Salvação
A salvação é a obra suprema de Deus. Pela graça, mediante a fé, somos salvos — não por obras, para que ninguém se glorie. É o presente mais precioso que a humanidade pode receber.
A salvação pela graça
A salvação é dom de Deus, não resultado de esforço humano. Somos justificados pela fé em Cristo Jesus e reconciliados com Deus pelo seu amor.
ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಈ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ. ಈ ರಕ್ಷಣೆಯೂ ಪುಣ್ಯಕ್ರಿಯೆಗಳಿಂದ ಉಂಟಾದದ್ದಲ್ಲ, ಆದ್ದರಿಂದ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿಲ್ಲ.
ನಾವು ಮಾಡಿದ ಪುಣ್ಯಕಾರ್ಯಗಳ ನಿಮಿತ್ತದಿಂದಲ್ಲ ಪುನರ್ಜನ್ಮವನ್ನು ಸೂಚಿಸುವ ದೀಕ್ಷಾಸ್ನಾನದ ಮೂಲಕವಾಗಿಯೂ, ಪವಿತ್ರಾತ್ಮನ ನವೀಕರಣದ ಮೂಲಕವಾಗಿಯೂ ಆತನು ತನ್ನ ಕರುಣೆಯಿಂದಲೇ ನಮ್ಮನ್ನು ರಕ್ಷಿಸಿದನು.
ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ,
ಸುವಾರ್ತೆಯ ಶಕ್ತಿ
ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ.
ಎಲ್ಲರೂ ಪಾಪ ಮಾಡಿ ದೇವರ ಮಹಿಮೆಯನ್ನು ಹೊಂದದೇ ಹೋಗಿದ್ದಾರೆ.
ನೀತಿವಂತರಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ನಿಜವಾಗಿಯೂ ಒಳ್ಳೆಯವನಿಗಾಗಿ ಪ್ರಾಣಕೊಡುವುದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಬಹುದು. ಆದರೆ ನಾವು ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ.
ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.
O caminho da salvação
Quem confessa Jesus como Senhor e crê em sua ressurreição será salvo. A fé em Cristo é o único caminho para a salvação.
ಅದೇನೆಂದರೆ ನೀನು ಯೇಸುವನ್ನೇ ಕರ್ತನೆಂದು ಬಾಯಿಂದ ಅರಿಕೆಮಾಡಿಕೊಂಡು ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನೆಂದು ಹೃದಯದಿಂದ ನಂಬಿದರೆ ನಿನಗೆ ರಕ್ಷಣೆಯಾಗುವುದು ಎಂಬುದೇ. ಹೃದಯದಿಂದ ನಂಬುವುದರ ಮೂಲಕ ನೀತಿಯು ದೊರಕುತ್ತದೆ. ಬಾಯಿಂದ ಅರಿಕೆಮಾಡುವುದರ ಮೂಲಕ ರಕ್ಷಣೆಯಾಗುತ್ತದೆ.
ಹೃದಯದಿಂದ ನಂಬುವುದರ ಮೂಲಕ ನೀತಿಯು ದೊರಕುತ್ತದೆ. ಬಾಯಿಂದ ಅರಿಕೆಮಾಡುವುದರ ಮೂಲಕ ರಕ್ಷಣೆಯಾಗುತ್ತದೆ.
ಅವರು; "ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆಹೊಂದುವರು" ಎಂದು ಹೇಳಿ,
ಅವರು; "ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆಹೊಂದುವರು" ಎಂದು ಹೇಳಿ,
ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ" ಎಂದು ಹೇಳಿದನು.
ಆದರೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದೆಂದು ದೇವರು ಹೇಳುತ್ತಾನೆ" ಎಂಬುದೇ.
ಯೇಸು ಅವನಿಗೆ, "ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.
"ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.
ಆದರೂ ಯಾರಾರು ಆತನನ್ನು ಸ್ವೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ ಅವರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಆತನು ಕೊಟ್ಟನು.
Nova vida em Cristo
Quem está em Cristo é nova criação. A salvação não é apenas perdão, mas transformação completa — de dentro para fora, para a glória de Deus.
ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.
ಯೇಸು ಅವನಿಗೆ, "ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು," ಎಂದು ಉತ್ತರ ಕೊಟ್ಟನು.
ಅವರಿಗೆ, "ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.
ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.
ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು.
Segurança eterna
O crente tem a certeza da salvação. Ninguém pode arrebatar da mão de Deus aqueles que Ele chamou, justificou e glorificou.
ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.
ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು."
ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು.
A salvação presente e futura
A salvação é passada (justificação), presente (santificação) e futura (glorificação). Deus nos salva, nos guarda e nos conduz à vida eterna.
ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು; ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು,
ಧರ್ಮಶಾಸ್ತ್ರದ ಪ್ರಕಾರ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು. ರಕ್ತಧಾರೆ ಇಲ್ಲದೆ ಪಾಪ ಕ್ಷಮಾಪಣೆಯು ಉಂಟಾಗುವುದಿಲ್ಲ.
ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.
ನಾವು ದೇವರಿಗೆ ಶತ್ರುಗಳಾಗಿದ್ದಾಗಲೇ ನಮಗೆ ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಂಧಾನವಾಯಿತು ಆತನ ಕೂಡ ಸಂಧಾನವಾದ ನಮಗೆ ಮಗನ ಜೀವದಿಂದ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?
ಆದಾಮನಿಂದ ಹೇಗೆ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಯೇಸು ಕ್ರಿಸ್ತನಿಂದ ಎಲ್ಲರೂ ಬದುಕುವವರಾದರು.
Nada é impossível para Deus
Aos homens é impossível, mas para Deus tudo é possível. Ele deseja que todos sejam salvos e cheguem ao conhecimento da verdade.
ಯೇಸು ಅವರನ್ನು ದೃಷ್ಟಿಸಿ ನೋಡಿ "ಇದು ಮನುಷ್ಯರಿಗೆ ಅಸಾಧ್ಯ; ದೇವರಿಗೆ ಅಸಾಧ್ಯವಲ್ಲ. ದೇವರಿಗೆ ಎಲ್ಲವೂ ಸಾಧ್ಯವೇ" ಅಂದನು.
ಆತನು, "ಮನುಷ್ಯರಿಗೆ ಅಸಾಧ್ಯವಾದ ಕಾರ್ಯಗಳು ದೇವರಿಗೆ ಸಾಧ್ಯವಾಗಿವೆ" ಅಂದನು.
ಮನುಷ್ಯಕುಮಾರನು ದಾರಿತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು" ಎಂದು ಹೇಳಿದನು.
ಹಾಗೆಯೇ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ, ಹೇಗೆಂದರೆ;
ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಕನಾಗಿರುವಂತೆ
ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ದೇವರು ಹೇಳಿದ್ದಾನೆ ಎಂದರು.
ವಿನಾಶದ ಬಾಗಿಲು ವಿಶಾಲ
"ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಿಲು ದೊಡ್ಡದು, ದಾರಿ ವಿಶಾಲವಾದುದು; ಅದರಲ್ಲಿ ಹೋಗುವವರು ಬಹು ಜನ. ನಿತ್ಯ ಜೀವಕ್ಕೆ ಹೋಗುವ ಬಾಗಿಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ.
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು, ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.
ಯೇಸು ಅವನಿಗೆ, "ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ" ಎಂದು ಹೇಳಿದನು. ಕೂಡಲೇ ಅವನಿಗೆ ಕಣ್ಣಿನ ದೃಷ್ಟಿ ಬಂದಿತು. ಅವನು ಆ ದಾರಿಯಲ್ಲಿ ಆತನನ್ನು ಹಿಂಬಾಲಿಸಿದನು.
ದೇವರ ಆಶ್ರಯದಲ್ಲಿರುವವರ ಮನಶ್ಯಾಂತಿ
ನನ್ನ ಮನಸ್ಸು ದೇವರನ್ನೇ ನಂಬಿ ಶಾಂತವಾಗಿರುವುದು.
ನನ್ನ ರಕ್ಷಣೆಯು ಆತನಿಂದಲೇ.
ನೀನೇ ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ.
ನಿನ್ನ ಬಲಗೈ ನನಗೆ ಆಧಾರ;
ನಿನ್ನ ಕೃಪಾಕಟಾಕ್ಷವು ನನಗೆ ದೊಡ್ಡಸ್ತಿಕೆಯನ್ನು ಉಂಟುಮಾಡಿದೆ.
ನೀನು ನನ್ನ ಕಾಲುಗಳಿಗೆ ವಿಶಾಲ ಸ್ಥಳವನ್ನು ಕೊಟ್ಟಿದ್ದರಿಂದ
ನನ್ನ ಪಾದಗಳು ಕದಲುವುದಿಲ್ಲ.
ಆಹಾ, ಅಂಜೂರವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಸಿಕ್ಕದಿದ್ದರೂ,
ಎಣ್ಣೆ ಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗದ್ದೆಗಳು ಆಹಾರ ಧಾನ್ಯಗಳನ್ನು ಉತ್ಪತ್ತಿಮಾಡದಿದ್ದರೂ,
ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,
ನಾನು ಯೆಹೋವನಲ್ಲಿ ಉಲ್ಲಾಸಿಸುವೆನು, ನನ್ನ ರಕ್ಷಕನಾದ ದೇವರಲ್ಲಿ ಆನಂದಿಸುವೆನು.
ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ, ಮಾನ್ಯನೂ, ಪ್ರಿಯನೂ ಆಗಿರುವುದರಿಂದ,
ನಾನು ನಿನ್ನ ಬದಲಾಗಿ ಮನುಷ್ಯರನ್ನೂ, ನಿನ್ನ ಪ್ರಾಣಕ್ಕೆ ಪ್ರತಿಯಾಗಿ ಜನಾಂಗಗಳನ್ನೂ ಕೊಡುವೆನು.