Resistir
Resistir ao diabo e às forças do mal é um imperativo bíblico. Deus nos deu autoridade, armas espirituais e poder para enfrentar e vencer toda investida do inimigo.
Autoridade em Cristo
Jesus deu aos seus discípulos autoridade sobre todo o poder do inimigo. Em seu nome, temos domínio sobre as trevas.
ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ.
ತರುವಾಯ ಆ ಎಪ್ಪತ್ತು ಮಂದಿಯು ಸಂತೋಷವುಳ್ಳವರಾಗಿ ಹಿಂತಿರುಗಿ ಬಂದು, "ಕರ್ತನೇ, ದೆವ್ವಗಳು ಕೂಡಾ ನಿನ್ನ ಹೆಸರಿನಲ್ಲಿ ನಮಗೆ ಅಧೀನವಾಗುತ್ತವೆ" ಅಂದರು.
ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವ ಮತ್ತು ರೋಗಗಳನ್ನು ವಾಸಿಮಾಡುವ ಶಕ್ತಿ ಮತ್ತು ಅಧಿಕಾರಗಳನ್ನು ಕೊಟ್ಟು,
ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ ದೆವ್ವಗಳನ್ನು ಬಿಡಿಸುವುದಕ್ಕೂ ಎಲ್ಲಾ ಬಗೆಯ ರೋಗಗಳನ್ನೂ ಎಲ್ಲಾ ರೀತಿಯ ಬೇನೆಗಳನ್ನೂ ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು.
ಪರಲೋಕ ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು. ಭೂಲೋಕದಲ್ಲಿ ನೀನು ಯಾವುದನ್ನು ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಟ್ಟಿರುವುದು. ಮತ್ತು ಭೂಲೋಕದಲ್ಲಿ ನೀನು ಯಾವುದನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಟ್ಟಿರುವುದು" ಅಂದನು.
A armadura de Deus
Somos chamados a revestir a armadura completa de Deus para resistir às ciladas do diabo e permanecer firmes na batalha espiritual.
ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ. ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.
ಸೈತಾನನಿಗೆ ಅವಕಾಶಕೊಡಬೇಡಿರಿ.
ನಾವು ಉಪಯೋಗಿಸುವ ಆಯುಧಗಳು ಲೋಕದ ಆಯುಧಗಳಲ್ಲ. ಅವು ದೇವರ ಎಣಿಕೆಯಲ್ಲಿ ಬಲವಾಗಿದ್ದು ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ. ನಾವು ದೇವಜ್ಞಾನಕ್ಕೆ ವಿರೋಧವಾಗಿ ಏಳುವ ಅಹಂಭಾವಗಳನ್ನು ಧ್ವಂಸಮಾಡಿ, ಪ್ರತಿಯೊಂದು ಆಲೋಚನೆಗಳನ್ನೂ ಕ್ರಿಸ್ತನಿಗೆ ವಿಧೇಯರಾಗುವಂತೆ ಸೆರೆಹಿಡಿದು,
Firmes na resistência
Resistir ao diabo é um ato de fé ativa. A Bíblia nos garante que quando resistimos, ele foge, e que maior é o que está em nós do que o que está no mundo.
ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ. ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ. ಲೋಕದಲ್ಲಿರುವ ನಿಮ್ಮ ಸಹೋದರರೂ ಅಂಥ ಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂಬುದು ನಿಮಗೆ ತಿಳಿದಿದೆ.
ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ.
ಪಾಪಮಾಡುವವನು ಸೈತಾನನಿಗೆ ಸಂಬಂಧಪಟ್ಟವನಾಗಿದ್ದಾನೆ. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ಸೈತಾನನ ಕೆಲಸಗಳನ್ನು ನಾಶಮಾಡುವುದಕ್ಕೋಸ್ಕರ ದೇವಕುಮಾರನು ಪ್ರತ್ಯಕ್ಷನಾದನು.
ಆದರೆ ಯೇಸು ಹಿಂತಿರುಗಿ ತನ್ನ ಶಿಷ್ಯರನ್ನು ನೋಡಿ ಪೇತ್ರನನ್ನು ಗದರಿಸಿ, "ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು! ನಿನ್ನ ಯೋಚನೆ ಮನುಷ್ಯರದಾಗಿದೆಯೇ ಹೊರತು ದೇವರದಲ್ಲ" ಎಂದು ಹೇಳಿದನು.
ಹೀಗಿರಲು ಪಶ್ಚಿಮದವರು ಯೆಹೋವನ ನಾಮಕ್ಕೆ ಹೆದರುವರು, ಪೂರ್ವ ದಿಕ್ಕಿನವರು ಆತನ ಮಹಿಮೆಗೆ ಅಂಜುವರು;
ಬಿರುಗಾಳಿಯಿಂದ ಹೊಡೆಯಲ್ಪಟ್ಟು ಇಕ್ಕಟ್ಟಿನಲ್ಲಿ ಹರಿಯುವ ತೊರೆಯ ಹಾಗೆ ಆತನು ರಭಸದಿಂದ ಬರುವನಷ್ಟೆ.