Descansar no Senhor
Descansar no Senhor é um ato de fé. Em um mundo agitado, Deus nos convida a entregar nossas ansiedades, aquietar o coração e confiar plenamente em sua provisão e cuidado.
O convite ao descanso
Jesus convida os cansados e sobrecarregados a irem a Ele e encontrar descanso para as suas almas. O jugo dele é leve.
"ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು. ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು. ಏಕೆಂದರೆ ನನ್ನ ನೊಗವು ಮೃದುವಾದದ್ದು, ನನ್ನ ಹೊರೆಯು ಹಗುರವಾದದ್ದು ಆಗಿದೆ" ಅಂದನು.
ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು;
ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.
"ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು;
ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ" ಎಂದು ಹೇಳಿದ್ದಾನೆ.
ಜನರೇ, ಯಾವಾಗಲೂ ಆತನನ್ನೇ ನಂಬಿ,
ನಿಮ್ಮ ಹೃದಯವನ್ನು ಆತನ ಮುಂದೆ ತೆರೆಯಿರಿ;
ದೇವರು ನಮ್ಮ ಆಶ್ರಯವು. ಸೆಲಾ
Confiança e paz
Quem confia no Senhor encontra paz perfeita. A ansiedade perde o poder quando entregamos tudo nas mãos do Deus soberano.
ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.
ಇಸ್ರಾಯೇಲರ ಸದಮಲಸ್ವಾಮಿಯಾಗಿರುವ ಕರ್ತನಾದ ಯೆಹೋವನು,
"ನೀವು ಪರಿವರ್ತನೆಗೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವುದು; ಶಾಂತರಾಗಿ ಭರವಸದಿಂದಿರುವುದೇ ನಿಮಗೆ ಬಲ ಎಂದು ಹೇಳಿದ್ದರೂ,
ನೀವು ಒಪ್ಪಿಕೊಂಡಿಲ್ಲ.
ನೀತಿಯ ಪರಿಣಾಮ ಶಾಂತಿ; ನೀತಿಯ ಫಲವು, ನಿತ್ಯವಾದ ಸಮಾಧಾನ ಮತ್ತು ನಿತ್ಯವಾದ ಭರವಸೆ ಆಗಿರುವವು.
ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು;
ಅವರು ಓಡಿ ದಣಿಯರು, ನಡೆದು ಬಳಲರು.
ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ, ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಪಾಡುವುದು.
ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ.
Esperar no Senhor
Esperar no Senhor renova as forças. A Bíblia nos ensina que aquietar-se diante de Deus e confiar em seu tempo é marca da maturidade espiritual.
ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು;
ನಿನ್ನ ಹೃದಯವು ಧೈರ್ಯದಿಂದಿರಲಿ;
ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.
ನಾನು ಯೆಹೋವನಿಗಾಗಿ ನಿರೀಕ್ಷಿಸಿಯೇ ನಿರೀಕ್ಷಿಸಿದೆನು;
ಆತನು ನನ್ನ ಮೊರೆಗೆ ಕಿವಿಗೊಟ್ಟು ಲಕ್ಷಿಸಿದನು.
ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು;
ಆತನು ನಿನ್ನನ್ನು ಉದ್ಧಾರಮಾಡುವನು.
ನೀತಿವಂತನನ್ನು ಎಂದಿಗೂ ಕದಲಗೊಡಿಸನು.
ಭಯಪಡಿರಿ, ಪಾಪಮಾಡಬೇಡಿರಿ;
ಹಾಸಿಗೆಯ ಮೇಲೆ ಇರುವಾಗ ಹೃದಯದಲ್ಲೇ ಆಲೋಚಿಸಿಕೊಳ್ಳಿರಿ ಮತ್ತು ಮೌನವಾಗಿರಿ. ಸೆಲಾ
ಯೆಹೋವನು ತನ್ನನ್ನು ನಿರೀಕ್ಷಿಸುವವರಿಗೂ ಮತ್ತು ಹುಡುಕುವವರಿಗೂ ಮಹೋಪಕಾರಿಯಾಗಿದ್ದಾನೆ.
ಯೆಹೋವನ ರಕ್ಷಣಕಾರ್ಯವನ್ನು ಎದುರುನೋಡುತ್ತಾ ಶಾಂತವಾಗಿ ಕಾದುಕೊಂಡಿರುವುದು ಒಳ್ಳೇಯದು.
A fidelidade de Deus
Deus é fiel. Seus planos são de paz e esperança. Podemos descansar sabendo que Ele guarda e sustenta quem nele confia.
ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ. ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಹೋಗುವಿರಿ; ನಾನು ಕಿವಿಗೊಡುವೆನು. ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.
ಯಾರು ಯೆಹೋವನಲ್ಲಿ ನಂಬಿಕೆಯಿಟ್ಟಿದ್ದಾರೋ, ಯಾರಿಗೆ ಯೆಹೋವನು ಭರವಸೆಯಾಗಿದ್ದಾನೋ ಅವರೇ ಧನ್ಯರು.
ನೀರಾವರಿಯಲ್ಲಿ ನೆಡಲ್ಪಟ್ಟು ಹೊಳೆಯ ದಡದಲ್ಲಿ ತನ್ನ ಬೇರುಗಳನ್ನು ಹರಡಿ, ಧಗೆಗೆ ಭಯಪಡದೆ,
ಹಸುರೆಲೆಯನ್ನು ಚಿಗುರಿಸುತ್ತಾ, ಕ್ಷಾಮದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಅವರು ಸಮಾನವಾಗಿರುವರು."
ಅದಕ್ಕೆ ಯೆಹೋವನು, "ನನ್ನ ಪ್ರಸನ್ನತೆಯು ನಿನ್ನ ಜೊತೆಯಲ್ಲಿ ಬರುವುದು, ನಾನು ನಿಮಗೆ ವಿಶ್ರಾಂತಿಯನ್ನು ನೀಡುವೆನು" ಅಂದನು.
ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು ಆತನು ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.
ಇವನು ಯೆಹೂದ್ಯರಿಗೆ, "ನಾವು ನಮ್ಮ ದೇವರಾದ ಯೆಹೋವನನ್ನು ಆಶ್ರಯಿಸಿಕೊಂಡ ಕಾರಣ ಆತನ ಅನುಗ್ರಹದಿಂದ ಸುತ್ತಣ ವೈರಿಗಳ ಭಯ ತಪ್ಪಿ ದೇಶವು ಇನ್ನೂ ನಿರಾತಂಕವಾಗಿರುತ್ತದೆ. ಆದುದರಿಂದ ನಾವು ಪಟ್ಟಣಗಳನ್ನು ಕಟ್ಟಿ, ಅವುಗಳನ್ನು ಸುತ್ತಣ ಗೋಡೆ, ಗೋಪುರ, ಬುರುಜು ಬಾಗಿಲು, ಅಗುಳಿ ಇವುಗಳಿಂದ ಭದ್ರಪಡಿಸೋಣ" ಎನ್ನಲಾಗಿ ಅವರು ಅವುಗಳನ್ನು ಚೆನ್ನಾಗಿ ಕಟ್ಟಿ ಮುಗಿಸಿದರು.
ಸಮುವೇಲನು ಸೌಲನಿಗೆ, "ನಿನ್ನ ಸೇವಕನನ್ನು ಮುಂದೆ ಕಳುಹಿಸಿ ನೀನು ಇಲ್ಲಿ ಸ್ವಲ್ಪ ನಿಲ್ಲು; ನಿನಗೆ ತಿಳಿಸಬೇಕಾದ ದೈವೋಕ್ತಿ ಒಂದುಂಟು" ಎಂದನು.