Salvação
A salvação é a obra suprema de Deus. Pela graça, mediante a fé, somos salvos — não por obras, para que ninguém se glorie. É o presente mais precioso que a humanidade pode receber.
A salvação pela graça
A salvação é dom de Deus, não resultado de esforço humano. Somos justificados pela fé em Cristo Jesus e reconciliados com Deus pelo seu amor.
ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದ್ದೀರಿ. ಈ ರಕ್ಷಣೆಯು ನಿಮ್ಮಿಂದ ಉಂಟಾದದ್ದಲ್ಲ, ಇದು ದೇವರ ದಾನವೇ. ಯಾರಾದರೂ ಹೆಮ್ಮೆ ಪಡುವಂತೆ ಈ ರಕ್ಷಣೆಯು ಪುಣ್ಯಕ್ರಿಯೆಗಳಿಂದ ಉಂಟಾದದ್ದೂ ಅಲ್ಲ.
ಅವರು ನಮ್ಮನ್ನು ರಕ್ಷಿಸಿದರು. ಹೇಗೆಂದರೆ, ನಾವು ಮಾಡಿದ ಪುಣ್ಯ ಕ್ರಿಯೆಗಳಿಂದಲ್ಲ, ಅವರ ಕರುಣೆಗೆ ಅನುಸಾರವಾಗಿ ಆತ್ಮಿಕವಾಗಿ ಹುಟ್ಟುವಂತೆ ಮಾಡಿ, ನಮ್ಮನ್ನು ತೊಳೆದೂ ಪವಿತ್ರಾತ್ಮ ದೇವರು ನೂತನ ಜೀವನವನ್ನು ಕೊಡುವುದರ ಮೂಲಕವೇ ಅವರು ನಮ್ಮನ್ನು ರಕ್ಷಿಸಿದರು.
ದೇವರು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತಮ್ಮ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಜೀವಿತಕ್ಕೆ ನಮ್ಮನ್ನು ಕರೆದರು. ಈ ಕೃಪೆಯು ಕಾಲದ ಆರಂಭಕ್ಕೆ ಮುಂಚೆಯೇ ಕ್ರಿಸ್ತ ಯೇಸುವಿನಲ್ಲಿ ನಮಗೆ ಕೊಡಲಾಯಿತು.
ನಾನು ಸುವಾರ್ತೆಯ ವಿಷಯದಲ್ಲಿ ನಾಚಿಕೊಳ್ಳುವವನಲ್ಲ. ಏಕೆಂದರೆ ಅದು ಮೊದಲು ಯೆಹೂದ್ಯರಿಗೆ ಆಮೇಲೆ ಯೆಹೂದ್ಯರಲ್ಲದವರಿಗೆ, ಹೀಗೆ ನಂಬುವವರೆಲ್ಲರಿಗೂ ರಕ್ಷಣೆಯನ್ನು ಉಂಟುಮಾಡುವ ದೇವರ ಶಕ್ತಿಯಾಗಿದೆ.
ಏಕೆಂದರೆ ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಹೊಂದದೆ ಹೋಗಿದ್ದಾರೆ.
ನೀತಿವಂತನಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ಒಬ್ಬ ಸತ್ಪುರುಷನಿಗಾಗಿ ಯಾರಾದರೂ ಪ್ರಾಣಕೊಡುವುದಕ್ಕೆ ಧೈರ್ಯ ಮಾಡಬಹುದು. ಆದರೆ ಕ್ರಿಸ್ತ ಯೇಸು ನಾವು ಇನ್ನೂ ಪಾಪಿಗಳಾಗಿದ್ದಾಗಲೇ ನಮಗೋಸ್ಕರ ಪ್ರಾಣ ಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ಇಟ್ಟಿರುವ ತಮ್ಮ ಪ್ರೀತಿಯನ್ನು ತೋರಿಸಿದ್ದಾರೆ.
ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ.
O caminho da salvação
Quem confessa Jesus como Senhor e crê em sua ressurreição será salvo. A fé em Cristo é o único caminho para a salvação.
ನೀನು, "ಯೇಸುವೇ ಕರ್ತ," ಎಂದು ಬಾಯಿಂದ ಅರಿಕೆಮಾಡಿ, ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರೆಂದು ಹೃದಯದಲ್ಲಿ ನಂಬಿದರೆ ನೀನು ರಕ್ಷಣೆ ಹೊಂದುವೆ. ನೀನು ನಿನ್ನ ಹೃದಯದಿಂದ ನಂಬಿ ನೀತಿವಂತನೆಂದು ಎಣಿಸಿಕೊಳ್ಳುವಿ ಮತ್ತು ನಿನ್ನ ಬಾಯಿಂದ ನಿನ್ನ ವಿಶ್ವಾಸವನ್ನು ಅರಿಕೆ ಮಾಡಿದಾಗ ರಕ್ಷಣೆ ಹೊಂದುತ್ತಿ.
ನೀನು ನಿನ್ನ ಹೃದಯದಿಂದ ನಂಬಿ ನೀತಿವಂತನೆಂದು ಎಣಿಸಿಕೊಳ್ಳುವಿ ಮತ್ತು ನಿನ್ನ ಬಾಯಿಂದ ನಿನ್ನ ವಿಶ್ವಾಸವನ್ನು ಅರಿಕೆ ಮಾಡಿದಾಗ ರಕ್ಷಣೆ ಹೊಂದುತ್ತಿ.
"ಕರ್ತ ಯೇಸುವಿನಲ್ಲಿ ವಿಶ್ವಾಸವನ್ನಿಡು. ನೀನು ರಕ್ಷಣೆ ಹೊಂದುವೆ, ನಿನ್ನ ಮನೆಯವರೂ ರಕ್ಷಣೆಹೊಂದುವರು," ಎಂದರು.
"ಕರ್ತ ಯೇಸುವಿನಲ್ಲಿ ವಿಶ್ವಾಸವನ್ನಿಡು. ನೀನು ರಕ್ಷಣೆ ಹೊಂದುವೆ, ನಿನ್ನ ಮನೆಯವರೂ ರಕ್ಷಣೆಹೊಂದುವರು," ಎಂದರು.
ಯೇಸು ಅಲ್ಲದೆ ಬೇರೆ ಯಾರಿಂದಲೂ ರಕ್ಷಣೆಯು ಇಲ್ಲ, ಏಕೆಂದರೆ ಆಕಾಶದ ಕೆಳಗೆ ಮನುಷ್ಯರೊಳಗೆ ಆ ಹೆಸರಲ್ಲದೇ ಬೇರೆ ಯಾವ ಹೆಸರಿನಿಂದಲೂ ರಕ್ಷಣೆಯಾಗುವುದಿಲ್ಲ," ಎಂದನು.
ಆಗ ಕರ್ತದೇವರ ಹೆಸರನ್ನು ಹೇಳಿಕೊಳ್ಳುವವರೆಲ್ಲರಿಗೆ
ರಕ್ಷಣೆ ಆಗುವುದು.’
ಯೇಸು ಅವನಿಗೆ, "ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರಲಾರರು.
ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕೊಟ್ಟರು. ಅದಕ್ಕಾಗಿಯೇ ಅವರನ್ನು ನಂಬುವ ಪ್ರತಿಯೊಬ್ಬರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕು.
ಆದರೂ ಯಾರಾರು ಅವರನ್ನು ಸ್ವೀಕರಿಸಿದರೋ, ಅಂದರೆ ಅವರ ಹೆಸರಿನಲ್ಲಿ ವಿಶ್ವಾಸವಿಟ್ಟರೋ ಅವರೆಲ್ಲರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಕೊಟ್ಟರು.
Nova vida em Cristo
Quem está em Cristo é nova criação. A salvação não é apenas perdão, mas transformação completa — de dentro para fora, para a glória de Deus.
ಆದ್ದರಿಂದ ಯಾರಾದರೂ ಕ್ರಿಸ್ತ ಯೇಸುವಿನಲ್ಲಿದ್ದರೆ, ಅವರು ನೂತನ ಸೃಷ್ಟಿಯಾಗಿದ್ದಾರೆ: ಹಳೆಯದೆಲ್ಲವೂ ಹೋಗಿ ಅವರಿಗೆ ಹೊಸ ಸೃಷ್ಟಿಯು ಬರುವುದು.
ಯೇಸು ಅವನಿಗೆ, "ಒಬ್ಬನು ಮತ್ತೊಮ್ಮೆ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು, ಎಂದು ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ."
"ನೀವು ಪರಿವರ್ತನೆ ಹೊಂದಿ ಚಿಕ್ಕಮಕ್ಕಳಂತೆ ಆಗದಿದ್ದರೆ, ಪರಲೋಕ ರಾಜ್ಯದೊಳಗೆ ಪ್ರವೇಶಿಸುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ನಾವು ನಮ್ಮ ಪಾಪಗಳನ್ನು ದೇವರಿಗೆ ಅರಿಕೆಮಾಡಿದರೆ ಅವರು ನಂಬಿಗಸ್ತರೂ ನೀತಿವಂತರೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ, ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವರು.
ಕರ್ತದೇವರು ತಮ್ಮ ವಾಗ್ದಾನದ ವಿಷಯವಾಗಿ ತಡಮಾಡುತ್ತಾರೆಂಬದಾಗಿ ಕೆಲವರು ಎಣಿಸುವ ಪ್ರಕಾರ ಅವರು ತಡಮಾಡುವವರಲ್ಲ. ಆದರೆ ಯಾವನಾದರೂ ನಾಶವಾಗುವುದರಲ್ಲಿ ಅವರು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಡಬೇಕೆಂದು ಅಪೇಕ್ಷಿಸುವವರಾಗಿದ್ದು ನಮ್ಮ ಕಡೆಗೆ ದೀರ್ಘಶಾಂತರಾಗಿದ್ದಾರೆ.
ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾರಾದರೂ ನನ್ನ ಸ್ವರವನ್ನು ಕೇಳಿ, ಬಾಗಿಲನ್ನು ತೆರೆದರೆ, ನಾನು ಪ್ರವೇಶ ಮಾಡಿ, ಆ ವ್ಯಕ್ತಿಯ ಸಂಗಡ ಊಟಮಾಡುವೆನು. ಅವರೂ ನನ್ನ ಸಂಗಡ ಊಟಮಾಡುವರು.
Segurança eterna
O crente tem a certeza da salvação. Ninguém pode arrebatar da mão de Deus aqueles que Ele chamou, justificou e glorificou.
ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದಿಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.
ಯಾರು ದೇವಪುತ್ರ ಆಗಿರುವವರನ್ನು ನಂಬುವರೋ ಅವರು ನಿತ್ಯಜೀವ ಪಡೆದಿರುತ್ತಾರೆ. ದೇವಪುತ್ರ ಆಗಿರುವವರನ್ನು ನಂಬದವರು ನಿತ್ಯಜೀವವನ್ನು ಕಾಣುವುದಿಲ್ಲ. ಆದರೆ ದೇವರ ಕೋಪಾಗ್ನಿಯು ಅವರ ಮೇಲೆ ನೆಲೆಗೊಂಡಿರುವುದು," ಎಂದು ಹೇಳಿದನು.
ನೀವು ಕ್ರಿಸ್ತ ಯೇಸುವನ್ನು ನೋಡಲಿಲ್ಲವಾದರೂ ಅವರನ್ನು ಪ್ರೀತಿಸುತ್ತೀರಿ. ನೀವು ಈಗ ಅವರನ್ನು ಕಾಣದಿದ್ದರೂ ಅವರಲ್ಲಿ ನಂಬಿಕೆಯಿಟ್ಟು ವ್ಯಕ್ತಪಡಿಸಲಾಗದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ. ಏಕೆಂದರೆ ನಿಮ್ಮ ನಂಬಿಕೆಯ ಅಂತಿಮ ಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿದ್ದೀರಿ.
ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.
A salvação presente e futura
A salvação é passada (justificação), presente (santificação) e futura (glorificação). Deus nos salva, nos guarda e nos conduz à vida eterna.
ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನು ತರುವ ದೇವರ ಕೃಪೆಯೂ ಪ್ರತ್ಯಕ್ಷವಾಯಿತು. ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು, ಈಗಿನ ಲೋಕದಲ್ಲಿ ಸ್ವಶಿಸ್ತನ್ನು ಹೊಂದಿದವವರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕಬೇಕೆಂತಲೂ ದೇವರ ಕೃಪೆಯು ನಮಗೆ ಬೋಧಿಸುತ್ತದೆ.
ಹೀಗೆ ದೇವರ ನಿಯಮದ ಪ್ರಕಾರ ಎಲ್ಲವೂ ರಕ್ತದಿಂದಲೇ ಶುದ್ಧಿಯಾಗಬೇಕು. ರಕ್ತಧಾರೆ ಇಲ್ಲದೆ ಪಾಪಪರಿಹಾರವು ಉಂಟಾಗುವುದಿಲ್ಲ.
ಅದರಂತೆಯೇ ಕ್ರಿಸ್ತ ಯೇಸು ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವುದಕ್ಕೋಸ್ಕರ ಒಂದೇ ಸಾರಿ ಸಮರ್ಪಿತರಾದರು. ತಮಗಾಗಿ ಕಾದಿರುವವರಿಗೆ ರಕ್ಷಣೆ ಕೊಡಲು ಕ್ರಿಸ್ತ ಯೇಸು ಎರಡನೆಯ ಸಲ ಕಾಣಿಸಿಕೊಳ್ಳುವರು. ಆಗ ಪಾಪ ಹೊತ್ತುಕೊಳ್ಳುವುದಕ್ಕಾಗಿ ಬರುವುದಿಲ್ಲ.
ನಾವು ದೇವರ ಶತ್ರುಗಳಾಗಿದ್ದಾಗಲೇ ಅವರು ನಮ್ಮನ್ನು ತಮ್ಮ ಪುತ್ರನ ಮರಣದ ಮೂಲಕ ಸಂಧಾನ ಮಾಡಿಕೊಂಡಿರುವುದಾದರೆ, ಕ್ರಿಸ್ತ ಯೇಸುವಿನ ಜೀವದ ಮೂಲಕ ಎಷ್ಟೋ ಹೆಚ್ಚಾಗಿ ನಾವು ರಕ್ಷಿಸುವುದು ಇನ್ನೂ ಖಚಿತವಲ್ಲವೆ?
ಏಕೆಂದರೆ, ಆದಾಮನಲ್ಲಿ ಎಲ್ಲರೂ ಸತ್ತಂತೆಯೇ, ಕ್ರಿಸ್ತನಲ್ಲಿ ಎಲ್ಲರೂ ಜೀವಂತರಾಗುವರು.
Nada é impossível para Deus
Aos homens é impossível, mas para Deus tudo é possível. Ele deseja que todos sejam salvos e cheguem ao conhecimento da verdade.
ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ, "ಮನುಷ್ಯರಿಗೆ ಇದು ಅಸಾಧ್ಯ, ದೇವರಿಗೆ ಅಲ್ಲ, ದೇವರಿಗೆ ಎಲ್ಲವೂ ಸಾಧ್ಯ," ಎಂದರು.
ಅದಕ್ಕೆ ಯೇಸು, "ಮನುಷ್ಯರಿಗೆ ಅಸಾಧ್ಯವಾದವುಗಳು ದೇವರಿಗೆ ಸಾಧ್ಯವಾಗಿವೆ," ಎಂದು ಹೇಳಿದರು.
ತಪ್ಪಿಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕಲ್ಲವೇ ಮನುಷ್ಯಪುತ್ರನಾದ ನಾನು ಬಂದೆನು," ಎಂದು ಹೇಳಿದರು.
ಕರ್ತದೇವರು ನಮಗೆ ಆಜ್ಞಾಪಿಸಿದ್ದು ಇಂತಿದೆ:
" ‘ಭೂಲೋಕದ ಕಟ್ಟಕಡೆಯವರೆಗೆ ನೀನು ರಕ್ಷಣೆಯನ್ನು ತರುವಂತೆ
ನಾನು ಯೆಹೂದ್ಯರಲ್ಲದವರಿಗೆ ನಿನ್ನನ್ನು ಬೆಳಕನ್ನಾಗಿ ನೇಮಿಸಿರುವೆನು.’ "
"ಇಕ್ಕಟ್ಟಾದ ಬಾಗಿಲಿನಿಂದ ಪ್ರವೇಶಿಸಿರಿ. ಏಕೆಂದರೆ ನಾಶಕ್ಕೆ ಒಯ್ಯುವ ಬಾಗಿಲು, ಅಗಲವೂ ಅದರ ಮಾರ್ಗವು ವಿಶಾಲವೂ ಆಗಿವೆ; ಅದರೊಳಗೆ ಪ್ರವೇಶಿಸುವವರು ಅನೇಕರು. ಜೀವಕ್ಕೆ ಒಯ್ಯುವ ಬಾಗಿಲು ಇಕ್ಕಟ್ಟಾದದ್ದೂ ದಾರಿಯು ಕಷ್ಟಕರವಾದದ್ದೂ ಆಗಿದೆ; ಅದನ್ನು ಕಂಡು ಹಿಡಿಯುವವರು ಕೆಲವರು ಮಾತ್ರ.
ಅನ್ಯಾಯಗಾರರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ: ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು, ಕಳ್ಳರು, ಲೋಭಿಗಳು, ಕುಡುಕರು, ಬೈಯ್ಯುವವರು, ಸುಲಿಗೆ ಮಾಡುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.
ಅದಕ್ಕೆ ಯೇಸು ಅವನಿಗೆ, "ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ," ಎಂದರು. ಕೂಡಲೇ ಅವನು ತನ್ನ ದೃಷ್ಟಿಯನ್ನು ಪಡೆದು, ದಾರಿಯಲ್ಲಿ ಯೇಸುವನ್ನು ಹಿಂಬಾಲಿಸಿದನು.
ದೇವರಲ್ಲಿಯೇ ನನ್ನ ಪ್ರಾಣಕ್ಕೆ ಶಾಂತಿ,
ನನ್ನ ರಕ್ಷಣೆಯು ದೇವರಿಂದಲೇ.
ನಿಮ್ಮ ರಕ್ಷಣೆಯ ಸಹಾಯವನ್ನು ನನಗೆ ಗುರಾಣಿಯನ್ನಾಗಿ ಮಾಡಿದ್ದೀರಿ.
ನಿಮ್ಮ ಬಲಗೈ ನನಗೆ ಆಧಾರವಾಗಿದೆ;
ನಿಮ್ಮ ಸಹಾಯವು ನನ್ನನ್ನು ಘನವಂತನನ್ನಾಗಿ ಮಾಡಿದೆ.
ನೀವು ನನ್ನ ಕಾಲಡಿಗಳಿಗೆ ವಿಶಾಲಸ್ಥಳ ಒದಗಿಸಿದ್ದೀರಿ,
ಆದುದರಿಂದ ನನ್ನ ಹಿಮ್ಮಡಿಗಳು ಜಾರುವುದಿಲ್ಲ.
ಅಂಜೂರದ ಗಿಡವು ಚಿಗುರದಿದ್ದರೂ,
ದ್ರಾಕ್ಷಾಲತೆಗಳಲ್ಲಿ ಹಣ್ಣು ಫಲಿಸದಿದ್ದರೂ,
ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ,
ಹೊಲಗಳು ಆಹಾರ ಕೊಡದಿದ್ದರೂ,
ಕುರಿಹಟ್ಟಿಗಳು ಬರಿದಾಗಿ ಹೋದರೂ,
ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,
ನಾನು ಯೆಹೋವ ದೇವರಲ್ಲಿ ಉಲ್ಲಾಸಿಸುವೆನು.
ನನ್ನ ರಕ್ಷಕರಾದ ದೇವರಲ್ಲಿ ಆನಂದಿಸುವೆನು.
ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ, ಮಾನ್ಯನೂ,
ಪ್ರಿಯನೂ ಆಗಿರುವುದರಿಂದ
ನಾನು ನಿನಗೋಸ್ಕರ ಮನುಷ್ಯರನ್ನೂ,
ನಿನ್ನ ಪ್ರಾಣಕ್ಕೆ ಜನಾಂಗಗಳನ್ನೂ ಕೊಡುವೆನು.