್ಮ ರಾಜ್ಯವನ್ನು ನಿಮಗೆ ಕೊಡುವುದಕ್ಕೆ ಮೆಚ್ಚಿದ್ದಾರೆ.
ಪ್ರಥಮ ಪುನರುತ್ಥಾನದಲ್ಲಿ ಸೇರಿರುವವರು ಧನ್ಯರೂ ಪರಿಶುದ್ಧರೂ ಆಗಿದ್ದಾರೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಯೇಸುಕ್ರಿಸ್ತರೊಂದಿಗೂ ಯಾಜಕರಾಗಿ ಸೇವೆಸಲ್ಲಿಸುವರು; ಮತ್ತು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷಗಳ ಕಾಲ ಆಳುವರು.
ಅನ್ಯಾಯಗಾರರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ: ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು, ಕಳ್ಳರು, ಲೋಭಿಗಳು, ಕುಡುಕರು, ಬೈಯ್ಯುವವರು, ಸುಲಿಗೆ ಮಾಡುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.